Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

ಇಂಗ್ಲೆಂಡ್ vs ವಿಂಡೀಸ್ 2ನೇ ಟೆಸ್ಟ್ : ವಿಂಡೀಸ್ ತಂಡವನ್ನು 287 ರನ್‌ಗೆ ಕಟ್ಟಿ ಹಾಕಿದ ಇಂಗ್ಲೆಂಡ್

England Vs West Indies 2nd Test 4th day Live Score Old Trafford

ಇಂಗ್ಲೆಂಡ್ ಹಾಗೂ ವೆಸ್ಟ್ ಇಂಡೀಸ್ ಪಂದ್ಯಕ್ಕೆ ಮಳೆ ಇನ್ನಿಲ್ಲದಂತೆ ಕಾಡುತ್ತಿದೆ. ಮೂರನೇ ದಿನದಾಟ ಸಂಪೂರ್ಣವಾಗಿ ಮಳೆಗೆ ಆಹುತಿಯಾದ ನಂತರ ಇಂದು ನಾಲ್ಕನೇ ದಿನದಾಟಕ್ಕೆ ಆರಂಭವಾಗಿದೆ. ಆದರೆ ಇಂದಿನ ಪಂದ್ಯಕ್ಕೂ ಮಳೆಯ ಆತಂಕ ಕಾಡುತ್ತಿದೆ.

Live ಸ್ಕೋರ್ ಪಟ್ಟಿ ಹೀಗಿದೆ:

1
46754

ಮೊದಲ ಇನ್ನಿಂಗ್ಸ್‌ನಲ್ಲಿ ಇಂಗ್ಲೆಂಡ್ ಆರಂಭಿಕ ಆಘಾತದ ನಂತರ ಅದ್ಭುತ ರೀತಿಯಲ್ಲಿ ತಿರುಗೇಟು ನೀಡಲು ಯಶಸ್ವಿಯಾಗಿತ್ತು. ಡಾಮಿನಿಕ್ ಸಿಬ್ಲಿ ಹಾಗೂ ಬೆನ್ ಸ್ಟೋಕ್ಸ್ ಶತಕದ ನೆರವಿನಿಂದ ಇಂಗ್ಲೆಂಡ್ ಮೊದಲ ಇನ್ನಿಂಗ್ಸ್‌ನಲ್ಲಿ ಬೃಹತ್ ಮೊತ್ತವನ್ನು ಪೇರಿಸುವಲ್ಲಿ ಯಶಸ್ವಿಯಾಗಿದೆ.

ಇದನ್ನು ಬೆನ್ನಟ್ಟಿರುವ ವೆಸ್ಟ್ ಇಂಡಿಸ್ ತಂಡ ತನ್ನ ಮೊದಲ ವಿಕೆಟ್ ಕಳೆದುಕೊಂಡಿದೆ. ಆದರೆ ಮೂರನೇ ದಿನದಾಟ ಒಂದೂ ಎಸೆತ ಕಾಣದೆ ಮುಂದೂಡಲ್ಪಟ್ಟ ಕಾರಣ ಪಂದ್ಯ ಫಲಿತಾಂಶ ಕಾಣದೇ ಡ್ರಾ ಆಗುವ ಸಾಧ್ಯತೆಯೇ ಹೆಚ್ಚಾಗಿದೆ. ಅದ್ಭುತ ಬ್ಯಾಟಿಂಗ್ ನಂತರ ಪಂದ್ಯದಲ್ಲಿ ಹಿಡಿತ ಸಾಧಿಸಿದ್ದ ಆತಿಥೇಯರಿಗೆ ಮಳೆರಾಯ ಅಡ್ಡಿಯಾಗಿದ್ದಾನೆ.

ಟಾಸ್ ಗೆದ್ದ ವೆಸ್ಟ್ ಇಂಡೀಸ್ ತಂಡ ಮೊದಲಿಗೆ ಬೌಲಿಂಗ್ ಆಯ್ಕೆ ಮಾಡಿಕೊಂಡಿತ್ತು. ಇಂಗ್ಲೆಂಡ್ ಮೊದಲ ಇನ್ನಿಂಗ್ಸ್‌ನಲ್ಲಿ 469 ರನ್ ಗಳಿಸಿದ್ದರೆ ವೆಸ್ಟ್ ಇಂಡೀಸ್ ಮೊದಲ ಇನ್ನಿಂಗ್ಸ್‌ನಲ್ಲಿ 14 ಓವರ್‌‌ಗಳ ಆಟವನ್ನಷ್ಟೇ ಆಡಲು ಸಾಧ್ಯವಾಗಿದ್ದು 32 ರನ್‌ಗೆ 1 ವಿಕೆಟ್ ಕಳೆದುಕೊಂಡಿದೆ.

ಇಂಗ್ಲೆಂಡ್ ತಂಡದ ಆಡುವ ಬಳಗ: ರೋರಿ ಬರ್ನ್ಸ್, ಡೊಮಿನಿಕ್ ಸಿಬ್ಲಿ, ಜಾಕ್ ಕ್ರಾಲೆ, ಜೋ ರೂಟ್ (ನಾಯಕ), ಬೆನ್ ಸ್ಟೋಕ್ಸ್, ಆಲ್ಲಿ ಪೋಪ್, ಜೋಸ್ ಬಟ್ಲರ್ (ವಿಕೆಟ್ ಕೀಪರ್), ಕ್ರಿಸ್ ವೋಕ್ಸ್, ಸ್ಯಾಮ್ ಕುರ್ರನ್, ಡೊಮಿನಿಕ್ ಬೆಸ್, ಸ್ಟುವರ್ಟ್ ಬ್ರಾಡ್

ವೆಸ್ಟ್ ಇಂಡೀಸ್ ತಂಡದ ಆಡುವ ಬಳಗ: ಕ್ರೇಗ್ ಬ್ರಾಥ್‌ವೈಟ್, ಜಾನ್ ಕ್ಯಾಂಪ್‌ಬೆಲ್, ಶಾಯ್ ಹೋಪ್, ಶಮರ್ ಬ್ರೂಕ್ಸ್, ರೋಸ್ಟನ್ ಚೇಸ್, ಜೆರ್ಮೈನ್ ಬ್ಲ್ಯಾಕ್‌ವುಡ್, ಶೇನ್ ಡೌರಿಚ್ (ವಿಕೆಟ್ ಕೀಪರ್), ಜೇಸನ್ ಹೋಲ್ಡರ್ (ನಾಯಕ), ಅಲ್ಜಾರಿ ಜೋಸೆಫ್, ಕೆಮರ್ ರೋಚ್, ಶಾನನ್ ಗೇಬ್ರಿಯಲ್

Story first published: Monday, July 20, 2020, 15:25 [IST]
Other articles published on Jul 20, 2020
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+