Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

ನಿರ್ಣಾಯಕ ಟೆಸ್ಟ್‌ನಲ್ಲಿ ಇಂಗ್ಲೆಂಡ್‌ಗೆ ಗೆಲುವು: ಆತಿಥೇಯರ ಮಡಿಲಿಗೆ ಟೆಸ್ಟ್ ಸರಣಿ

England Vs West Indies 3rd Test Live Score day 5

ಮ್ಯಾನ್ಚೆಸ್ಟರ್, ಜುಲೈ 28: ಮಳೆಯ ಆಟದ ನಡುವೆ ನಿರ್ಣಾಯಕ ಮೂರನೇ ಟೆಸ್ಟ್ ಪಂದ್ಯವನ್ನು ಇಂಗ್ಲೆಂಡ್ ಗೆದ್ದುಕೊಂಡಿದೆ. ಅಂತಿಮ ಇನ್ನಿಂಗ್ಸ್‌ನಲ್ಲಿ ವೆಸ್ಟ್ ಇಂಡೀಸ್‌ಗೆ 399 ರನ್‌ಗಳ ಬೃಹತ್ ಗುರಿಯನ್ನು ಪಡೆದ ವೆಸ್ಟ್ ಇಂಡೀಸ್ ಕೇವಲ 129 ರನ್ ಗಳಿಸಲಷ್ಟೇ ಶಕ್ತವಾಗಿ ಸೋಲೊಪ್ಪಿಕೊಂಡಿತು.

ಎರಡೂ ಇನ್ನಿಂಗ್ಸ್‌ನಲ್ಲಿ ಇಂಗ್ಲೆಂಡ್ ವೇಗಿ ಸ್ಟುವರ್ಟ್ ಬ್ರಾಡ್ ಅದ್ಭುತ ಪ್ರದರ್ಶನ ನೀಡುವ ಮೂಲಕ ಮಿಂಚಿದರು. ಮೊದಲ ಇನ್ನಿಂಗ್ಸ್‌ನಲ್ಲಿ 6 ವಿಕೆಟ್ ಪಡೆದಿದ್ದ ಬ್ರಾಡ್ ಎರಡನೇ ಇನ್ನಿಂಗ್ಸ್‌ನಲ್ಲಿ 4 ವಿಕೆಟ್ ಪಡೆಯುವ ಮೂಲದ ಪಂದ್ಯದಲ್ಲಿ 10 ವಿಕೆಟ್ ಕಬಳಿಸಿದರು. ಈ ಮಧ್ಯದಲ್ಲಿ ಬ್ರಾಡ್ 500 ವಿಕೆಟ್ ಪಡೆದ ಸಾಧನೆಯನ್ನು ಮಾಡಿದ್ದಾರೆ.

ಪಂದ್ಯದ ಸಂಪೂರ್ಣ ಸ್ಕೋರ್ ಕಾರ್ಡ್ ಇಲ್ಲಿದೆ

1
46755

ಈ ಪಂದ್ಯದಲ್ಲಿ ಇಂಗ್ಲೆಂಡ್ ಬ್ಯಾಟಿಂಗ್ ಹಾಗೂ ಬೌಲಿಂಗ್ ಎರಡೂ ವಿಭಾಗದಲ್ಲೂ ಸರ್ವಾಂಗೀಣ ಪ್ರದರ್ಶನವನ್ನು ನೀಡಿತ್ತು. ಮೊದಲ ಇನ್ನಿಂಗ್ಸ್‌ನಲ್ಲಿ 369 ರನ್ ಗಳಿಸಿ ಆಲೌಟ್ ಆದ ಇಂಗ್ಲೆಂಡ್ ಬಳಿಕ ಬೌಲಿಂಗ್‌ನಲ್ಲಿ ಪ್ರವಾಸಿ ವೆಸ್ಟ್ ಇಂಡೀಸ್ ತಂಡವನ್ನು ಕಟ್ಟಿಹಾಕುವಲ್ಲಿ ಯಶಸ್ವಿಯಾಯಿತು. ಆತಿಥೇಯರ ಬೌಲಿಂಗ್ ದಾಳಿಗೆ ಕಂಗೆಟ್ಟ ವೆಸ್ಟ್ ಇಂಡಿಸ್ ತಂಡ ಮೊದಲ ಇನ್ನಿಂಗ್ಸ್‌ನಲ್ಲಿ ಕೇವಲ 197 ರನ್‌ಗಳಿಗೆ ಆಲೌಟ್ ಆಯ್ತು.

ಮತ್ತೆ ಎರಡನೇ ಇನ್ನಿಂಗ್ಸ್‌ ಬ್ಯಾಟಿಂಗ್‌ನಲ್ಲೂ ಇಂಗ್ಲೆಂಡ್ ಉತ್ತಮ ಪ್ರದರ್ಶನ ತೋರುವಲ್ಲಿ ಯಶಸ್ವಿಯಾಯಿತು. ಅತ್ತ ವೆಸ್ಟ್ ಇಂಡೀಸ್ ಬೌಲರ್‌ಗಳು ಸಂಪೂರ್ಣ ವೈಫಲ್ಯತೆ ಅನುಭವಿಸಿದರು. 226 ರನ್‌ಗಳಿಗೆ ಎರಡು ವಿಕೆಟ್ ಕಳೆದುಕೊಂಡ ಇಂಗ್ಲೆಂಡ್ ಬಳಿಕ ಇನ್ನಿಂಗ್ಸ್ ಡಿಕ್ಲೇರ್ ಮಾಡುವ ಮೂಲಕ ವೆಸ್ಟ್ ಇಂಡಿಸ್‌ಗೆ 399 ರನ್‌ಗಳ ಗುರಿಯನ್ನು ನೀಡಿತ್ತು. ಆದರೆ ವೆಸ್ಟ್ ಇಂಡೀಸ್‌ಗೆ ಈ ಗುರಿಯ ಸಮೀಪಕ್ಕೆ ಸುಳಿಯಲೂ ಸಾಧ್ಯವಾಗಲಿಲ್ಲ.

ಈ ಪಂದ್ಯದ ಮೂಲಕ ಇಂಗ್ಲೆಂಡ್ ಸರಣಿಯನ್ನು 2-1 ಅಂತರದಿಂದ ಗೆದ್ದುಕೊಳ್ಳುವಲ್ಲಿ ಯಶಸ್ವಿಯಾಗಿತ್ತು. ಮೊದಲ ಪಂದ್ಯವನ್ನು ಗೆದ್ದು ಆತಿಥೇಯರ ವಿರುದ್ಧ ಗೆದ್ದು ಬೀಗಿದ್ದ ವೆಸ್ಟ್ ಇಂಡೀಸ್ ಎರಡು ಹಾಗೂ ಮೂರನೇ ಟೆಸ್ಟ್‌ನಲ್ಲಿ ಮೊದಲ ಪಂದ್ಯದ ಪ್ರದರ್ಶನವನ್ನು ಪುನರಾವರ್ತಿಸಲು ಸಾಧ್ಯವಾಗಲಿಲ್ಲ. ಇಂಗ್ಲೆಂಡ್ ವೇಗಿಗಳ ದಾಳಿಗೆ ಉತ್ತರಿಸಲು ವೆಸ್ಟ್ ಇಂಡಿಸ್ ಬ್ಯಾಟ್ಸ್‌ಮನ್‌ಗಳು ಸಂಪೂರ್ಣವಾಗಿ ವಿಫಲರಾದರು.

Story first published: Tuesday, July 28, 2020, 20:04 [IST]
Other articles published on Jul 28, 2020
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+