ಇಂಗ್ಲೆಂಡ್ vs ದ. ಆಫ್ರಿಕಾ 2ನೇ ಟೆಸ್ಟ್: 2ನೇ ದಿನ, ಮುನ್ನಡೆ ಸಾಧಿಸಿದ ಇಂಗ್ಲೆಂಡ್, Live ಸ್ಕೋರ್

ಇಂಗ್ಲೆಂಡ್ ಹಾಗೂ ದಕ್ಷಿಣ ಆಫ್ರಿಕಾ ವಿರುದ್ಧದ ಟೆಸ್ಟ್ ಸರಣಿಯ ಎರಡನೇ ಪಂದ್ಯದಲ್ಲಿ ಇಂಗ್ಲೆಂಡ್ ತಂಡ ಮೊದಲ ಇನ್ನಿಂಗ್ಸ್‌ನಲ್ಲಿ ಮುನ್ನಡೆ ಸಾಧಿಸಿದೆ. ಎರಡನೇ ದಿನದಾಟ ಆರಂಭವಾಗಿದ್ದು ಹೆಚ್ಚಿನ ಅಂತರದ ಮುನ್ನಡೆಯೊಂದಿಗೆ ಪಂದ್ಯದಲ್ಲಿ ಸಂಪೂರ್ಣ ಹಿಡಿತ ಸಾಧಿಸುವ ಗುರಿ ಹೊಂದಿದೆ.
ಇಂಗ್ಲೆಂಡ್ ತಂಡ ಮೊದಲ ದಿನದಾಟದಲ್ಲಿ ಅದ್ಭುತ ಪ್ರದರ್ಶನ ನೀಡಿದ್ದು ಬೌಲಿಂಗ್‌ನಲ್ಲಿ ಭರ್ಜರಿ ಪ್ರದರ್ಶನ ನೀಡುವಲ್ಲಿ ಯಶಸ್ವಿಯಾಗಿತ್ತು. ಅದರಲ್ಲೂ ಸ್ಟುವರ್ಟ್ ಬ್ರಾಡ್ ಹಾಗೂ ಜೇಮ್ಸ್ ಆಂಡರ್ಸನ್ ಅವರ ಬೌಲಿಂಗ್ ದಾಳಿಗೆ ದಕ್ಷಿಣ ಆಫ್ರಿಕಾ ತಂಡದ ದಾಂಡಿಗರು ಸಂಪೂರ್ಣವಾಗಿ ನಿರುತ್ತರವಾಗಿದ್ದರು. ದಕ್ಷಿಣ ಆಪ್ರಿಕಾದ ಯಾವ ಬ್ಯಾಟ್ಸ್‌ಮನ್ ಕೂಡ ದೊಡ್ಡ ಮೊತ್ತದ ಕೊಡುಗೆ ನೀಡಲು ಸಾಧ್ಯವಾಗಲೇ ಇಲ್ಲ. ಇದರ ಪರಿಣಾಮವಾಗಿ 53.2 ಓವರ್‌ಗಳಲ್ಲಿ ದಕ್ಷಿಣ ಆಫ್ರಿಕಾ ತನ್ನ ಮೊದಲ ಇನ್ನಿಂಗ್ಸ್‌ನ ಬ್ಯಾಟಿಂಗ್ ಮುಗಿಸಿದೆ. 151 ರನ್‌ಗಳಿಗೆ ಆಲೌಟ್ ಆಗುವ ಮೂಲಕ ನಿರಾಸೆ ಅನುಭವಿಸಿತು.
ಸ್ಕೋರ್‌ಕಾರ್ಡ್ ಹೀಗಿದೆ
Live

ಆಘಾತಕ್ಕೆ ಒಳಗಾದ ದ. ಆಫ್ರಿಕಾ
ಲಾರ್ಡ್ಸ್ ಅಂಗಳದಲ್ಲಿ ನಡೆದ ಮೊದಲ ಟೆಸ್ಟ್ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ತಂಡ ಅದ್ಭುತ ಪ್ರದರ್ಶನ ನೀಡುವ ಮೂಲಕ ಆತಿಥೇಯ ಇಂಗ್ಲೆಂಡ್‌ಗೆ ಮುಖಭಂಗವನ್ನುಂಟು ಮಾಡಿತ್ತು. ಅಮೋಘ ಬೌಲಿಂಗ್ ಪ್ರದರ್ಶನದಿಂದಾಗಿ ಇನ್ನಿಂಗ್ಸ್ ಹಾಗೂ 12 ರನ್‌ಗಳ ಅಂತರದಿಂದ ಗೆದ್ದು ಎರಡನೇ ಪಂದ್ಯದಲ್ಲಿ ಕಣಕ್ಕಿಳಿದಿತ್ತು. ಅದೇ ಆತ್ಮ ವಿಶ್ವಾಸದಿಂದ ಕಣಕ್ಕಿಳಿದ ಆಫ್ರಿಕಾ ತಂಡಕ್ಕೆ ಇಂಗ್ಲೆಂಡ್ ಬೌಲರ್‌ಗಳು ಈ ಭಾರಿ ಆಘಾತ ನೀಡಿದ್ದಾರೆ. ಜೇಮ್ಸ್ ಆಂಡರ್ಸನ್ ಹಾಗೂ ಸ್ಟುವರ್ಟ್ ಬ್ರಾಡ್ ತಲಾ ಮೂರು ವಿಕೆಟ್ ಪಡೆಯುವ ಮೂಲಕ ಆಘಾತ ನೀಡಿದ್ದಾರೆ.

ಇಂಗ್ಲೆಂಡ್ ಪ್ಲೇಯಿಂಗ್ XI ಹೀಗಿದೆ
ಇಂಗ್ಲೆಂಡ್: ಅಲೆಕ್ಸ್ ಲೀಸ್, ಝಾಕ್ ಕ್ರಾಲಿ, ಒಲ್ಲಿ ಪೋಪ್, ಜೋ ರೂಟ್, ಜಾನಿ ಬೈರ್‌ಸ್ಟೋವ್, ಬೆನ್ ಸ್ಟೋಕ್ಸ್ (ನಾಯಕ), ಬೆನ್ ಫೋಕ್ಸ್ (ವಿಕೆಟ್ ಕೀಪರ್), ಸ್ಟುವರ್ಟ್ ಬ್ರಾಡ್, ಆಲಿ ರಾಬಿನ್ಸನ್, ಜ್ಯಾಕ್ ಲೀಚ್, ಜೇಮ್ಸ್ ಆಂಡರ್ಸನ್
ಬೆಂಚ್: ಕ್ರೇಗ್ ಓವರ್ಟನ್, ಹ್ಯಾರಿ ಬ್ರೂಕ್, ಮ್ಯಾಟಿ ಪಾಟ್ಸ್ ದಕ್ಷಿಣ ಆಫ್ರಿಕಾ ಸ್ಕ್ವಾಡ್

ದಕ್ಷಿಣ ಆಫ್ರಿಕಾ ಪ್ಲೇಯಿಂಗ್ XI ಹೀಗಿದೆ
ದಕ್ಷಿಣ ಆಫ್ರಿಕಾ: ಡೀನ್ ಎಲ್ಗರ್ (ನಾಯಕ), ಸರೆಲ್ ಎರ್ವೀ, ಕೀಗನ್ ಪೀಟರ್ಸನ್, ಐಡೆನ್ ಮಾರ್ಕ್ರಾಮ್, ರಾಸ್ಸಿ ವ್ಯಾನ್ ಡೆರ್ ಡಸ್ಸೆನ್, ಕೈಲ್ ವೆರ್ರೆನ್ನೆ (ವಿಕೆಟ್ ಕೀಪರ್), ಸೈಮನ್ ಹಾರ್ಮರ್, ಕೇಶವ್ ಮಹಾರಾಜ್, ಕಗಿಸೊ ರಬಾಡ, ಅನ್ರಿಚ್ ನಾರ್ಟ್ಜೆ, ಲುಂಗಿ ಎನ್‌ಗಿಡಿ
ಬೆಂಚ್: ಮಾರ್ಕೊ ಜಾನ್ಸೆನ್, ಖಯಾ ಝೊಂಡೋ, ಲುಥೋ ಸಿಪಾಮ್ಲಾ, ರಯಾನ್ ರಿಕೆಲ್ಟನ್, ಗ್ಲೆಂಟನ್ ಸ್ಟೌರ್ಮನ್
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications