ಇಂಗ್ಲೆಂಡ್ ಪ್ರವಾಸ ಕೈಗೊಂಡಿರುವ ನ್ಯೂಜಿಲೆಂಡ್ ತಂಡ ಏಕದಿನ ಸರಣಿ ಮೂರನೇ ಪಂದ್ಯದಲ್ಲಿ ಮುಖಾಮುಖಿಯಾಗಿದೆ. ಈ ಪಂದ್ಯದಲ್ಲಿ ಪ್ರವಾಸಿ ನ್ಯೂಜಿಲೆಂಡ್ ತಂಡ ಟಾಸ್ ಗೆದ್ದುಕೊಂಡಿದ್ದು ಮೊದಲಿಗೆ ಬ್ಯಾಟಿಂಗ್ ಆಯ್ಕೆ ಮಾಡಿದೆ. ಹೀಗಾಗಿ ಆತಿಥೇಯ ಇಂಗ್ಲೆಂಡ್ ಆರಂಭದಲ್ಲಿ ಬೌಲಿಂಗ್ ನಡೆಸುವ ಸವಾಲು ಪಡೆದುಕೊಂಡಿದೆ.
ನಾಲ್ಕು ಪಂದ್ಯಗಳ ಈ ಸರಣಿಯಲ್ಲಿ ಈಗಾಗಲೇ ಮೊದಲ ಎರಡು ಪಂದ್ಯಗಳು ಮುಕ್ತಾಯವಾಗಿದೆ. ಮೊದಲ ಪಂದ್ಯದಲ್ಲಿ ನ್ಯೂಜಿಲೆಂಡ್ ತಂಡ ಗೆಲುವು ಸಾಧಿಸಿದ್ದು ಎರಡನೇ ಪಂದ್ಯದಲ್ಲಿ ಇಂಗ್ಲೆಂಡ್ ಗೆಲುವು ಸಾಧಿಸಿದೆ. ಹೀಗಾಗಿ ಈ ಸರಣಿ ಸದ್ಯ ಸಮಬಲದಲ್ಲಿದ್ದು ಕುತೂಹಲ ಮೂಡಿಸಿದೆ.

Live ಸ್ಕೋರ್ ಹೀಗಿದೆ
ಇಂಗ್ಲೆಂಡ್ ಆಡುವ ಬಳಗ: ಜಾನಿ ಬೈರ್‌ಸ್ಟೋವ್, ಡೇವಿಡ್ ಮಲನ್, ಜೋ ರೂಟ್, ಬೆನ್ ಸ್ಟೋಕ್ಸ್, ಜೋಸ್ ಬಟ್ಲರ್ (ನಾಯಕ & ವಿಕೆಟ್ ಕೀಪರ್), ಮೊಯಿನ್ ಅಲಿ, ಲಿಯಾಮ್ ಲಿವಿಂಗ್‌ಸ್ಟೋನ್, ಸ್ಯಾಮ್ ಕರ್ರಾನ್, ಕ್ರಿಸ್ ವೋಕ್ಸ್, ಗಸ್ ಅಟ್ಕಿನ್ಸನ್, ರೀಸ್ ಟೋಪ್ಲಿ
ಬೆಂಚ್: ಹ್ಯಾರಿ ಬ್ರೂಕ್, ಡೇವಿಡ್ ವಿಲ್ಲಿ, ಆದಿಲ್ ರಶೀದ್, ಮಾರ್ಕ್ ವುಡ್, ಬ್ರೈಡನ್ ಕಾರ್ಸೆ, ಜೇಸನ್ ರಾಯ್
ನ್ಯೂಜಿಲೆಂಡ್ ಆಡುವ ಬಳಗ: ವಿಲ್ ಯಂಗ್, ಡೆವೊನ್ ಕಾನ್ವೇ, ಹೆನ್ರಿ ನಿಕೋಲ್ಸ್, ಡೇರಿಲ್ ಮಿಚೆಲ್, ಟಾಮ್ ಲ್ಯಾಥಮ್ (ನಾಯಕ & ವಿಕೆಟ್ ಕೀಪರ್), ಗ್ಲೆನ್ ಫಿಲಿಪ್ಸ್, ರಚಿನ್ ರವೀಂದ್ರ, ಕೈಲ್ ಜೇಮಿಸನ್, ಲಾಕಿ ಫರ್ಗುಸನ್, ಬೆನ್ ಲಿಸ್ಟರ್, ಟ್ರೆಂಟ್ ಬೌಲ್ಟ್
ಬೆಂಚ್: ಫಿನ್ ಅಲೆನ್, ಮಿಚೆಲ್ ಸ್ಯಾಂಟ್ನರ್, ಮ್ಯಾಟ್ ಹೆನ್ರಿ, ಟಿಮ್ ಸೌಥಿ