ನನ್ನ ಸರದಿಗಾಗಿ ಕಾಯುತ್ತೇನೆ: ಟೆಸ್ಟ್ ತಂಡದ ಸ್ಥಾನದ ಕುರಿತು ಕೆಎಲ್ ರಾಹುಲ್ ಪ್ರತಿಕ್ರಿಯೆ

ಟೀಮ್ ಇಂಡಿಯಾದ ಪ್ರಮುಖ ಆಟಗಾರನಾಗಿರುವ ಕೆಎಲ್ ರಾಹುಲ್ ಟೆಸ್ಟ್ ತಂಡದಲ್ಲಿ ತಮ್ಮ ಸ್ಥಾನವನ್ನು ಭದ್ರಪಡಿಸಲು ಸಾಧ್ಯವಾಗಿಲ್ಲ. ಉತ್ತಮ ಪ್ರದರ್ಶನದ ಹೊರತಾಗಿಯೂ ಟೆಸ್ಟ್ ತಂಡದಲ್ಲಿ ಸ್ಥಾನವನ್ನು ಪಡೆಯಲು ಕೆಎಲ್ ರಾಹುಲ್ ವಿಫಲರಾಗಿದ್ದಾರೆ. ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಸರಣಿಯ ಆರಂಭಕ್ಕೂ ಮುನ್ನ ತಮ್ಮ ಟೆಸ್ಟ್ ಕ್ರಿಕೆಟ್‌ನಲ್ಲಿನ ಸ್ಥಾನದ ಬಗ್ಗೆ ಮಾತನಾಡಿದ್ದಾರೆ.
ಪ್ರತಿಭಾವಂತ ಆಟಗಾರ ಕೆಎಲ್ ರಾಹುಲ್ ಟೆಸ್ಟ್ ಕ್ರಿಕೆಟ್‌ನಲ್ಲಿ ಕೊನೆಯ ಬಾರಿಗೆ ಕಣಕ್ಕಿಳಿದಿದ್ದು 2019ರಲ್ಲಿ ವೆಸ್ಟ್ ಇಂಡೀಸ್ ತಂಡದ ವಿರುದ್ಧ. ನಂತರ ಟೀಮ್ ಇಂಡಿಯಾದ ಆಡುವ ಬಳಗದಲ್ಲಿ ಸ್ಥಾನ ಸಂಪಾದಿಸಲು ರಾಹುಲ್‌ಗೆ ಸಾಧ್ಯವಾಗಲಿಲ್ಲ. ಆದರೆ ಈ ಅವಧಿಯನ್ನು ತಾನು ಉತ್ತಮವಾಗಿ ಬಳಸಿಕೊಂಡಿದ್ದು ಅದನ್ನು ಆಟದಲ್ಲಿ ತೋರ್ಪಡಿಸುವುದಾಗಿ ಹೇಳಿಕೊಂಡಿದ್ದಾರೆ.

ಅಭ್ಯಾಸ ಪಂದ್ಯದಲ್ಲಿ ರಾಹುಲ್ ಶತಕ
ಟೆಸ್ಟ್ ಸರಣಿಯ ಆರಂಭಕ್ಕೂ ಮುನ್ನ ಕೌಂಟಿ ಸೆಲೆಕ್ಟ್ ತಂಡದ ವಿರುದ್ಧ ನಡೆದ ಪಂದ್ಯದಲ್ಲಿ ಕೆಎಲ್ ರಾಹುಕ್ ಶತಕವನ್ನು ಬಾರಿಸಿದ್ದಾರೆ. ಈ ಪ್ರದರ್ಶನದ ಬಳಿಕ ಬಿಸಿಸಿಐ ಟಿವಿ ಜೊತೆಗೆ ಕೆಎಲ್ ರಾಹುಲ್ ಮಾತನಾಡಿದ್ದಾರೆ. "ನಾನು ತಂಡದಿಂದ ಹೊರಬಿದ್ದಿದ್ದೇನೆ. ಹೀಗಾಗಿ ತಂಡದಲ್ಲಿ ಸ್ಥಾನವನ್ನು ಪಡೆಯಲೇಬೇಕಿದೆ. ಕೋಚ್‌ಗಳ ಜೊತೆಗೆ ಚರ್ಚಿಸುತ್ತಿದ್ದು ಸಾಕಷ್ಟು ವಿಡಿಯೋಗಳನ್ನು ಗಮನಿಸಿಕೊಂಡು ಸರಿ ತಪ್ಪುಗಳನ್ನು ತಿದ್ದಿಕೊಳ್ಳುತ್ತಿದ್ದೇನೆ" ಎಂದು ಕೆಎಲ್ ರಾಹುಲ್ ಪ್ರತಿಕ್ರಿಯೆ ನೀಡಿದ್ದಾರೆ.

ತಾಳ್ಮೆಯಿಂದ ಕಾಯುತ್ತಿದ್ದೇನೆ
"ಟೆಸ್ಟ್ ಕ್ರಿಕೆಟ್‌ನಿಂದ ಹೊರಗುಳಿದ ಅವಧಿಯ ಬಗ್ಗೆ ನಾನು ಬೇಸರಿಸುವುದಿಲ್ಲ. ಯಾಕೆಂದರೆ ವೈಫಲ್ಯಗಳು ನಮ್ಮನ್ನು ಮತ್ತಷ್ಟು ಗಟ್ಟಿಗೊಳಿಸುತ್ತವೆ ಮತ್ತು ನಮ್ಮ ಗುರಿಯನ್ನು ಮತ್ತಷ್ಟು ಸ್ಪಷ್ಟಪಡಿಸುತ್ತದೆ. ಇದು ನನಗೂ ಕೂಡ ಹೊರತಾಗಿಲ್ಲ. ನಾನು ನಿಜಕ್ಕೂ ಕೂಡ ಉತ್ತಮ ಅವಕಾಶಗಳಿಗಾಗಿ ಎದುರುನೋಡುತ್ತಿದ್ದೇನೆ. ತಾಳ್ಮೆಯಿಂದ ಹಾಗೂ ಶಿಸ್ತಿನಿಂದ ನನ್ನ ಸರದಿಗಾಗಿ ಕಾಯುತ್ತಿದ್ದೇನೆ" ಎಂದು ಕೆಎಲ್ ರಾಹುಲ್ ಪ್ರತಿಕ್ರಿಯೆ ನೀಡಿದ್ದಾರೆ.

ತಂಡಕ್ಕಾಗಿ ಉತ್ತಮ ಪ್ರದರ್ಶನ ನೀಡಲು ಉತ್ಸುಕ
"ನಾನು ತಪ್ಪುಗಳನ್ನು ಮಾಡಿದ್ದೇನೆ ಹಾಗೂ ಆ ತಪ್ಪುಗಳಿಂದ ತಿದ್ದಿಕೊಂಡಿದ್ದೇನೆ. ನಾನೀಗ ಬಲಿಷ್ಠನಾಗಿದ್ದು ಉತ್ತಮ ಅವಕಾಶಗಳಿಗಾಗಿ ಕಾಯುತ್ತಿದ್ದೇನೆ. ಅದಕ್ಕಾಗಿ ಭರವಸೆಯನ್ನು ಹೊಂದಿದ್ದು ತಂಡಕ್ಕಾಗಿ ಉತ್ತಮ ಪ್ರದರ್ಶನ ನೀಡಲು ಉತ್ಸುಕನಾಗಿದ್ದೇನೆ" ಎಂದು ಕೆಎಲ್ ರಾಹುಲ್ ಟೆಸ್ಟ್ ತಂಡದಲ್ಲಿ ಸ್ಥಾನವನ್ನು ಭದ್ರಪಡಿಸಿಕೊಳ್ಳುವ ಬಗ್ಗೆ ಮಾತನಾಡಿದ್ದಾರೆ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications