ಇಂಗ್ಲೆಂಡ್vs ಪಾಕಿಸ್ತಾನ 1st ಟೆಸ್ಟ್ Live ಸ್ಕೋರ್: ಪಾಕ್ ಹಿಡಿತದಲ್ಲಿ ಪಂದ್ಯ

ಇಂಗ್ಲೆಂಡ್ ಪ್ರವಾಸ ಕೈಗೊಂಡಿರುವ ಪಾಕಿಸ್ತಾನ ಮೊದಲ ಟೆಸ್ಟ್‌ನಲ್ಲಿ ಉತ್ತಮ ಪ್ರದರ್ಶನವನ್ನು ನಿಡುತ್ತಿದೆ. ಎರಡನೇ ದಿನದಂತ್ಯಕ್ಕೆ ಇಂಗ್ಲೆಂಡ್‌ಗೆ ತನ್ನ ಮೊನಚು ಬೌಲಿಂಗ್ ದಾಳಿಯ ಮೂಲಕ ಆಘಾತ ನಿಡುವಲ್ಲಿ ಪಾಕಿಸ್ತಾನ ಯಶಸ್ವಿಯಾಗಿದೆ. ಇಂಗ್ಲೆಂಡ್ ಪಿಚ್‌ನ ಲಾಭವನ್ನು ಪಾಕ್ ವೇಗಿಗಳು ಸಂಪೂರ್ಣವಾಗಿ ಪಡೆಯುವ ಲಕ್ಷಣಗಳು ಸ್ಪಷ್ಟವಾಗಿದೆ.
ಇಂಗ್ಲೆಂಡ್ ಎರಡನೇ ಇನ್ನಿಂಗ್ಸ್ ಆಡಲು ಕಣಕ್ಕಿಳಿದು ಎರಡನೇ ದಿನ ನಾಲ್ಕು ವಿಕೆಟ್ ಕಳೆದುಕೊಂಡಿದೆ. ತಂಡದ ಅಗ್ರ ಕ್ರಮಾಂಕದ ನಾಲ್ವರು ಪಾಕಿಸ್ತಾನ ಬೌಲರ್‌ಗಳಿಗೆ ವಿಕೆಟ್ ಒಪ್ಪಿಸಿ ಫೆವಿಲಿಯನ್‌ಗೆ ಸಾಗಿದ್ದಾರೆ. ಮೂರನೇ ದಿನದಾಟ ಆರಂಭವಾಗಿದೆ.
Live ಸ್ಕೋರ್ ಪಟ್ಟಿ ಹೀಗಿದೆ:
ಪಾಕಿಸ್ತಾನ ಮೊದಲ ಇನ್ನಿಂಗ್ಸ್‌ನಲ್ಲಿ ಉತ್ತಮ ಬ್ಯಾಟಿಂಗ್ ಪ್ರದರ್ಶನ ನೀಡಿತು. ಶಾನ್ ಮಸೂದ್ ಭರ್ಜರಿ 156 ರನ್‌ಗಳ ಕೊಡುಗೆ ಪಾಕಿಸ್ತಾನಕ್ಕೆ ಆನೆ ಬಲ ತಂದಿದೆ. ಪಾಕ್‌ನ ಸೀಮಿತ ಓವರ್‌ಗಳ ನಾಯಕ ಬಾಬರ್ ಅಜಮ್ ಕೂಡ ಅರ್ಧ ಶತಕದ ಕೊಡುಗೆ ನೀಡಿದ್ದರು.
ಪಾಕಿಸ್ತಾನ ಆಡುವ ಬಳಗ: ಶಾನ್ ಮಸೂದ್, ಅಬಿದ್ ಅಲಿ, ಅಜರ್ ಅಲಿ (ನಾಯಕ), ಬಾಬರ್ ಅಜಮ್, ಅಸಾದ್ ಶಫೀಕ್, ಮೊಹಮ್ಮದ್ ರಿಜ್ವಾನ್ (ವಿಕೆಟ್ ಕೀಪರ್), ಶಾದಾಬ್ ಖಾನ್, ಯಾಸಿರ್ ಶಾ, ಮೊಹಮ್ಮದ್ ಅಬ್ಬಾಸ್, ಶಾಹೀನ್ ಅಫ್ರಿದಿ, ನಸೀಮ್ ಶಾ
ಇಂಗ್ಲೆಂಡ್ ಆಡುವ ಬಳಗ: ರೋರಿ ಬರ್ನ್ಸ್, ಡೊಮಿನಿಕ್ ಸಿಬ್ಲಿ, ಜೋ ರೂಟ್ (ನಾಯಕ), ಬೆನ್ ಸ್ಟೋಕ್ಸ್, ಆಲ್ಲಿ ಪೋಪ್, ಜೋಸ್ ಬಟ್ಲರ್ (ವಿಕೆಟ್ ಕೀಪರ್), ಕ್ರಿಸ್ ವೋಕ್ಸ್, ಡೊಮಿನಿಕ್ ಬೆಸ್, ಜೋಫ್ರಾ ಆರ್ಚರ್, ಸ್ಟುವರ್ಟ್ ಬ್ರಾಡ್, ಜೇಮ್ಸ್ ಆಂಡರ್ಸನ್
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications