ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
For Quick Alerts
ALLOW NOTIFICATIONS  
For Daily Alerts
 

Breaking News: ಇಂಗ್ಲೆಂಡ್ ಪ್ರವಾಸ ಕೈಗೊಂಡ ಕಿವೀಡ್ ತಂಡಕ್ಕೆ ಕೋವಿಡ್ ಆಘಾತ: ಮೂವರಿಗೆ ಕೊರೊನಾ ಪಾಸಿಟಿವ್ ದೃಢ

England vs New Zealand: Henry Nicholls is one of three visitors who tested positive for Covid-19

ಇಂಗ್ಲೆಂಡ್ ವಿರುದ್ಧ ಟೆಸ್ಟ್ ಸರಣಿಯನ್ನಾಡಲು ಪ್ರವಾಸ ಕೈಗೊಂಡಿರುವ ನ್ಯೂಜಿಲೆಂಡ್ ತಂಡಕ್ಕೆ ಕೊರೊನಾವೈರಸ್ ಆಘಾತ ನೀಡಿದೆ. ಟೆಸ್ಟ್ ಸರಣಿಗೂ ಮುನ್ನ ಅಭ್ಯಾಸ ಪಂದ್ಯವನ್ನಾಡಲು ಸಜ್ಜಾಗಿದ್ದ ನ್ಯೂಜಿಲೆಂಡ್ ತಂಡದಲ್ಲಿ ಒಟ್ಟು ಮೂವರಲ್ಲಿ ಕೊರೊನಾವೈರಸ್ ದೃಢಪಟ್ಟಿದೆ. ಹೋವ್‌ನ ಕೌಂಟಿ ಮೈದಾನದಲ್ಲಿ ಸಸೆಕ್ಸ್ ತಂಡದ ವಿರುದ್ಧ ಅಭ್ಯಾಸಕ್ಕೆ ಸಜ್ಜಾಗಿದ್ದ ಕಿವೀಸ್ ಪಡೆಗೆ ಪಂದ್ಯದ ಆರಂಭಕ್ಕೆ ಕೆಲವೇ ಗಂಟೆಗಳ ಮುನ್ನ ಬಂದ ಕೋವಿಡ್ ಪರೀಕ್ಷೆಯಲ್ಲಿ ಮೂವರಿಗೆ ಕೊರೊನಾ ವೈರಸ್ ದೃಢಪಟ್ಟಿದೆ.

ನ್ಯೂಜಿಲೆಂಡ್ ಸ್ಕ್ವಾಡ್‌ನ ಮೂವರು ಸದಸ್ಯರು ವೈರಸ್‌ಗೆ ತುತ್ತಾಗಿರುವುದು ಪರೀಕ್ಷೆಯಲ್ಲಿ ಬೆಳಕಿಗೆ ಬಂದಿದೆ. ಹೆನ್ರಿ ನಿಕೋಲಸ್, ಬ್ಲೇರ್ ಟಿಕ್ನೆರ್ ಮತ್ತು ಬೌಲಿಂಗ್ ಕೋಚ್ ಶೇನ್ ಜರ್ಗೆನ್ಸನ್ ಅವರಲ್ಲಿ ವೈರಸ್ ಕಾಣಿಸಿಕೊಂಡಿದೆ. ಹೀಗಾಗಿ ಇವರೆಲ್ಲರೂ ಮುಂದಿನ ಐದು ದಿನಗಳ ಕಾಲ ಪ್ರತ್ಯೇಕಾವಗಿರಲಿದ್ದಾರೆ. ಇನ್ನು ಪ್ರವಾಸಿ ತಂಡದ ಉಳಿದ ಆಟಗಾರರ ಕೋವಿಡ್ ವರದಿ ನೆಗೆಟಿವ್ ಬಂದಿದ್ದು ಸಸ್ಸೆಕ್ಸ್ ವಿರುದ್ಧ ನಡೆಯಲಿರುವ ನಾಲ್ಕು ದಿನಗಳ ಅಭ್ಯಾಸ ಪಂದ್ಯ ನಿಗದಿಯಂತೆಯೇ ನಡೆಯಲಿದೆ. ಇಂದು (ಮೇ 20 ಶುಕ್ರವಾರ) ಈ ಪಂದ್ಯ ಆಯೋಜನೆಯಾಗಲಿದೆ.

ಇನ್ನು ನ್ಯೂಜಿಲೆಂಟ್ ಬಯೋಬಬಲ್‌ನಲ್ಲಿ ಕೊರೊನಾವೈರಸ್ ಕಾಣಿಸಿಕೊಂಡಿರುವ ಬಗ್ಗೆ ನ್ಯೂಜಿಲೆಂಟ್‌ ಕ್ರಿಕೆಟ್ ಅಧಿಕೃತ ಪ್ರಕಟಣೆ ಹೊರಡಿಸಿದೆ. "ಶುಕ್ರವಾರ ಬೆಳಿಗ್ಗೆ ನಡೆಸಿದ ರಾಪಿಡ್ ಆಂಟಿಜೆನ್ ಪರೀಕ್ಷೆಯಲ್ಲಿ ಹೆನ್ರಿ ನಿಕೋಲ್ಸ್, ಬ್ಲೇರ್ ಟಿಕ್ನರ್ ಮತ್ತು ಬೌಲಿಂಗ್ ಕೋಚ್ ಶೇನ್ ಜುರ್ಗೆನ್ಸನ್ ಅವರ ವರದಿ ಕೊರೊನಾ ಪಾಸಿಟಿವ್ ಬಂದಿದೆ. ಹೀಗಾಗಿ ಈ ಮೂವರು ಐದು ದಿನಗಳ ಕ್ವಾಮರಂಟೈನ್‌ಗೆ ಒಳಗಾಗಲಿದ್ದಾರೆ" ಎಂದು ಮಾಹಿತಿ ನೀಡಿದೆ. "ಇನ್ನು ಉಳಿದ ಪ್ರವಾಸಿ ತಂಡದ ಎಲ್ಲಾ ಸದಸ್ಯರ ವರದಿ ನೆಗೆಟಿವ್ ಬಂದಿದ್ದು ಎಲ್ಲರ ಮೇಲೆಯೂ ನಿಗಾವಹಿಸಲಾಗಿದ್ದು ಅಗತ್ಯಬಿದ್ದರೆ ಪರೀಕ್ಷೆಯನ್ನು ನಡೆಸಲಾಗುತ್ತದೆ" ಎಂದು ಕೂಡ ತಿಳಿಸಿದೆ.

ಇನ್ನು ನ್ಯೂಜಿಲೆಂಡ್ ತಂಡದ ಟೆಸ್ಟ್ ಸ್ಪೆಶಲಿಸ್ಟ್ ಗಳಾದ ಕೇನ್ ವಿಲಿಯಮ್ಸನ್ ಮತ್ತು ಟ್ರೆಂಟ್ ಬೋಲ್ಟ್ ತಡವಾಗಿ ಇಂಗ್ಲೆಂಡ್ ಪ್ರವಾಸಕ್ಕೆ ಸೇರ್ಪೊಡೆಯಾಗಲಿದ್ದು ಈ ಆಟಗಾರರು ಐಪಿಎಲ್‌ನಲ್ಲಿ ಭಾಗಿಯಾಗಿದ್ದಾರೆ.

ನ್ಯೂಜಿಲೆಂಡ್ ಸ್ಕ್ವಾಡ್ ಹೀಗಿದೆ: ಕೇನ್ ವಿಲಿಯಮ್ಸನ್ (ನಾಯಕ), ಟಾಮ್ ಬ್ಲಂಡೆಲ್, ಟ್ರೆಂಟ್ ಬೌಲ್ಟ್, ಮೈಕೆಲ್ ಬ್ರೇಸ್‌ವೆಲ್, ಡೆವೊನ್ ಕಾನ್ವೇ, ಕಾಲಿನ್ ಡಿ ಗ್ರ್ಯಾಂಡ್‌ಹೋಮ್, ಜಾಕೋಬ್ ಡಫಿ, ಕ್ಯಾಮೆರಾನ್ ಫ್ಲೆಚರ್, ಮ್ಯಾಟ್ ಹೆನ್ರಿ, ಕೈಲ್ ಜೇಮಿಸನ್, ಟಾಮ್ ಲ್ಯಾಥಮ್, ಡೇರಿಲ್ ಮಿಚೆಲ್, ಹೆನ್ರಿ ನಿಕೋಲ್ಸ್, ರಾಚಿನ್‌ಡ್ರಾ ರವೀನ್, ಅಜಾಜ್ ಪಟೇಲ್ ರುದರ್‌ಫೋರ್ಡ್, ಟಿಮ್ ಸೌಥಿ, ಬ್ಲೇರ್ ಟಿಕ್ನರ್, ನೀಲ್ ವ್ಯಾಗ್ನರ್, ವಿಲ್ ಯಂಗ್

Kohli ಈ ಬಾರಿ ಮೊದಲ ಬಾರಿ ಪಂದ್ಯ ಶ್ರೇಷ್ಠರಾಗಿ ಹೇಳಿದ್ದೇನು? | Oneindia Kannada

ಇಂಗ್ಲೆಂಡ್ ಸ್ಕ್ವಾಡ್ ಹೀಗಿದೆ: ಬೆನ್ ಸ್ಟೋಕ್ಸ್ (ನಾಯಕ), ಜೋ ರೂಟ್, ಜೇಮ್ಸ್ ಆಂಡರ್ಸನ್, ಜಾನಿ ಬೈರ್‌ಸ್ಟೋ, ಸ್ಟುವರ್ಟ್ ಬ್ರಾಡ್, ಹ್ಯಾರಿ ಬ್ರೂಕ್, ಝಾಕ್ ಕ್ರಾಲಿ, ಬೆನ್ ಫೋಕ್ಸ್, ಜ್ಯಾಕ್ ಲೀಚ್, ಅಲೆಕ್ಸ್ ಲೀಸ್, ಕ್ರೇಗ್ ಓವರ್‌ಟನ್, ಆಲಿ ಪೋಪ್, ಮ್ಯಾಥ್ಯೂ ಪಾಟ್ಸ್

Story first published: Friday, May 20, 2022, 15:23 [IST]
Other articles published on May 20, 2022
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X