ಪಾಕಿಸ್ತಾನ vs ಇಂಗ್ಲೆಂಡ್: 6ನೇ ಟಿ20 ಪಂದ್ಯ: ಟಾಸ್ ರಿಪೋರ್ಟ್ ಹಾಗೂ Live ಸ್ಕೋರ್

ಪಾಕಿಸ್ತಾನ ಹಾಗೂ ಇಂಗ್ಲೆಂಡ್ ತಂಡಗಳ ನಡುವಿನ ಟಿ20 ಸರಣಿಯ ಆರನೇ ಪಂದ್ಯ ಆರಂಭವಾಗಿದೆ. ಏಳು ಪಂದ್ಯಗಳ ಈ ಸರಣಿಯಲ್ಲಿ ಐದು ಪಂದ್ಯಗಳು ಈಗಾಗಲೇ ಮುಕ್ತಾಯವಾಗಿದ್ದು ಇದರಲ್ಲಿ ಮೂರು ಪಂದ್ಯಗಳಲ್ಲಿ ಆತಿಥೇಯ ಪಾಕಿಸ್ತಾನ ಗೆಲುವು ಸಾಧಿಸಿದ್ದರೆ ಇಂಗ್ಲೆಂಡ್ ತಂಡ ಎರಡು ಪಂದ್ಯಗಳಲ್ಲಿ ಗೆದ್ದುಕೊಂಡಿದೆ. ಇಂದಿನ ಪಂದ್ಯದಲ್ಲಿ ಇಂಗ್ಲೆಂಡ್ ತಂಡ ಟಾಸ್ ಗೆದ್ದಿದ್ದು ಮೊದಲಿಗೆ ಬೌಲಿಂಗ್ ಆಯ್ಕೆ ಮಾಡಿಕೊಂಡಿದೆ.
ಏಳು ಪಂದ್ಯಗಳ ಸುದೀರ್ಘ ಟಿ20 ಸರಣಿ ಇದಾಗಿದ್ದು ಎಲ್ಲಾ ಪಂದ್ಯಗಳಲ್ಲಿಯೂ ಸಾಕಷ್ಟು ಜಿದ್ದಾಜಿದ್ದಿನ ಪ್ರದರ್ಶನ ಎರಡು ತಂಡಗಳ ಮಧ್ಯೆ ಕಂಡುಬಂದಿದೆ. ಆದರೆ ಮೂರು ಪಂದ್ಯಗಳಲ್ಲಿ ಗೆಲುವು ಸಾಧಿಸಿರುವ ಪಾಕಿಸ್ತಾನ ತಂಡ ಸರಣಿಯಲ್ಲಿ ಮುನ್ನೆ ಸಾಧಿಸಿದ್ದರೆ ಇಂಗ್ಲೆಂಡ್ ತಂಡ ಎರಡು ಗೆಲುವು ಸಾಧಿಸಿದೆ. ಹೀಗಾಗಿ ಸರಣಿ ರೋಚಕತೆಯನ್ನು ಉಳಿಸಿಕೊಳ್ಳಬೇಕಾದರೆ ಇಂಗ್ಲೆಂಡ್ ತಂಡ ಇಂದಿನ ಪಂದ್ಯದಲ್ಲಿ ಗೆಲುವು ಸಾಧಿಸುವುದು ಅನಿವಾರ್ಯವಾಗಿದೆ. ಇಲ್ಲವಾದರೆ ಈ ಪಂದ್ಯವನ್ನು ಗೆದ್ದು ಪಾಕಿಸ್ತಾನ ಸರಣಿಯನ್ನು ವಶಕ್ಕೆ ಪಡೆಯಲಿದೆ.
Live ಸ್ಕೋರ್‌ಕಾರ್ಡ್ ಹೀಗಿದೆ

ಮುನ್ನಡೆಯಲ್ಲಿ ಪಾಕಿಸ್ತಾನ
ಸರಣಿಯ ಮೊದಲ ಪಂದ್ಯದಲ್ಲಿ ಪಾಕಿಸ್ತಾನ ತಂಡಕ್ಕೆ ಇಂಗ್ಲೆಂಡ್ ಸೋಲಿನ ರುಚಿ ತೋರಿಸಿದ್ದರೆ ಎರಡನೇ ಪಂದ್ಯದಲ್ಲಿ ಪಾಕಿಸ್ತಾನ ತಂಡ ದಾಖಲೆಯ ಗೆಲುವು ಸಾಧಿಸುವಲ್ಲಿ ಯಶಸ್ವಿಯಾಗಿತ್ತು. ಮೂರನೇ ಪಂದ್ಯವನ್ನು ಇಂಗ್ಲೆಂಡ್ 63 ರನ್‌ಗಳನ್ನು ಗಳಿಸಿದ್ದರೆ ನಾಲ್ಕನೇ ಪಂದ್ಯ ಅತ್ಯಂತ ರೋಚಕವಾಗಿ ಅಂತ್ಯವಾಗಿದ್ದು ಪಾಕಿಸ್ತಾನ 3 ರನ್‌ಗಳ ಅಂತರದಿಂದ ಗೆಲುವು ಸಾಧಿಸಿತ್ತು. ಇನ್ನು ಐದನೇ ಪಂದ್ಯ ಕೂಡ ರೋಚಕವಾಗಿ ನಡೆದಿದ್ದು ಈ ಪಂದ್ಯವನ್ನು ಕೂಡ ಪಾಕಿಸ್ತಾನ ತಂಡ ಕೇವಲ 6 ರನ್‌ಗಳ ಅಂತರದಿಂದ ಗೆಲುವು ಸಾಧಿಸಿದೆ. ಈ ಮೂಲಕ ಈ ಸರಣಿಯಲ್ಲಿ ಆತಿಥೇಯ ಪಾಕಿಸ್ತಾನ 3-2 ಅಂತರದಿಂದ ಮುನ್ನಡೆ ಸಾಧಿಸುವಲ್ಲಿ ಯಶಸ್ವಿಯಾಗಿದೆ. ಹೀಗಾಗಿ ಇಂದಿನ ಪಂದ್ಯದ ಫಲಿತಾಂಶ ಕುತೂಹಲ ಮೂಡಿಸಿದೆ.

ಪಾಕಿಸ್ತಾನ ಆಡುವ ಬಳಗ
ಬಾಬರ್ ಆಜಮ್ (ನಾಯಕ), ಮೊಹಮ್ಮದ್ ಹ್ಯಾರಿಸ್ (ವಿಕೆಟ್ ಕೀಪರ್), ಶಾನ್ ಮಸೂದ್, ಇಫ್ತಿಕರ್ ಅಹ್ಮದ್, ಹೈದರ್ ಅಲಿ, ಶಾದಾಬ್ ಖಾನ್, ಆಸಿಫ್ ಅಲಿ, ಮೊಹಮ್ಮದ್ ನವಾಜ್, ಅಮೀರ್ ಜಮಾಲ್, ಮೊಹಮ್ಮದ್ ವಾಸಿಂ ಜೂನಿಯರ್, ಶಹನವಾಜ್ ದಹಾನಿ
ಬೆಂಚ್: ಮೊಹಮ್ಮದ್ ರಿಜ್ವಾನ್, ಹಾರಿಸ್ ರೌಫ್, ಉಸ್ಮಾನ್ ಖಾದಿರ್, ಖುಷ್ದಿಲ್ ಶಾ, ಮೊಹಮ್ಮದ್ ಹಸ್ನೈನ್, ಅಬ್ರಾರ್ ಅಹ್ಮದ್

ಇಂಗ್ಲೆಂಡ್ ಆಡುವ ಬಳಗ
ಫಿಲಿಪ್ ಸಾಲ್ಟ್ (ವಿಕೆಟ್ ಕೀಪರ್), ಅಲೆಕ್ಸ್ ಹೇಲ್ಸ್, ಡೇವಿಡ್ ಮಲನ್, ಬೆನ್ ಡಕೆಟ್, ಹ್ಯಾರಿ ಬ್ರೂಕ್, ಮೊಯಿನ್ ಅಲಿ (ಸಿ), ಸ್ಯಾಮ್ ಕುರಾನ್, ಡೇವಿಡ್ ವಿಲ್ಲಿ, ಆದಿಲ್ ರಶೀದ್, ರೀಸ್ ಟೋಪ್ಲಿ, ರಿಚರ್ಡ್ ಗ್ಲೀಸನ್
ಬೆಂಚ್: ಕ್ರಿಸ್ ವೋಕ್ಸ್, ಮಾರ್ಕ್ ವುಡ್, ವಿಲ್ ಜ್ಯಾಕ್ಸ್, ಲಿಯಾಮ್ ಡಾಸನ್, ಆಲಿ ಸ್ಟೋನ್, ಟಾಮ್ ಹೆಲ್ಮ್, ಲ್ಯೂಕ್ ವುಡ್, ಜೋರ್ಡಾನ್ ಕಾಕ್ಸ್
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications