For Quick Alerts
ALLOW NOTIFICATIONS  
For Daily Alerts
 

ವೆಸ್ಟ್ ಇಂಡೀಸ್ vs ಇಂಗ್ಲೆಂಡ್ 2ನೇ ಟೆಸ್ಟ್ ಪಂದ್ಯ ಕೂಡ ಡ್ರಾನಲ್ಲಿ ಅಂತ್ಯ

Eng vs WI 2nd test match

ಬಾರ್ಬಡೋಸ್‌ನ ಕೆನ್ನಿಂಗ್ಟನ್‌ ಓವಲ್ ಮೈದಾನದಲ್ಲಿ ನಡೆಯುತ್ತಿದ್ದ ಇಂಗ್ಲೆಂಡ್ ಹಾಗೂ ವೆಸ್ಟ್ ಇಂಡೀಸ್ ನಡುವಿನ ಎರಡನೇ ಟೆಸ್ಟ್ ಪಂದ್ಯ ಕೂಡ ಡ್ರಾನಲ್ಲಿ ಅಂತ್ಯಗೊಂಡಿದೆ. ಇಂಗ್ಲೆಂಡ್ ನೀಡಿದ್ದ ಬೃಹತ್ ಮೊತ್ತ ಬೆನ್ನತ್ತುವಲ್ಲಿ ವಿಫಲಗೊಂಡಿದ್ದ ವಿಂಡೀಸ್, ಪಂದ್ಯವನ್ನ ಡ್ರಾ ಮಾಡಿಕೊಳ್ಳುವಲ್ಲಿ ಯಶಸ್ವಿಯಾಗಿತು.

ಪಂದ್ಯ ಮುಕ್ತಾಯದ ವೇಳೆಗೆ ವೆಸ್ಟ್‌ ಇಂಡೀಸ್ ಎರಡನೇ ಇನ್ನಿಂಗ್ಸ್ 5 ವಿಕೆಟ್ ನಷ್ಟಕ್ಕೆ 135 ರನ್ ಕಲೆಹಾಕಿತು. ಮತ್ತೊಮ್ಮೆ ಆರಂಭಿಕ ಆಘಾತದ ನಡುವೆ ಮಧ್ಯಮ ಕ್ರಮಾಂಕದ ಬ್ಯಾಟ್ಸ್‌ಮನ್‌ಗಳ ವೈಫಲ್ಯ ತಂಡವನ್ನ ಕಾಡಿತು.

ವಿಂಡೀಸ್ ನಾಯಕ ಕ್ರೈಗ್ ಬ್ರಾಥ್‌ವೈಟ್ ಅಜೇಯ 56 ರನ್ ಕಲೆಹಾಕುವ ಮೂಲಕ ತಂಡವನ್ನ ಸೋಲಿನಿಂದ ಪಾರುಮಾಡಿದ್ರು. ವಿಕೆಟ್ ಕೀಪರ್ ಬ್ಯಾಟ್ಸ್‌ಮನ್ ಜೊಶುವಾ ಡಿಸಿಲ್ವಾ ಅಜೇಯ 30 ರನ್ ಕಲೆಹಾಕಿದರು. ಆದ್ರೆ ಜಾನ್ ಕ್ಯಾಂಪ್‌ಬೆಲ್ 10, ಶಮರ್ ಬ್ರೂಕ್ಸ್ 4, ಎನ್ಕ್ರುಮಾ ಬೊನ್ನರ್ 3, ಜರ್ಮೈನ್ ಬ್ಲಾಕ್‌ವುಡ್ 27, ಜೇಸನ್ ಹೋಲ್ಡರ್ ಶೂನ್ಯಕ್ಕೆ ವಿಕೆಟ್ ಒಪ್ಪಸಿದ್ರು. ಇಂಗ್ಲೆಂಡ್ ಪರ ಜ್ಯಾಕ್ ಲೀಚ್ 3 ವಿಕೆಟ್ ಕಬಳಿಸಿದ್ರೆ, ಶಕೀಬ್ ಮೊಹಮ್ಮದ್ 2 ವಿಕೆಟ್ ಪಡೆದಿದ್ದಾರೆ.

ಇದಕ್ಕೂ ಮೊದಲು ಟಾಸ್ ಗೆದ್ದ ಇಂಗ್ಲೆಂಡ್ ಮೊದಲು ಬ್ಯಾಟಿಂಗ್ ಮಾಡಿ ಮೊದಲನೇ ಇನ್ನಿಂಗ್ಸ್‌ನಲ್ಲಿ ನಾಯಕ ಜೋ ರೂಟ್ ಮತ್ತು ಆಲ್ ರೌಂಡರ್ ಆಟಗಾರ ಬೆನ್ ಸ್ಟೋಕ್ಸ್ ಅವರ ಭರ್ಜರಿ ಶತಕಗಳ ನೆರವಿನಿಂದ 9 ವಿಕೆಟ್ ನಷ್ಟಕ್ಕೆ 507 ರನ್ ಕಲೆಹಾಕಿತು.

ಇಂಗ್ಲೆಂಡ್ ತಂಡದ ಬ್ಯಾಟಿಂಗ್‌ಗೆ ಉತ್ತರವಾಗಿ ವೆಸ್ಟ್ ಇಂಡೀಸ್ ತಂಡಕ್ಕೆ ಕ್ರೇಗ್ ಬ್ರಾಥ್ ವೈಟ್ ಹಾಗೂ ಬ್ಲ್ಯಾಕ್‌ವುಡ್ ನೆರವಾದರು. ಇಬ್ಬರು ಕೂಡ ಭರ್ಜರಿ ಶತಕ ಸಿಡಿಸಿದ್ದು ಬ್ರಾಥ್‌ವೈಟ್ 160 ರನ್‌ಗಳಿಸಿದ್ದರೆ ಜರ್ಮೈನ್ ಬ್ಲ್ಯಾಕ್ ವುಡ್ 102 ರನ್ ಗಳಿಸಿ ತಂಡಕ್ಕೆ ನೆರವಾದರು. ಈ ಮೂಲಕ ವೆಸ್ಟ್ ಇಂಡೀಸ್ ಮೊದಲ ಇನ್ನಿಂಗ್ಸ್‌ನಲ್ಲಿ 411 ರನ್‌ಗಳನ್ನು ಗಳಿಸಲು ಸಾಧ್ಯವಾಯಿತು. ಇಂಗ್ಲೆಂಡ್ ಎರಡನೇ ಇನ್ನಿಂಗ್ಸ್ 6 ವಿಕೆಟ್ ನಷ್ಟಕ್ಕೆ 185 ರನ್ ಕಲೆಹಾಕುವ ಮೂಲಕ ಡಿಕ್ಲೇರ್ ಮಾಡಿಕೊಂಡಿತು.

ಮೂರು ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ಮೊದಲೆರಡು ಪಂದ್ಯಗಳು ಡ್ರಾನಲ್ಲಿ ಅಂತ್ಯಗೊಂಡಿದ್ದು, ಮೂರನೇ ಟೆಸ್ಟ್ ಪಂದ್ಯ ಗ್ರೆನಡಾದ ನ್ಯಾಷನಲ್ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆಯಲಿದೆ.

ಇಂಗ್ಲೆಂಡ್ ಪ್ಲೇಯಿಂಗ್ 11: ಅಲೆಕ್ಸ್ ಲೀಸ್, ಝಾಕ್ ಕ್ರಾಲಿ, ಜೋ ರೂಟ್ (ನಾಯಕ), ಡೇನಿಯಲ್ ಲಾರೆನ್ಸ್, ಬೆನ್ ಸ್ಟೋಕ್ಸ್, ಜಾನಿ ಬೈರ್‌ಸ್ಟೋ, ಬೆನ್ ಫೋಕ್ಸ್ (ವಿಕೆಟ್ ಕೀಪರ್), ಕ್ರಿಸ್ ವೋಕ್ಸ್, ಮ್ಯಾಥ್ಯೂ ಫಿಶರ್, ಜ್ಯಾಕ್ ಲೀಚ್, ಸಾಕಿಬ್ ಮಹಮೂದ್

ಬೆಂಚ್: ಆಲಿ ಪೋಪ್, ಆಲಿ ರಾಬಿನ್ಸನ್, ಮ್ಯಾಥ್ಯೂ ಪಾರ್ಕಿನ್ಸನ್, ಮಾರ್ಕ್ ವುಡ್, ಕ್ರೇಗ್ ಓವರ್ಟನ್

ವೆಸ್ಟ್ ಇಂಡೀಸ್ ಪ್ಲೇಯಿಂಗ್ 11: ಕ್ರೈಗ್ ಬ್ರಾಥ್‌ವೈಟ್ (ನಾಯಕ), ಜಾನ್ ಕ್ಯಾಂಪ್‌ಬೆಲ್, ಶಮರ್ ಬ್ರೂಕ್ಸ್, ಎನ್ಕ್ರುಮಾ ಬೊನ್ನರ್, ಜರ್ಮೈನ್ ಬ್ಲಾಕ್‌ವುಡ್, ಜೇಸನ್ ಹೋಲ್ಡರ್, ಜೋಶುವಾ ಡಾ ಸಿಲ್ವಾ (ವಿಕೆಟ್ ಕೀಪರ್), ಅಲ್ಜಾರಿ ಜೋಸೆಫ್, ಕೆಮರ್ ರೋಚ್, ವೀರಸಾಮಿ ಪರ್ಮೌಲ್, ಜೇಡನ್ ಸೀಲ್ಸ್

ಬೆಂಚ್: ಕೈಲ್ ಮೇಯರ್ಸ್, ಆಂಡರ್ಸನ್ ಫಿಲಿಪ್

Story first published: Monday, March 21, 2022, 19:49 [IST]
Other articles published on Mar 21, 2022
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+