ENG vs SA ಪ್ರಥಮ ಏಕದಿನ: ಬೆನ್ ಸ್ಟೋಕ್ಸ್ ಅಂತಿಮ ಏಕದಿನ ಪಂದ್ಯದ ಟಾಸ್ ವರದಿ ಮತ್ತು ಲೈವ್ ಸ್ಕೋರ್

ಇತ್ತೀಚೆಗಷ್ಟೇ ಇಂಗ್ಲೆಂಡ್ ಪ್ರವಾಸವನ್ನು ಕೈಗೊಂಡಿದ್ದ ಟೀಮ್ ಇಂಡಿಯಾ ವಿರುದ್ಧ ಟಿ ಟ್ವೆಂಟಿ ಹಾಗೂ ಏಕದಿನ ಎರಡೂ ಸರಣಿಗಳಲ್ಲಿಯೂ ಸೋತು ಮುಖಭಂಗಕ್ಕೊಳಗಾದ ಇಂಗ್ಲೆಂಡ್ ಇದೀಗ ಪ್ರವಾಸ ಕೈಗೊಂಡಿರುವ ದಕ್ಷಿಣ ಆಫ್ರಿಕಾ ವಿರುದ್ಧ 3 ಪಂದ್ಯಗಳ ಏಕದಿನ ಸರಣಿ, 3 ಪಂದ್ಯಗಳ ಟಿ ಟ್ವೆಂಟಿ ಸರಣಿ ಹಾಗೂ 3 ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ಕಣಕ್ಕಿಳಿಯುತ್ತಿದೆ.
ಮೊದಲಿಗೆ ಇತ್ತಂಡಗಳ ನಡುವಿನ 3 ಪಂದ್ಯಗಳ ಏಕದಿನ ಸರಣಿ ಜರುಗಲಿದ್ದು, ಈ ಸರಣಿಯ ಪ್ರಥಮ ಪಂದ್ಯ ಇಂದು ( ಜುಲೈ 19 ) ಚೆಸ್ಟರ್ ಲೇ ಸ್ಟ್ರೀಟ್‌ನ ರಿವರ್ ಸೈಡ್ ಅಂತಾರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದಲ್ಲಿ ಜರುಗುತ್ತಿದೆ. ಪಂದ್ಯದಲ್ಲಿ ಟಾಸ್ ಗೆದ್ದಿರುವ ದಕ್ಷಿಣ ಆಫ್ರಿಕಾ ತಂಡದ ನಾಯಕ ಕೇಶವ್ ಮಹರಾಜ್ ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದ್ದಾರೆ.
ದಕ್ಷಿಣ ಆಫ್ರಿಕಾ ಮತ್ತು ಇಂಗ್ಲೆಂಡ್ ತಂಡಗಳ ನಡುವಿನ ಪ್ರಥಮ ಏಕದಿನ ಪಂದ್ಯ ಲೈವ್ ಸ್ಕೋರ್ ಕೆಳಕಂಡಂತಿದೆ.
Story first published: Tuesday, July 19, 2022, 17:42 [IST]
Other articles published on Jul 19, 2022
Log in for Better Reading Experience!
By signing in, you agree to our Terms and Privacy Policy
Gender
Select your Gender
- Male
- Female
- Others
Age
Select your Age Range
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications