ಇಂಗ್ಲೆಂಡ್ ಪ್ರವಾಸ ಕೈಗೊಂಡಿರುವ ನ್ಯೂಜಿಲೆಂಡ್ ತಂಡ ಟಿ20 ಸರಣಿಯ ಬಳಿಕ ಇದೀಗ ಏಕದಿನ ಸರಣಿಯಲ್ಲಿ ಮುಖಾಮುಖಿಯಾಗಿದೆ. ಮೊದಲ ಪಂದ್ಯ ಕಾರ್ಡೀಫ್‌ನಲ್ಲಿ ಆಯೋಜನೆಯಾಗಿದ್ದು ಎರಡು ತಂಡಗಳು ಪೈಪೋಟಿಗೆ ಇಳಿದಿದೆ. ಈ ಪಂದ್ಯದಲ್ಲಿ ಪ್ರವಾಸಿ ನ್ಯೂಜಿಲೆಂಡ್ ತಂಡ ಟಾಸ್ ಗೆದ್ದುಕೊಂಡಿದ್ದು ಮೊದಲಿಗೆ ಬೌಲಿಂಗ್ ಆಯ್ಕೆ ಮಾಡಿದೆ. ಹೀಗಾಗಿ ಇಂಗ್ಲೆಂಡ್ ಆರಂಭದಲ್ಲಿ ಬ್ಯಾಟಿಂಗ್ ನಡೆಸುವ ಸವಾಲು ಪಡೆದುಕೊಂಡಿದೆ.
ವಿಶ್ವಕಪ್ ಸನಿಹದಲ್ಲಿರುವಾಗ ಈ ಸರಣಿ ಎರಡು ತಂಡಗಳಿಗೂ ಅತ್ಯಂತ ಪ್ರಮುಖವಾಗಿದೆ. ಎರಡು ತಂಡಗಳು ಕೂಡ ವಿಶ್ವಕಪ್ ಗೆಲ್ಲುವ ನೆಚ್ಚಿನ ತಂಡಗಳ ಪೈಕಿ ಒಂದಾಗಿದ್ದು ಇಂಗ್ಲೆಂಡ್ ಹಾಲಿ ಚಾಂಪಿಯನ್ ಪಟ್ಟವನ್ನು ಉಳಿಸಿಕೊಳ್ಳಲು ಈ ಬಾರಿಯ ವಿಶ್ವಕಪ್‌ನಲ್ಲಿ ಸೆಣೆಸಾಡಲಿದೆ. ಇನ್ನು ಕಳೆದ ಬಾರಿಯ ರನ್ನರ್‌ಅಪ್ ತಂಡವಾಗಿರುವ ನ್ಯೂಜಿಲೆಂಡ್ ಮತ್ತೊಮ್ಮೆ ಅಗ್ನಿಪರೀಕ್ಷೆಗೆ ಇಳಿಯಲು ಭರ್ಜರಿ ಸಿದ್ಧತೆ ನಡೆಸುತ್ತಿದೆ.

Live ಸ್ಕೋರ್ ಹೀಗಿದೆ
ಇನ್ನು ಈ ಏಕದಿನ ಸರಣಿಗೂ ಮುನ್ನ ಈ ಎರಡು ತಂಡಗಳು ನಾಲ್ಕು ಪಂದ್ಯಗಳ ಟಿ20 ಸರಣಿಯಲ್ಲಿ ಭಾಗಿಯಾಗಿದ್ದವು. ಇದರಲ್ಲಿ ಮೊದಲ ಎರಡು ಪಂದ್ಯಗಳನ್ನು ಇಂಗ್ಲೆಂಡ್ ಗೆದ್ದುಕೊಂಡಿದ್ದರೆ ಕೊನೆಯ ಎರಡು ಪಂದ್ಯಗಳಲ್ಲಿ ನ್ಯೂಜಿಲೆಂಡ್ ಗೆಲುವು ಸಾಧಿಸಿತ್ತು. ಹೀಗಾಗಿ ಚುಟುಕು ಸರಣಿ ಸಮಬಲದೊಂದಿಗೆ ಅಂತ್ಯವಾಗಿತ್ತು.
ಇಂಗ್ಲೆಂಡ್ ಆಡು ಬಳಗ: ಡೇವಿಡ್ ಮಲನ್, ಹ್ಯಾರಿ ಬ್ರೂಕ್, ಜೋ ರೂಟ್, ಬೆನ್ ಸ್ಟೋಕ್ಸ್, ಜೋಸ್ ಬಟ್ಲರ್ (ನಾಯಕ & ವಿಕೆಟ್ ಕೀಪರ್), ಲಿಯಾಮ್ ಲಿವಿಂಗ್ಸ್ಟೋನ್, ಕ್ರಿಸ್ ವೋಕ್ಸ್, ಡೇವಿಡ್ ವಿಲ್ಲಿ, ಗುಸ್ ಅಟ್ಕಿನ್ಸನ್, ಆದಿಲ್ ರಶೀದ್, ರೀಸ್ ಟೋಪ್ಲಿ
ಬೆಂಚ್: ಜೇಸನ್ ರಾಯ್, ಜಾನಿ ಬೈರ್‌ಸ್ಟೋ, ಮೊಯಿನ್ ಅಲಿ, ಸ್ಯಾಮ್ ಕರ್ರಾನ್, ಮಾರ್ಕ್ ವುಡ್, ಬ್ರೈಡನ್ ಕಾರ್ಸೆ
ನ್ಯೂಜಿಲೆಂಡ್ ಆಡುವ ಬಳಗ: ಡೆವೊನ್ ಕಾನ್ವೇ, ವಿಲ್ ಯಂಗ್, ಹೆನ್ರಿ ನಿಕೋಲ್ಸ್, ಡೇರಿಲ್ ಮಿಚೆಲ್, ಟಾಮ್ ಲ್ಯಾಥಮ್ (ನಾಯಕ & ವಿಕೆಟ್ ಕೀಪರ್), ಗ್ಲೆನ್ ಫಿಲಿಪ್ಸ್, ರಚಿನ್ ರವೀಂದ್ರ, ಕೈಲ್ ಜೇಮಿಸನ್, ಮ್ಯಾಟ್ ಹೆನ್ರಿ, ಟಿಮ್ ಸೌಥಿ, ಲಾಕಿ ಫರ್ಗುಸನ್
ಬೆಂಚ್: ಫಿನ್ ಅಲೆನ್, ಮಿಚೆಲ್ ಸ್ಯಾಂಟ್ನರ್, ಟ್ರೆಂಟ್ ಬೌಲ್ಟ್, ಆಡಮ್ ಮಿಲ್ನೆ