Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

ಭಾರತ vs ಇಂಗ್ಲೆಂಡ್, 4ನೇ ಟೆಸ್ಟ್‌, Live: ಭಾರತದ ದಾಳಿಗೆ ಇಂಗ್ಲೆಂಡ್ ತತ್ತರ!

England vs India, 4th Test Match, Live Score, Updates

ಲಂಡನ್: ಲಂಡನ್‌ನ ಕೆನ್ನಿಂಗ್ಟನ್ ಓವಲ್‌ನಲ್ಲಿ ಭಾರತ ಮತ್ತು ಇಂಗ್ಲೆಂಡ್ ಮಧ್ಯೆ ನಾಲ್ಕನೇ ಟೆಸ್ಟ್‌ ಪಂದ್ಯ ನಡೆಯುತ್ತಿದೆ. ಮೊದಲ ಇನ್ನಿಂಗ್ಸ್‌ ಆಡುತ್ತಿರುವ ಆತಿಥೇಯ ಇಂಗ್ಲೆಂಡ್ ಭಾರತೀಯರ ಬೌಲಿಂಗ್ ದಾಳಿಗೆ ತತ್ತರಿಸಿದೆ. ಇಂಗ್ಲೆಂಡ್ ಪ್ರಮುಖ ವಿಕೆಟ್‌ಗಳು ಈಗಾಗಲೇ ಪತನವಾಗಿದೆ. 20 ಓವರ್‌ ಒಳಗೆ ಇಂಗ್ಲೆಂಡ್‌ 4 ವಿಕೆಟ್ ಕಳೆದುಕೊಂಡಿರುವುದರಿಂದ ಭಾರತದ ಹುಮ್ಮಸ್ಸು ಹೆಚ್ಚಿದೆ. ಪಂದ್ಯದಲ್ಲಿ ಗೆಲ್ಲುವ ನಿರೀಕ್ಷೆಯೂ ಮೂಡಿದೆ.

ಟಾಸ್ ಸೋತು ಬ್ಯಾಟಿಂಗ್‌ಗೆ ಇಳಿಸಲ್ಪಟ್ಟ ಭಾರತ, ಆರಂಭಿಕ ಇನ್ನಿಂಗ್ಸ್‌ನಲ್ಲಿ 61.3 ಓವರ್‌ಗೆ ಎಲ್ಲಾ ವಿಕೆಟ್ ಕಳೆದು 191 ರನ್ ಗಳಿಸಿತ್ತು. ಭಾರತದ ಪರ ರನ್ ಕೊಡುಗೆ ನೀಡಿದ್ದೆಂದರೆ ನಾಯಕ ವಿರಾಟ್ ಕೊಹ್ಲಿ ಮತ್ತು ಬೌಲಿಂಗ್ ಆಲ್ ರೌಂಡರ್ ಶಾರ್ದೂಲ್ ಠಾಕೂರ್ ಮಾತ್ರ. ಕೊಹ್ಲಿ ಭರ್ತಿ 50 ರನ್ ಬಾರಿಸಿದ್ದರೆ, ಠಾಕೂರ್ 57 ರನ್ ಬಾರಿಸಿದ್ದರು.

ಭಾರತ vs ಇಂಗ್ಲೆಂಡ್, 4ನೇ ಟೆಸ್ಟ್‌ ಪಂದ್ಯ, Live ಸ್ಕೋರ್‌ಕಾರ್ಡ್

1
49715

ಶಾರ್ದೂಲ್ ಠಾಕೂರ್ ಸ್ಫೋಟಕ ಬ್ಯಾಟಿಂಗ್
ಭಾರತದ ಮೊದಲ ಇನ್ನಿಂಗ್ಸ್‌ನಲ್ಲಿ ಬ್ಯಾಟ್ಸ್‌ಮನ್‌ಗಳಲ್ಲಿ ರನ್ ಬಾರಿಸಿದ್ದು ವಿರಾಟ್ ಕೊಹ್ಲಿ ಮಾತ್ರ. ಕೊಹ್ಲಿ ಅರ್ಧ ಶತಕ ಬಾರಿಸಿದರು. ಅದು ಬಿಟ್ಟರೆ ಶಾರ್ದೂಲ್ ಠಾಕೂರ್ ಬ್ಯಾಟಿಂಗ್ ಗಮನಾರ್ಹವೆನಿಸಿತು. ಆರಂಭಿಕ ಬ್ಯಾಟ್ಸ್‌ಮನ್‌ ರೋಹಿತ್ ಶರ್ಮಾ 11 ರನ್ ಬಾರಿಸಿ ಕ್ರಿಸ್ ವೋಕ್ಸ್ ಓವರ್‌ನಲ್ಲಿ ವಿಕೆಟ್ ಕೀಪರ್ ಜಾನಿ ಬೇರ್ಸ್ಟೋವ್‌ಗೆ ಕ್ಯಾಚಿತ್ತು ನಿರ್ಗಮಿಸಿದ್ದರೆ, ಮತ್ತೊಬ್ಬ ಆರಂಭಿಕ ಆಟಗಾರ ಕೆಎಲ್ ರಾಹುಲ್ 17 ರನ್ ಬಾರಿ ಜೇಮ್ಸ್ ಆ್ಯಂಡರ್ಸನ್‌ಗೆ ವಿಕೆಟ್‌ ನೀಡಿದ್ದರು. ಮೂರನೇ ಬ್ಯಾಟಿಂಗ್ ಕ್ರಮಾಂಕದಲ್ಲಿ ಬಂದಿದ್ದ ಚೇತೇಶ್ವರ್ ಪೂಜಾರ ಕೂಡ 4 ರನ್ ಬಾರಿಸಿ ಜೇಮ್ಸ್ ಆ್ಯಂಡರ್ಸನ್ ಓವರ್‌ನಲ್ಲಿ ಬೇರ್ಸ್ಟೋವ್‌ಗೆ ಕ್ಯಾಚ್‌ ನೀಡಿ ನಿರ್ಗಮಿಸಿದರು. ಆಲ್ ರೌಂಡರ್ ರವೀಂದ್ರ ಜಡೇಜಾ ಕೂಡ 10 ರನ್ ಬಾರಿಸಿ ಔಟ್ ಆದರು. ಇನ್ನು ವಿರಾಟ್ ಕೊಹ್ಲಿ 50, ಅಜಿಂಕ್ಯ ರಹಾನೆ 14, ರಿಷಭ್ ಪಂತ್ 9, ಉಮೇಶ್ ಯಾದವ್ 10 ರನ್ ಸೇರಿಸಿದರು. 8ನೇ ಬ್ಯಾಟಿಂಗ್ ಕ್ರಮಾಂಕದಲ್ಲಿ ಬಂದಿದ್ದ ಶಾರ್ದೂಲ್ 7 ಫೋರ್, 3 ಸಿಕ್ಸರ್ ಸೇರಿಸಿ 57 ರನ್ ಕೊಡುಗೆ ನೀಡಿದರು. ಅದೂ ಕೂಡ 36 ಎಸೆತಗಳಲ್ಲಿ ಅನ್ನೋದು ವಿಶೇಷ.

ಇಂಗ್ಲೆಂಡ್‌ ಪ್ರಮುಖ ವಿಕೆಟ್‌ಗಳು ಪತನ
ಆರಂಭಿಕ ಇನ್ನಿಂಗ್ಸ್‌ನಲ್ಲಿ ಭಾರತ 61.3 ಓವರ್‌ಗೆ ಎಲ್ಲಾ ವಿಕೆಟ್ ಕಳೆದು 191 ರನ್ ಗಳಿಸಿತ್ತು. ಆರಂಭಿಕ ಇನ್ನಿಂಗ್ಸ್‌ ಆಡುತ್ತಿರುವ ಇಂಗ್ಲೆಂಡ್ ಕೂಡ ಪ್ರಮುಖ ವಿಕೆಟ್‌ಗಳನ್ನು ಕಳೆದುಕೊಂಡಿದೆ. ರೋರಿ ಬರ್ನ್ಸ್ 5, ಹಸೀಬ್ ಹಮೀದ್ 0, ನಾಯಕ ಜೋ ರೂಟ್ 21 ರನ್ ಬಾರಿಸಿ ಔಟ್ ಆಗಿದ್ದರು. ಗುರುವಾರ ಮೊದಲನೇ ದಿನದಾಟದ ಅಂತ್ಯಕ್ಕೆ ಇಂಗ್ಲೆಂಡ್‌ 17 ಓವರ್‌ ಮುಕ್ತಾಯಕ್ಕೆ 3 ವಿಕೆಟ್ ಕಳೆದು 53 ರನ್ ಬಾರಿಸಿತ್ತು. ದ್ವಿತೀಯ ದಿನದಾಟದ ವೇಳೆ ಡಾವಿಡ್ ಮನ್ 31, ಕ್ರೇಗ್ ಓವರ್‌ಟನ್‌ 1 ರನ್‌ಗೆ ವಿಕೆಟ್ ಒಪ್ಪಿಸಿದ್ದಾರೆ. 29 ಓವರ್‌ ಮುಕ್ತಾಯಕೆ ಇಂಗ್ಲೆಂಡ್ 5 ವಿಕೆಟ್ ಕಳೆದು 78 ರನ್ ಗಳಿಸಿತ್ತು. ಆಲಿ ಪೋಪ್ ಮತ್ತು ಜಾನಿ ಬೇರ್ಸ್ಟೋವ್ ಆಡುತ್ತಿದ್ದರು.

ಇತ್ತಂಡಗಳ ಪ್ಲೇಯಿಂಗ್ XI
ಭಾರತ ಪ್ಲೇಯಿಂಗ್ XI: ರೋಹಿತ್ ಶರ್ಮಾ, ಕೆಎಲ್ ರಾಹುಲ್, ಚೇತೇಶ್ವರ ಪೂಜಾರ, ವಿರಾಟ್ ಕೊಹ್ಲಿ (ಸಿ), ಅಜಿಂಕ್ಯ ರಹಾನೆ, ರಿಷಭ್ ಪಂತ್ (ಡಬ್ಲ್ಯೂ), ರವೀಂದ್ರ ಜಡೇಜಾ, ಶಾರ್ದೂಲ್ ಠಾಕೂರ್, ಉಮೇಶ್ ಯಾದವ್, ಜಸ್ಪ್ರೀತ್ ಬೂಮ್ರಾ, ಮೊಹಮ್ಮದ್ ಸಿರಾಜ್.

ಇಂಗ್ಲೆಂಡ್ ಪ್ಲೇಯಿಂಗ್ XI: ರೋರಿ ಬರ್ನ್ಸ್, ಹಸೀಬ್ ಹಮೀದ್, ಡೇವಿಡ್ ಮಲನ್, ಜೋ ರೂಟ್ (ಸಿ), ಆಲ್ಲಿ ಪೋಪ್, ಜಾನಿ ಬೈರ್‌ಸ್ಟೊ (ಡಬ್ಲ್ಯೂ), ಮೊಯೀನ್ ಅಲಿ, ಕ್ರಿಸ್ ವೋಕ್ಸ್, ಕ್ರೇಗ್ ಓವರ್‌ಟನ್, ಒಲ್ಲಿ ರಾಬಿನ್ಸನ್, ಜೇಮ್ಸ್ ಆಂಡರ್ಸನ್.

Story first published: Friday, September 3, 2021, 16:37 [IST]
Other articles published on Sep 3, 2021
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+