For Quick Alerts
ALLOW NOTIFICATIONS  
For Daily Alerts
 

Eng vs NZ: ಬ್ಯಾಟಿಂಗ್‌ನಲ್ಲಿ ಭಾರೀ ಕುಸಿತದ ಬಳಿಕ ಬೌಲಿಂಗ್‌ನಲ್ಲಿ ಅದ್ಭುತ ಕಮ್‌ಬ್ಯಾಕ್ ಮಾಡಿದ ಕಿವೀಸ್ ಪಡೆ

England vs New Zealand, 1st Test day 1 Highlights, New Zealand make Stunning comeback

ಇಂಗ್ಲೆಂಡ್ ಹಾಗೂ ನ್ಯೂಜಿಲೆಂಡ್ ನಡುವಿನ ಟೆಸ್ಟ್ ಸರಣಿಯ ಮೊದಲ ಪಂದ್ಯ ಲಾರ್ಡ್ಸ್‌ನಲ್ಲಿ ಆರಂಭವಾಗಿದೆ. ಮೊದಲ ದಿನದಾಟದಲ್ಲಿ ಎರಡು ತಂಡಗಳು ಕೂಡ ಸಾಕಷ್ಟು ಏರಿಳಿತವನ್ನು ಕಂಡಿದ್ದು ಪಂದ್ಯ ತೀವ್ರ ಕುತೂಹಲ ಮೂಡಿಸಿದೆ. ಎರಡು ತಂಡಗಳು ಬೌಲಿಂಗ್ ವಿಭಾಗ ಕೂಡ ಮಿಂಚಿನ ಪ್ರದರ್ಶನ ನೀಡಿದೆ.

ಟಾಸ್ ಗೆದ್ದು ಮೊದಲಿಗೆ ಬ್ಯಾಟಿಂಗ್ ಆಯ್ಕೆ ಮಾಡಿದ ಪ್ರವಾಸಿ ನ್ಯೂಜಿಲೆಂಡ್ ಪಡೆ ಬ್ಯಾಟಿಂಗ್‌ನಲ್ಲಿ ಭಾರೀ ವೈಫಲ್ಯವನ್ನು ಅನುಭವಿಸಿತ್ತು. ಸಂಪೂರ್ಣ ಬ್ಯಾಟಿಂಗ್ ವಿಭಾಗ ಹೀನಾಯ ಪ್ರದರ್ಶನ ನೀಡಿದ್ದು ಕನಿಷ್ಠ ಮೊತ್ತಕ್ಕೆ ಕುಸಿಯುವ ಭೀತಿಯನ್ನು ಎದುರಿಸಿತ್ತು. ಆದರೆ ಅಂತಿಮ ಹಂತದಲ್ಲಿ ಗ್ರಾಂಡ್‌ಹೋಮೆ ಹಾಗೂ ಟಿಮ್ ಸೌಥಿ ಅವರಿಂದ ಮಹತ್ವದ ಜೊತೆಯಾಟವೊಂದು ಬಂದ ಕಾರಣ ತಂಡದ ಮೊತ್ತ 100ರ ಗಡಿ ದಾಟಿತು. ಅಂತಿಮವಾಗಿ ನ್ಯೂಜಿಲೆಂಡ್ ಬಳಗ 132 ರನ್‌ಗಳಿಗೆ ಆಲೌಟ್ ಆಯಿತು.

ಇಂಗ್ಲೆಂಡ್ ತಂಡದ ಪರವಾಗಿ ಚೊಚ್ಚಲ ಟೆಸ್ಟ್ ಪಂದ್ಯವನ್ನು ಆಡುತ್ತಿರುವ ಯುವ ವೇಗಿ ಮ್ಯಾಟಿ ಪಾಟ್ಸ್ ಈ ಇನ್ನಿಂಗ್ಸ್‌ನಲ್ಲಿ ನಾಲ್ಕು ವಿಕೆಟ್ ಕಬಳಿಸುವ ಮೂಲಕ ಅದ್ಭುತ ಆರಂಭವನ್ನು ಪಡೆದಿದ್ದಾರೆ. ಇನ್ನು ಇಂಗ್ಲೆಂಡ್ ಅನುಭವಿ ವೇಗಿ ಜೇಮ್ಸ್ ಆಂಡರ್ಸನ್ ಕುಡ ನಾಲ್ಕು ವಿಕೆಟ್ ಪಡೆದುಕೊಂಡರು. ಸ್ಟುವರ್ಟ್ ಬ್ರಾಡ್ ಹಾಗೂ ಬೆನ್ ಸ್ಟೋಕ್ಸ್ ತಲಾ ಒಂದು ವಿಕೆಟ್ ಸಂಪಾದಿಸಿದ್ದಾರೆ.

ಆಡುವ ಬಳಗ: ಝಾಕ್ ಕ್ರಾಲಿ, ಅಲೆಕ್ಸ್ ಲೀಸ್, ಆಲಿ ಪೋಪ್, ಜೋ ರೂಟ್, ಜಾನಿ ಬೈರ್‌ಸ್ಟೋವ್, ಬೆನ್ ಸ್ಟೋಕ್ಸ್ (ನಾಯಕ), ಬೆನ್ ಫೋಕ್ಸ್ (ವಿಕೆಟ್ ಕೀಪರ್), ಮ್ಯಾಟಿ ಪಾಟ್ಸ್, ಜ್ಯಾಕ್ ಲೀಚ್, ಸ್ಟುವರ್ಟ್ ಬ್ರಾಡ್, ಜೇಮ್ಸ್ ಆಂಡರ್ಸನ್
ಬೆಂಚ್: ಹ್ಯಾರಿ ಬ್ರೂಕ್, ಕ್ರೇಗ್ ಓವರ್ಟನ್

T20 ಕ್ರಿಕೆಟ್ ನಲ್ಲಿ ಭಾರತದ ವಿಶ್ವದಾಖಲೆಯನ್ನು ತಪ್ಪಿಸೋದೇ ದಕ್ಷಿಣ ಆಫ್ರಿಕಾ ಗುರಿ | Oneindia Kannada

ನ್ಯೂಜಿಲೆಂಡ್: ಟಾಮ್ ಲ್ಯಾಥಮ್, ವಿಲ್ ಯಂಗ್, ಕೇನ್ ವಿಲಿಯಮ್ಸನ್ (ನಾಯಕ), ಡೆವೊನ್ ಕಾನ್ವೇ, ಡೇರಿಲ್ ಮಿಚೆಲ್, ಟಾಮ್ ಬ್ಲಂಡೆಲ್ (ವಿಕೆಟ್ ಕೀಪರ್), ಕಾಲಿನ್ ಡಿ ಗ್ರ್ಯಾಂಡ್‌ಹೋಮ್, ಕೈಲ್ ಜೇಮಿಸನ್, ಟಿಮ್ ಸೌಥಿ, ಅಜಾಜ್ ಪಟೇಲ್, ಟ್ರೆಂಟ್ ಬೌಲ್ಟ್
ಬೆಂಚ್: ಹೆನ್ರಿ ನಿಕೋಲ್ಸ್, ಮೈಕೆಲ್ ಬ್ರೇಸ್ವೆಲ್, ಕ್ಯಾಮ್ ಫ್ಲೆಚರ್, ನೀಲ್ ವ್ಯಾಗ್ನರ್, ಮ್ಯಾಟ್ ಹೆನ್ರಿ

Story first published: Friday, June 3, 2022, 10:10 [IST]
Other articles published on Jun 3, 2022
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+