For Quick Alerts
ALLOW NOTIFICATIONS  
For Daily Alerts
 

ಭಾರತ vs ಇಂಗ್ಲೆಂಡ್, ನಾಲ್ಕನೇ ಟೆಸ್ಟ್ ಪಂದ್ಯ, 4ನೇ ದಿನ, Live ಸ್ಕೋರ್‌

England vs India, 4th Test Match, 4th Day, Live Score

ಲಂಡನ್‌: ಲಂಡನ್‌ನ ಕೆನ್ನಿಂಗ್ಟನ್ ಓವಲ್‌ನಲ್ಲಿ ಭಾರತ ಮತ್ತು ಇಂಗ್ಲೆಂಡ್ ಮಧ್ಯೆ ನಾಲ್ಕನೇ ಟೆಸ್ಟ್ ಪಂದ್ಯ ನಡೆಯುತ್ತಿದೆ. ಐದು ಪಂದ್ಯಗಳ ಟೆಸ್ಟ್‌ ಸರಣಿಯಲ್ಲಿ ನಾಲ್ಕನೇ ಪಂದ್ಯವಿದು. ಮುಗಿರುವ ಮೂರು ಪಂದ್ಯಗಳಲ್ಲಿ ಆರಂಭಿಕ ಪಂದ್ಯ ಡ್ರಾ ಆಗಿತ್ತು. ದ್ವಿತೀಯ ಪಂದ್ಯದಲ್ಲಿ ಭಾರತ ಗೆದ್ದಿತ್ತು. ತೃತೀಯ ಟೆಸ್ಟ್‌ನಲ್ಲಿ ಇಂಗ್ಲೆಂಡ್ ಗೆದ್ದು ಸರಣಿಯನ್ನು 1-1ರಿಂದ ಸರಿದೂಗಿಸಿಕೊಂಡಿತ್ತು. ಎರಡೂ ತಂಡಗಳು ಆರಂಭಿಕ ಇನ್ನಿಂಗ್ಸ್‌ ಆಡಿದ್ದು, ಇಂಗ್ಲೆಂಡ್ ಮೊದಲ ಇನ್ನಿಂಗ್ಸ್‌ನಲ್ಲಿ 99 ರನ್ ಮುನ್ನಡೆ ಗಳಿಸಿತ್ತು. ಭಾರತ ಈಗ ದ್ವಿತೀಯ ಇನ್ನಿಂಗ್ಸ್‌ ಆಡುತ್ತಿದೆ.

ಟಾಸ್ ಸೋತು ಬ್ಯಾಟಿಂಗ್‌ಗೆ ಇಳಿಸಲ್ಪಟ್ಟ ಭಾರತ ಆರಂಭಿಕ ಇನ್ನಿಂಗ್ಸ್‌ನಲ್ಲಿ ನೀರಸ ಬ್ಯಾಟಿಂಗ್‌ ಪ್ರದರ್ಶಿಸಿತ್ತು. ಬ್ಯಾಟ್ಸ್‌ಮನ್‌ಗಳಲ್ಲಿ ವಿರಾಟ್ ಕೊಹ್ಲಿ ಅರ್ಧ ಶತಕ ಬಾರಿಸಿದ್ದು ಬಿಟ್ಟರೆ, ಬೌಲಿಂಗ್ ಆಲ್ ರೌಂಡರ್ ಶಾರ್ದೂಲ್ ಠಾಕೂರ್ ಸ್ಫೋಟಕ ಅರ್ಧ ಶತಕ ಬಾರಿಸಿ ತಂಡವನ್ನು ರನ್ ಕುಸಿತದಿಂದ ಪಾರು ಮಾಡಿದ್ದರು.

ಭಾರತ vs ಇಂಗ್ಲೆಂಡ್, ನಾಲ್ಕನೇ ಟೆಸ್ಟ್ ಪಂದ್ಯ, Live ಸ್ಕೋರ್‌

1
49715

ಭಾರತ ಆರಂಭಿ ಇನ್ನಿಂಗ್ಸ್‌ನಲ್ಲಿ ರೋಹಿತ್ ಶರ್ಮಾ 11, ಕೆಎಲ್ ರಾಹುಲ್ 17, ಚೇತೇಶ್ವರ ಪೂಜಾರ 4, ವಿರಾಟ್ ಕೊಹ್ಲಿ 50, ಅಜಿಂಕ್ಯ ರಹಾನೆ 14, ರಿಷಭ್ ಪಂತ್ 9, ರವೀಂದ್ರ ಜಡೇಜಾ 10, ಶಾರ್ದೂಲ್ ಠಾಕೂರ್ 57, ಉಮೇಶ್ ಯಾದವ್ 10, ಮೊಹಮ್ಮದ್ ಸಿರಾಜ್ 1 ರನ್‌ನೊಂದಿಗೆ 61.3 ಓವರ್‌ಗೆ ಎಲ್ಲಾ ವಿಕೆಟ್ ಕಳೆದು 191 ರನ್ ಗಳಿಸಿತ್ತು.

ಮೊದಲ ಇನ್ನಿಂಗ್ಸ್‌ಗೆ ಇಳಿದ ಇಂಗ್ಲೆಂಡ್, ರೋರಿ ಬರ್ನ್ಸ್ 5, ಹಸೀಬ್ ಹಮೀದ್ 0, ಡೇವಿಡ್ ಮಲನ್ 31, ಜೋ ರೂಟ್ 21, ಆಲಿ ಪೋಪ್ 81, ಜಾನಿ ಬೈರ್‌ಸ್ಟೋ 37, ಮೊಯೀನ್ ಅಲಿ 35, ಕ್ರಿಸ್ ವೋಕ್ಸ್ 50, ಕ್ರೇಗ್ ಓವರ್‌ಟನ್ 1, ಆಲಿ ರಾಬಿನ್ಸನ್ 5, ಜೇಮ್ಸ್ ಆಂಡರ್ಸನ್ 1 ರನ್‌ನೊಂದಿಗೆ 84 ಓವರ್‌ಗೆ ಎಲ್ಲಾ ವಿಕೆಟ್ ಕಳೆದು 290 ರನ್ ಗಳಿಸಿ 99 ರನ್ ಮುನ್ನಡೆ ಸಾಧಿಸಿತ್ತು.

ಭಾರತದ ಇನ್ನಿಂಗ್ಸ್‌ನಲ್ಲಿ ಇಂಗ್ಲೆಂಡ್‌ನ ಜೇಮ್ಸ್ ಆ್ಯಂಡರ್ಸನ್ 1, ಆಲಿ ರಾಬಿನ್ಸನ್ 3, ಕ್ರಿಸ್ ವೋಕ್ಸ್ 4, ಕ್ರೇಗ್ ಓವರ್‌ಟನ್ 1 ವಿಕೆಟ್ ಪಡೆದರೆ, ಇಂಗ್ಲೆಂಡ್ ಇನ್ನಿಂಗ್ಸ್‌ನಲ್ಲಿ ಭಾರತದ ಉಮೇಶ್ ಯಾದವ್ 3, ಜಸ್‌ಪ್ರೀತ್‌ ಬೂಮ್ರಾ 2, ಶಾರ್ದೂಲ್ ಠಾಕೂರ್ 1, ಮೊಹಮ್ಮದ್ ಸಿರಾಜ್ 1 ಮತ್ತು ರವೀಂದ್ರ ಜಡೇಜಾ 1 ವಿಕೆಟ್ ಪಡೆದರು.

ಇತ್ತಂಡಗಳ ಆಡುವ ಬಳಗ
ಭಾರತ ಪ್ಲೇಯಿಂಗ್ XI: ರೋಹಿತ್ ಶರ್ಮಾ, ಕೆಎಲ್ ರಾಹುಲ್, ಚೇತೇಶ್ವರ ಪೂಜಾರ, ವಿರಾಟ್ ಕೊಹ್ಲಿ (ಸಿ), ಅಜಿಂಕ್ಯ ರಹಾನೆ, ರಿಷಭ್ ಪಂತ್ (ಡಬ್ಲ್ಯೂ), ರವೀಂದ್ರ ಜಡೇಜಾ, ಶಾರ್ದೂಲ್ ಠಾಕೂರ್, ಉಮೇಶ್ ಯಾದವ್, ಜಸ್ಪ್ರೀತ್ ಬೂಮ್ರಾ, ಮೊಹಮ್ಮದ್ ಸಿರಾಜ್.
ಇಂಗ್ಲೆಂಡ್ ಪ್ಲೇಯಿಂಗ್ XI: ರೋರಿ ಬರ್ನ್ಸ್, ಹಸೀಬ್ ಹಮೀದ್, ಡೇವಿಡ್ ಮಲನ್, ಜೋ ರೂಟ್ (ಸಿ), ಆಲ್ಲಿ ಪೋಪ್, ಜಾನಿ ಬೈರ್‌ಸ್ಟೊ (ಡಬ್ಲ್ಯೂ), ಮೊಯೀನ್ ಅಲಿ, ಕ್ರಿಸ್ ವೋಕ್ಸ್, ಕ್ರೇಗ್ ಓವರ್‌ಟನ್, ಒಲ್ಲಿ ರಾಬಿನ್ಸನ್, ಜೇಮ್ಸ್ ಆಂಡರ್ಸನ್.

Story first published: Saturday, September 4, 2021, 16:08 [IST]
Other articles published on Sep 4, 2021
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+