ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
For Quick Alerts
ALLOW NOTIFICATIONS  
For Daily Alerts
 

35 ಎಸೆತಗಳ ಬಳಿಕ 1 ರನ್ ಗಳಿಸಿದ ಪೂಜಾರಗೆ ಪ್ರೇಕ್ಷಕರಿಂದ ಸಿಕ್ಕಾಪಟ್ಟೆ ಸಿಳ್ಳೆ, ಚಪ್ಪಾಳೆ!

Cheteshwar Pujara takes 35 balls to get off the mark, receives a huge cheer from crowd

ಲಾರ್ಡ್ಸ್: ಸುಮಾರು 35 ಎಸೆತಗಳ ಬಳಿಕ ಮೊದಲ ರನ್ ಗಳಿಸಿದ ಭಾರತದ ಅನುಭವಿ ಬ್ಯಾಟ್ಸ್‌ಮನ್‌ ಚೇತೇಶ್ವರ್ ಪೂಜಾರಗೆ ಲಂಡನ್‌ನ ಲಾರ್ಡ್ಸ್ ಸ್ಟೇಡಿಯಂನಲ್ಲಿದ್ದ ಪ್ರೇಕ್ಷಕರಿಂದ ಸಿಕ್ಕಾಪಟ್ಟೆ ಸಿಳ್ಳೆ, ತಪ್ಪಾಳೆ ಸಿಕ್ಕಿರುವ ಸಂಗತಿ ನಡೆದಿದೆ. ಲಾರ್ಡ್ಸ್ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಭಾರತ ಮತ್ತು ಇಂಗ್ಲೆಂಡ್ ನಡುವಿನ ದ್ವಿತೀಯ ಟೆಸ್ಟ್‌ ಪಂದ್ಯದ ವೇಳೆ ಗ್ರೇಟ್ ವಾಲ್-2 ಖ್ಯಾತಿಯ ಪೂಜಾರ ಗಮ್ಮತ್ತಿನ ಸಂಗತಿಗಾಗಿ ಗಮನ ಸೆಳೆದಿದ್ದಾರೆ.

ಐಪಿಎಲ್ ದ್ವಿತೀಯ ಹಂತದಲ್ಲಿ ಪಾಲ್ಗೊಳ್ಳುವ ಆಸ್ಟ್ರೇಲಿಯಾ ಆಟಗಾರರ ಪಟ್ಟಿಐಪಿಎಲ್ ದ್ವಿತೀಯ ಹಂತದಲ್ಲಿ ಪಾಲ್ಗೊಳ್ಳುವ ಆಸ್ಟ್ರೇಲಿಯಾ ಆಟಗಾರರ ಪಟ್ಟಿ

ಭಾನುವಾರ (ಆಗಸ್ಟ್ 15) ನಡೆದ ನಾಲ್ಕನೇ ದಿನದಾಟದಲ್ಲಿ ಭಾರತದ ದ್ವಿತೀಯ ಇನ್ನಿಂಗ್ಸ್‌ನಲ್ಲಿ 3ನೇ ಬ್ಯಾಟಿಂಗ್‌ ಕ್ರಮಾಂಕದಲ್ಲಿ ಬಂದಿದ್ದ ಚೇತೇಶ್ವರ್ ಪೂಜಾರ ಆ ಇನ್ನಿಂಗ್ಸ್‌ನ ಮೊದಲ ರನ್ ಗಳಿಸಲು 35 ಎಸೆತಗಳನ್ನು ಬಳಸಿಕೊಂಡರು. ಪೂಜಾರ ಯಾವಾಗ ಮೊದಲ ರನ್ ಗಳಿಸುತ್ತಾರಪ್ಪಾ ಎಂದು ಕಾಯುತ್ತ ಕುಳಿತಿದ್ದ ಪ್ರೇಕ್ಷಕರು ಪೂಜಾರ ಮೊದಲನೇ ರನ್ ಗಳಿಸುತ್ತಲೇ ಶಿಳ್ಳೆ, ಚಪ್ಪಾಳೆಯ ಮೂಲಕ ಚಿಯರ್ ಮಾಡಿದ್ದಾರೆ.

ದ್ರಾವಿಡ್ ಬಳಿಕ ಟೆಸ್ಟ್‌ ಕ್ರಿಕೆಟ್‌ನಲ್ಲಿ ಹೆಚ್ಚು ಎಸೆತಗಳನ್ನು ಎದುರಿಸಿದ ದಾಖಲೆ
ಗ್ರೇಟ್ ವಾಲ್ ಖ್ಯಾತಿಯ ರಾಹುಲ್ ದ್ರಾವಿಡ್ ಬಳಿಕ ಟೆಸ್ಟ್‌ ಕ್ರಿಕೆಟ್‌ನಲ್ಲಿ ಹೆಚ್ಚು ಎಸೆತಗಳನ್ನು ಎದುರಿಸಿದ ದಾಖಲೆ ಪೂಜಾರ ಅವರ ಹೆಸರಿನಲ್ಲಿದೆ. ಪಂದ್ಯಗಳ ವೇಳೆ ಒಂದೊಂದು ರನ್ ಗಳಿಸೋದಕ್ಕೂ ಪೂಜಾರ ಬಹಳಷ್ಟು ಎಸೆತಗಳನ್ನು ಬಳಸಿಕೊಳ್ಳೋದಿದೆ. ಇದೇ ಕಾರಣಕ್ಕೆ ಪೂಜಾರ ಬ್ಯಾಟಿಂಗ್‌ ಒಮ್ಮೊಮ್ಮೆ ಬೋರ್ ಅನ್ನಿಸೋದೂ ಇದೆ. ಬ್ಯಾಟಿಂಗ್‌ಗೆ ಬಂದ ಪೂಜಾರ ಮೊದಲ ರನ್ ಗಳಿಸುತ್ತಲೇ ಪ್ರೇಕ್ಷಕರು 'ಅಬ್ಬಾ.. ಸದ್ಯ..' ಎಂದು ನಿಟ್ಟುಸಿರುವ ಬಿಟ್ಟರು. ಕೇಕೆಯೂ ಹಾಕಿದರು. ಇದರ ಹಿಂದೆ ಸಂತೋಷವೂ ಇತ್ತು ಅಣಕವೂ ಇತ್ತನ್ನಿ. ಅಂದ್ಹಾಗೆ ಭಾರತದ ದ್ವಿತೀಯ ಇನ್ನಿಂಗ್ಸ್‌ನಲ್ಲಿ 206 ಎಸೆತಗಳಲ್ಲಿ ಪೂಜಾರ 45 ರನ್ ಗಳಿಸಿ ಮಾರ್ಕ್ ವುಡ್ ಓವರ್‌ನಲ್ಲಿ ಜೋ ರೂಟ್‌ಗೆ ಕ್ಯಾಚಿತ್ತು ನಿರ್ಗಮಿಸಿದರು.

ಭಾರತ vs ಇಂಗ್ಲೆಂಡ್: ಇಂಗ್ಲೀಷರ ನೆಲದಲ್ಲಿ ಸ್ವಾತಂತ್ರ್ಯೋತ್ಸವ ಆಚರಿಸಿದ ವಿರಾಟ್ ಬಳಗಭಾರತ vs ಇಂಗ್ಲೆಂಡ್: ಇಂಗ್ಲೀಷರ ನೆಲದಲ್ಲಿ ಸ್ವಾತಂತ್ರ್ಯೋತ್ಸವ ಆಚರಿಸಿದ ವಿರಾಟ್ ಬಳಗ

ಭಾರತಕ್ಕೆ ಚೇತೇಶ್ವರ್ ಪೂಜಾರ, ಅಜಿಂಕ್ಯ ರಹಾನೆ ಆಸರೆ
ಭಾರತದ ದ್ವಿತೀಯ ಇನ್ನಿಂಗ್ಸ್‌ನಲ್ಲಿ ಅಜಿಂಕ್ಯ ರಹಾನೆ ಮತ್ತು ಚೇತೇಶ್ವರ್ ಪೂಜಾರ ಬಿಟ್ಟು ಯಾರಿಂದಲೂ ಗಮನಾರ್ಹ ರನ್ ಬರಲಿಲ್ಲ. ಕೆಎಲ್ ರಾಹುಲ್ 5, ರೋಹಿತ್ ಶರ್ಮಾ 21, ಚೇತೇಶ್ವರ್ 45, ನಾಯಕ ವಿರಾಟ್ ಕೊಹ್ಲಿ 20, ಅಜಿಂಕ್ಯ ರಹಾನೆ 61, ರವೀಂದ್ರ ಜಡೇಜಾ 3 ರನ್ ಬಾರಿಸಿ ವಿಕೆಟ್ ನೀಡಿದ್ದಾರೆ. ರಿಷಭ್ ಪಂತ್ 14, ಇಶಾಂತ್ ಶರ್ಮಾ 4 ರನ್‌ನೊಂದಿಗೆ ಭಾನುವಾರ ನಾಲ್ಕನೇ ದಿನದಾಟದ ಅಂತ್ಯಕ್ಕೆ ಕ್ರೀಸ್‌ನಲ್ಲಿದ್ದರು. ಭಾರತ ಮೊದಲ ಇನ್ನಿಂಗ್ಸ್‌ನಲ್ಲಿ ಭಾರತದಿಂದ ರೋಹಿತ್ ಶರ್ಮಾ 83, ಕೆಎಲ್ ರಾಹುಲ್ 129, ಚೇತೇಶ್ವರ್ ಪೂಜಾರ 9, ವಿರಾಟ್ ಕೊಹ್ಲಿ 42, ಅಜಿಂಕ್ಯ ರಹಾನೆ 1, ರಿಷಭ್ ಪಂತ್ 37, ರವೀಂದ್ರ ಜಡೇಜಾ 40, ಮೊಹಮ್ಮದ್ ಶಮಿ ೦, ಇಶಾಂತ್ ಶರ್ಮಾ 8 ರನ್‌ ಬಾರಿಸಿದರು. ಭಾರತ 126.1 ಓವರ್‌ಗೆ ಎಲ್ಲಾ ವಿಕೆಟ್ ಕಳೆದು 364 ರನ್ ಗಳಿಸಿತ್ತು. ಭಾರತದ ಆರಂಭಿಕ ಇನ್ನಿಂಗ್ಸ್‌ನಲ್ಲಿ ಇಂಗ್ಲೆಂಡ್ ಅನುಭವಿ ವೇಗಿ ಜೇಮ್ಸ್ ಆ್ಯಂಡರ್ಸನ್ ಭಾರತ ಆರಂಭಿಕ ಇನ್ನಿಂಗ್ಸ್‌ನಲ್ಲಿ ಪ್ರಮುಖ 5 ವಿಕೆಟ್‌ ಉರುಳಿಸಿ ಗಮನ ಸೆಳೆದರು. 29 ಓವರ್‌ ಎಸೆದಿದ್ದ ಆ್ಯಂಡರ್ಸನ್ 62 ರನ್ ನೀಡಿ 5 ವಿಕೆಟ್ ಮುರಿದಿದ್ದರು. ರೋಹಿತ್ ಶರ್ಮಾ, ಚೇತೇಶ್ವರ್ ಪೂಜಾರ, ಅಜಿಂಕ್ಯ ರಹಾನೆ, ಇಶಾಂತ್ ಶರ್ಮಾ ಮತ್ತು ಜಸ್‌ಪ್ರೀತ್‌ ಬೂಮ್ರಾ ವಿಕೆಟ್ ಗಳನ್ನು ಆ್ಯಂಡರ್ಸನ್ ಕೆಡವಿದರು.

Mohammed Siraj ತಮ್ಮ celebration ಹಿಂದಿನ ರಹಸ್ಯವನ್ನು ಬಿಚ್ಚಿಟ್ಟಿದ್ದಾರೆ | Oneindia Kannada

ಇಂಗ್ಲೆಂಡ್ ಪ್ಲೇಯಿಂಗ್ XI/ಭಾರತ ಪ್ಲೇಯಿಂಗ್ XI
ಇಂಗ್ಲೆಂಡ್ ಪ್ಲೇಯಿಂಗ್ XI: ರೋರಿ ಬರ್ನ್ಸ್, ಡೊಮಿನಿಕ್ ಸಿಬ್ಲಿ, ಹಸೀಬ್ ಹಮೀದ್, ಜೋ ರೂಟ್ (ಸಿ), ಜಾನಿ ಬೈರ್‌ಸ್ಟೊ, ಜೋಸ್ ಬಟ್ಲರ್ (ಡಬ್ಲ್ಯೂ), ಮೊಯೀನ್ ಅಲಿ, ಸ್ಯಾಮ್ ಕರನ್, ಒಲ್ಲಿ ರಾಬಿನ್ಸನ್, ಮಾರ್ಕ್ ವುಡ್, ಜೇಮ್ಸ್ ಆ್ಯಂಡರ್ಸನ್.
ಬೆಂಚ್: ಝ್ಯಾಕ್ ಕ್ರಾಲಿ, ಡೇನಿಯಲ್ ಲಾರೆನ್ಸ್, ಕ್ರೇಗ್ ಓವರ್‌ಟನ್, ಸಾಕಿಬ್ ಮಹಮೂದ್, ಓಲ್ಲಿ ಪೋಪ್, ಜ್ಯಾಕ್ ಲೀಚ್.
ಭಾರತ ಪ್ಲೇಯಿಂಗ್ XI: ರೋಹಿತ್ ಶರ್ಮಾ, ಕೆಎಲ್ ರಾಹುಲ್, ಚೇತೇಶ್ವರ ಪೂಜಾರ, ವಿರಾಟ್ ಕೊಹ್ಲಿ (ಸಿ), ಅಜಿಂಕ್ಯ ರಹಾನೆ, ರಿಷಭ್ ಪಂತ್ (ಡಬ್ಲ್ಯೂ), ರವೀಂದ್ರ ಜಡೇಜಾ, ಮೊಹಮ್ಮದ್ ಶಮಿ, ಇಶಾಂತ್ ಶರ್ಮಾ, ಜಸ್ಪ್ರೀತ್ ಬೂಮ್ರಾ, ಮೊಹಮ್ಮದ್ ಸಿರಾಜ್.
ಬೆಂಚ್: ಉಮೇಶ್ ಯಾದವ್, ಸೂರ್ಯಕುಮಾರ್ ಯಾದವ್, ಹನುಮ ವಿಹಾರಿ, ರವಿಚಂದ್ರನ್ ಅಶ್ವಿನ್, ಅಕ್ಸರ್ ಪಟೇಲ್, ಅಭಿಮನ್ಯು ಈಶ್ವರನ್, ಪೃಥ್ವಿ ಶಾ, ಮಯಾಂಕ್ ಅಗರ್ವಾಲ್, ವೃದ್ಧಿಮಾನ್ ಸಹಾ.

Story first published: Monday, August 16, 2021, 1:25 [IST]
Other articles published on Aug 16, 2021
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X