ಇಂಗ್ಲೆಂಡ್ vs ಪಾಕಿಸ್ತಾನ ಅಂತಿಮ ಟೆಸ್ಟ್ LIVE ಸ್ಕೋರ್: ಫಾಲೋಆನ್ ಸುಳಿಯಲ್ಲಿ ಪಾಕಿಸ್ತಾನ

ಸೌಥಾಂಪ್ಟನ್, ಆಗಸ್ಟ್ 24: ಪಾಕಿಸ್ತಾನ ವಿರುದ್ಧದ ಟೆಸ್ಟ್ ಸರಣಿಯ ಅಂತಿಮ ಪಂದ್ಯದಲ್ಲಿ ಇಂಗ್ಲೆಂಡ್ ತನ್ನ ಬಿಗಿ ಹಿಡಿತವನ್ನು ಮುಂದುವರಿಸಿದೆ. ಮೂರನೇ ದಿನ ಪಾಕಿಸ್ತಾನವನ್ನು ಇಂಗ್ಲೆಂಡ್ ಬೌಲರ್‌ಗಳು 273 ರನ್‌ಗಳಿಗೆ ಆಲೌಟ್ ಮಾಡಲು ಯಶಸ್ವಿಯಾಗುವ ಮೂಲಕ ಮೊದಲ ಇನ್ನಿಂಗ್ಸ್‌ನಲ್ಲಿ 310 ರನ್‌ಗಳ ಮುನ್ನಡೆಯನ್ನು ಪಡೆದುಕೊಂಡಿತು.
ಪಾಕಿಸ್ತಾನವನ್ನು ಬೇಗನೆ ಆಲೌಟ್ ಮಾಡುವಲ್ಲಿ ಯಶಸ್ವಿಯಾದ ಕಾರಣ ಇಂಗ್ಲೆಂಡ್ ಪಾಕಿಸ್ತಾನ ತಂಡಕ್ಕೆ ಫಾಲೋಆನ್ ಹೇರಿದೆ. ಹೀಗಾಗಿ ನಾಲ್ಕನೇ ದಿನ ಮತ್ತೆ ತನ್ನ ಎರಡನೇ ಇನ್ನಿಂಗ್ಸ್ ಆಡಲು ಕಣಕ್ಕಿಳಿದಿದೆ. ಪಂದ್ಯ ಇನ್ನೂ ಸಂಪೂರ್ಣ ಎರಡು ದಿನಗಳ ಕಾಲಾವಕಾಶ ಇರುವುದರಿಂದ ಫಲಿತಾಂಶ ಸ್ಪಷ್ಟವಾಗಿದೆ.
Live ಸ್ಕೋರ್ ಪಟ್ಟಿ ಹೀಗಿದೆ:
ಇನ್ನು ಪಾಕಿಸ್ತಾನದ ಮೊದಲ ಇನ್ನಿಂಗ್ಸ್‌ನಲ್ಲಿ ನಾಯಕ ಅಜರ್ ಅಲಿ ಅದ್ಭುತ ಆಟವನ್ನು ಪ್ರದರ್ಶಿಸಿದರು. ಇನ್ನಿಂಗ್ಸ್‌ನ ಉದ್ದಕ್ಕೂ ಏಕಾಂಗಿ ಹೋರಾಟವನ್ನು ನೀಡಿದ ಅಜರ್ ಅಲಿ 141 ರನ್‌ಗಳನ್ನು ಗಳಿಸಿದರು. ಇಂಗ್ಲೆಂಡ್ ಪರವಾಗಿ ಬೌಲಿಂಗ್‌ನಲ್ಲಿ ಜೇಮ್ಸ್ ಆಂಡರ್ಸನ್ 5 ವಿಕೆಟ್ ಪಡೆದು ಮಿಂಚಿದರು.
ಇಂಗ್ಲೆಂಡ್ ತಂಡ: ರೋರಿ ಬರ್ನ್ಸ್, ಡೊಮಿನಿಕ್ ಸಿಬ್ಲಿ, ಝ್ಯಾಕ್ ಕ್ರಾಲೆ, ಜೋ ರೂಟ್ (ಸಿ), ಆಲ್ಲಿ ಪೋಪ್, ಜೋಸ್ ಬಟ್ಲರ್ (ವಿಕೆ), ಕ್ರಿಸ್ ವೋಕ್ಸ್, ಡೊಮಿನಿಕ್ ಬೆಸ್, ಜೋಫ್ರಾ ಆರ್ಚರ್, ಸ್ಟುವರ್ಟ್ ಬ್ರಾಡ್, ಜೇಮ್ಸ್ ಆ್ಯಂಡರ್ಸನ್
ಪಾಕಿಸ್ತಾನ ತಂಡ: ಶಾನ್ ಮಸೂದ್, ಅಬಿದ್ ಅಲಿ, ಅಜರ್ ಅಲಿ (ಸಿ), ಬಾಬರ್ ಅಜಮ್, ಅಸಾದ್ ಶಫಿಕ್, ಫವಾದ್ ಆಲಂ, ಮೊಹಮ್ಮದ್ ರಿಜ್ವಾನ್ (ವಿಕೆ), ಯಾಸಿರ್ ಶಾ, ಮೊಹಮ್ಮದ್ ಅಬ್ಬಾಸ್, ಶಾಹೀನ್ ಅಫ್ರಿದಿ, ನಸೀಮ್ ಶಾ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications