ಇಂಗ್ಲೆಂಡ್ vs ನ್ಯೂಜಿಲೆಂಡ್ 4ನೇ ಏಕದಿನ ಪಂದ್ಯ: ಸರಣಿ ಸಮಬಲದ ಮೇಲೆ ಕಿವೀಸ್ ಕಣ್ಣು: Live score
ಇಂಗ್ಲೆಂಡ್ ಪ್ರವಾಸ ಕೈಗೊಂಡಿರುವ ನ್ಯೂಜಿಲೆಂಡ್ ತಂಡ ಏಕದಿನ ಸರಣಿ ನಾಲ್ಕನೃ ಹಾಗೂ ಪಂದ್ಯದಲ್ಲಿ ಮುಖಾಮುಖಿಯಾಗಿದೆ. ಈ ಪಂದ್ಯದಲ್ಲಿ ಆತಿಥೇಯ ಇಗ್ಲೆಂಡ್ ತಂಡ ಟಾಸ್ ಗೆದ್ದುಕೊಂಡಿದ್ದು ಮೊದಲಿಗೆ ಬ್ಯಾಟಿಂಗ್ ಆಯ್ಕೆ ಮಾಡಿದೆ. ಹೀಗಾಗಿ ಪ್ರವಾಸಿ ನ್ಯೂಜಿಲೆಂಡ್ ಆರಂಭದಲ್ಲಿ ಬೌಲಿಂಗ್ ನಡೆಸುವ ಸವಾಲು ಪಡೆದುಕೊಂಡಿದೆ.
ನಾಲ್ಕು ಪಂದ್ಯಗಳ ಈ ಸರಣಿಯಲ್ಲಿ ಈಗಾಗಲೇ ಮೊದಲ ಮೂರು ಪಂದ್ಯಗಳು ಮುಕ್ತಾಯವಾಗಿದೆ. ಮೊದಲ ಪಂದ್ಯದಲ್ಲಿ ನ್ಯೂಜಿಲೆಂಡ್ ತಂಡ ಗೆಲುವು ಸಾಧಿಸಿದ್ದು ಎರಡನೇ ಹಾಗೂ ಅಂತಿಮ ಪಂದ್ಯದಲ್ಲಿ ಇಂಗ್ಲೆಂಡ್ ಗೆಲುವು ಸಾಧಿಸಿತು. ಹೀಗಾಗಿ ಈ ಸರಣಿಯಲ್ಲಿ ಇಂಗ್ಲೆಂಡ್ 2-1 ಅಂತರದಿಂದ ಮುನ್ನಡೆಯಲ್ಲಿದೆ. ಹೀಗಾಗಿ ಕೊನೆಯ ಪಂದ್ಯವಾಗಿರುವ ಕಾರಣ ಸರಣಿ ಸಮಬಲದ ಮೇಲೆ ಕಿವೀಸ್ ಪಡೆ ಚಿತ್ತ ನೆಟ್ಟಿದೆ.

Live ಸ್ಕೋರ್ ಹೀಗಿದೆ
ಏಕದಿನ ಸರಣಿಗೂ ಮುನ್ನ ಈ ಎರಡು ತಣಡಗಳು ಟಿ20 ಸರಣಿಯಲ್ಲಿ ಮುಖಾಮುಖಿಯಾಗಿದ್ದವು. ನಾಲ್ಕು ಪಂದ್ಯಗಳ ಟಿ20 ಸರಣಿಯ ಮೊದಲ ಎತಡು ಪಂದ್ಯಗಳಲ್ಲಿ ಆತಿಥೇಯ ಇಂಗ್ಲೆಂಡ್ ಗೆಲುವು ಸಾಧಿಸಿ ಬೀಗಿತ್ತು. ಆದರೆ ಅಂತಿಮ ಎರಡು ಪಂದ್ಯದಲ್ಲಿ ಕಿವೀಸ್ ಅದ್ಭುತವಾಗಿ ಕಮ್‌ಬ್ಯಾಕ್ ಮಾಡಿ ಸರಣಿ ಸಬಲ ಮಾಡಿಕೊಳ್ಳುವಲ್ಲಿ ಯಶಸ್ವಿಯಾಗಿತ್ತು.
ಇಂಗ್ಲೆಂಡ್ ಆಡುವ ಬಳಗ: ಜಾನಿ ಬೈರ್‌ಸ್ಟೋವ್, ಡೇವಿಡ್ ಮಲನ್, ಜೋ ರೂಟ್, ಹ್ಯಾರಿ ಬ್ರೂಕ್, ಜೋಸ್ ಬಟ್ಲರ್ (c & wk), ಲಿಯಾಮ್ ಲಿವಿಂಗ್‌ಸ್ಟೋನ್, ಮೊಯಿನ್ ಅಲಿ, ಸ್ಯಾಮ್ ಕುರ್ರಾನ್, ಡೇವಿಡ್ ವಿಲ್ಲಿ, ಬ್ರೈಡನ್ ಕಾರ್ಸೆ, ರೀಸ್ ಟೋಪ್ಲಿ
ಬೆಂಚ್: ಬೆನ್ ಸ್ಟೋಕ್ಸ್, ಕ್ರಿಸ್ ವೋಕ್ಸ್, ಗುಸ್ ಅಟ್ಕಿನ್ಸನ್, ಆದಿಲ್ ರಶೀದ್, ಜೇಸನ್ ರಾಯ್, ಮಾರ್ಕ್ ವುಡ್
ನ್ಯೂಝಿಲೆಂಡ್ ಆಡುವ ಬಳಗ: ಡೆವೊನ್ ಕಾನ್ವೇ, ವಿಲ್ ಯಂಗ್, ಹೆನ್ರಿ ನಿಕೋಲ್ಸ್, ಡೇರಿಲ್ ಮಿಚೆಲ್, ಟಾಮ್ ಲ್ಯಾಥಮ್ (ಸಿ & ವಾರ), ಗ್ಲೆನ್ ಫಿಲಿಪ್ಸ್, ರಚಿನ್ ರವೀಂದ್ರ, ಕೈಲ್ ಜೇಮಿಸನ್, ಮ್ಯಾಟ್ ಹೆನ್ರಿ, ಟಿಮ್ ಸೌಥಿ, ಬೆನ್ ಲಿಸ್ಟರ್
ಬೆಂಚ್: ಲಾಕಿ ಫರ್ಗುಸನ್, ಟ್ರೆಂಟ್ ಬೌಲ್ಟ್, ಫಿನ್ ಅಲೆನ್, ಮಿಚೆಲ್ ಸ್ಯಾಂಟ್ನರ್
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications