For Quick Alerts
ALLOW NOTIFICATIONS  
For Daily Alerts
 

ಇಂಗ್ಲೆಂಡ್ vs ನ್ಯೂಜಿಲೆಂಡ್: ಟ್ರೆಂಟ್‌ಬ್ರಿಡ್ಜ್ ಟೆಸ್ಟ್‌ನ 3ನೇ ದಿನದಾಟದ ಲೈವ್‌ ಸ್ಕೋರ್‌ ಅಪ್‌ಡೇಟ್

England vs New Zealand, 2nd Test day 3, Trent Bridge, Live Score Updates

ಇಂಗ್ಲೆಂಡ್ ಹಾಗೂ ನ್ಯೂಜಿಲೆಂಡ್ ನಡುವಿನ ಟೆಸ್ಟ್ ಸರಣಿಯ ಎರಡನೇ ಪಂದ್ಯ ಟ್ರೆಂಟ್‌ ಬ್ರಿಡ್ಜ್‌ನಲ್ಲಿ ನಡೆಯುತ್ತಿದ್ದು ಈ ಪಂದ್ಯದಲ್ಲಿ ಪ್ರವಾಸಿ ನ್ಯೂಜಿಲೆಂಡ್ ತಂಡ ಉತ್ತಮ ಮೇಲುಗೈ ಸಾಧಿಸಿದೆ. ಮೊದಲ ಇನ್ನಿಂಗ್ಸ್‌ನಲ್ಲಿ ಅದ್ಭಯತ ಬ್ಯಾಟಿಂಗ್ ಪ್ರದರ್ಶನ ನೀಡಿರುವ ನ್ಯೂಜಿಲೆಂಡ್ ತಂಡ ಬೌಲಿಂಗ್‌ನಲ್ಲಿಯೂ ಆತಿಥೇಯರ ವಿರುದ್ಧ ಮೇಲುಗೈ ಸಾಧಿಸುವ ಲೆಕ್ಕಾಚಾರ ಹಾಕಿಕೊಂಡಿದೆ. ಎರಡನೇ ದಿನದಾಟದ ಅಂತ್ಯದಲ್ಲಿ ನ್ಯೂಜಿಲೆಂಡ್ ತಂಡ ಟ್ರೆಂಟ್ ಬ್ರಿಡ್ಜ್ ಟೆಸ್ಟ್‌ನಲ್ಲಿ ಉತ್ತಮ ಸ್ಥಿತಿಯಲ್ಲಿದೆ.

ಮೊದಲಿಗೆ ಬ್ಯಾಟಿಂಗ್ ಮಾಡಿರುವ ನ್ಯೂಜಿಲೆಂಡ್ ತಂಡ ಮೊದಲ ಇನ್ನಿಂಗ್ಸ್‌ನಲ್ಲಿ 553 ರನ್‌ಗಳಿಸಿದ್ದು ಇಂಗ್ಲೆಂಡ್ ಬ್ಯಾಟಿಂಗ್ ಆರಂಭಿಸಿದೆ. ಎರಡನೇ ದಿನದಾಟದ ಅಂತ್ಯದ ಸಂದರ್ಭದಲ್ಲಿ ಇಂಗ್ಲೆಂಡ್ ತಂಡದ ಒಂದು ವಿಕೆಟ್ ಪಡೆಯುವಲ್ಲಿ ಕಿವೀಸ್ ಪಡೆ ಯಶಸ್ವಿಯಾಗಿದ್ದು ಆತಿಥೇಯ ತಂಡ 90 ರನ್‌ಗಳಿಸಿ ಮೂರನೇ ದಿನಕ್ಕೆ ಆಟವನ್ನು ಕಾಯ್ದುಕೊಂಡಿದೆ. ಇಂಗ್ಲೆಂಡ್ ಪರವಾಗಿ ಅಲೆಕ್ಸ್ ಲೀಸ್ 34 ರನ್‌ಗಳಿಸಿದ್ದು ಒಲ್ಲೀ ಪೋಪ್ 51 ರನ್‌ಗಳಿಸಿ ಅಜೇಯವಾಗುಳಿದಿದ್ದಾರೆ. ಜಾಕ್ ಕ್ರಾವ್ಲೆ 4 ರನ್‌ಗಳಿಸಿ ವಿಕೆಟ್ ಒಪ್ಪಿಸಿದ್ದಾರೆ.

Live ಸ್ಕೋರ್‌ಕಾರ್ಡ್ ಹೀಗಿದೆ:

1
51777

ಇನ್ನು ನ್ಯೂಜಿಲೆಂಡ್ ಪರವಾಗಿ ಅದ್ಭುತವಾಗಿ ಬ್ಯಾಟಿಂಗ್ ನಡೆಸಿದ್ದು ಡಾರೆಲ್ ಮಿಚೆಲ್ ಹಾಗೂ ಟಾಮ್ ಬ್ಲಂಡಲ್. ಮಿಚೆಲ್ 190 ರನ್‌ಗಳಿಸಿ ಔಟಾದರೆ ಬ್ಲಂಡೆಲ್ 106 ರನ್‌ಗಳಿಗೆ ಔಟಾದರು. ಈ ಮೂಲಕ ಮೊದಲ ಇನ್ನಿಂಗ್ಸ್‌ನಲ್ಲಿ ಬೃಹತ್ ಮೊತ್ತಕ್ಕೆ ಕಾರಣವಾಗಿದ್ದಾರೆ.

ಇನ್ನು ಮೊದಲ ಇನ್ನಿಂಗ್ಸ್‌ನಲ್ಲಿ ಇಂಗ್ಲೆಂಡ್ ಪರವಾಗಿ ಜೇಮ್ಸ್ ಆಂಡರ್ಸನ್ ಮೂರು ವಿಕೆಟ್ ಸಂಪಾದಿಸಿ ಮಿಂಚಿದ್ದರೆ ಸ್ಟುವರ್ಟ್ ಬ್ರಾಡ್, ಬೆನ್ ಸ್ಟೋಕ್ಸ್ ಹಾಗೂ ಜಾಕ್ ಲೀಗ್ ತಲಾ ಎರಡು ವಿಕೆಟ್ ಪಡೆದುಕೊಂಡರು. ಮ್ಯಾಟ್ಟಿ ಪಾಟ್ಸ್ ಒಂದು ವಿಕೆಟ್ ಪಡೆದುಕೊಂಡಿದ್ದಾರೆ.

ಆಡುವ ಬಳಗ: ಝಾಕ್ ಕ್ರಾಲಿ, ಅಲೆಕ್ಸ್ ಲೀಸ್, ಆಲಿ ಪೋಪ್, ಜೋ ರೂಟ್, ಜಾನಿ ಬೈರ್‌ಸ್ಟೋವ್, ಬೆನ್ ಸ್ಟೋಕ್ಸ್ (ನಾಯಕ), ಬೆನ್ ಫೋಕ್ಸ್ (ವಿಕೆಟ್ ಕೀಪರ್), ಮ್ಯಾಟಿ ಪಾಟ್ಸ್, ಜ್ಯಾಕ್ ಲೀಚ್, ಸ್ಟುವರ್ಟ್ ಬ್ರಾಡ್, ಜೇಮ್ಸ್ ಆಂಡರ್ಸನ್
ಬೆಂಚ್: ಹ್ಯಾರಿ ಬ್ರೂಕ್, ಕ್ರೇಗ್ ಓವರ್ಟನ್
ನ್ಯೂಜಿಲೆಂಡ್: ಟಾಮ್ ಲ್ಯಾಥಮ್, ವಿಲ್ ಯಂಗ್, ಕೇನ್ ವಿಲಿಯಮ್ಸನ್ (ನಾಯಕ), ಡೆವೊನ್ ಕಾನ್ವೇ, ಡೇರಿಲ್ ಮಿಚೆಲ್, ಟಾಮ್ ಬ್ಲಂಡೆಲ್ (ವಿಕೆಟ್ ಕೀಪರ್), ಕಾಲಿನ್ ಡಿ ಗ್ರ್ಯಾಂಡ್‌ಹೋಮ್, ಕೈಲ್ ಜೇಮಿಸನ್, ಟಿಮ್ ಸೌಥಿ, ಅಜಾಜ್ ಪಟೇಲ್, ಟ್ರೆಂಟ್ ಬೌಲ್ಟ್
ಬೆಂಚ್: ಹೆನ್ರಿ ನಿಕೋಲ್ಸ್, ಮೈಕೆಲ್ ಬ್ರೇಸ್ವೆಲ್, ಕ್ಯಾಮ್ ಫ್ಲೆಚರ್, ನೀಲ್ ವ್ಯಾಗ್ನರ್, ಮ್ಯಾಟ್ ಹೆನ್ರಿ

Story first published: Sunday, June 12, 2022, 15:39 [IST]
Other articles published on Jun 12, 2022
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+