For Quick Alerts
ALLOW NOTIFICATIONS  
For Daily Alerts
 

Eng vs Nz: ಟಾಸ್ ಗೆದ್ದ ಇಂಗ್ಲೆಂಡ್ ಬೌಲಿಂಗ್ ಆಯ್ಕೆ: ಕಿವೀಸ್ ಪಡೆಯಿಂದ ಉತ್ತಮ ಆರಂಭ: Live ಸ್ಕೋರ್

England vs New Zealand, 2nd Test day 1, Trent Bridge- Toss report and Live Score

ಇಂಗ್ಲೆಂಡ್ ಹಾಗೂ ನ್ಯೂಜಿಲೆಂಡ್ ತಂಡಗಳ ನಡುವಿನ ಟೆಸ್ಟ್ ಸರಣಿಯ ಎರಡನೇ ಪಂದ್ಯ ಆರಂಭವಾಗಿದೆ. ಟ್ರೆಂಟ್‌ಬ್ರಿಡ್ಜ್‌ನಲ್ಲಿ ನಡೆಯುತ್ತಿರುವ ಈ ಪಂದ್ಯದಲ್ಲಿ ಆತಿಥೇಯ ಇಂಗ್ಲೆಂಡ್ ಟಾಸ್ ಗೆದ್ದಿದ್ದು ಮೊದಲಿಗೆ ಬೌಲಿಂಗ್ ಆಯ್ಕೆ ಮಾಡಿಕೊಂಡಿದೆ. ಈ ಪಂದ್ಯದಲ್ಲಿ ಟಾಸ್ ಸೋತಿರುವ ನ್ಯೂಜಿಲೆಂಡ್ ಬ್ಯಾಟಿಂಗ್ ಆರಂಭಿಸಿದ್ದು ಉತ್ತಮ ಆರಂಭ ಪಡೆದುಕೊಂಡಿದೆ.

ಇನ್ನು ಈ ಪಂದ್ಯದಲ್ಲಿ ನ್ಯೂಜಿಲೆಂಡ್ ತಂಡ ಮೂರು ಬದಲಾವಣೆಯೊಂದಿಗೆ ಕಣಕ್ಕಿಳಿದಿದೆ. ನಾಯಕ ಕೇನ್ ವಿಲಿಯಮ್ಸನ್ ಕೋವಿಡ್ ಕಾರಣದಿಂದ ಪಂದ್ಯದಿಂದ ಹೊರಗುಳಿದಿದ್ದು ಹೆನ್ರಿ ನಿಕೋಲಸ್ ಸ್ಥಾನ ಪಡೆದುಕೊಂಡಿದ್ದಾರೆ. ಮ್ಯಾಟ್ ಹೆನ್ರಿ ಹಾಗೂ ಮೈಕಲ್ ಬ್ರೇಸ್‌ವೆಲ್ ಆಡುವ ಬಳಗದಲ್ಲಿ ಸ್ಥಾನ ಪಡೆದುಕೊಂಡಿದ್ದು ಅಜಾಜ್ ಪಟೇಲ್ ಹಾಗೂ ಕಾಲಿನ್ ಡಿ ಗ್ರಾಂಡ್‌ಹೊಮ್ಮೆ ಆಡುವ ಬಳಗದಿಂದ ಹೊರಗುಳಿದಿದ್ದಾರೆ.

Live ಸ್ಕೋರ್ ಹೀಗಿದೆ

1
51777

ಇನ್ನು ಈ ಟೆಸ್ಟ್ ಸರಣಿಯ ಮೊದಲ ಪಂದ್ಯದಲ್ಲಿ ಇಂಗ್ಲೆಂಡ್ ತಂಡ ಭರ್ಜರಿ ಗೆಲುವು ಸಾಧಿಸಿದೆ. ಬೌಲರ್‌ಗಳು ಮೇಲುಗೈ ಸಾಧಿಸಿದ ಈ ಪಂದ್ಯದಲ್ಲಿ ಕಿವೀಸ್ ಪಡೆ ಕೂಡ ಕೆಲ ಹಂತಗಳಲ್ಲಿ ಉತ್ತಮ ಪ್ರದರ್ಶನ ನಿಡಿ ಮೇಲುಗೈ ಸಾಧಿಸುವ ಸೂಚನೆ ನೀಡಿತ್ತು. ಆದರೆ ಮಾಜಿ ನಾಯಕ ಜೋ ರೂಟ್ ಪ್ರವಾಸಿ ತಂಡಕ್ಕೆ ಹೆಚ್ಚಿನ ಅವಕಾಶವನ್ನು ನೀಡಲಿಲ್ಲ. ಎರಡನೇ ಇನ್ನಿಂಗ್ಸ್‌ನಲ್ಲಿ ಭರ್ಜರಿ ಶತಕ ದಾಖಲಿಸಿದ ರೂಟ್ ಭರ್ಜರಿ ಜಯಕ್ಕೆ ಕಾರಣವಾದರು. ಈ ಮೂಲಕ ಮೂರು ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ಇಂಗ್ಲೆಂಡ್ ಸದ್ಯ 1-0 ಅಂತರದಿಂದ ಮುನ್ನಡೆ ಸಾಧಿಸಿದೆ.

ಇಂಗ್ಲೆಂಡ್ ಆಡುವ ಬಳಗ: ಅಲೆಕ್ಸ್ ಲೀಸ್, ಝಾಕ್ ಕ್ರಾಲಿ, ಓಲಿ ಪೋಪ್, ಜೋ ರೂಟ್, ಜಾನಿ ಬೈರ್‌ಸ್ಟೋವ್, ಬೆನ್ ಸ್ಟೋಕ್ಸ್ (ನಾಯಕ), ಬೆನ್ ಫೋಕ್ಸ್ (ವಿಕೆಟ್ ಕೀಪರ್), ಮ್ಯಾಟಿ ಪಾಟ್ಸ್, ಜ್ಯಾಕ್ ಲೀಚ್, ಸ್ಟುವರ್ಟ್ ಬ್ರಾಡ್, ಜೇಮ್ಸ್ ಆಂಡರ್ಸನ್
ಬೆಂಚ್: ಮ್ಯಾಥ್ಯೂ ಪಾರ್ಕಿನ್ಸನ್, ಹ್ಯಾರಿ ಬ್ರೂಕ್, ಕ್ರೇಗ್ ಓವರ್ಟನ್

ನ್ಯೂಜಿಲೆಂಡ್ ಪ್ಲೇಯಿಂಗ್ XI: ಟಾಮ್ ಲ್ಯಾಥಮ್ (ನಾಯಕ), ವಿಲ್ ಯಂಗ್, ಡೆವೊನ್ ಕಾನ್ವೇ, ಹೆನ್ರಿ ನಿಕೋಲ್ಸ್, ಡೇರಿಲ್ ಮಿಚೆಲ್, ಟಾಮ್ ಬ್ಲುಂಡೆಲ್ (ವಿಕೆಟ್ ಕೀಪರ್), ಮೈಕೆಲ್ ಬ್ರೇಸ್‌ವೆಲ್, ಕೈಲ್ ಜೇಮಿಸನ್, ಟಿಮ್ ಸೌಥಿ, ಮ್ಯಾಟ್ ಹೆನ್ರಿ, ಟ್ರೆಂಟ್ ಬೌಲ್ಟ್
ಬೆಂಚ್: ನೀಲ್ ವ್ಯಾಗ್ನರ್, ಕ್ಯಾಮ್ ಫ್ಲೆಚರ್, ಅಜಾಜ್ ಪಟೇಲ್

Story first published: Friday, June 10, 2022, 17:39 [IST]
Other articles published on Jun 10, 2022
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+