ಭಾರತ ಹಾಗೂ ಇಂಗ್ಲೆಂಡ್ ನಡುವಣ ಐದನೇ ಟೆಸ್ಟ್ ಪಂದ್ಯ ಗುರುವಾರ (ಜುಲೈ 31) ಆರಂಭವಾಗಲಿದೆ. ಈ ಪಂದ್ಯದ ಮೇಲೆ ಎಲ್ಲರ ಚಿತ್ತ ನೆಟ್ಟಿದೆ. ಇಂಗ್ಲೆಂಡ್ ಐದನೇ ಟೆಸ್ಟ್‌ಗೆ ತನ್ನ ತಂಡವನ್ನು ಘೋಷಿಸಿದೆ. ಆತಿಥೇಯ ತಂಡದಲ್ಲಿ ಹಲವು ಬದಲಾವಣೆಗಳನ್ನು ಮಾಡಲಾಗಿದೆ. ಹಾಗಿದ್ದರೆ ತಂಡದಲ್ಲಿ ಆಗಿರುವ ಬದಲಾವಣೆಗಳು ಏನು? ಯಾರೆಲ್ಲಾ ತಂಡದಿಂದ ಹೊರ ನಡೆದಿದ್ದಾರೆ ಎಂಬ ಬಗ್ಗೆ ಮಾಹಿತಿ ಇಲ್ಲಿದೆ.
ಮಹತ್ವದ ಟೆಸ್ಟ್ ಪಂದ್ಯಕ್ಕಾಗಿ ಇಂಗ್ಲೆಂಡ್ ಓವಲ್ ತಲುಪಿದೆ. ಈ ಪಂದ್ಯದಲ್ಲಿ ಗೆಲುವು ಸಾಧಿಸಬೇಕು ಎಂದು ಇಂಗ್ಲೆಂಡ್ ಭರ್ಜರಿ ಪ್ಲ್ಯಾನ್ ಮಾಡಿಕೊಂಡಿದೆ. ಇದಕ್ಕಾಗಿ ತಂಡದಲ್ಲಿ ನಾಲ್ಕು ಬದಲಾವಣೆಗಳನ್ನು ಮಾಡಿದೆ. ಐದನೇ ಟೆಸ್ಟ್ ಪಂದ್ಯದಲ್ಲಿ ಇಂಗ್ಲೆಂಡ್ ನಾಯಕ ಬೆನ್ ಸ್ಟೋಕ್ಸ್ ತಂಡದಿಂದ ಹೊರ ನಡೆದಿದ್ದಾರೆ.

ಮ್ಯಾಂಚೆಸ್ಟರ್ ಟೆಸ್ಟ್ ಪಂದ್ಯದಲ್ಲಿ ಭುಜದ ಗಾಯಕ್ಕೆ ತುತ್ತಾಗಿದ್ದ ಇಂಗ್ಲೆಂಡ್ ತಂಡದ ನಾಯಕ ಬೆನ್ ಸ್ಟೋಕ್ಸ್ ತಂಡದಲ್ಲಿ ಸ್ಥಾನ ಪಡೆಯುವಲ್ಲಿ ವಿಫಲರಾಗಿದ್ದಾರೆ. ಇವರ ಭುಜದ ಗಾಯ ಇನ್ನು ಚೇತರಿಕೆಯ ಹಂತದಲ್ಲಿದೆ ಎಂದು ತಿಳಿದು ಬಂದಿದೆ. ಇವರು ತಂಡದಿಂದ ಹೊರ ನಡೆದಿದ್ದ ಇಂಗ್ಲೆಂಡ್ ತಂಡಕ್ಕೆ ದೊಡ್ಡ ಪೆಟ್ಟು ಬಿದ್ದಿದೆ. ಇನ್ನು ಇಂಗ್ಲೆಂಡ್ ತಂಡದ ಪ್ರಮುಖ ವೇಗದ ಬೌಲರ್ ಜೋಫ್ರಾ ಆರ್ಚರ್, ಎಂಟು ವರ್ಷದ ಬಳಿಕ ತಂಡದಲ್ಲಿ ಸ್ಥಾನ ಪಡೆದಿದ್ದ ಲಿಯಾಮ್ ಡಾಸನ್ ಅವರನ್ನು ಸಹ ತಂಡದಿಂದ ಕೈ ಬಿಡಲಾಗಿದೆ. ಇವರಷ್ಟೇ ಅಲ್ಲದೆ ಬ್ರೈಡನ್ ಕಾರ್ಸೆ ಸಹ ತಂಡದಿಂದ ಹೊರ ನಡೆದಿದ್ದಾರೆ.
ಇಂಗ್ಲೆಂಡ್ ಪ್ಲೇಯಿಂದ ಇಲೆವೆನ್: ಜ್ಯಾಕ್ ಕ್ರಾಲಿ, ಬೆನ್ ಡಕೆಟ್, ಓಲಿ ಪೋಪ್ (ಸಿ), ಜೋ ರೂಟ್, ಹ್ಯಾರಿ ಬ್ರೂಕ್, ಜಾಕೋಬ್ ಬೆಥೆಲ್, ಜೇಮೀ ಸ್ಮಿತ್ (ವಾರ), ಕ್ರಿಸ್ ವೋಕ್ಸ್, ಗಸ್ ಅಟ್ಕಿನ್ಸನ್, ಜೇಮೀ ಓವರ್ಟನ್, ಜೋಶ್ ಟಂಗ್
ಭಾರತ ಹಾಗೂ ಇಂಗ್ಲೆಂಡ್ ತಂಡಗಳು ಓವಲ್‌ನಲ್ಲಿ ಕಾದಾಟ ನಡೆಸಲಿವೆ. ಈ ಪಂದ್ಯ ಉಭಯ ತಂಡಗಳಿಗೂ ಮಹತ್ವದಾಗಿದೆ. ಇಂಗ್ಲೆಂಡ್ ಹೆಡಿಂಗ್ಲಿ ಹಾಗೂ ಲಾರ್ಡ್ಸ್ ಪಂದ್ಯದಲ್ಲಿ ಜಯ ಸಾಧಿಸಿ ಸರಣಿಯಲ್ಲಿ 2-1 ರಿಂದ ಮುನ್ನಡೆ ಸಾಧಿಸಿದೆ. ಇನ್ನು ಟೀಮ್ ಇಂಡಿಯಾ ಬರ್ಮಿಂಗ್‌ಹ್ಯಾಮ್ ಪಂದ್ಯದಲ್ಲಿ ಜಯ ಸಾಧಿಸಿದೆ. ಭಾರತ ತಂಡಕ್ಕೆ ಐದನೇ ಟೆಸ್ಟ್ ಮಹತ್ವದಾಗಿದೆ. ಈ ಪಂದ್ಯದಲ್ಲಿ ಜಯ ಸಾಧಿಸಿ ಸರಣಿಯಲ್ಲಿ ಸಮಬಲ ಸಾಧಿಸುವ ಆಸೆ ಪ್ರವಾಸಿ ಭಾರತ ತಂಡದ್ದಾಗಿದೆ. ಹೀಗಾಗಿ ಟೀಮ್ ಇಂಡಿಯಾ ತನ್ನ ತಂಡದಲ್ಲೂ ಭಾರೀ ಬದಲಾವಣೆಗಳನ್ನು ಮಾಡಿಕೊಳ್ಳುವ ನಿರೀಕ್ಷೆ ಇದೆ.

ಟೀಮ್ ಇಂಡಿಯಾದ ಯಾರ್ಕರ್ ಸ್ಪೇಷಲಿಸ್ಟ್ ಜಸ್ಪ್ರೀತ್ ಬುಮ್ರಾ ಐದನೇ ಟೆಸ್ಟ್ ಆಡುತ್ತಾರೋ ಇಲ್ಲವೋ ಎಂಬ ಬಗ್ಗೆ ಇನ್ನು ಅನುಮಾಗಳು ಇವೆ. ಅಲ್ಲದೆ ಮಹತ್ವದ ಪಂದ್ಯದಲ್ಲಿ ಕುಲ್‌ದೀಪ್ ಯಾದವ್ ಹಾಗೂ ಅರ್ಷದೀಪ್ ಸಿಂಗ್ ಆಡುವ ಹನ್ನೊಂದರ ಬಳದಲ್ಲಿ ಸ್ಥಾನ ಪಡೆಯುತ್ತಾರಾ ಎಂಬ ಪ್ರಶ್ನೆಗಳು ಎದ್ದಿವೆ. ಈ ಎಲ್ಲ ಪ್ರಶ್ನೆಗಳಿಗೆ ಟಾಸ್ ಸಮಯದಲ್ಲಿ ಉತ್ತರ ಸಿಗಲಿದೆ.