ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
For Quick Alerts
ALLOW NOTIFICATIONS  
For Daily Alerts
 

ಭಾರತ vs ಇಂಗ್ಲೆಂಡ್, 4ನೇ ಟೆಸ್ಟ್, Live: ಪ್ಲೇಯಿಂಗ್ XI, ಟಾಸ್ ವರದಿ

England vs India, 4th Test Match, Live Score, Playing XI

ಲಂಡನ್‌: ಲಂಡನ್‌ನ ಕೆನ್ನಿಂಗ್ಟನ್‌ ಓವಲ್ ಸ್ಟೇಡಿಯಂನಲ್ಲಿ ಇಂದು ಭಾರತ ಮತ್ತು ಇಂಗ್ಲೆಂಡ್ ತಂಡಗಳು ನಾಲ್ಕನೇ ಟೆಸ್ಟ್‌ ಪಂದ್ಯಕ್ಕಾಗಿ ಮೈದಾನಕ್ಕಿಳಿದಿವೆ. ಐದು ಪಂದ್ಯಗಳ ಟೆಸ್ಟ್‌ ಸರಣಿ ಈಗ 1-1ರಿಂದ ಸಮಬಗೊಂಡಿರುವುದರಿಂದ ನಾಲ್ಕನೇ ಟೆಸ್ಟ್‌ ಪಂದ್ಯ ಕುತೂಹಲ ಮೂಡಿಸಿದೆ. ಟಾಸ್ ಗೆದ್ದಿರುವ ಇಂಗ್ಲೆಂಡ್ ಬೌಲಿಂಗ್ ಆಯ್ದುಕೊಂಡಿದೆ.

ಅತಿಹೆಚ್ಚು ಗೋಲ್: ನೂತನ ದಾಖಲೆ ಬರೆದ ಕ್ರಿಸ್ಟಿಯಾನೊ ರೊನಾಲ್ಡೊಅತಿಹೆಚ್ಚು ಗೋಲ್: ನೂತನ ದಾಖಲೆ ಬರೆದ ಕ್ರಿಸ್ಟಿಯಾನೊ ರೊನಾಲ್ಡೊ

ಐದು ಪಂದ್ಯಗಳ ಟೆಸ್ಟ್‌ ಸರಣಿಯಲ್ಲಿ ಆರಂಭಿಕ ಪಂದ್ಯ ಮಳೆಯ ಸಮಸ್ಯೆಯಿಂದಾಗಿ ಕೊನೆಗೆ ಡ್ರಾದೊಂದಿಗೆ ಅಂತ್ಯ ಕಂಡಿತು. ದ್ವಿತೀಯ ಪಂದ್ಯದಲ್ಲಿ ಭಾರತ ಭರ್ಜರಿ 151 ರನ್‌ನಿಂದ ಗೆದ್ದಿತ್ತು. ತೃತೀಯ ಪಂದ್ಯದಲ್ಲಿ ಇಂಗ್ಲೆಂಡ್ ತಂಡ ಇನ್ನಿಂಗ್ಸ್‌ ಸಹಿತ 76 ರನ್ ಜಯ ಗಳಿಸಿತ್ತು. ಹಿಂದಿನ ಪಂದ್ಯದಲ್ಲಿ ಮುಖಭಂಗ ಆಗಿದ್ದರಿಂದ ಇಂದಿನ ಪಂದ್ಯದಲ್ಲಿ ಭಾರತ ತಿರುಗಿ ಬೀಳುವ ನಿರೀಕ್ಷೆಯಿದೆ.

ಭಾರತ vs ಇಂಗ್ಲೆಂಡ್, 4ನೇ ಟೆಸ್ಟ್ ಪಂದ್ಯ, Live ಸ್ಕೋರ್‌ಕಾರ್ಡ್

1
49715

 ಮತ್ತೆ ಅಶ್ವಿನ್ ಕಡೆಗಣಿಸಿದ ಟೀಮ್ ಇಂಡಿಯಾ; ಶಮಿ, ಇಶಾಂತ್ ಶರ್ಮಾ ಕೂಡ ತಂಡದಿಂದ ಹೊರಕ್ಕೆ! ಮತ್ತೆ ಅಶ್ವಿನ್ ಕಡೆಗಣಿಸಿದ ಟೀಮ್ ಇಂಡಿಯಾ; ಶಮಿ, ಇಶಾಂತ್ ಶರ್ಮಾ ಕೂಡ ತಂಡದಿಂದ ಹೊರಕ್ಕೆ!

ಇಂಗ್ಲೆಂಡ್ ತಂಡದಲ್ಲಿ ಹಿಂದಿನ ಪ್ಲೇಯಿಂಗ್ ‍XI ಮತ್ತು ಈಗಿನ ಪ್ಲೇಯಿಂಗ್‌ ಮಧ್ಯೆ ಹೆಚ್ಚಿನ ಬದಲಾವಣೆಗಳಾಗಿಲ್ಲ. ಬಹುತೇಕ ಹಿಂದಿನ ಪಂದ್ಯದಲ್ಲಿ ಆಡಿದ ತಂಡವೇ ಈ ಬಾರಿಯೂ ಕಣಕ್ಕಿಳಿದಿದೆ. ಆದರೆ ಭಾರತೀಯ ತಂಡಗಳಲ್ಲಿ ಒಂದೆರಡು ಬದಲಾವಣೆಯಾಗಿದೆ. ವೇಗಿ ಮೊಹಮ್ಮದ್ ಶಮಿಗೆ ವಿಶ್ರಾಂತಿ ನೀಡಲಾಗಿದೆ. ಆರ್‌ ಅಶ್ವಿನ್ ಈ ಪಂದ್ಯದಲ್ಲೂ ಆಡುತ್ತಿಲ್ಲ. ಬದಲಿಗೆ ಶಾರ್ದೂಲ್ ಠಾಕೂರ್ ಮತ್ತು ಉಮೇಶ್ ಯಾದವ್ ಬೌಲಿಂಗ್ ಬಣದಲ್ಲಿ ಕಾಣಿಸಿಕೊಂಡಿದ್ದಾರೆ.

ಭಾರತ ಪ್ಲೇಯಿಂಗ್ XI: ರೋಹಿತ್ ಶರ್ಮಾ, ಕೆಎಲ್ ರಾಹುಲ್, ಚೇತೇಶ್ವರ ಪೂಜಾರ, ವಿರಾಟ್ ಕೊಹ್ಲಿ (ಸಿ), ಅಜಿಂಕ್ಯ ರಹಾನೆ, ರಿಷಭ್ ಪಂತ್ (ಡಬ್ಲ್ಯೂ), ರವೀಂದ್ರ ಜಡೇಜಾ, ಶಾರ್ದೂಲ್ ಠಾಕೂರ್, ಉಮೇಶ್ ಯಾದವ್, ಜಸ್ಪ್ರೀತ್ ಬೂಮ್ರಾ, ಮೊಹಮ್ಮದ್ ಸಿರಾಜ್.

ಇಂಗ್ಲೆಂಡ್ ಪ್ಲೇಯಿಂಗ್ XI: ರೋರಿ ಬರ್ನ್ಸ್, ಹಸೀಬ್ ಹಮೀದ್, ಡೇವಿಡ್ ಮಲನ್, ಜೋ ರೂಟ್ (ಸಿ), ಆಲ್ಲಿ ಪೋಪ್, ಜಾನಿ ಬೈರ್‌ಸ್ಟೊ (ಡಬ್ಲ್ಯೂ), ಮೊಯೀನ್ ಅಲಿ, ಕ್ರಿಸ್ ವೋಕ್ಸ್, ಕ್ರೇಗ್ ಓವರ್‌ಟನ್, ಒಲ್ಲಿ ರಾಬಿನ್ಸನ್, ಜೇಮ್ಸ್ ಆಂಡರ್ಸನ್.

 ಕಳಪೆ ಪ್ರದರ್ಶನ ನೀಡಿದರೂ ಆ ಒಬ್ಬನಿಗೆ ತಂಡದಲ್ಲಿ ಸ್ಥಾನ; ನಾಲ್ಕನೇ ಟೆಸ್ಟ್‌ಗೆ ವಿವಿಎಸ್ ಲಕ್ಷ್ಮಣ್ ಸಲಹೆ ಕಳಪೆ ಪ್ರದರ್ಶನ ನೀಡಿದರೂ ಆ ಒಬ್ಬನಿಗೆ ತಂಡದಲ್ಲಿ ಸ್ಥಾನ; ನಾಲ್ಕನೇ ಟೆಸ್ಟ್‌ಗೆ ವಿವಿಎಸ್ ಲಕ್ಷ್ಮಣ್ ಸಲಹೆ

ಇತ್ತಂಡಗಳ ಸ್ಕೋರ್‌ಕಾರ್ಡ್
ತೃತೀಯ ಟೆಸ್ಟ್‌ನಲ್ಲಿ ಭಾರತದ ಕಳಪೆ ಬ್ಯಾಟಿಂಗ್ ಪ್ರದರ್ಶಿಸಿತ್ತು. ಯಾವುದೇ ಬ್ಯಾಟ್ಸ್‌ಮನ್‌ಗಳು ಉತ್ತಮ ರನ್ ಗಳಿಸಿರಲಿಲ್ಲ. ಇದೇ ಕಾರಣಕ್ಕೆ ಭಾರತ ಇನ್ನಿಂಗ್ಸ್‌ ಸಹಿತ ಪಂದ್ಯ ಸೋತಿತ್ತು. ತೃತೀಯ ಟೆಸ್ಟ್‌ನ ಆರಂಭಿಕ ಇನ್ನಿಂಗ್ಸ್‌ನಲ್ಲಿ ರೋಹಿತ್ ಶರ್ಮಾ 19, ಚೇತೇಶ್ವರ ಪೂಜಾರ 1, ವಿರಾಟ್ ಕೊಹ್ಲಿ 7, ಅಜಿಂಕ್ಯ ರಹಾನೆ 18, ರಿಷಭ್ ಪಂತ್ 2, ರವೀಂದ್ರ ಜಡೇಜಾ 4, ಇಶಾಂತ್ ಶರ್ಮಾ 8, ಮೊಹಮ್ಮದ್ ಸಿರಾಜ್ 3 ರನ್‌ನೊಂದಿಗೆ ಭಾರತ 40.4 ಓವರ್‌ಗೆ ಎಲ್ಲಾ ವಿಕೆಟ್‌ ಕಳೆದು 78 ರನ್ ಗಳಿಸಿತ್ತು. ಇಂಗ್ಲೆಂಡ್ ಪ್ರಥಮ ಇನ್ನಿಂಗ್ಸ್‌ನಲ್ಲಿ ರೋರಿ ಬರ್ನ್ಸ್ 61, ಹಸೀಬ್ ಹಮೀದ್ 68, ಡೇವಿಡ್ ಮಲನ್ 70, ಜೋ ರೂಟ್ 121, ಜಾನಿ ಬೈರ್‌ಸ್ಟೊ 29, ಜೋಸ್ ಬಟ್ಲರ್ 7, ಮೊಯೀನ್ ಅಲಿ 8, ಸ್ಯಾಮ್ ಕರನ್ 15, ಕ್ರೇಗ್ ಓವರ್‌ಟನ್ 32 ರನ್‌ ನೊಂದಿಗೆ 132.2 ಓವರ್‌ಗೆ ಎಲ್ಲಾ ವಿಕೆಟ್ ಕಳೆದು 432 ರನ್ ಬಾರಿಸಿತ್ತು. ಭಾರತ ದ್ವಿತೀಯ ಇನ್ನಿಂಗ್ಸ್‌ನಲ್ಲಿ ರೋಹಿತ್ ಶರ್ಮಾ 59, ಕೆಎಲ್ ರಾಹುಲ್ 8, ಚೇತೇಶ್ವರ ಪೂಜಾರ 91, ವಿರಾಟ್ ಕೊಹ್ಲಿ 55, ಅಜಿಂಕ್ಯ ರಹಾನೆ 10, ರಿಷಭ್ ಪಂತ್ 1, ರವೀಂದ್ರ ಜಡೇಜಾ 30, ಮೊಹಮ್ಮದ್ ಶಮಿ 6, ಇಶಾಂತ್ ಶರ್ಮಾ 2, ಜಸ್ಪ್ರೀತ್ ಬೂಮ್ರಾ 1 ರನ್‌ನೊಂದಿಗೆ ಭಾರತ 99.3 ಓವರ್‌ಗೆ ಎಲ್ಲಾ ವಿಕೆಟ್ ಕಳೆದು 278 ರನ್ ಗಳಿಸಿ ಸೋಲೊಪ್ಪಿಕೊಂಡಿತು.

Story first published: Thursday, September 2, 2021, 16:09 [IST]
Other articles published on Sep 2, 2021
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X