For Quick Alerts
ALLOW NOTIFICATIONS  
For Daily Alerts
 

ಪಾಕಿಸ್ತಾನ ವಿರುದ್ಧದ ಟೆಸ್ಟ್ ಸರಣಿಗೆ ಇಂಗ್ಲೆಂಡ್ ತಂಡ ಪ್ರಕಟ: ಪ್ರಮುಖ ಆಟಗಾರನಿಗೆ ವಿಶ್ರಾಂತಿ

England vs Pakistan Test Series: 15 members England squad announced for Pakistan Tour

ಇಂಗ್ಲೆಂಡ್ ಈ ವರ್ಷಾಂತ್ಯದಲ್ಲಿ ಮತ್ತೊಮ್ಮೆ ಪಾಕಿಸ್ತಾನಕ್ಕೆ ಪ್ರವಾಸ ಕೈಗೊಳ್ಳಲಿದ್ದು ಟೆಸ್ಟ್ ಸರಣಿಯಲ್ಲಿ ಭಾಗಿಯಾಗಲಿದೆ. ಈ ಪ್ರವಾಸದಲ್ಲಿ ಇಂಗ್ಲೆಂಡ್ ತಂಡ ಮೂರು ಪಂದ್ಯಗಳ ಟೆಸ್ಟ್ ಸರಣಿಯನ್ನು ಪಾಕಿಸ್ತಾನದ ವಿರುದ್ಧ ಆಡಲಿದೆ. ಈ ಟೆಸ್ಟ್ ಸರಣಿಯಲ್ಲಿ ಭಾಗವಹಿಸಲಿರುವ 15 ಸದಸ್ಯರ ಇಂಗ್ಲೆಂಡ್ ತಂಡವನ್ನು ಇಸಿಬಿ ಘೋಷಣೆ ಮಾಡಿದೆ.

ಟಿ20 ವಿಶ್ವಕಪ್‌ಗೂ ಮುನ್ನ ಆಸ್ಟ್ರೇಲಿಯಾ ತಂಡ ವಿರುದ್ಧದ ಮೂರು ಪಂದ್ಯಗಳ ಟಿ20 ಸರಣಿಯಲ್ಲಿ ಭಾಗಿಯಾಗಿರುವ ಇಂಗ್ಲೆಂಡ್ ತಂಡ ಇದಕ್ಕೂ ಮುನ್ನ ಪಾಕಿಸ್ತಾನ ಪ್ರವಾಸ ಕೈಗೊಂಡು 7 ಪಂದ್ಯಗಳ ಟಿ20 ಸರಣಿಯಲ್ಲಿ ಭಾಗಿಯಾಗಿತ್ತು. ಈ ಸರಣಿಯನ್ನು 4-3 ಅಂತರದಿಂದ ಇಂಗ್ಲೆಂಡ್ ಭರ್ಜರಿಯಾಗಿ ಗೆದ್ದುಕೊಂಡಿದೆ.

ಕೌಂಟಿ ಚಾಂಪಿಯನ್‌ಶಿಪ್‌ನಲ್ಲಿ ಸರ್ರೆ ತಂಡದ ಆಲ್-ರೌಂಡರ್ ಆಟಗಾರ ವಿಲ್ ಜ್ಯಾಕ್ಸ್ ಅದ್ಭುತ ಪ್ರದರ್ಶನ ನೀಡಿ ಮಿಂಚಿದ್ದು ರಾಷ್ಟ್ರೀಯ ತಂಡದಲ್ಲಿ ಸ್ಥಾನ ಪಡೆದುಕೊಮಡಿದ್ದಾರೆ. ಇನ್ನು ಪಾಕಿಸ್ತಾನ ವಿರುದ್ಧದ ಟೆಸ್ಟ್ ಸರಣಿಗೆ ಆಯ್ಕೆಯಾಗಿರುವ ಮತ್ತೊಂದು ಕುತೂಹಲಕಾರಿ ಹೆಸರು ಲಿಯಾಮ್ ಲಿವಿಂಗ್‌ಸ್ಟೋನ್. 2018 ರಲ್ಲಿ ನ್ಯೂಜಿಲೆಂಡ್ ಪ್ರವಾಸದ ಬಳಿಕ ಮೊದಲ ಬಾರಿಗೆ ಟೆಸ್ಟ್ ತಂಡಕ್ಕೆ ಆಯ್ಕೆಯಾಗಿದ್ದಾರೆ.

ನಾಟಿಂಗ್‌ಹ್ಯಾಮ್‌ಶೈರ್‌ನ ಬ್ಯಾಟರ್ ಬೆನ್ ಡಕೆಟ್ ಕೂಡ ಕೌಂಟಿ ಚಾಂಪಿಯನ್‌ಶಿಪ್‌ನಲ್ಲಿ ಇಂಗ್ಲೆಂಡ್ ಲಯನ್ಸ್ ಪರವಾಗಿ ಕಣಕ್ಕಿಳಿದು ಅದ್ಭುತ ಪ್ರದರ್ಶನ ನೀಡಿದ್ದರು. ಈ ಪ್ರದರ್ಶನದಿಂದಾಗಿ ಇಂಗ್ಲೆಂಡ್ ರಾಷ್ಟ್ರೀಯ ತಂಡದಲ್ಲಿ ಸ್ಥಾನವನ್ನು ಪಡೆದುಕೊಳ್ಳುವಲ್ಲಿ ಯಶಸ್ವಿಯಾಗಿದ್ದು 15 ಸದಸ್ಯರ ತಂಡದಲ್ಲಿ ಸ್ಥಾನ ಪಡೆದುಕೊಂಡಿದ್ದಾರೆ.

ನವೆಂಬರ್ 26 ರಂದು ಪಾಕಿಸ್ತಾನಕ್ಕೆ ಪ್ರಯಾಣಿಸುವ ಮೊದಲು ಇಂಗ್ಲೆಂಡ್ ನವೆಂಬರ್ 23 ರಿಂದ ಲಯನ್ಸ್ ವಿರುದ್ಧ ಮೂರು ದಿನಗಳ ಅಭ್ಯಾಸ ಪಂದ್ಯವನ್ನು ಆಡಲಿದೆ. ನಂತರ ಮೂರು ಪಂದ್ಯಗಳ ಟೆಸ್ಟ್ ಸರಣಿ ನಡೆಯಲಿದ್ದುರಾವಲ್ಪಿಂಡಿ (ಡಿಸೆಂಬರ್ 1-5), ಮುಲ್ತಾನ್ (ಡಿಸೆಂಬರ್ 9-13) ಮತ್ತು ಕರಾಚಿ (ಡಿಸೆಂಬರ್ 9-13) ಡಿಸೆಂಬರ್ 17-21)ರಂದು ನಡೆಯಲಿದೆ.

ಇಂಗ್ಲೆಂಡ್ ಸ್ಕ್ವಾಡ್ ಹೀಗಿದೆ: ಬೆನ್ ಸ್ಟೋಕ್ಸ್, ಜೇಮ್ಸ್ ಆಂಡರ್ಸನ್, ಹ್ಯಾರಿ ಬ್ರೂಕ್, ಝಾಕ್ ಕ್ರಾಲಿ, ಬೆನ್ ಡಕೆಟ್, ಬೆನ್ ಫೋಕ್ಸ್, ವಿಲ್ ಜ್ಯಾಕ್ಸ್, ಕೀಟನ್ ಜೆನ್ನಿಂಗ್ಸ್, ಜ್ಯಾಕ್ ಲೀಚ್, ಲಿಯಾಮ್ ಲಿವಿಂಗ್‌ಸ್ಟನ್, ಜೇಮೀ ಓವರ್‌ಟನ್, ಆಲಿ ಪೋಪ್, ಆಲಿ ರಾಬಿನ್ಸನ್, ಜೋ ರೂಟ್, ಮಾರ್ಕ್ ವುಡ್.

Story first published: Thursday, October 13, 2022, 5:15 [IST]
Other articles published on Oct 13, 2022
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+