ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
For Quick Alerts
ALLOW NOTIFICATIONS  
For Daily Alerts
 

ಇಂಗ್ಲೆಂಡ್ vs ವಿಂಡೀಸ್, LIVE ಸ್ಕೋರ್: ನಾಲ್ಕನೇ ದಿನದಾಟ ಸಂಪೂರ್ಣ ಮಳೆಗಾಹುತಿ

England Vs West Indies 3rd Test Live Score day 4

ಮ್ಯಾನ್ಚೆಸ್ಟರ್, ಜುಲೈ 27: ನಿರ್ಣಾಯಕ ಟೆಸ್ಟ್ ಪಂದ್ಯದಲ್ಲಿ ಇಂಗ್ಲೆಂಡ್ ಗೆಲುವು ಸಾಧಿಸಿ ಸರಣಿಯನ್ನು ವಶಕ್ಕೆ ಪಡೆದುಕೊಳ್ಳುವ ಉತ್ಸಾಹದಲ್ಲಿದೆ. ಆದರೆ ನಾಲ್ಕನೇ ದಿನದಾಟಕ್ಕೆ ಮಳೆ ಸಂಪೂರ್ಣವಾಗಿ ಅಡ್ಡಿಯಾಗಿದೆ.

1
46755


ಮೊದಲ ಇನ್ನಿಂಗ್ಸ್‌ನಲ್ಲಿ 369 ರನ್ ಗಳಿಸಿ ಆಲೌಟ್ ಆದ ಇಂಗ್ಲೆಂಡ್ ಬಳಿಕ ಬೌಲಿಂಗ್‌ನಲ್ಲಿ ಪ್ರವಾಸಿ ವೆಸ್ಟ್ ಇಂಡೀಸ್ ತಂಡವನ್ನು ಕಟ್ಟಿಹಾಕುವಲ್ಲಿ ಯಶಸ್ವಿಯಾಯಿತು. ಆತಿಥೇಯರ ಬೌಲಿಂಗ್ ದಾಳಿಗೆ ಕಂಗೆಟ್ಟ ವೆಸ್ಟ್ ಇಂಡಿಸ್ ತಂಡ ಮೊದಲ ಇನ್ನಿಂಗ್ಸ್‌ನಲ್ಲಿ ಕೇವಲ 197 ರನ್‌ಗಳಿಗೆ ಆಲೌಟ್ ಆಯ್ತು.

ಮತ್ತೆ ಎರಡನೇ ಇನ್ನಿಂಗ್ಸ್‌ ಬ್ಯಾಟಿಂಗ್‌ನಲ್ಲೂ ಇಂಗ್ಲೆಂಡ್ ಉತ್ತಮ ಪ್ರದರ್ಶನ ತೋರುವಲ್ಲಿ ಯಶಸ್ವಿಯಾಯಿತು. ಅತ್ತ ವೆಸ್ಟ್ ಇಂಡೀಸ್ ಬೌಲರ್‌ಗಳು ಸಂಪೂರ್ಣ ವೈಫಲ್ಯತೆ ಅನುಭವಿಸಿದರು. 226 ರನ್‌ಗಳಿಗೆ ಎರಡು ವಿಕೆಟ್ ಕಳೆದುಕೊಂಡ ಇಂಗ್ಲೆಂಡ್ ಬಳಿಕ ಇನ್ನಿಂಗ್ಸ್ ಡಿಕ್ಲೇರ್ ಮಾಡಿತು.

ಎರಡನೇ ಇನ್ನಿಂಗ್ಸ್‌ನಲ್ಲಿ ಇಂಗ್ಲೆಂಡ್ ಪರವಾಗಿ ಆರಂಭಿಕ ಆಟಗಾರ ರೋರಿ ಬರ್ನ್ಸ್ 90 ರನ್ ಗಳಿಸಿ ಔಟಾದರೆ ಸಿಬ್ಲಿ 56 ರನ್ ಗಳಿಸಿ ವಿಕೆಟ್ ಒಪ್ಪಿಸಿದರು. ನಾಯಕ ಜೋ ರೂಟ್ ಅಜೇಯ 68 ರನ್ ಗಳಿಸಿದರು. ಈ ಮೂಲಕ ಅಂತಿಮ ಇನ್ನಿಂಗ್ಸ್‌ನಲ್ಲಿ ವೆಸ್ಟ್ ಇಂಡೀಸ್‌ಗೆ 399 ರನ್‌ಗಳ ಬೃಹತ್ ಗುರಿಯನ್ನು ಇಂಗ್ಲೆಂಡ್ ನೀಡಿದೆ.

ಇಂಗ್ಲೆಂಡ್ ತಂಡ: ಜೋ ರೂಟ್ (ಸಿ), ಜೋಸ್ ಬಟ್ಲರ್ (ವಿಕೆ), ರೋರಿ ಬರ್ನ್ಸ್, ಡೊಮಿನಿಕ್ ಸಿಬ್ಲಿ, ಝಾಕ್ ಕ್ರಾಲೆ, ಬೆನ್ ಸ್ಟೋಕ್ಸ್, ಆಲ್ಲಿ ಪೋಪ್, ಡೊಮಿನಿಕ್ ಬೆಸ್, ಜೋಫ್ರಾ ಆರ್ಚರ್, ಸ್ಟುವರ್ಟ್ ಬ್ರಾಡ್, ಜೇಮ್ಸ್ ಆಂಡರ್ಸನ್, ಕ್ರಿಸ್ ವೋಕ್ಸ್, ಸ್ಯಾಮ್ ಕರನ್, ಮಾರ್ಕ್ ವುಡ್

ವೆಸ್ಟ್ ಇಂಡೀಸ್ ತಂಡ: ಶೇನ್ ಡೌರಿಚ್ (ವಿಕೆ), ಜೇಸನ್ ಹೋಲ್ಡರ್ (ಸಿ), ಕ್ರೇಗ್ ಬ್ರಾಥ್‌ವೈಟ್, ಜಾನ್ ಕ್ಯಾಂಪ್‌ಬೆಲ್, ಅಲ್ಜಾರಿ ಜೋಸೆಫ್, ಶೈ ಹೋಪ್, ಶಮರ್ ಬ್ರೂಕ್ಸ್, ರೋಸ್ಟನ್ ಚೇಸ್, ಜೆರ್ಮೈನ್ ಬ್ಲ್ಯಾಕ್‌ವುಡ್, ಕೆಮರ್ ರೋಚ್, ಶಾನನ್ ಗೇಬ್ರಿಯಲ್, ಎನ್‌ಕ್ರುಮಾ ಬೊನ್ನರ್, ರಾಕೀಮ್ ಕಾರ್ನ್‌ವಾಲ್, ರೇಮನ್ ರೀಫರ್, ಕೆಮರ್ ಹೋಲ್ಡರ್.

Story first published: Monday, July 27, 2020, 23:19 [IST]
Other articles published on Jul 27, 2020
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X