Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

ಇಂಗ್ಲೆಂಡ್ vs ದ. ಆಫ್ರಿಕಾ: ಸೋಲಿನ ಸುಳಿಯಲ್ಲಿ ಬೆನ್ ಸ್ಟೋಕ್ಸ್ ಪಡೆ: Live ಸ್ಕೋರ್

England vs South Africa: 1st test, Live score and Playing XI, Lords

ಇಂಗ್ಲೆಂಡ್ ಹಾಗೂ ದಕ್ಷಿಣ ಆಫ್ರಿಕಾ ವಿರುದ್ಧದ ಟೆಸ್ಟ್ ಸರಣಿಯ ಮೊದಲ ಪಂದ್ಯದಲ್ಲಿ ಪ್ರವಾಸಿ ದಕ್ಷಿಣ ಆಫ್ರಿಕಾ ತಂಡ ಅದ್ಭುತ ಬೌಲಿಂಗ್ ದಾಳಿ ಪ್ರದರ್ಶಿಸಿದ್ದು ಮೇಲುಗೈ ಸಾಧಿಸಿದೆ. ಮೊದಲ ಇನ್ನಿಂಗ್ಸ್‌ನಲ್ಲಿಯೂ ದಕ್ಷಿಣ ಆಫ್ರಿಕಾ ಬೌಲರ್‌ಗಳ ದಾಳಿಗೆ ನಲುಗಿದ್ದ ಇಂಗ್ಲೆಂಡ್ ತಂಡ ಎರಡನೇ ಇನ್ನಿಂಗ್ಸ್‌ನಲ್ಲಿಯೂ ಆರಂಭಿಕ ಕುಸಿತವನ್ನು ಅನುಭವಿಸಿದ್ದು ಭಾರೀ ಹಿನ್ನೆಡೆಯಲ್ಲಿದೆ.

ಟಾಸ್ ಸೋತು ಮೊದಲಿಗೆ ಬ್ಯಾಟಿಂಗ್ ನಡೆಸುವ ಸವಾಲು ಸ್ವೀಕರಿಸಿದ ಇಂಗ್ಲೆಂಡ್ ತಂಡದ ಪರವಾಗಿ ಒಲ್ಲೀ ಪೋಪ್ ಮಾತ್ರವೇ 73 ರನ್‌ಗಳನ್ನು ಬಾರಿಸಿದ್ದರು. ಉಳಿದಂತೆ ಯಾವ ಆಟಗಾರನಿಂದಲೂ ಸಮರ್ಥ ಬ್ಯಾಟಿಂಗ್ ಪ್ರದರ್ಶನ ಬಾರದ ಪರಿಣಾಮವಾಗಿ ಇಂಗ್ಲೆಂಡ್ ಮೊದಲ ಇನ್ನಿಂಗ್ಸ್‌ನಲ್ಲಿ ಕೇವಲ 165 ರನ್‌ಗೆ ಆಲೌಟ್ ಆಯಿತು. ಕಗಿಸೋ ರಬಡಾ ಮೊದಲ ಇನ್ನಿಂಗ್ಸ್‌ನಲ್ಲಿ ಐದು ವಿಎಕಟ್ ಪಡೆದು ಆತಿಥೆಯ ಇಂಗ್ಲೆಂಡ್‌ಗೆ ದೊಡ್ಡ ಆಘಾತ ನೀಡಿದ್ದಾರೆ.

Live ಸ್ಕೋರ್ ಪಟ್ಟಿ ಹೀಗಿದೆ

1
51791

ಇನ್ನು ಇದಕ್ಕೆ ಪ್ರತಿಯಾಗಿ ಬ್ಯಾಟಿಂಗ್ ಆರಂಭಿಸಿದ ದಕ್ಷಿಣ ಆಫ್ರಿಕಾ ತಂಡ ಮೊದಲ ಇನ್ನಿಂಗ್ಸ್‌ನಲ್ಲಿ ಉತ್ತಮ ಬ್ಯಾಟಿಂಗ್ ಪ್ರದರ್ಶನ ನೀಡಿತು. 326 ರನ್‌ಗಳನ್ನು ಗಳಿಸುವ ಮೂಲಕ ದಕ್ಷಿಣ ಆಫ್ರಿಕಾ ತಂಡ ಮೊದಲ ಇನ್ನಿಂಗ್ಸ್‌ನಲ್ಲಿ 161 ರನ್‌ಗಳ ಬೃಹತ್ ಮುನ್ನಡೆಯನ್ನು ಗಳಿಸಿತು. ಸೆರೆಲ್ ಇರ್ವೀ ಅರ್ಧ ಶತಕ ಮಿಂಚಿದರೆ ನಾಯಕ ಡೀನ್ ಎಲ್ಗರ್, ಮಾರ್ಕೋ ಜಾನ್ಸನ್, ಕೇಶವ್ ಮಹಾರಾಜ್ ಅವರಿಂದ ಬಂದ ಬ್ಯಾಟಿಂಗ್ ಪ್ರದರ್ಶನ ತಂಡಕ್ಕೆ ನೆರವಾಯಿತು.

ಸೋಲಿನ ಸುಳಿಯಲ್ಲಿ ಇಂಗ್ಲೆಂಡ್: ಇನ್ನು ಎರಡನೇ ಇನ್ನಿಂಗ್ಸ್‌ನಲ್ಲಿಯೂ ಇಂಗ್ಲೆಂಡ್ ತಂಡ ಭಾರೀ ಹಿನ್ನಡೆ ಅನುಭವಿಸಿದ್ದು ಸೋಲಿನ ಸುಳಿಯಲ್ಲಿದೆ. ಪ್ರಮುಖ ದಾಂಡಿಗರೆಲ್ಲರೂ ವಿಕೆಟ್ ಕಳೆದುಕೊಂಡಿದ್ದು ಇನ್ನಿಂಗ್ಸ್ ಸೋಲಿನ ಭೀತಿಯಲ್ಲಿದೆ.

ಇಂಗ್ಲೆಂಡ್ ಆಡುವ ಬಳಗ: ಅಲೆಕ್ಸ್ ಲೀಸ್, ಝಾಕ್ ಕ್ರಾಲಿ, ಓಲಿ ಪೋಪ್, ಜೋ ರೂಟ್, ಜಾನಿ ಬೈರ್‌ಸ್ಟೋವ್, ಬೆನ್ ಸ್ಟೋಕ್ಸ್ (ನಾಯಕ), ಬೆನ್ ಫೋಕ್ಸ್ (ವಿಕೆಟ್ ಕೀಪರ್), ಸ್ಟುವರ್ಟ್ ಬ್ರಾಡ್, ಜ್ಯಾಕ್ ಲೀಚ್, ಮ್ಯಾಟಿ ಪಾಟ್ಸ್, ಜೇಮ್ಸ್ ಆಂಡರ್ಸನ್
ಬೆಂಚ್: ಆಲಿ ರಾಬಿನ್ಸನ್, ಕ್ರೇಗ್ ಓವರ್ಟನ್, ಹ್ಯಾರಿ ಬ್ರೂಕ್

Ishan Kishan ಹಾಗು KL Rahul ಅವರ ವೀಡಿಯೋ ಎಲ್ಲೆಡೆ ವೈರಲ್ | *Cricket | OneIndia Kannada

ದಕ್ಷಿಣ ಆಫ್ರಿಕಾ ತಂಡ ಆಡುವ ಬಳಗ: ಡೀನ್ ಎಲ್ಗರ್ (ನಾಯಕ), ಸರೆಲ್ ಎರ್ವೀ, ಕೀಗನ್ ಪೀಟರ್ಸನ್, ಐಡೆನ್ ಮಾರ್ಕ್ರಾಮ್, ರಾಸ್ಸಿ ವ್ಯಾನ್ ಡೆರ್ ಡಸ್ಸೆನ್, ಕೈಲ್ ವೆರ್ರೆನ್ (ವಿಕೆಟ್ ಕೀಪರ್), ಮಾರ್ಕೊ ಜಾನ್ಸೆನ್, ಕೇಶವ್ ಮಹಾರಾಜ್, ಕಗಿಸೊ ರಬಾಡ, ಅನ್ರಿಚ್ ನಾರ್ಕಿಯಾ, ಲುಂಗಿ ಎನ್‌ಗಿಡಿ
ಬೆಂಚ್: ಲುಥೋ ಸಿಪಾಮ್ಲಾ, ಸೈಮನ್ ಹಾರ್ಮರ್, ಖಯಾ ಜೊಂಡೋ, ರಯಾನ್ ರಿಕೆಲ್ಟನ್, ಗ್ಲೆಂಟನ್ ಸ್ಟೌರ್ಮನ್

Story first published: Friday, August 19, 2022, 19:38 [IST]
Other articles published on Aug 19, 2022
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+