Engl vs NZ: ಉತ್ತಮ ಮೊತ್ತದತ್ತ ಪ್ರವಾಸಿ ನ್ಯೂಜಿಲೆಂಡ್: 3ನೇ ದಿನದ Live ಸ್ಕೋರ್

ಪ್ರವಾಸಿ ನ್ಯೂಜಿಲೆಂಡ್ ಹಾಗೂ ಇಂಗ್ಲೆಂಡ್ ನಡುವಿನ ಟೆಸ್ಟ್ ಸರಣಿಯ ಮೊದಲ ಪಂದ್ಯ ಲಾರ್ಡ್ಸ್ ಮೈದಾನದಲ್ಲಿ ನಡೆಯುತ್ತಿದ್ದು ಮೊದಲ ಎರಡು ದಿನಗಳ ಆಟದ ಬಳಿಕ ನ್ಯೂಜಿಲೆಂಡ್ ಮೇಲುಗೈ ಸಾಧಿಸಿದೆ. ಪಂದ್ಯದ ಬಹುತೇಕ ಅವಧಿಯಲ್ಲಿ ಎರಡೂ ತಂಡಗಳ ವೇಗಿಗಳು ಸಂಪೂರ್ಣ ಮೇಲುಗೈ ಸಾಧಿಸಿದ್ದಾರೆ. ಆದರೆ ಕಿವೀಸ್ ಪಡೆಯ ಮಧ್ಯಮ ಕ್ರಮಾಂಕದ ಜೋಡಿ ಎರಡನೇ ದಿನದಾಟದಲ್ಲಿ ಇಂಗ್;ಎಮಡ್ ಬೌಲರ್‌ಗಳಿಗೆ ಅಡ್ಡಿಯಾಗಿದ್ದಾರೆ. ಮೂರನೇ ದಿನ ಈ ಇಬ್ಬರು ಆಟಗಾರರು ಯಾವ ರೀತಿಯ ಪ್ರದರ್ಶನ ನೀಡಲಿದ್ದಾರೆ ಎಂಬುದು ಕುತೂಹಲ ಮೂಡಿಸಿದೆ. ಮೂರನೇ ದಿನದಾಟದ ಆರಂಭಕ್ಕೆ ಮಳೆ ಅಡ್ಡಿಯಾಗಿದ್ದು ಪಂದ್ಯ ತಡವಾಗಿ ಆರಂಭವಾಗಲಿದೆ.
ನ್ಯೂಜಿಲೆಂಡ್‌ನ ಮಧ್ಯಮ ಕ್ರಮಾಂಕದ ದಾಂಡಿಗರಾದ ಡ್ಯಾರೆಲ್ ಮಿಚೆಲ್ ಹಾಗೂ ಟಾಮ್ ಬ್ಲಾಂಡೆಲ್ ಜೋಡಿ ಇಂಗ್ಲೆಂಡ್ ಬೌಲಿಂಗ್ ದಾಳಿಯನ್ನು ಹಿಮ್ಮೆಟ್ಟಿಸುವಲ್ಲಿ ಯಶಸ್ವಿಯಾಗಿದೆ. ಈ ಜೋಡಿ ಎರಡನೇ ಇನ್ನಿಂಗ್ಸ್‌ನಲ್ಲಿ ನ್ಯೂಜಿಲೆಂಡ್ ತಂಡವನ್ನು ಕುಸಿಯುವುದರಿಂದ ತಡೆದಿದ್ದು ಮಾತ್ರವಲ್ಲ ಸವಾಲಿನ ಮೊತ್ತ ಪೇರಿಸುವಂತೆ ಮಾಡುವಲ್ಲಿ ಯಶಸ್ವಿಯಾಗಿದೆ. 2ನೇ ದಿನದಾಟದ ಅಂತ್ಯದ ಸಂದರ್ಭದಲ್ಲಿ ಮಿಚೆಲ್ 97 ರನ್‌ಗಳಿಸಿ ಅಜೇಯವಾಗುಳಿದಿದ್ದರೆ ಟಾಮ್ ಬ್ಲಂಡರ್ 90 ರನ್‌ಗಳಿಸಿ ಅಜೇಯವಾಗುಳಿದಿದ್ದಾರೆ. ಇಬ್ಬರು ಆಟಗಾರರು ಕೂಡ ಶತಕಗಳಿಸುವ ಅಂಚಿನಲ್ಲಿದ್ದಾರೆ. ಈ ಇಬ್ಬರು ಆಟಗಾರರ ಬ್ಯಾಟಿಂಗ್ ಪ್ರದರ್ಶನದಿಂದಾಗಿ ನ್ಯೂಜಿಲೆಂಡ್ ತಂಡ ಎರಡನೇ ಇನ್ನಿಂಗ್ಸ್‌ನಲ್ಲಿ 236 ರನ್‌ಗಳಿಗೆ 4 ವಿಕೆಟ್ ಕಳೆದುಕೊಂಡಿದೆ.
ಮೊದಲ ಇನ್ನಿಂಗ್ಸ್‌ನಲ್ಲಿ ಟಾಸ್ ಗೆದ್ದು ಮೊದಲಿಗೆ ಬ್ಯಾಟಿಂಗ್ ಆಯ್ಕೆ ಮಾಡಿಕೊಂಡ ನ್ಯೂಜಿಲೆಂಡ್ ತಂಡ ಕೇವಲ 132 ರನ್‌ಗಳನ್ನು ಮಾತ್ರವೇ ಗಳಿಸಿ ಆಲೌಟ್ ಆಯಿತು. ಅದಾದ ಬಳಿಕ ಬ್ಯಾಟಿಂಗ್ ನಡೆಸಿದ ಇಂಗ್ಲೆಂಡ್ ಕೂಡ ಕುಸಿತ ಕಂಡಿದ್ದು 141 ರನ್‌ಗಳನ್ನಷ್ಟೇ ಗಳಿಸಲು ಸಾಧ್ಯವಾಯಿತು. ಹೀಗಾಗಿ ಮೊದಲ ಇನ್ನಿಂಗ್ಸ್‌ನಲ್ಲಿ ಆತಿಥೇಯ ಇಂಗ್ಲೆಂಡ್ 9 ರನ್‌ಗಳ ಮುನ್ನಡೆಯನ್ನು ಪಡೆಯಲು ಮಾತ್ರವೇ ಯಶಸ್ವಿಯಾಯಿತು.
ಆಡುವ ಬಳಗ:ಇಂಗ್ಲೆಂಡ್: ಝಾಕ್ ಕ್ರಾಲಿ, ಅಲೆಕ್ಸ್ ಲೀಸ್, ಆಲಿ ಪೋಪ್, ಜೋ ರೂಟ್, ಜಾನಿ ಬೈರ್‌ಸ್ಟೋವ್, ಬೆನ್ ಸ್ಟೋಕ್ಸ್ (ನಾಯಕ), ಬೆನ್ ಫೋಕ್ಸ್ (ವಿಕೆಟ್ ಕೀಪರ್), ಮ್ಯಾಟಿ ಪಾಟ್ಸ್, ಜ್ಯಾಕ್ ಲೀಚ್, ಸ್ಟುವರ್ಟ್ ಬ್ರಾಡ್, ಜೇಮ್ಸ್ ಆಂಡರ್ಸನ್
ಬೆಂಚ್: ಹ್ಯಾರಿ ಬ್ರೂಕ್, ಕ್ರೇಗ್ ಓವರ್ಟನ್
ನ್ಯೂಜಿಲೆಂಡ್: ಟಾಮ್ ಲ್ಯಾಥಮ್, ವಿಲ್ ಯಂಗ್, ಕೇನ್ ವಿಲಿಯಮ್ಸನ್ (ನಾಯಕ), ಡೆವೊನ್ ಕಾನ್ವೇ, ಡೇರಿಲ್ ಮಿಚೆಲ್, ಟಾಮ್ ಬ್ಲಂಡೆಲ್ (ವಿಕೆಟ್ ಕೀಪರ್), ಕಾಲಿನ್ ಡಿ ಗ್ರ್ಯಾಂಡ್‌ಹೋಮ್, ಕೈಲ್ ಜೇಮಿಸನ್, ಟಿಮ್ ಸೌಥಿ, ಅಜಾಜ್ ಪಟೇಲ್, ಟ್ರೆಂಟ್ ಬೌಲ್ಟ್
ಬೆಂಚ್: ಹೆನ್ರಿ ನಿಕೋಲ್ಸ್, ಮೈಕೆಲ್ ಬ್ರೇಸ್ವೆಲ್, ಕ್ಯಾಮ್ ಫ್ಲೆಚರ್, ನೀಲ್ ವ್ಯಾಗ್ನರ್, ಮ್ಯಾಟ್ ಹೆನ್ರಿ
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications