ವಿಶ್ವ ಟೆಸ್ಟ್ ಚಾಂಪಿಯನ್‌ಷಿಪ್: ಅಗ್ರಸ್ಥಾನಕ್ಕೇರಿದ ಭಾರತ, ಸ್ಪರ್ಧೆಯಿಂದ ಹೊರಬಿದ್ದ ಇಂಗ್ಲೆಂಡ್

ಇಂಗ್ಲೆಂಡ್ ಹಾಗೂ ಭಾರತ ನಡುವಿನ ಟೆಸ್ಟ್ ಸರಣಿಯ ಮೂರನೇ ಪಂದ್ಯದಲ್ಲಿ ಭಾರತ ಗೆಲುವನ್ನು ಸಾಧಿಸಿದೆ. ಈ ಮೂಲಕ ಟೆಸ್ಟ್ ಸರಣಿಯಲ್ಲಿ ಭಾರತ 2-1 ಅಂತರದಿಂದ ಮುನ್ನಡೆಯನ್ನು ಸಾಧಿಸಿದೆ. ಆದರೆ ಇದರ ಜೊತೆಗೆ ಪ್ರತಿಷ್ಟಿತ ಐಸಿಸಿ ವಿಶ್ವ ಟೆಸ್ಟ್ ಚಾಂಪಿಯನ್‌ಷಿಪ್‌ನ ಅಂಕಪಟ್ಟಿಯಲ್ಲಿ ಭಾರತ ಅಗ್ರ ಸ್ಥಾನವನ್ನು ಪಡೆದುಕೊಂಡಿದೆ.
ಜೂನ್ ತಿಂಗಳಿನಲ್ಲಿ ಇಂಗ್ಲೆಂಡ್‌ನ ಲಾರ್ಡ್ಸ್‌ನಲ್ಲಿ ನಿಗದಿಯಾಗಿರುವ ಐಸಿಸಿ ಟೆಸ್ಟ್ ಚಾಂಪಿಯನ್‌ಷಿಪ್‌ನ ಫೈನಲ್ ಪಂದ್ಯದಲ್ಲಿ ಪಾಳ್ಗೊಳ್ಳಲು ನ್ಯೂಜಿಲೆಂಡ್ ಈ ಮೊದಲೇ ಸ್ಥಾನವನ್ನು ಭದ್ರಪಡಿಸಿಕೊಂಡಿತ್ತು. ಆದರೆ ಇನ್ನೊಂದು ಸ್ಥಾನಕ್ಕಾಗಿ ಭಾರತ ಇಂಗ್ಲೆಂಡ್ ಹಾಗೂ ಆಸ್ಟ್ರೇಲಿಯಾ ನಡುವೆ ತ್ರಿಕೋನ ಸ್ಪರ್ಧೆ ಏರ್ಪಟ್ಟಿತ್ತು.
ಭಾರತದ ವಿರುದ್ಧದ ನಾಲ್ಕು ಪಂದ್ಯಗಳ ಈ ಸರಣಿಯಲ್ಲಿ ಇಂಗ್ಲೆಂಡ್ 2 ಪಂದ್ಯಗಳನ್ನು ಸೋತಿರುವುದರ ಮೂಲಕ ಇಂಗ್ಲೆಂಡ್ ಈ ಸ್ಪರ್ಧೆಯಿಂದ ಹೊರಬಿದ್ದಂತಾಗಿದೆ. ಒಂದು ಸ್ಥಾನಕ್ಕಾಗಿ ಈಗ ಭಾರತ ಹಾಗೂ ಆಸ್ಟ್ರೇಲಿಯಾ ನಡುವೆ ಸ್ಪರ್ಧೆ ಏರ್ಪಟ್ಟಿದೆ.
ಅಂತಿಮ ಟೆಸ್ಟ್ ಪಂದ್ಯದಲ್ಲಿ ಭಾರತ ಕನಿಷ್ಟ ಡ್ರಾ ಮಾಡಿಕೊಳ್ಳುವಲ್ಲಿ ಸಫಲವಾದರೂ ಈ ಪ್ರತಿಷ್ಟಿತ ಐಸಿಸಿ ಟೆಸ್ಟ್ ಚಾಂಪಿಯನ್‌ಷಿಪ್‌ನ ಫೈನಲ್ ಪಂದ್ಯದಲ್ಲಿ ಭಾರತ ಸ್ಥಾನವನ್ನು ಪಡೆದುಕೊಳ್ಳಲಿದೆ. ಒಂದು ವೇಳೆ ಈ ಅಂತಿಮ ಪಂದ್ಯದಲ್ಲಿ ಭಾರತ ಸೋಲು ಕಂಡರೆ ಅದು ಆಸಿಸ್ ಪಾಲಿಗೆ ವರದಾನವಾಗಲಿದ್ದು ಭಾರತವನ್ನು ಹಿಂದಕ್ಕೆ ತಳ್ಳಿ ನ್ಯೂಜಿಲೆಂಡ್ ವಿರುದ್ಧ ಪ್ರಶಸ್ತಿಗಾಗಿ ಸೆಣೆಸಾಡುವ ಅರ್ಹತೆಯನ್ನು ಆಸ್ಟ್ರೇಲಿಯಾ ಗಿಟ್ಟಿಸಿಕೊಳ್ಳಲಿದೆ
ಭಾರತ ಇಂಗ್ಲೆಂಡ್ ನಡುವಿನ ಟೆಸ್ಟ್ ಸರಣಿಯ ಅಂತಿಮ ಪಂದ್ಯವು ಕೂಡ ಅಹ್ಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆಯಲಿದೆ. ಈ ಪಂದ್ಯ ಮಾರ್ಚ್ 4ರಿಂದ 8ರ ವರೆಗೆ ನಡೆಯಲಿದೆ. ಈ ಪಂದ್ಯ ಭಾರತಕ್ಕೆ ಸರಣಿ ಗೆಲ್ಲುವ ಜೊತೆಗೆ ಐಸಿಸಿ ಟೆಸ್ಟ್ ಚಾಂಪಿಯನ್‌ಷಿಪ್‌ನ ಫೈನಲ್‌ನಲ್ಲಿ ಪಾಲ್ಗೊಳ್ಳುವುದನ್ನು ಅಧಿಕೃತ ಪಡಿಸಲಿದೆ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications