ಇಂಗ್ಲೆಂಡ್ vs ದಕ್ಷಿಣ ಆಫ್ರಿಕಾ, 3ನೇ ಟೆಸ್ಟ್: 4ನೇ ದಿನ, ಇಂಗ್ಲೆಂಡ್‌ಗೆ ಅಲ್ಪ ಮುನ್ನಡೆ

ಇಂಗ್ಲೆಂಡ್ ಹಾಗೂ ದಕ್ಷಿಣ ಆಫ್ರಿಕಾ ವಿರುದ್ಧದ ಟೆಸ್ಟ್ ಸರಣಿಯ ನಾಲ್ಕನೇ ದಿನದಾಟ ಆರಂಭವಾಗಿದೆ. ಮೊದಲ ಇನ್ನಿಂಗ್ಸ್‌ನಲ್ಲಿ ದಕ್ಷಿಣ ಆಫ್ರಿಕಾ ತಂಡವನ್ನು ಅಲ್ಪ ಮೊತ್ತಕ್ಕೆ ಕಟ್ಟಿಹಾಕುವಲ್ಲಿ ಯಶಸ್ವಿಯಾಗಿತ್ತು. ಆದರೆ ಬೌಲರ್‌ಗಳ ಈ ಅದ್ಭುತ ಪ್ರದರ್ಶನಕ್ಕೆ ಪ್ರತಿಯಾಗಿ ಬ್ಯಾಟರ್‌ಗಳಿಂದ ನಿರೀಕ್ಷಿತ ಪ್ರದರ್ಶನ ಬಾರಲಿಲ್ಲ. ಹೀಗಾಗಿ ಮೊದಲ ಇನ್ನಿಂಗ್ಸ್‌ನಲ್ಲಿ ಅಲ್ಪ ಮುನ್ನಡೆ ಪಡೆಯಲಷ್ಟೇ ಇಂಗ್ಲೆಂಡ್ ಶಕ್ತವಾಯಿತು.

ಇಂಗ್ಲೆಂಡ್ ಹಾಗೂ ದಕ್ಷಿಣ ಆಫ್ರಿಕಾ ವಿರುದ್ಧದ ಟೆಸ್ಟ್ ಸರಣಿಯ ಅಂತಿಮ ಪಂದ್ಯದ ಮೊದಲ ದಿನದಾಟ ಸಂಪೂರ್ಣವಾಗಿ ಮಳೆಯಿಂದಾಗಿ ನಡೆಯಲಿಲ್ಲ. ಇನ್ನು ಬ್ರಿಟನ್ ರಾಣಿ ಎಲಿಜಬೆತ್ ನಿಧನದ ಕಾರಣದಿಂದಾಗಿ ಎರಡನೇ ದಿನದಾಟವನ್ನು ರದ್ದುಗೊಳಿಸಲಾಗಿತ್ತು. ಹೀಗಾಗಿ ಮೂರನೇ ದಿನದಿಂದ ಈ ಪಂದ್ಯ ಆರಂಭವಾಗಿದ್ದರೂ ಸಾಕಷ್ಟು ಪೈಪೋಟಿ ಕಂಡು ಬರುತ್ತಿದೆ. ಪಿಚ್ ಬೌಲಿಂಗ್ ವಿಭಾಗಕ್ಕೆ ನೆರವಾಗುತ್ತಿದ್ದು ಬ್ಯಾಟರ್‌ಗಳು ಕ್ರೀಸ್‌ನಲ್ಲಿ ನಿಲ್ಲಲು ತಿಣುಕಾಡುತ್ತಿರುವುದು ಸ್ಪಷ್ಟವಾಗುತ್ತಿದೆ.

Live ಸ್ಕೋರ್‌ಕಾರ್ಡ್ ಹೀಗಿದೆ

1
51793

ದಕ್ಷಿಣ ಆಫ್ರಿಕಾ 118 ರನ್‌ಗಳಿಗೆ ಆಲೌಟ್: ಇನ್ನು ಪಂದ್ಯದಲ್ಲಿ ಮೊದಲಿಗೆ ಬ್ಯಾಟಿಂಗ್ ನಡೆಸಿದ ದಕ್ಷಿಣ ಆಫ್ರಿಕಾ ಕೇವಲ 118 ರನ್‌ಗಳನ್ನಷ್ಟೇ ಗಳಿಸಲು ಶಕ್ತವಾಯಿತು. ಯಾವ ದಾಂಡಿಗ ಕೂಡ ಕ್ರೀಸ್‌ನಲ್ಲಿ ಹೆಚ್ಚು ಹೊತ್ತು ನಿಲ್ಲಲಲು ಸಾಧ್ಯವಾಗಲಿಲ್ಲ. ಇಂಗ್ಲೆಂಡ್ ವೇಗಿ ರಾಬಿನ್ಸನ್ ಅದ್ಭುತ ಪ್ರದರ್ಶನ ನೀಡುವ ಮೂಲಕ ಆಫ್ರಿಕಾ ದಾಂಡಿಗರಿಗೆ ಆಘಾತ ನೀಡಿದರು. ಈ ಪಂದ್ಯದಲ್ಲಿ ರಾಬಿನ್ಸನ್ ಐದು ವಿಕೆಟ್ ಸಂಪಾದಿಸಿದ್ದಾರೆ. ಇನ್ನು ಮತ್ತೋರ್ವ ಅನುಭವಿ ವೇಗಿ ಸ್ಟುವರ್ಟ್ ಬ್ರಾಡ್ ನಾಲ್ಕು ವಿಕೆಟ್ ಸಂಪಾದಿಸಿದರು.

RSWS-2: ಸ್ಟುವರ್ಟ್ ಬಿನ್ನಿ ಅಬ್ಬರಕ್ಕೆ ಒಲಿದ ಜಯ: ಇಂಡಿಯಾ ಲೆಜೆಂಡ್ಸ್‌ಗೆ ಸಾಟಿಯಾಗದ ದ. ಆಫ್ರಿಕಾ ದಿಗ್ಗಜರು!RSWS-2: ಸ್ಟುವರ್ಟ್ ಬಿನ್ನಿ ಅಬ್ಬರಕ್ಕೆ ಒಲಿದ ಜಯ: ಇಂಡಿಯಾ ಲೆಜೆಂಡ್ಸ್‌ಗೆ ಸಾಟಿಯಾಗದ ದ. ಆಫ್ರಿಕಾ ದಿಗ್ಗಜರು!

ಇನ್ನು ನಂತರ ಬ್ಯಾಟಿಂಗ್ ನಡೆಸಿದ ಇಂಗ್ಲೆಂಡ್ ತಂಡ ಕೂಡ ಹೇಳಿಕೊಳ್ಳುವಂತಾ ಪ್ರದರ್ಶನ ನೀಡಲು ವಿಫಲವಾಗಿದೆ. ಒಲ್ಲಿ ಪೋಪ್ 67 ರನ್‌ಗಳ ಕೊಡುಗೆ ನೀಡಿದ್ದು ಹೊರತುಪಡಿಸಿದರೆ ಉಳಿದ ಎಲ್ಲಾ ಆಟಗಾರರು ಕೂಡ ವೈಫಲ್ಯ ಅನುಭವಿಸಿದರು. ಇದರ ಪರಿಣಾಮವಾಗಿ ದಕ್ಷಿಣ ಆಫ್ರಿಕಾ ತಂಡವನ್ನು ಅತ್ಯಲ್ಪ ಮೊತ್ತಕ್ಕೆಕಟ್ಟಿ ಹಾಕಿದ್ದರೂ ಇಂಗ್ಲೆಂಡ್ ತಂಡ ಕೇವಲ 40 ರನ್‌ಗಳ ಮುನ್ನಡೆಯನ್ನಷ್ಟೇ ಪಡೆದುಕೊಂಡಿದೆ. ದಕ್ಷಿಣ ಆಪ್ರಿಕಾ ಪರವಾಗಿ ಮಾರ್ಕೋ ಜಾನ್ಸನ್ ಐದು ವಿಕೆಟ್ ಸಂಪಾದಿಸಿದರೆ ಕಗಿಸೋ ರಬಾಡಾ 4 ವಿಕೆಟ್ ಕಿತ್ತರು.

ಮೂರು ಪಂದ್ಯಗಳ ಈ ಸರಣಿಯಲ್ಲಿ ಎರಡು ಪಂದ್ಯಗಳು ಈಗಾಗಲೇ ಮುಕ್ತಾಯವಾಗಿದೆ. ಮೊದಲ ಪಂದ್ಯದಲ್ಲಿ ಪ್ರವಾಸಿ ದಕ್ಷಿಣ ಆಫ್ರಿಕಾ ಭರ್ಜರಿ ಗೆಲುವು ಸಾಧಿಸಿದ್ದರೆ ಎರಡನೇ ಪಂದ್ಯದಲ್ಲಿ ಇಂಗ್ಲೆಂಡ್ ತಂಡ ಅಮೋಘ ಜಯ ಸಾಧಿಸಿದೆ. ಈ ಮೂಲಕ ಸರಣಿ ಈಗ ಸಮಬಲದಲ್ಲಿದ್ದು ಕೆನ್ನಿಂಗ್ಟನ್ ಓವಲ್‌ನಲ್ಲಿ ನಡೆಯುವ ಈ ಪಂದ್ಯ ಕುತೂಹಲ ಹೆಚ್ಚಿಸಿದೆ.

ಇಂಗ್ಲೆಂಡ್ ಆಡುವ ಬಳಗ
ಇಂಗ್ಲೆಂಡ್: ಅಲೆಕ್ಸ್ ಲೀಸ್, ಝಾಕ್ ಕ್ರಾಲಿ, ಒಲ್ಲಿ ಪೋಪ್, ಜೋ ರೂಟ್, ಹ್ಯಾರಿ ಬ್ರೂಕ್, ಬೆನ್ ಸ್ಟೋಕ್ಸ್ (ನಾಯಕ), ಬೆನ್ ಫೋಕ್ಸ್ (ವಿಕೆಟ್ ಕೀಪರ್), ಸ್ಟುವರ್ಟ್ ಬ್ರಾಡ್, ಆಲಿ ರಾಬಿನ್ಸನ್, ಜ್ಯಾಕ್ ಲೀಚ್, ಜೇಮ್ಸ್ ಆಂಡರ್ಸನ್
ಬೆಂಚ್: ಬೆನ್ ಡಕೆಟ್, ಕ್ರೇಗ್ ಓವರ್ಟನ್, ಮ್ಯಾಟಿ ಪಾಟ್ಸ್

ದಕ್ಷಿಣ ಆಫ್ರಿಕಾ ಆಡುವ ಬಳಗ
ದಕ್ಷಿಣ ಆಫ್ರಿಕಾ: ಡೀನ್ ಎಲ್ಗರ್ (ನಾಯಕ), ಸರೆಲ್ ಎರ್ವೀ, ಕೀಗನ್ ಪೀಟರ್ಸನ್, ರಿಯಾನ್ ರಿಕೆಲ್ಟನ್, ಖಯಾ ಜೊಂಡೋ, ಕೈಲ್ ವೆರ್ರೆನ್ನೆ (ವಿಕೆಟ್ ಕೀಪರ್), ವಿಯಾನ್ ಮುಲ್ಡರ್, ಮಾರ್ಕೊ ಜಾನ್ಸೆನ್, ಕೇಶವ್ ಮಹಾರಾಜ್, ಕಗಿಸೊ ರಬಾಡಾ, ಅನ್ರಿಚ್ ನಾರ್ಟ್ಜೆ
ಬೆಂಚ್: ಐಡೆನ್ ಮಾರ್ಕ್ರಾಮ್, ಸೈಮನ್ ಹಾರ್ಮರ್, ಲುಂಗಿ ಎನ್ಗಿಡಿ, ಲುಥೋ ಸಿಪಾಮ್ಲಾ, ಗ್ಲೆಂಟನ್ ಸ್ಟೌರ್ಮನ್

For Quick Alerts
Subscribe Now
For Quick Alerts
ALLOW NOTIFICATIONS
For Daily Alerts
Story first published: Sunday, September 11, 2022, 16:07 [IST]
Other articles published on Sep 11, 2022

Latest Videos

  + More
  POLLS
  ತಾಜಾ ಸುದ್ದಿ ತಕ್ಷಣ ಪಡೆಯಿರಿ
  Enable
  x
  Notification Settings X
  Time Settings
  Done
  Clear Notification X
  Do you want to clear all the notifications from your inbox?
  Yes No
  Settings X