Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

ಇಂಗ್ಲೆಂಡ್ vs ದ. ಆಪ್ರಿಕಾ, 2ನೇ ಟೆಸ್ಟ್‌: ಮೊದಲ ದಿನದಾಟದಲ್ಲಿ ಮೇಲುಗೈ ಸಾಧಿಸಿದ ಇಂಗ್ಲೆಂಡ್

England vs South Africa: 2nd test day 1 Highlights, Manchester

ದಕ್ಷಿಣ ಆಫ್ರಿಕಾ ಹಾಗೂ ಇಂಗ್ಲೆಂಡ್ ನಡುವಿನ ಟೆಸ್ಟ್ ಸರಣಿಯ ಎರಡನೇ ಪಂದ್ಯ ಮ್ಯಾಂಚೆಸ್ಟರ್‌ನಲ್ಲಿ ನಡೆಯುತ್ತಿದ್ದು ಮೊದಲ ದಿನದಾಟ ಅಂತ್ಯವಾಗಿದೆ. ಟಾಸ್ ಸೋತು ಮೊದಲಿಗೆ ಬೌಲಿಂಗ್ ದಾಳಿಗೆ ಇಳಿದ ಆತಿಥೇಯ ಇಂಗ್ಲೆಂಡ್ ತಂಡ ಅದ್ಭುತ ಪ್ರದರ್ಶನ ನೀಡಿದ್ದು ದಕ್ಷಿಣ ಆಫ್ರಿಕಾಗೆ ಆಘಾತ ನೀಡಿದೆ. ಈ ಮೂಲಕ ಮೊದಲ ದಿನ ಸಂಪೂರ್ಣವಾಗಿ ಪಂದ್ಯದಲ್ಲಿ ತನ್ನ ಹಿಡಿತವನ್ನು ಸಾಧಿಸುವಲ್ಲಿ ಯಶಸ್ವಿಯಾಗಿದೆ.

ಸ್ಟುವರ್ಟ್ ಬ್ರಾಡ್ ಹಾಗೂ ಜೇಮ್ಸ್ ಆಂಡರ್ಸನ್ ಅವರ ಬೌಲಿಂಗ್ ದಾಳಿಗೆ ದಕ್ಷಿಣ ಆಫ್ರಿಕಾ ತಂಡದ ದಾಂಡಿಗರು ಸಂಪೂರ್ಣವಾಗಿ ನಿರುತ್ತರವಾಗಿದ್ದರು. ದಕ್ಷಿಣ ಆಪ್ರಿಕಾದ ಯಾವ ಬ್ಯಾಟ್ಸ್‌ಮನ್ ಕೂಡ ದೊಡ್ಡ ಮೊತ್ತದ ಕೊಡುಗೆ ನೀಡಲು ಸಾಧ್ಯವಾಗಲೇ ಇಲ್ಲ. ಇದರ ಪರಿಣಾಮವಾಗಿ 53.2 ಓವರ್‌ಗಳಲ್ಲಿ ದಕ್ಷಿಣ ಆಫ್ರಿಕಾ ತನ್ನ ಮೊದಲ ಇನ್ನಿಂಗ್ಸ್‌ನ ಬ್ಯಾಟಿಂಗ್ ಮುಗಿಸಿದೆ. 151 ರನ್‌ಗಳಿಗೆ ಆಲೌಟ್ ಆಗುವ ಮೂಲಕ ನಿರಾಸೆ ಅನುಭವಿಸಿದೆ.

ಆತ್ಮವಿಶ್ವಾಸದೊಂದಿಗೆ ಕಣಕ್ಕಿಳಿದ ದ. ಆಪ್ರಿಕಾ

ಆತ್ಮವಿಶ್ವಾಸದೊಂದಿಗೆ ಕಣಕ್ಕಿಳಿದ ದ. ಆಪ್ರಿಕಾ

ಲಾರ್ಡ್ಸ್ ಅಂಗಳದಲ್ಲಿ ನಡೆದ ಮೊದಲ ಟೆಸ್ಟ್ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ತಂಡ ಅದ್ಭುತ ಪ್ರದರ್ಶನ ನೀಡುವ ಮೂಲಕ ಆತಿಥೇಯ ಇಂಗ್ಲೆಂಡ್‌ಗೆ ಮುಖಭಂಗವನ್ನುಂಟು ಮಾಡಿತ್ತು. ಅಮೋಘ ಬೌಲಿಂಗ್ ಪ್ರದರ್ಶನದಿಂದಾಗಿ ಇನ್ನಿಂಗ್ಸ್ ಹಾಗೂ 12 ರನ್‌ಗಳ ಅಂತರದಿಂದ ಗೆದ್ದು ಎರಡನೇ ಪಂದ್ಯದಲ್ಲಿ ಕಣಕ್ಕಿಳಿದಿತ್ತು. ಅದೇ ಆತ್ಮ ವಿಶ್ವಾಸದಿಂದ ಕಣಕ್ಕಿಳಿದ ಆಫ್ರಿಕಾ ತಂಡಕ್ಕೆ ಇಂಗ್ಲೆಂಡ್ ಬೌಲರ್‌ಗಳು ಈ ಭಾರಿ ಆಘಾತ ನೀಡಿದ್ದಾರೆ. ಜೇಮ್ಸ್ ಆಂಡರ್ಸನ್ ಹಾಗೂ ಸ್ಟುವರ್ಟ್ ಬ್ರಾಡ್ ತಲಾ ಮೂರು ವಿಕೆಟ್ ಪಡೆಯುವ ಮೂಲಕ ಆಘಾತ ನೀಡಿದ್ದಾರೆ.

ಬ್ಯಾಟಿಂಗ್ ಆರಂಭಿಸಿರುವ ಇಂಗ್ಲೆಂಡ್

ಬ್ಯಾಟಿಂಗ್ ಆರಂಭಿಸಿರುವ ಇಂಗ್ಲೆಂಡ್

ಇನ್ನು ಮೊದಲ ಇನ್ನಿಂಗ್ಸ್‌ನಲ್ಲಿ ದಕ್ಷಿಣ ಆಫ್ರಿಕಾ ತಂಡವನ್ನು ಬೇಗನೆ ಕಟ್ಟಿ ಹಾಕುವಲ್ಲಿ ಯಶಸ್ವಿಯಾಗಿರುವ ಇಂಗ್ಲೆಂಡ್ ತಂಡ ತನ್ನ ಬ್ಯಾಟಿಂಗ್ ಆರಂಭಿಸಿದೆ. ಮೊದಲ ಮೂರು ವಿಕೆಟ್‌ಗಳನ್ನು ಇಂಗ್ಲೆಂಡ್ ತಂಡ ಕೂಡ ಶೀಘ್ರವಾಗಿ ಕಳೆದುಕೊಂಡಿದ್ದು ನಂತರ ಜಾಕ್ ಕ್ರಾವ್ಲೆ ಹಾಗೂ ಜಾನಿ ಬೈರ್‌ಸ್ಟೋವ್ ಅವರಿಂದ ಉತ್ತಮ ಪ್ರದರ್ಶನದ ನಿರೀಕ್ಷೆ ಮೂಡಿಸಿದ್ದಾರೆ. ಈ ಜೋಡಿ ಎರಡನೇ ದಿನದಾಟಕ್ಕೆ ಕ್ರೀಸ್ ಕಾಯ್ದಿಸಿದ್ದಾರೆ. ಮೊದಲ ದಿನದಾಟದ ಅಂತ್ಯಕ್ಕೆ ಇಂಗ್ಲೆಂಡ್ 111 ರನ್‌ಗಳಿಗೆ 3ಬ ವಿಕೆಟ್ ಕಳೆದುಕೊಂಡಿದ್ದು 40 ರನ್‌ಗಳ ಹಿನ್ನಡೆಯಲ್ಲಿದೆ.

ದಾಖಲೆ ಬರೆದ ಆಂಡರ್ಸನ್

ದಾಖಲೆ ಬರೆದ ಆಂಡರ್ಸನ್

ಇಂಗ್ಲೆಂಡ್ ತಂಡದ ಅನುಭವಿ ವೇಗಿ ಜೇಮ್ಸ್ ಆಂಡರ್ಸನ್ ದಕ್ಷಿಣ ಆಫ್ರಿಕಾ ವಿರುದ್ಧದ ಟೆಸ್ಟ್ ಸರಣಿಯ ಎರಡನೇ ಪಂದ್ಯದಲ್ಲಿ ಕಣಕ್ಕಿಳಿಯುವ ಮೂಲಕ ಹೊಸ ವಿಶ್ವದಾಖಲೆಯೊಂದನ್ನು ಬರೆದಿದ್ದಾರೆ. ಟೆಸ್ಟ್ ಕ್ರಿಕೆಟ್‌ನ ಇತಿಹಾಸದಲ್ಲಿ ಈವರೆಗೆ ಯಾರಿಂದಲೂ ಸಾಧ್ಯವಾಗದ ವಿಶೇಷ ಸಾಧನೆಯನ್ನು ಮಾಡಿದ್ದಾರೆ ಆಂಡರ್ಸನ್. ತವರಿನಲ್ಲಿಯೇ 100 ಟೆಸ್ಟ್ ಪಂದ್ಯಗಳನ್ನಾಡಿದ ಮೊದಲ ಕ್ರಿಕೆಟಿಗ ಎಂಬ ಹೆಗ್ಗಳಿಕೆಯನ್ನು ಆಂಡರ್ಸನ್ ತಮ್ಮದಾಗಿಸಿಕೊಂಡಿದ್ದಾರೆ.

ಇತ್ತಂಡಗಳ ಸ್ಕ್ವಾಡ್ ಹೀಗಿದೆ

ಇತ್ತಂಡಗಳ ಸ್ಕ್ವಾಡ್ ಹೀಗಿದೆ

ಇಂಗ್ಲೆಂಡ್ ಆಡುವ ಬಳಗ: ಅಲೆಕ್ಸ್ ಲೀಸ್, ಝಾಕ್ ಕ್ರಾಲಿ, ಒಲ್ಲಿ ಪೋಪ್, ಜೋ ರೂಟ್, ಜಾನಿ ಬೈರ್‌ಸ್ಟೋವ್, ಬೆನ್ ಸ್ಟೋಕ್ಸ್ (ನಾಯಕ), ಬೆನ್ ಫೋಕ್ಸ್ (ವಿಕೆಟ್ ಕೀಪರ್), ಸ್ಟುವರ್ಟ್ ಬ್ರಾಡ್, ಆಲಿ ರಾಬಿನ್ಸನ್, ಜ್ಯಾಕ್ ಲೀಚ್, ಜೇಮ್ಸ್ ಆಂಡರ್ಸನ್
ಬೆಂಚ್: ಕ್ರೇಗ್ ಓವರ್ಟನ್, ಹ್ಯಾರಿ ಬ್ರೂಕ್, ಮ್ಯಾಟಿ ಪಾಟ್ಸ್ ದಕ್ಷಿಣ ಆಫ್ರಿಕಾ ಸ್ಕ್ವಾಡ್

ದಕ್ಷಿಣ ಆಫ್ರಿಕಾ ಆಡುವ ಬಳಗ: ಡೀನ್ ಎಲ್ಗರ್ (ನಾಯಕ), ಸರೆಲ್ ಎರ್ವೀ, ಕೀಗನ್ ಪೀಟರ್ಸನ್, ಐಡೆನ್ ಮಾರ್ಕ್ರಾಮ್, ರಾಸ್ಸಿ ವ್ಯಾನ್ ಡೆರ್ ಡಸ್ಸೆನ್, ಕೈಲ್ ವೆರ್ರೆನ್ನೆ (ವಿಕೆಟ್ ಕೀಪರ್), ಸೈಮನ್ ಹಾರ್ಮರ್, ಕೇಶವ್ ಮಹಾರಾಜ್, ಕಗಿಸೊ ರಬಾಡ, ಅನ್ರಿಚ್ ನಾರ್ಟ್ಜೆ, ಲುಂಗಿ ಎನ್‌ಗಿಡಿ
ಬೆಂಚ್: ಮಾರ್ಕೊ ಜಾನ್ಸೆನ್, ಖಯಾ ಝೊಂಡೋ, ಲುಥೋ ಸಿಪಾಮ್ಲಾ, ರಯಾನ್ ರಿಕೆಲ್ಟನ್, ಗ್ಲೆಂಟನ್ ಸ್ಟೌರ್ಮನ್

Story first published: Friday, August 26, 2022, 0:13 [IST]
Other articles published on Aug 26, 2022
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+