ಇಂಗ್ಲೆಂಡ್ vs ದ. ಆಫ್ರಿಕಾ: ಮೊದಲ ಟಿ20 ಪಂದ್ಯ Live ಸ್ಕೋರ್ ಹಾಗೂ ಆಡುವ ಬಳಗ

ದಕ್ಷಿಣ ಆಫ್ರಿಕಾ ಹಾಗೂ ಇಂಗ್ಲೆಂಡ್ ತಂಡಗಳ ನಡುವಿನ ಟಿ20 ಸರಣಿ ಆರಂಭವಾಗಿದ್ದು ಬ್ರಿಸ್ಟೊಲ್‌ನಲ್ಲಿ ಈ ಮೊದಲ ಪಂದ್ಯ ಆಯೋಜನೆಯಾಗಿದೆ. ಈ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ತಂಡ ಟಾಸ್ ಗೆದ್ದಿದ್ದು ಮೊದಲಿಗೆ ಬೌಲಿಂಗ್ ಆಯ್ಕೆ ಮಾಡಿಕೊಂಡಿದೆ. ಹೀಗಾಗಿ ಆತಿಥೇಯ ಇಂಗ್ಲೆಂಡ್ ಮೊದಲಿಗೆ ಬ್ಯಾಟಿಂಗ್ ಮಾಡುವ ಸವಾಲು ಸ್ವೀಕರಿಸಿದೆ.
ಏಕದಿನ ಸರಣಿಯಲ್ಲಿ ಸಮಬಲ ಸಾಧಿಸಿದ ಬಳಿಕ ಇದೀಗ ಚುಟುಕು ಸರಣಿಯಲ್ಲಿ ಎರಡು ತಂಡಗಳು ಕೂಡ ಕಣಕ್ಕಿಳಿಯುತ್ತಿದೆ. ಆತಿಥೆಯ ಇಂಗ್ಲೆಂಡ್ ತಂಡ ಇತ್ತೀಚೆಗೆ ಸೀಮಿತ ಓವರ್‌ಗಳ ಕ್ರಿಕೆಟ್‌ನಲ್ಲಿ ನೀರಸ ಪ್ರದರ್ಶನ ನೀಡುತ್ತಿರುವುದು ಮ್ಯಾನೇಜ್‌ಮೆಂಟ್‌ನ ತಲೆನೋವು ಹೆಚ್ಚಿಸಿದೆ. ಹೀಗಾಗಿ ಈ ಸರಣಿಯಲ್ಲಿ ಇಂಗ್ಲೆಂಡ್ ಪಡೆಯ ಮೇಲೆ ಹೆಚ್ಚಿನ ನಿರೀಕ್ಷೆಯಿದೆ. ವಿಶ್ವಕಪ್ ಹತ್ತಿರವಾಗುತ್ತಿರುವ ಸಂದರ್ಭದಲ್ಲಿ ಜೋಸ್ ಬಟ್ಲರ್ ಬಳಗ ಎಲ್ಲಾ ವಿಭಾಗದಲ್ಲಿಯೂ ಗಮನಸೆಳೆಯುವ ಪ್ರದರ್ಶನವನ್ನು ನೀಡುವ ಒತ್ತಡದಲ್ಲಿದೆ.
Live ಸ್ಕೋರ್ ಹೀಗಿದೆ

ಏಕದಿನ ಸರಣಿಯಲ್ಲಿ ಸಮಬಲದ
ದಕ್ಷಿಣ ಆಫ್ರಿಕಾದ ಈ ಇಂಗ್ಲೆಂಡ್ ಪ್ರವಾಸದಲ್ಲಿ ಮೊದಲಿಗೆ ಏಕದಿನ ಮಾದರಿಯಲ್ಲಿ ಎರಡು ತಂಡಗಳು ಕೂಡ ಮುಖಾಮುಖಿಯಾಗಿದೆ. ಮೂರು ಪಂದ್ಯಗಳ ಈ ಸರಣಿಯಲ್ಲಿ ಮೊದಲ ಪಂದ್ಯದಲ್ಲಿ ದಕ್ಷಿಣ ಆಪ್ರಿಕಾ ಅಮೋಘ ಪ್ರದರ್ಶನ ನೀಡಿ 62 ರನ್‌ಗಳ ಅಂತರದಿಂದ ಗೆಲುವು ಸಾಧಿಸಿತು. ಇನ್ನು ಮಳೆಯಿಂದಾಗಿ ಅಡ್ಡಿಯುಂಟಾಗಿದ್ದ ಎರಡನೇ ಪಂದ್ಯದಲ್ಲಿ ಇಂಗ್ಲೆಂಡ್ ತಂಡ ಪ್ರವಾಸಿ ತಂಡದ ವಿರುದ್ಧ ತಿರುಗಿ ಬೀಳಲು ಯಶಸ್ವಿಯಾಗಿತ್ತು. 118 ರನ್‌ಗಳ ಬೃಹತ್ ಅಂತರದಿಂದ ಇಂಗ್ಲೆಂಡ್ ಈ ಪಂದ್ಯವನ್ನು ಗೆದ್ದುಕೊಂಡಿತ್ತು. ಇನ್ನು ನಿರ್ಣಾಯಕವಾಗಿದ್ದ ಮೂರನೇ ಪಂದ್ಯ ಸಂಪೂರ್ಣವಾಗಿ ಮಳೆಗೆ ಆಹುತಿಯಾಯಿತು. ಹೀಗಾಗಿ ಫಲಿತಾಂಶವಿಲ್ಲದೆ ಪಂದ್ಯ ರದ್ದಾಯಿತು. ಮೂರು ಪಂದ್ಯಗಳ ಸರಣಿಯಲ್ಲಿ ಎರಡು ತಂಡಗಳು ಕೂಡ 1-1 ಅಂತರದಿಂದ ಸಮಬಲ ಸಾಧಿಸಿತು.

ಇಂಗ್ಲೆಂಡ್ ಆಡುವ ಬಳಗ
ಇಂಗ್ಲೆಂಡ್: ಜೋಸ್ ಬಟ್ಲರ್ (ನಾಯಕ & ವಿಕೆಟ್ ಕೀಪರ್), ಜೇಸನ್ ರಾಯ್, ಡೇವಿಡ್ ಮಲನ್, ಜಾನಿ ಬೈರ್‌ಸ್ಟೋವ್, ಮೊಯಿನ್ ಅಲಿ, ಲಿಯಾಮ್ ಲಿವಿಂಗ್‌ಸ್ಟೋನ್, ಸ್ಯಾಮ್ ಕರ್ರಾನ್, ಕ್ರಿಸ್ ಜೋರ್ಡಾನ್, ಆದಿಲ್ ರಶೀದ್, ರಿಚರ್ಡ್ ಗ್ಲೀಸನ್, ರೀಸ್ ಟೋಪ್ಲಿ
ಬೆಂಚ್: ಫಿಲಿಪ್ ಸಾಲ್ಟ್, ಡೇವಿಡ್ ವಿಲ್ಲಿ, ಹ್ಯಾರಿ ಬ್ರೂಕ್

ದಕ್ಷಿಣ ಆಪ್ರಿಕಾ ಆಡುವ ಬಳಗ
ದಕ್ಷಿಣ ಆಪ್ರಿಕಾ: ಕ್ವಿಂಟನ್ ಡಿ ಕಾಕ್ (ವಿಕೆಟ್ ಕೀಪರ್), ರೀಜಾ ಹೆಂಡ್ರಿಕ್ಸ್, ರಿಲೀ ರೊಸೊವ್, ಹೆನ್ರಿಚ್ ಕ್ಲಾಸೆನ್, ಡೇವಿಡ್ ಮಿಲ್ಲರ್ (ನಾಯಕ), ಟ್ರಿಸ್ಟಾನ್ ಸ್ಟಬ್ಸ್, ಆಂಡಿಲೆ ಫೆಹ್ಲುಕ್ವಾಯೊ, ಕಗಿಸೊ ರಬಾಡ, ಕೇಶವ್ ಮಹಾರಾಜ್, ಲುಂಗಿ ಎನ್‌ಗಿಡಿ, ತಬ್ರೈಜ್ ಶಮ್ಸಿ
ಬೆಂಚ್: ರಾಸ್ಸಿ ವ್ಯಾನ್ ಡೆರ್ ಡಸ್ಸೆನ್, ಐಡೆನ್ ಮಾರ್ಕ್ರಾಮ್, ಡ್ವೈನ್ ಪ್ರಿಟೋರಿಯಸ್, ವೇಯ್ನ್ ಪಾರ್ನೆಲ್, ಅನ್ರಿಚ್ ನಾರ್ಕಿಯಾ, ಜೆರಾಲ್ಡ್ ಕೋಟ್ಜಿ
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications