ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
For Quick Alerts
ALLOW NOTIFICATIONS  
For Daily Alerts
 

ಭಾರತ vs ಇಂಗ್ಲೆಂಡ್: ಲಾರ್ಡ್ಸ್‌ನಲ್ಲಿ ಗೆದ್ದ ಭಾರತೀಯ ನಾಯಕರ ಪಟ್ಟಿ

England vs India: List of Indian captains to win the Lords Test
Mohammed Shami ಅರ್ಧಶತಕದ ನಂತರ England ಹೀಗಾ ಮಾಡೋದು | Oneindia Kannada

ಲಂಡನ್‌: ಲಂಡನ್‌ನ ಲಾರ್ಡ್ಸ್ ಸ್ಟೇಡಿಯಂನಲ್ಲಿ ಮುಕ್ತಾಯಗೊಂಡ ಭಾರತ ಮತ್ತು ಇಂಗ್ಲೆಂಡ್ ನಡುವಿನ ದ್ವಿತೀಯ ಟೆಸ್ಟ್‌ ಪಂದ್ಯದಲ್ಲಿ ಟೀಮ್ ಇಂಡಿಯಾ ಭರ್ಜರಿ 151 ರನ್‌ಗಳ ಜಯ ಗಳಿಸಿದೆ. ಕೆಎಲ್ ರಾಹುಲ್, ರೋಹಿತ್ ಶರ್ಮಾ, ಅಜಿಂಕ್ಯ ರಹಾನೆ, ಮೊಹಮ್ಮದ್ ಶಮಿ, ಜಸ್‌ಪ್ರೀತ್‌ ಬೂಮ್ರಾ ಬ್ಯಾಟಿಂಗ್‌ ಮತ್ತು ಶಮಿ, ಮೊಹಮ್ಮದ್ ಸಿರಾಜ್‌, ಇಶಾಂತ್ ಶರ್ಮಾ ಬೌಲಿಂಗ್‌ನೊಂದಿಗೆ ಭಾರತ ಐದು ಪಂದ್ಯಗಳ ಟೆಸ್ಟ್‌ ಸರಣಿಯಲ್ಲಿ 1-0ಯ ಮುನ್ನಡೆ ಸಾಧಿಸಿದೆ.

ಇಂಗ್ಲೆಂಡ್ ನೆಲದಲ್ಲಿ ದಾಖಲೆಯ ಜೊತೆಯಾಟವಾಡಿದ ಶಮಿ-ಬೂಮ್ರಾ ಜೋಡಿಇಂಗ್ಲೆಂಡ್ ನೆಲದಲ್ಲಿ ದಾಖಲೆಯ ಜೊತೆಯಾಟವಾಡಿದ ಶಮಿ-ಬೂಮ್ರಾ ಜೋಡಿ

ಸೋಮವಾರ (ಆಗಸ್ಟ್ 16) ಮುಕ್ತಾಯಗೊಂಡ ದ್ವಿತೀಯ ಟೆಸ್ಟ್‌ನಲ್ಲಿನ ಗೆಲುವಿನೊಂದಿಗೆ ಭಾರತದ ಹೆಸರಿಗೆ ಮತ್ತು ನಾಯಕ ವಿರಾಟ್ ಕೊಹ್ಲಿ ಹೆಸರಿಗೆ ವಿಶೇಷ ದಾಖಲೆಯೂ ಸೇರ್ಪಡೆಯಾಗಿದೆ. ಲಾರ್ಡ್ಸ್ ಸ್ಟೇಡಿಯಂನಲ್ಲಿ ನಡೆದ ಟೆಸ್ಟ್‌ ಪಂದ್ಯ ಗೆದ್ದ ಭಾರತೀಯ ನಾಯಕರ ಪಟ್ಟಿಗೆ ವಿರಾಟ್ ಕೊಹ್ಲಿ ಕೂಡ ಸೇರಿಕೊಂಡಿದ್ದಾರೆ.

ಭಾರತದ ಇನ್ನಿಂಗ್ಸ್‌ ಸ್ಕೋರ್‌ಕಾರ್ಡ್
ಟಾಸ್ ಸೋತು ಬ್ಯಾಟಿಂಗ್‌ಗೆ ಇಳಿಸಲ್ಪಟ್ಟ ಭಾರತದಿಂದ ಮೊದಲ ಇನ್ನಿಂಗ್ಸ್‌ನಲ್ಲಿ ರೋಹಿತ್ ಶರ್ಮಾ 83, ಕೆಎಲ್ ರಾಹುಲ್ 129, ಚೇತೇಶ್ವರ್ ಪೂಜಾರ 9, ವಿರಾಟ್ ಕೊಹ್ಲಿ 42, ಅಜಿಂಕ್ಯ ರಹಾನೆ 1, ರಿಷಭ್ ಪಂತ್ 37, ರವೀಂದ್ರ ಜಡೇಜಾ 40, ಮೊಹಮ್ಮದ್ ಶಮಿ ೦, ಇಶಾಂತ್ ಶರ್ಮಾ 8 ರನ್‌ ಬಾರಿಸಿದರು. ಭಾರತ 126.1 ಓವರ್‌ಗೆ ಎಲ್ಲಾ ವಿಕೆಟ್ ಕಳೆದು 364 ರನ್ ಗಳಿಸಿತ್ತು. ಭಾರತದ ಆರಂಭಿಕ ಇನ್ನಿಂಗ್ಸ್‌ನಲ್ಲಿ ಇಂಗ್ಲೆಂಡ್ ಅನುಭವಿ ವೇಗಿ ಜೇಮ್ಸ್ ಆ್ಯಂಡರ್ಸನ್ ಪ್ರಮುಖ 5 ವಿಕೆಟ್‌ ಉರುಳಿಸಿ ಗಮನ ಸೆಳೆದರು. 29 ಓವರ್‌ ಎಸೆದಿದ್ದ ಆ್ಯಂಡರ್ಸನ್ 62 ರನ್ ನೀಡಿ 5 ವಿಕೆಟ್ ಮುರಿದಿದ್ದರು. ರೋಹಿತ್ ಶರ್ಮಾ, ಚೇತೇಶ್ವರ್ ಪೂಜಾರ, ಅಜಿಂಕ್ಯ ರಹಾನೆ, ಇಶಾಂತ್ ಶರ್ಮಾ ಮತ್ತು ಜಸ್‌ಪ್ರೀತ್‌ ಬೂಮ್ರಾ ವಿಕೆಟ್ ಗಳನ್ನು ಆ್ಯಂಡರ್ಸನ್ ಕೆಡವಿದರು. ಭಾರತದ ದ್ವಿತೀಯ ಇನ್ನಿಂಗ್ಸ್‌ನಲ್ಲಿ ಅಜಿಂಕ್ಯ ರಹಾನೆ ಮತ್ತು ಚೇತೇಶ್ವರ್ ಪೂಜಾರ, ಮೊಹಮ್ಮದ್ ಶಮಿ ಮತ್ತು ಜಸ್‌ಪ್ರೀತ್‌ ಬೂಮ್ರಾ ಬಿಟ್ಟು ಯಾರಿಂದಲೂ ಗಮನಾರ್ಹ ರನ್ ಬರಲಿಲ್ಲ. ಕೆಎಲ್ ರಾಹುಲ್ 5, ರೋಹಿತ್ ಶರ್ಮಾ 21, ಚೇತೇಶ್ವರ್ 45, ನಾಯಕ ವಿರಾಟ್ ಕೊಹ್ಲಿ 20, ಅಜಿಂಕ್ಯ ರಹಾನೆ 61, ರವೀಂದ್ರ ಜಡೇಜಾ 3, ರಿಷಭ್ ಪಂತ್ 22, ಇಶಾಂತ್ ಶರ್ಮಾ 16, ಮೊಹಮ್ಮದ್ ಶಮಿ 56, ಜಸ್‌ಪ್ರೀತ್‌ ಬೂಮ್ರಾ 34 ರನ್‌ನೊಂದಿಗೆ 109.3 ಓವರ್‌ಗೆ 8 ವಿಕೆಟ್ ಕಳೆದು 298 ರನ್ ಗಳಿಸಿತ್ತು. ಇಂಗ್ಲೆಂಡ್ ಗೆಲುವಿಗೆ 272 ರನ್ ಗುರಿ ನೀಡಲಾಗಿತ್ತು.

ಎಟಿಪಿ ನಂ.1 ಸ್ಥಾನದಲ್ಲಿ ಬರೋಬ್ಬರಿ 334 ವಾರಗಳ ಕಳೆದ ನೊವಾಕ್ ಜೊಕೋವಿಕ್!ಎಟಿಪಿ ನಂ.1 ಸ್ಥಾನದಲ್ಲಿ ಬರೋಬ್ಬರಿ 334 ವಾರಗಳ ಕಳೆದ ನೊವಾಕ್ ಜೊಕೋವಿಕ್!

ಇಂಗ್ಲೆಂಡ್ ಇನ್ನಿಂಗ್ಸ್‌ ಸ್ಕೋರ್‌
ಇಂಗ್ಲೆಂಡ್ ಮೊದಲ ಇನ್ನಿಂಗ್ಸ್‌ನಲ್ಲಿ ರೋರಿ ಬರ್ನ್ಸ್ 49, ಡೊಮಿನಿಕ್ ಸಿಬ್ಲಿ 11, ಹಸೀಬ್ ಹಮೀದ್ 0, ಜೋ ರೂಟ್ 180, ಜಾನಿ ಬೈರ್‌ಸ್ಟೊವ್ 57, ಜೋಸ್ ಬಟ್ಲರ್ 23, ಮೊಯೀನ್ ಅಲಿ 27, ಸ್ಯಾಮ್ ಕರನ್ , ಒಲ್ಲಿ ರಾಬಿನ್ಸನ್ 6, ಮಾರ್ಕ್ ವುಡ್ 5 ರನ್ ಬಾರಿಸಿದರು. ಇಂಗ್ಲೆಂಡ್ 128 ಓವರ್‌ಗಳಲ್ಲಿ ಎಲ್ಲಾ ವಿಕೆಟ್ ಕಳೆದು 391 ರನ್ ಗಳಿಸಿ 27 ರನ್ ಮುನ್ನಡೆ ಪಡೆದುಕೊಂಡಿತ್ತು. ಇಂಗ್ಲೆಂಡ್ ಮೊದಲ ಇನ್ನಿಂಗ್ಸ್‌ನಲ್ಲಿ ಭಾರತದ ಇಶಾಂತ್ ಶರ್ಮಾ 3, ಮೊಹಮ್ಮದ್ ಶಮಿ 2, ಮೊಹಮ್ಮದ್ ಸಿರಾಜ್ 4 ವಿಕೆಟ್‌ನಿಂದ ಗಮನ ಸೆಳೆದಿದ್ದರು. ದ್ವಿತೀಯ ಇನ್ನಿಂಗ್ಸ್‌ನಲ್ಲಿ ರೋರಿ ಬರ್ನ್ಸ್ 0, ಡೊಮಿನಿಕ್ ಸಿಬ್ಲಿ 0, ಹಸೀಬ್ ಹಮೀದ್ 9, ಜೋ ರೂಟ್ 33, ಜಾನಿ ಬೈರ್‌ಸ್ಟೊ 2, ಜೋಸ್ ಬಟ್ಲರ್ 25, ಮೊಯೀನ್ ಅಲಿ 13, ಸ್ಯಾಮ್ ಕರನ್ 0, ಒಲ್ಲಿ ರಾಬಿನ್ಸನ್ 9, ಮಾರ್ಕ್ ವುಡ್ 0, ಜೇಮ್ಸ್ ಆ್ಯಂಡರ್ಸನ್ 0 ರನ್ ಗಳಿಸಿದರು. ಇಂಗ್ಲೆಂಡ್ 51.5 ಓವರ್‌ಗೆ ಎಲ್ಲಾ ವಿಕೆಟ್ ಕಳೆದು 120 ರನ್ ಬಾರಿಸಿ 151 ರನ್‌ನಿಂದ ಶರಣಾಯ್ತು. ಇಂಗ್ಲೆಂಡ್ ದ್ವಿತೀಯ ಇನ್ನಿಂಗ್ಸ್‌ನಲ್ಲಿ ಭಾರತದ ಜಸ್‌ಪ್ರೀತ್‌ ಬೂಮ್ರಾ 3, ಮೊಹಮ್ಮದ್ ಸಿರಾಜ್ 4, ಇಶಾಂತ್ ಶರ್ಮಾ 2, ಮೊಹಮ್ಮದ್ ಶಮಿ 1 ವಿಕೆಟ್‌ನಿಂದ ಗಮನ ಸೆಳೆದರು. ಭಾರತದ ದ್ವಿತೀಯ ಇನ್ನಿಂಗ್ಸ್‌ನಲ್ಲಿ ಬೌಲರ್‌ಗಳಾದ ಮೊಹಮ್ಮದ್ ಶಮಿ ಮತ್ತು ಜಸ್‌ಪ್ರೀತ್‌ ಬೂಮ್ರಾ 90 ರನ್ ಜೊತೆಯಾಟ ನೀಡಿದ್ದೆ ಇಂಗ್ಲೆಂಡ್‌ ವಿರುದ್ಧ ಒತ್ತಡ ಹೇರಲು ಪ್ರಮುಖ ಕಾರಣವೆನಿಸಿತ್ತು. ಹೀಗಾಗಿಯೇ ಗೆಲುವಿನ ಹುಮ್ಮಸ್ಸಿನಲ್ಲಿದ್ದ ಇಂಗ್ಲೆಂಡ್ ಸೋತು ಭಾರತ ಸರಣಿಯಲ್ಲಿ ಮುನ್ನಡೆ ಸಾಧಿಸಿದೆ.

ಆಗಸ್ಟ್ 16 ರಂದು ಕ್ರಿಕೆಟ್ ಜಗತ್ತಿನಲ್ಲಿ ನಡೆದದ್ದೇನು?ಆಗಸ್ಟ್ 16 ರಂದು ಕ್ರಿಕೆಟ್ ಜಗತ್ತಿನಲ್ಲಿ ನಡೆದದ್ದೇನು?

ಲಾರ್ಡ್ಸ್ ಟೆಸ್ಟ್‌ನಲ್ಲಿ ಗೆದ್ದ ಭಾರತೀಯ ಕ್ಯಾಪ್ಟನ್‌ಗಳ ಪಟ್ಟಿ
ಕ್ರಿಕೆಟ್ ಕಾಶಿ ಎಂದು ಕರೆಯಲಾಗುವ ಲಾರ್ಡ್ಸ್‌ ಸ್ಟೇಡಿಯಂನಲ್ಲಿ ನಡೆದ ಟೆಸ್ಟ್‌ನಲ್ಲಿ ಗೆಲುವು ದಾಖಲಿಸಿದ ಅಪರೂಪದ ದಾಖಲೆ ಪಟ್ಟಿಗೆ ನಾಯಕ ವಿರಾಟ್ ಕೊಹ್ಲಿ ಕೂಡ ಸೇರ್ಡೆಯಾಗಿದ್ದಾರೆ. ಈ ಪಟ್ಟಿಯಲ್ಲಿ ಈವರೆಗೆ ಕೇವಲ ಮೂವರು ನಾಯಕರು ಮಾತ್ರ ಕಾಣಿಸಿಕೊಂಡಿದ್ದಾರೆ ಅವರೆಂದರೆ..
1986ರಲ್ಲಿ ಕಪಿಲ್ ದೇವ್
2014ರಲ್ಲಿ ಎಂಎಸ್ ಧೋನಿ
2021ರಲ್ಲಿ ವಿರಾಟ್ ಕೊಹ್ಲಿ

Story first published: Tuesday, August 17, 2021, 1:24 [IST]
Other articles published on Aug 17, 2021
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X