ಇಂಗ್ಲೆಂಡ್ ಪ್ರವಾಸ ಕೈಗೊಂಡಿರುವ ಐರ್ಲೆಂಡ್ ಏಕೈಕ ಟೆಸ್ಟ್ ಪಂದ್ಯದಲ್ಲಿ ಮುಖಾಮುಖಿಯಾಗಿದೆ. ಲಂಡನ್‌ನ ಐತಿಹಾಸಿಕ ಲಾರ್ಡ್ಸ್ ಅಂಗಳದಲ್ಲಿ ಈ ಎರಡು ತಂಡಗಳು ಸೆಣೆಸಾಟ ನಡೆಸುತ್ತಿದೆ. ಈ ಪಂದ್ಯದಲ್ಲಿ ಆತಿಥೇಯ ಇಂಗ್ಲೆಂಡ್ ತಂಡ ಟಾಸ್ ಗೆದ್ದು ಮೊದಲಿಗೆ ಬೌಲಿಂಗ್ ಆಯ್ಕೆ ಮಾಡಿಕೊಂಡಿದ್ದು ಪ್ರವಾಸಿ ಐರ್ಲೆಂಡ್ ತಂಡ ಆರಂಭದಲ್ಲಿ ಬ್ಯಾಟಿಂಗ್ ನಡೆಸುವ ಸವಾಲು ಸ್ವೀಕರಿಸಿದೆ.
ಐರ್ಲೆಂಡ ತಂಡ ಆಂಡ್ರ್ಯೋ ಬಲ್ಬರ್ನೈ ನೇತೃತ್ವದಲ್ಲಿ ಕಣಕ್ಕಿಳಿಯುತ್ತಿದ್ದು ಜೇಮ್ಸ್ ಮೆಕಲ್ಲಮ್, ಪೀಟರ್ ಮೂರ್, ಪಾಲ್ ಸ್ಟಿರ್ಲಿಂಗ್, ಲೋರ್ಕನ್ ಟಕರ್ ಮೊದಲಾದ ಆಟಗಾರರು ತಂಡದಲ್ಲಿದ್ದಾರೆ. ಇನ್ನು ಈ ಪಂದ್ಯದಲ್ಲಿ ಇಂಗ್ಲೆಂಡ್ ತಂಡ ಕೂಡ ಸಂಪೂರ್ಣ ಸಾಮರ್ಥ್ಯದೊಂದಿಗೆ ಕಣಕ್ಕಿಳಿಯುತ್ತಿದೆ. ಬೆನ್ ಸ್ಟೋಕ್ಸ್ ನಾಯಕತ್ವದಲ್ಲಿ ಜೋ ರೂಟ್, ಸ್ಟುವರ್ಟ್ ಬ್ರಾಡ್ ಸೇರಿದಂತೆ ಸ್ಟಾರ್ ಆಟಗಾರರು ತಂಡದಲ್ಲಿದ್ದಾರೆ. ಇನ್ನು ಗಾಯದಿಂದಾಗಿ ಸುದೀರ್ಘ ಕಾಲದಿಂದ ಹೊರಗುಳಿದಿದ್ದ ಜಾನಿ ಬೈರ್‌ಸ್ಟೋವ್ ಕೂಡ ಈ ಪಂದ್ಯದಲ್ಲಿ ಆಡುತ್ತಿದ್ದಾರೆ.

ಇಂಗ್ಲೆಂಡ್ ತಂಡದ ನಾಯಕತ್ವವನ್ನು ಬೆನ್ ಸ್ಟೋಕ್ಸ್ ಹಾಗೂ ಕೋಚ್ ಸ್ಥಾನವನ್ನು ನ್ಯೂಜಿಲಂಡ್ ಮಾಜಿ ನಾಯಕ ಬ್ರೆಂಡನ್ ಮೆಕ್ಕಲಮ್ ವಹಿಸಿಕೊಂಡ ಬಳಿಕ ಒಂದಾದ ಬಳಿಕ ಮತ್ತೊಂದರಂತೆ ಸರಣಿ ಗೆಲ್ಲುತ್ತಲೇ ಮುನ್ನುಗ್ಗುತ್ತಿದೆ ಇಂಗ್ಲೆಂಡ್. ಇದೀಗ ತವರಿನಲ್ಲಿ ಐರ್ಲೆಂಡ್ ವಿರುದ್ಧ ಮತ್ತೊಂದು ಸುಲಭ ಗೆಲುವಿನ ಮೇಲೆ ಇಂಗ್ಲೆಂಡ್ ಚಿತ್ತ ನೆಟ್ಟಿದೆ. ಇನ್ನು ಮುಂದೆ ಆಶಸ್ ಸರಣಿ ಇರುವ ಕಾರಣ ಈ ಟೆಸ್ಟ್ ಪಂದ್ಯವನ್ನು ಸೂಕ್ತವಾಗಿ ಬಳಸಿಕೊಳ್ಳುವ ಲೆಕ್ಕಾಚಾರದಲ್ಲಿದೆ ಇಂಗ್ಲೆಂಡ್.
ಇಂಗ್ಲೆಂಡ್ ಆಡುವ ಬಳಗ: ಬೆನ್ ಡಕೆಟ್, ಝಾಕ್ ಕ್ರಾಲಿ, ಆಲಿ ಪೋಪ್, ಜೋ ರೂಟ್, ಬೆನ್ ಸ್ಟೋಕ್ಸ್ (ನಾಯಕ), ಹ್ಯಾರಿ ಬ್ರೂಕ್, ಜಾನಿ ಬೈರ್‌ಸ್ಟೋವ್ (ವಿಕೆಟ್ ಕೀಪರ್), ಸ್ಟುವರ್ಟ್ ಬ್ರಾಡ್, ಮ್ಯಾಥ್ಯೂ ಪಾಟ್ಸ್, ಜೋಶ್ ಟಂಗ್, ಜ್ಯಾಕ್ ಲೀಚ್
ಬೆಂಚ್: ಕ್ರಿಸ್ ವೋಕ್ಸ್, ಆಲಿ ರಾಬಿನ್ಸನ್, ಮಾರ್ಕ್ ವುಡ್, ಜೇಮ್ಸ್ ಆಂಡರ್ಸನ್, ಡೇನಿಯಲ್ ಲಾರೆನ್ಸ್
ಐರ್ಲಂಡ್ ಆಡುವ ಬಳಗ: ಜೇಮ್ಸ್ ಮೆಕಲ್ಲಮ್, ಪೀಟರ್ ಮೂರ್, ಆಂಡ್ರ್ಯೂ ಬಾಲ್ಬಿರ್ನಿ (ನಾಯಕ), ಹ್ಯಾರಿ ಟೆಕ್ಟರ್, ಪಾಲ್ ಸ್ಟಿರ್ಲಿಂಗ್, ಲೋರ್ಕನ್ ಟಕರ್ (ವಿಕೆಟ್ ಕೀಪರ್), ಕರ್ಟಿಸ್ ಕ್ಯಾಂಫರ್, ಆಂಡಿ ಮೆಕ್‌ಬ್ರೈನ್, ಮಾರ್ಕ್ ಅಡೇರ್, ಫಿಯಾನ್ ಹ್ಯಾಂಡ್, ಗ್ರಹಾಂ ಹ್ಯೂಮ್
ಬೆಂಚ್:ಜಾರ್ಜ್ ಡಾಕ್ರೆಲ್, ಕ್ರೇಗ್ ಯಂಗ್, ಮ್ಯಾಥ್ಯೂ ಫೋಸ್ಟರ್, ಥಾಮಸ್ ಮೇಯಸ್