
ಲಾರ್ಡ್ಸ್ ಮೈದಾನದಲ್ಲಿ ನಡೆಯುತ್ತಿರುವ ನ್ಯೂಜಿಲೆಂಡ್ ಹಾಗೂ ಇಂಗ್ಲೆಂಡ್ ನಡುವಿನ ಟೆಸ್ಟ್ ಸರಣಿಯ ಮೊದಲ ಪಂದ್ಯದ ಎರಡನೇ ದಿನದಾಟದಲ್ಲಿ ಪ್ರವಾಸಿ ನ್ಯೂಜಿಲೆಂಡ್ ತಂಡ ಅದ್ಭುತ ಹೋರಾಟವನ್ನು ಪ್ರದರ್ಶಿಸಿದೆ. ಬೌಲರ್‌ಗಳುಸ ಂಪೂರ್ಣ ಮೇಲುಗೈ ಸಾಧಿಸುತ್ತಿದ್ದ ಸಂದರ್ಭದಲ್ಲಿ ಕಿವೀಸ್ ಜೋಡಿ ಇಂಗ್ಲೆಂಡ್ ಬೌಲರ್‌ಗಳಿಗೆ ಅಡ್ಡಿಯಾಗಿದ್ದಾರೆ. ನ್ಯೂಜಿಲೆಂಡ್‌ನ ಮಧ್ಯಮ ಕ್ರಮಾಂಕದ ಬ್ಯಾಟರ್‌ಗಳಾದ ಡ್ಯಾರೆಲ್ ಮಿಚೆಲ್ ಹಾಗೂ ಟಾಮ್ ಬ್ಲಾಂಡೆಲ್ ಜೋಡಿ ಇಂಗ್ಲೆಂಡ್ ಬೌಲಿಂಗ್ ದಾಳಿಯನ್ನು ಹಿಮ್ಮೆಟ್ಟಿಸುವಲ್ಲಿ ಯಶಸ್ವಿಯಾಗಿದೆ.
ಡ್ಯಾರೆಲ್ ಮಿಚೆಲ್ ಹಾಗೂ ಟಾಮ್ ಬ್ಲಾಂಡೆಲ್ ಜೋಡಿ ಎರಡನೇ ಇನ್ನಿಂಗ್ಸ್‌ನಲ್ಲಿ ನ್ಯೂಜಿಲೆಂಡ್ ತಂಡವನ್ನು ಕುಸಿಯುವುದರಿಂದ ತಡೆದಿದ್ದು ಮಾತ್ರವಲ್ಲ ಸವಾಲಿನ ಮೊತ್ತ ಪೇರಿಸುವಂತೆ ಮಾಡುವಲ್ಲಿ ಯಶಸ್ವಿಯಾಗಿ ಎರಡನೇ ದಿನದಾಟದ ಅಂತ್ಯದ ಸಂದರ್ಭದಲ್ಲಿ ಮಿಚೆಲ್ 97 ರನ್‌ಗಳಿಸಿ ಅಜೇಯವಾಗುಳಿದಿದ್ದರೆ ಟಾಮ್ ಬ್ಲಂಡರ್ 90 ರನ್‌ಗಳಿಸಿ ಅಜೇಯವಾಗುಳಿದಿದ್ದಾರೆ, ಇನ್ನರು ಆಟಗಾರರು ಕೂಡ ಶತಕಗಳಿಸುವ ಅಂಚಿನಲ್ಲಿದ್ದಾರೆ. ಈ ಇಬ್ಬರು ಆಟಗಾರರ ಬ್ಯಾಟಿಂಗ್ ಪ್ರದರ್ಶನದಿಂದಾಗಿ ನ್ಯೂಜಿಲೆಂಡ್ ತಂಡ ಎರಡನೇ ಇನ್ನಿಂಗ್ಸ್‌ನಲ್ಲಿ 236 ರನ್‌ಗಳಿಗೆ 4 ವಿಕೆಟ್ ಕಳೆದುಕೊಂಡಿದೆ. ಈ ಮೂಲಕ 227 ರನ್‌ಗಳ ಮುನ್ನಡೆ ಸಾಧಿಸಿದೆ.
ಇನ್ನು ಇದಕ್ಕೂ ಮುನ್ನ ಇಂಗ್ಲೆಂಡ್ ತಂಡ ಮೊದಲ ದಿನದಾಟದ ಅಂತ್ಯಕ್ಕೆ ಮೊದಲ ದಿನದಾಟದ ಅಂತ್ಯಕ್ಕೆ ಇಂಗ್ಲೆಂಡ್ ತಂಡ 7 ವಿಕೆಟ್ ಕಳೆದುಕೊಂಡು 121 ರನ್‌ಗಳಿಸಿದಲ್ಲಿಂದ ಎರಡನೇ ದಿನದಾಟವನ್ನು ಆರಂಭಿಸಿತು. ಆದರೆ ಇಂದು 20 ರನ್‌ಗಳನ್ನು ಸೇರಿಸುವಲ್ಲಿ ಮಾತ್ರವೇ ಯಶಸ್ವಿಯಾದ ಇಂಗ್ಲೆಂಡ್ ಪಡೆ 141 ರನ್‌ಗಳಿಗೆ ಆಲೌಟ್ ಆಯಿತು. ಈ ಮೂಲಕ ಮೊದಲ ಇನ್ನಿಂಗ್ಸ್‌ನಲ್ಲಿ ಕೇವಲ 9 ರನ್‌ಗಳ ಅಲ್ಪ ಮುನ್ನಡೆಯನ್ನು ಪಡೆಯಿತು.
ಅದಾದ ಬಳಿಕ ಎರಡನೇ ಇನ್ನಿಂಗ್ಸ್ ಬ್ಯಾಟಿಂಗ್ ಆರಂಭಿಸಿದ ನ್ಯೂಜಿಲೆಂಡ್ ಮತ್ತೊಮ್ಮೆ ಕುಸಿತ ಕಾಣುತ್ತಾ ಸಾಗಿತು. ಹೀಗಾಗಿ ಮೊದಲ ಇನ್ನಿಂಗ್ಸ್‌ನಂತೆಯೇ ಮತ್ತೊಮ್ಮೆ ಅಲ್ಪ ಮೊತ್ತಕ್ಕೆ ಕುಸಿಯುವ ಭೀತಿ ಎದುರಾಗಿತ್ತು ಪ್ರವಾಸಿ ಪಡೆಗೆ. 56 ರನ್‌ಗಳಿಗೆ 4 ವಿಕೆಟ್ ಕಳೆದುಕೊಂಡು ನ್ಯೂಝಿಲೆಂಡ್ ಸಂಕಷ್ಟದಲ್ಲಿತ್ತು. ಆದರೆ ನಂತರ ಜೊತೆಯಾದ ಡ್ಯಾರೆಲ್ ಮಿಚೆಲ್ ಹಾಗೂ ಟಾಮ್ ಬ್ಲಂಡರ್ ಜೋಡಿ ನ್ಯೂಜಿಲೆಂಡ್ ತಂಡಕ್ಕೆ ಆಸರೆಯಾಗಿದ್ದಾರೆ.
ಮೊದಲ ಇನ್ನಿಂಗ್ಸ್‌ನಲ್ಲಿ ಟಾಸ್ ಗೆದ್ದು ಮೊದಲಿಗೆ ಬ್ಯಾಟಿಂಗ್ ಆಯ್ಕೆ ಮಾಡಿದ ಪ್ರವಾಸಿ ನ್ಯೂಜಿಲೆಂಡ್ ಪಡೆ ಬ್ಯಾಟಿಂಗ್‌ನಲ್ಲಿ ಭಾರೀ ಆಘಾತವನ್ನು ಅನುಭವಿಸಿತ್ತು. ಸಂಪೂರ್ಣ ಬ್ಯಾಟಿಂಗ್ ವಿಭಾಗ ಹೀನಾಯ ಪ್ರದರ್ಶನ ನೀಡಿದ್ದು ಕನಿಷ್ಠ ಮೊತ್ತಕ್ಕೆ ಕುಸಿಯುವ ಭೀತಿಯನ್ನು ಎದುರಿಸಿತ್ತು. ಆದರೆ ಅಂತಿಮ ಹಂತದಲ್ಲಿ ಗ್ರಾಂಡ್‌ಹೋಮೆ ಹಾಗೂ ಟಿಮ್ ಸೌಥಿ ಅವರಿಂದ ಮಹತ್ವದ ಜೊತೆಯಾಟವೊಂದು ಬಂದ ಕಾರಣ ತಂಡದ ಮೊತ್ತ 100ರ ಗಡಿ ದಾಟಿತು. ಅಂತಿಮವಾಗಿ ನ್ಯೂಜಿಲೆಂಡ್ ಬಳಗ 132 ರನ್‌ಗಳಿಗೆ ಆಲೌಟ್ ಆಯಿತು. ಇಂಗ್ಲೆಂಡ್ ತಂಡದ ಪರವಾಗಿ ಚೊಚ್ಚಲ ಟೆಸ್ಟ್ ಪಂದ್ಯವನ್ನು ಆಡುತ್ತಿರುವ ಯುವ ವೇಗಿ ಮ್ಯಾಟಿ ಪಾಟ್ಸ್ ಈ ಇನ್ನಿಂಗ್ಸ್‌ನಲ್ಲಿ ನಾಲ್ಕು ವಿಕೆಟ್ ಕಬಳಿಸುವ ಮೂಲಕ ಅದ್ಭುತ ಆರಂಭವನ್ನು ಪಡೆದಿದ್ದಾರೆ. ಇನ್ನು ಇಂಗ್ಲೆಂಡ್ ಅನುಭವಿ ವೇಗಿ ಜೇಮ್ಸ್ ಆಂಡರ್ಸನ್ ಕುಡ ನಾಲ್ಕು ವಿಕೆಟ್ ಪಡೆದುಕೊಂಡರು. ಸ್ಟುವರ್ಟ್ ಬ್ರಾಡ್ ಹಾಗೂ ಬೆನ್ ಸ್ಟೋಕ್ಸ್ ತಲಾ ಒಂದು ವಿಕೆಟ್ ಸಂಪಾದಿಸಿದ್ದಾರೆ.
ಆಡುವ ಬಳಗ:ಇಂಗ್ಲೆಂಡ್: ಝಾಕ್ ಕ್ರಾಲಿ, ಅಲೆಕ್ಸ್ ಲೀಸ್, ಆಲಿ ಪೋಪ್, ಜೋ ರೂಟ್, ಜಾನಿ ಬೈರ್‌ಸ್ಟೋವ್, ಬೆನ್ ಸ್ಟೋಕ್ಸ್ (ನಾಯಕ), ಬೆನ್ ಫೋಕ್ಸ್ (ವಿಕೆಟ್ ಕೀಪರ್), ಮ್ಯಾಟಿ ಪಾಟ್ಸ್, ಜ್ಯಾಕ್ ಲೀಚ್, ಸ್ಟುವರ್ಟ್ ಬ್ರಾಡ್, ಜೇಮ್ಸ್ ಆಂಡರ್ಸನ್
ಬೆಂಚ್: ಹ್ಯಾರಿ ಬ್ರೂಕ್, ಕ್ರೇಗ್ ಓವರ್ಟನ್
ನ್ಯೂಜಿಲೆಂಡ್: ಟಾಮ್ ಲ್ಯಾಥಮ್, ವಿಲ್ ಯಂಗ್, ಕೇನ್ ವಿಲಿಯಮ್ಸನ್ (ನಾಯಕ), ಡೆವೊನ್ ಕಾನ್ವೇ, ಡೇರಿಲ್ ಮಿಚೆಲ್, ಟಾಮ್ ಬ್ಲಂಡೆಲ್ (ವಿಕೆಟ್ ಕೀಪರ್), ಕಾಲಿನ್ ಡಿ ಗ್ರ್ಯಾಂಡ್‌ಹೋಮ್, ಕೈಲ್ ಜೇಮಿಸನ್, ಟಿಮ್ ಸೌಥಿ, ಅಜಾಜ್ ಪಟೇಲ್, ಟ್ರೆಂಟ್ ಬೌಲ್ಟ್
ಬೆಂಚ್: ಹೆನ್ರಿ ನಿಕೋಲ್ಸ್, ಮೈಕೆಲ್ ಬ್ರೇಸ್ವೆಲ್, ಕ್ಯಾಮ್ ಫ್ಲೆಚರ್, ನೀಲ್ ವ್ಯಾಗ್ನರ್, ಮ್ಯಾಟ್ ಹೆನ್ರಿ