Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

ಇಂಗ್ಲೆಂಡ್ ವಿರುದ್ಧ ಭಾರತಕ್ಕೆ ಅದ್ಭುತ ಗೆಲುವು, ಸರಣಿಯಲ್ಲಿ 2-1 ಮುನ್ನಡೆ

England vs India, 4th Test Match at Oval, 5th Day, Live Score

ಲಂಡನ್, ಸೆಪ್ಟೆಂಬರ್ 6: ಲಂಡನ್‌ನ ಓವಲ್ ಮೈದಾನದಲ್ಲಿ ನಡೆದ ನಾಲ್ಕನೇ ಟೆಸ್ಟ್ ಪಂದ್ಯದಲ್ಲಿ ಟೀಮ್ ಇಂಡಿಯಾ ಅದ್ಭುತ ಜಯ ಸಾಧಿಸಿದೆ. ಮೊದಲ ಇನ್ನಿಂಗ್ಸ್‌ನಲ್ಲಿ ಅನುಭವಿಸಿದ ಹಿನ್ನಡೆಯ ಹೊರತಾಗಿಯೂ ನೀಡಿದ ಸಾಂಘಿಕ ಪ್ರದರ್ಶನದಿಂದಾಗಿ ಟೀಮ್ ಇಂಡಿಯಾ ಅಮೋಘ ಜಯ ಸಾಧಿಸಿದೆ. ಈ ಮೂಲಕ 5 ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ಟೀಮ್ ಇಂಡಿಯಾ 2-1 ಅಂತರದಿಂದ ಮುನ್ನಡೆ ಸಾಧಿಸಿದೆ.

ಭಾರತ ಹಾಗೂ ಇಂಗ್ಲೆಂಡ್ ನಡುವಿನ ಟೆಸ್ಟ್ ಸರಣಿಯ ನಾಲ್ಕನೇ ಪಂದ್ಯ ಕುತೂಹಲಕಾರಿ ಘಟ್ಟಕ್ಕೆ ತಲುಪಿದೆ. ಇಂದು(ಸೋಮವಾರ) ಓವಲ್ ಟೆಸ್ಟ್‌ನ ಅಂತಿಮ ದಿನದಾಟವಾಗಿದ್ದು ಭಾರತ ಉತ್ತಮ ಸ್ಥಾನದಲ್ಲಿದೆ. ಆದರೆ ಅಂತಿಮ ಇನ್ನಿಂಗ್ಸ್‌ನ ಬ್ಯಾಟಿಂಗ್ ಆರಂಭಿಸಿರುವ ಇಂಗ್ಲೆಂಡ್ ನಾಲ್ಕನೇ ದಿನದಲ್ಲಿ ಉತ್ತಮ ಬ್ಯಾಟಿಂಗ್ ಪ್ರದರ್ಶಿಸಿದ್ದು ಭಾರತ ನೀಡಿರುವ ಬೃಹತ್ ಗುರಿಯನ್ನು ಬೆನ್ನಟ್ಟಲು ಉತ್ತಮ ಆರಂಭ ಪಡೆದುಕೊಂಡಿದೆ. ಹೀಗಾಗಿ ಅಂತಿಮ ದಿನದಾಟದಲ್ಲಿ ಏನಾಗಲಿದೆ ಎಂಬುದು ಸಾಕಷ್ಟು ಕುತೂಹಲ ಮೂಡಿಸಿದೆ.

ಪಂದ್ಯದ ಕೊನೆಯ ದಿನ ಎಲ್ಲಾ ಫಲಿತಾಂಶಗಳಿವೂ ಅವಕಾಶ ತೆರೆದಿಟ್ಟಿದೆ. ಭಾರತ ಗೆಲ್ಲಬೇಕಾದರೆ ಇಂಗ್ಲೆಂಡ್ ತಂಡದ ಎಲ್ಲಾ 10 ವಿಕೆಟ್‌ಗಳನ್ನು ಕೊನೆಯ ದಿನ ಪಡೆಯಬೇಕಿದೆ. ಇಂಗ್ಲೆಂಡ್ 291 ರನ್‌ಗಳ ಅಗತ್ಯವಿದೆ. ಅಲ್ಲದೆ ಡ್ರಾ ಆಗುವ ಸಾಧ್ಯತೆಯೂ ಹೆಚ್ಚಾಗಿದೆ. ಹೀಗಾಗಿ ಸರಣಿಯಲ್ಲಿ ಯಾರ ಕೈ ಮೇಲಾಗಲಿದೆ ಎಂಬುದು ಈಗ ಕುತೂಹಲ ಮೂಡಿಸಿರುವ ಸಂಗತಿ.

Live score ವಿವರ ಇಲ್ಲಿದೆ

1
49715

ಭಾರತ ಮೊದಲ ಇನ್ನಿಂಗ್ಸ್‌ನಲ್ಲಿ ರೋಹಿತ್ ಶರ್ಮಾ 11, ಚೇತೇಶ್ವರ ಪೂಜಾರ 4, ಕೆಎಲ್ ರಾಹುಲ್ 17, ವಿರಾಟ್ ಕೊಹ್ಲಿ 50, ಅಜಿಂಕ್ಯ ರಹಾನೆ 14, ರಿಷಭ್ ಪಂತ್ 9, ರವೀಂದ್ರ ಜಡೇಜಾ 10, ಶಾರ್ದೂಲ್ ಠಾಕೂರ್ 57, ಉಮೇಶ್ ಯಾದವ್ 10, ಮೊಹಮ್ಮದ್ ಸಿರಾಜ್ 1 ರನ್‌ನೊಂದಿಗೆ 61.3 ಓವರ್‌ಗೆ ಎಲ್ಲಾ ವಿಕೆಟ್ ಕಳೆದು 191 ರನ್ ಗಳಿಸಿತ್ತು.

ಮೊದಲ ಇನ್ನಿಂಗ್ಸ್‌ಗೆ ಇಳಿದ ಇಂಗ್ಲೆಂಡ್, ರೋರಿ ಬರ್ನ್ಸ್ 5, ಹಸೀಬ್ ಹಮೀದ್ 0, ಡೇವಿಡ್ ಮಲನ್ 31, ಆಲಿ ಪೋಪ್ 81, ಜೋ ರೂಟ್ 21, ಜಾನಿ ಬೈರ್‌ಸ್ಟೋ 37, ಮೊಯೀನ್ ಅಲಿ 35, ಕ್ರಿಸ್ ವೋಕ್ಸ್ 50, ಕ್ರೇಗ್ ಓವರ್‌ಟನ್ 1, ಆಲಿ ರಾಬಿನ್ಸನ್ 5, ಜೇಮ್ಸ್ ಆಂಡರ್ಸನ್ 1 ರನ್‌ನೊಂದಿಗೆ 84 ಓವರ್‌ಗೆ ಎಲ್ಲಾ ವಿಕೆಟ್ ಕಳೆದು 290 ರನ್ ಗಳಿಸಿ 99 ರನ್ ಮುನ್ನಡೆ ಸಾಧಿಸಿತ್ತು.

ಭಾರತದ ಇನ್ನಿಂಗ್ಸ್‌ನಲ್ಲಿ ಇಂಗ್ಲೆಂಡ್‌ನ ಜೇಮ್ಸ್ ಆ್ಯಂಡರ್ಸನ್ 1, ಆಲಿ ರಾಬಿನ್ಸನ್ 3, ಕ್ರಿಸ್ ವೋಕ್ಸ್ 4, ಕ್ರೇಗ್ ಓವರ್‌ಟನ್ 1 ವಿಕೆಟ್ ಪಡೆದರೆ, ಇಂಗ್ಲೆಂಡ್ ಇನ್ನಿಂಗ್ಸ್‌ನಲ್ಲಿ ಭಾರತದ ಉಮೇಶ್ ಯಾದವ್ 3, ಜಸ್‌ಪ್ರೀತ್‌ ಬೂಮ್ರಾ 2, ಶಾರ್ದೂಲ್ ಠಾಕೂರ್ 1, ಮೊಹಮ್ಮದ್ ಸಿರಾಜ್ 1 ಮತ್ತು ರವೀಂದ್ರ ಜಡೇಜಾ 1 ವಿಕೆಟ್ ಪಡೆದರು.

ಎರಡನೇ ಇನ್ನಿಂಗ್ಸ್‌ನಲ್ಲಿ ಟೀಮ್ ಇಂಡಿಯಾ ಪರವಾಗಿ ಆರಂಭಿಕ ಆಟಗಾರ ರೋಹಿತ್ ಶರ್ಮಾ 127, ಕೆಎಲ್ ರಾಹುಲ್ 46, ಚೇತೇಶ್ವರ್ ಪೂಜಾರ 61, ವಿರಾಟ್ ಕೊಹ್ಲಿ 44, ರವೀಂದ್ರ ಜಡೇಜಾ 17, ಅಜಿಂಕ್ಯಾ ರಹಾನೆ 0 ರನ್‌ಗಳಿಸಿ ಔಟಾಗಿದ್ದಾರೆ. ರಿಷಭ್ ಪಂತ್ 50 ಹಾಗೂ ಶಾರ್ದೂಲ್ ಠಾಕೂರ್ 60 ರನ್‌ಗಳ ಕೊಡುಗೆಯನ್ನು ನೀಡುವ ಮೂಲಕ ಮತ್ತೊಂದು ಅದ್ಭುತ ಜೊತೆಯಾಟದ ಕಾಣಿಕೆ ನೀಡಿದರು. ನಂತರ ಉಮೇಶ್ ಯಾದವ್ 25 ರನ್ ಹಾಗೂ ಜಸ್ಪ್ರೀತ್ ಬೂಮ್ರಾ 24 ರನ್‌ಗಳಿ ಔಟಾದರು. ಮೊಹಮ್ಮದ್ ಸಿರಾಜ್ 3 ರನ್‌ಗಳಿಸಿ ಔಟಾಗದೆ ಉಳಿದರು

ಇತ್ತಂಡಗಳ ಆಡುವ ಬಳಗ

ಭಾರತ ಪ್ಲೇಯಿಂಗ್ XI: ರೋಹಿತ್ ಶರ್ಮಾ, ಕೆಎಲ್ ರಾಹುಲ್, ಚೇತೇಶ್ವರ ಪೂಜಾರ, ವಿರಾಟ್ ಕೊಹ್ಲಿ (ನಾಯಕ), ಅಜಿಂಕ್ಯ ರಹಾನೆ, ರಿಷಭ್ ಪಂತ್ (ವಿಕೆಟ್ ಕೀಪರ್), ರವೀಂದ್ರ ಜಡೇಜಾ, ಶಾರ್ದೂಲ್ ಠಾಕೂರ್, ಉಮೇಶ್ ಯಾದವ್, ಜಸ್ಪ್ರೀತ್ ಬೂಮ್ರಾ, ಮೊಹಮ್ಮದ್ ಸಿರಾಜ್.

ಇಂಗ್ಲೆಂಡ್ ಪ್ಲೇಯಿಂಗ್ XI: ರೋರಿ ಬರ್ನ್ಸ್, ಹಸೀಬ್ ಹಮೀದ್, ಡೇವಿಡ್ ಮಲನ್, ಜೋ ರೂಟ್ (ನಾಯಕ), ಆಲ್ಲಿ ಪೋಪ್, ಜಾನಿ ಬೈರ್‌ಸ್ಟೊವ್ (ವಿಕೆಟ್ ಕೀಪರ್), ಮೊಯೀನ್ ಅಲಿ, ಕ್ರಿಸ್ ವೋಕ್ಸ್, ಕ್ರೇಗ್ ಓವರ್‌ಟನ್, ಒಲ್ಲಿ ರಾಬಿನ್ಸನ್, ಜೇಮ್ಸ್ ಆಂಡರ್ಸನ್.

Story first published: Monday, September 6, 2021, 21:12 [IST]
Other articles published on Sep 6, 2021
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+