ಭಾರತ vs ಇಂಗ್ಲೆಂಡ್: ಭಾರತದ ವಿರುದ್ಧ 2ನೇ ಕನಿಷ್ಠ ಮೊತ್ತಕ್ಕೆ ಆಲೌಟ್ ಆದ ಇಂಗ್ಲೆಂಡ್

ಭಾರತ ಹಾಗೂ ಇಂಗ್ಲೆಂಡ್ ನಡುವಿನ ಮೂರನೇ ಟೆಸ್ಟ್ ಪಂದ್ಯದಲ್ಲಿ ಭಾರತದ ಸ್ಪಿನ್ ದಾಳಿಗೆ ಇಂಗ್ಲೆಂಡ್ ಮಕಾಡೆ ಮಲಗಿದೆ. ಇಂಗ್ಲೆಂಡ್ ಮೊದಲ ಇನ್ನಿಂಗ್ಸ್‌ನಲ್ಲಿ ಕೇವಲ 112 ರನ್‌ಗಳಿಗೆ ಆಲೌಟ್ ಆಗಿದೆ. ಈ ಮೂಲಕ ಭಾರತದ ವಿರುದ್ಧ ಎರಡನೇ ಕನಿಷ್ಠ ಮೊತ್ತಕ್ಕೆ ಇಂಗ್ಲೆಂಡ್ ಆಲೌಟ್ ಆದಂತಾಗಿದೆ.
ಭಾರತದ ಸ್ಪಿನ್ ಬೌಲರ್‌ಗಳಾದ ಅಕ್ಷರ್ ಪಟೇಲ್ ಹಾಗೂ ಆರ್ ಅಶ್ವಿನ್ ದಾಳಿಗೆ ಪ್ರತ್ಯುತ್ತರವನ್ನು ನೀಡಲು ಇಂಗ್ಲೆಂಡ್ ಸಂಪೂರ್ಣವಾಗಿ ವಿಫಲವಾಯಿತು. ಅದರಲ್ಲೂ ಎರಡನೇ ಪಂದ್ಯವನ್ನಾಡುತ್ತಿರುವ ಅಕ್ಷರ್ ಪಟೇಲ್ ಇಂಗ್ಲೆಂಡ್‌ನ ಆರು ದಾಂಡಿಗರಿಗೆ ಫೆವಿಲುಯನ್ ಹಾದಿ ತೋರಿಸಿದ್ದಾರೆ.
ಟೀಮ್ ಇಂಡಿಯಾ ಪರವಾಗಿ ಅಕ್ಷರ್ ಪಟೇಲ್ ಎರಡನೇ ಪಂದ್ಯದಲ್ಲೂ ಐದು ವಿಕೆಟ್‌ಗಳ ಗೊಂಚಲು ಪಡೆಯುವಲ್ಲಿ ಸಫಲರಾಗಿದ್ದಾರೆ. ಚೆನ್ನೈನಲ್ಲಿ ನಡೆದ ಮೊದಲ ಪಂದ್ಯದ ಎರಡನೇ ಇನ್ನಿಂಗ್ಸ್‌ನಲ್ಲಿ ಅಕ್ಷರ್ ಐದು ವಿಕೆಟ್ ಪಡೆದಿದ್ದರೆ ಇಂದು ಆರು ವಿಕೆಟ್ ಕಬಳಿಸಿದ್ದಾರೆ. ಇನ್ನು ಆರ್ ಅಶ್ವಿನ್ ಮೂರು ವಿಕೆಟ್ ಪಡೆದರೆ ಇಶಾಂತ್ ಶರ್ಮಾ 1 ವಿಕೆಟ್ ತಮ್ಮದಾಗಿಸಿದರು.
ಇಂಗ್ಲೆಂಡ್ ಪರವಾಗಿ ಬ್ಯಾಟಿಂಗ್‌ನಲ್ಲಿ ಜಾಕ್ ಕ್ರಾವ್ಲಿ ಸ್ವಲ್ಪ ಮಟ್ಟಿಗೆ ಪ್ರತಿರೋಧವನ್ನು ತೋರುವಲ್ಲಿ ಯಶಸ್ವಿಯಾದರು. 84 ಎಸೆತಗಳನ್ನು ಎದುರಿಸಿದ ಕ್ರಾವ್ಲಿ 53 ರನ್‌ಗಳಿಸಿ ಇಂಗ್ಲೆಂಡ್ ಪರವಾಗಿ ಅಮೂಲ್ಯ ಕೊಡುಗೆಯನ್ನು ನೀಡಿದ್ದಾರೆ.
ಉಳಿದಂತೆ ಇಂಗ್ಲೆಂಡ್ ತಂಡದ ಯಾವೊಬ್ಬ ಬ್ಯಾಟ್ಸ್‌ಮನ್ ಕೂಡ ಕ್ರೀಸ್‌ನಲ್ಲಿ ನೆಲೆಯೂರಲು ಸಾಧ್ಯವಾಗಲೇ ಇಲ್ಲ. ಜೋ ರೂಟ್ 17 ರನ್ ಗಳಿಸಿದರೆ ಫೋಕ್ಸ್ 12 ರನ್ ಗಳಿಸಿದರು. ಅಂತಿಮವಾಗಿ ಇಂಗ್ಲೆಂಡ್ 112 ರನ್‌ಗಳಿಗೆ ತನ್ನ ಎಲ್ಲಾ ವಿಕೆಟ್ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿದೆ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications