Eng vs Nz: ಟಾಸ್ ಗೆದ್ದ ನ್ಯೂಜಿಲೆಂಡ್ ಬ್ಯಾಟಿಂಗ್: ಆರಂಭದಲ್ಲೇ ಭಾರೀ ಹಿನ್ನಡೆ: Live ಸ್ಕೋರ್

ಇಂಗ್ಲೆಂಡ್ ಹಾಗೂ ನ್ಯೂಜಿಲೆಂಡ್ ನಡುವಿನ ಟೆಸ್ಟ್ ಸರಣಿ ಆರಂಭವಾಗಿದ್ದು ಲಾರ್ಡ್ಸ್ ಮೈದಾನದಲ್ಲಿ ಮೊದಲ ಪಂದ್ಯ ಆರಂಭವಾಗಿದೆ. ಈ ಪಂದ್ಯದಲ್ಲಿ ಟಾಸ್ ಗೆದ್ದಿರುವ ನ್ಯೂಜಿಲೆಂಡ್ ತಂಡ ಮೊದಲು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದೆ. ಆದರೆ ಬ್ಯಾಟಿಂಗ್ ಆರಂಭಿಸಿದ ಕಿವೀಸ್ ಪಡೆ ಭಾರೀ ಆಘಾತಕ್ಕೆ ಒಳಗಾಗಿದ್ದು ಅಗ್ರ ಕ್ರಮಾಂಕದ ಆರು ಆಟಗಾರರು ಶೀಘ್ರವಾಗಿ ವಿಕೆಟ್ ಒಪ್ಪಿಸಿ ಫೆವಿಲಿಯನ್‌ಗೆ ಸೇರಿದ್ದಾರೆ.
ಇಂಗ್ಲೆಂಡ್ ಟೆಸ್ಟ್ ತಂಡದ ನೂತನ ನಾಯಕನಾಗಿ ಆಯ್ಕೆಯಾಗಿರುವ ಬೆನ್ ಸ್ಟೋಕ್ಸ್ ಇದೇ ಮೊದಲ ಬಾರಿಗೆ ಜವಾಬ್ಧಾರಿ ವಹಿಸಿಕೊಂಡಿದ್ದಾರೆ. ಇನ್ನು ಕೋಚ್ ಆಗಿ ನ್ಯೂಜಿಲೆಂಡ್‌ನ ಮಾಜಿ ನಾಯಕ ಬ್ರೆಂಡನ್ ಮೆಕ್ಕಲಮ್‌ಗೆ ಕೂಡ ಇದು ಮೊದಲ ಸರಣಿಯಾಗಿದೆ.
ಸ್ಕೋರ್‌ಕಾರ್ಡ್ ಹೀಗಿದೆ
ಅಬ್ಬರಿಸಿದ ಇಂಗ್ಲೆಂಡ್ ಬೌಲರ್‌ಗಳು: ಇನ್ನು ಲಾರ್ಡ್ಸ್ ಮೈದಾನದಲ್ಲಿ ಇಂಗ್ಲೆಂಡ್ ಬೌಲರ್‌ಗಳ ಅಬ್ಬರ ಜೋರಾಗಿದೆ. ಮೊದಲ ಪಂದ್ಯದಲ್ಲಿ ಆಡುತ್ತಿರುವ ವೇಗಿ ಮ್ಯಾಟಿ ಪಾಟ್ಸ್ ಅದ್ಭುತ ಪ್ರದರ್ಶನ ನೀಡಿ ಮಿಂಚಿದ್ದಾರೆ. ಇನ್ನು ಅನುಭವಿ ವೇಗಿ ಜೇಮ್ಸ್ ಆಂಡರ್ಸನ್ ಕೂಡ ಕಿವೀಸ್ ಬ್ಯಾಟ್‌ಗಳ ವಿರುದ್ಧ ಅಬ್ಬರಿಸಿದ್ದಾರೆ.
ಆಡುವ ಬಳಗ: ಝಾಕ್ ಕ್ರಾಲಿ, ಅಲೆಕ್ಸ್ ಲೀಸ್, ಆಲಿ ಪೋಪ್, ಜೋ ರೂಟ್, ಜಾನಿ ಬೈರ್‌ಸ್ಟೋವ್, ಬೆನ್ ಸ್ಟೋಕ್ಸ್ (ನಾಯಕ), ಬೆನ್ ಫೋಕ್ಸ್ (ವಿಕೆಟ್ ಕೀಪರ್), ಮ್ಯಾಟಿ ಪಾಟ್ಸ್, ಜ್ಯಾಕ್ ಲೀಚ್, ಸ್ಟುವರ್ಟ್ ಬ್ರಾಡ್, ಜೇಮ್ಸ್ ಆಂಡರ್ಸನ್
ಬೆಂಚ್: ಹ್ಯಾರಿ ಬ್ರೂಕ್, ಕ್ರೇಗ್ ಓವರ್ಟನ್
ನ್ಯೂಜಿಲೆಂಡ್: ಟಾಮ್ ಲ್ಯಾಥಮ್, ವಿಲ್ ಯಂಗ್, ಕೇನ್ ವಿಲಿಯಮ್ಸನ್ (ನಾಯಕ), ಡೆವೊನ್ ಕಾನ್ವೇ, ಡೇರಿಲ್ ಮಿಚೆಲ್, ಟಾಮ್ ಬ್ಲಂಡೆಲ್ (ವಿಕೆಟ್ ಕೀಪರ್), ಕಾಲಿನ್ ಡಿ ಗ್ರ್ಯಾಂಡ್‌ಹೋಮ್, ಕೈಲ್ ಜೇಮಿಸನ್, ಟಿಮ್ ಸೌಥಿ, ಅಜಾಜ್ ಪಟೇಲ್, ಟ್ರೆಂಟ್ ಬೌಲ್ಟ್
ಬೆಂಚ್: ಹೆನ್ರಿ ನಿಕೋಲ್ಸ್, ಮೈಕೆಲ್ ಬ್ರೇಸ್ವೆಲ್, ಕ್ಯಾಮ್ ಫ್ಲೆಚರ್, ನೀಲ್ ವ್ಯಾಗ್ನರ್, ಮ್ಯಾಟ್ ಹೆನ್ರಿ
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications