Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

IND vs ENG 3rd T20: ಭಾರತದ ಹ್ಯಾಟ್ರಿಕ್ ಗೆಲುವಿನ ಓಟಕ್ಕೆ ಇಂಗ್ಲೆಂಡ್ ಬ್ರೇಕ್

ಭಾರತ ಮತ್ತು ಇಂಗ್ಲೆಂಡ್ ನಡುವಿನ ಮೂರನೇ ಟಿ20 ಪಂದ್ಯವು ನಿರೀಕ್ಷೆಗೆ ವಿರುದ್ಧವಾಗಿ ಅಂತ್ಯ ಕಂಡಿದೆ. ಟಿ20 ಕ್ರಿಕೆಟ್‌ನಲ್ಲಿ ಮೇಲುಗೈ ಸಾಧಿಸಿದ್ದ ಟೀಮ್ ಇಂಡಿಯಾ ರಾಜ್‌ಕೋಟ್‌ನಲ್ಲಿ ಹೀನಾಯ ಸೋಲು ಎದುರಿಸಬೇಕಾಯಿತು. ಇದೀಗ ಇಂಗ್ಲೆಂಡ್ ಮತ್ತು ಭಾರತ ನಡುವಿನ ಐದು ಪಂದ್ಯಗಳ ಟಿ20 ಸರಣಿಯ ರೋಚಕತೆ ಹುಟ್ಟು ಹಾಕಿದೆ. ಸರಣಿಯಲ್ಲಿ ಇಂಗ್ಲೆಂಡ್ ಭರವಸೆ ಇನ್ನೂ ಜೀವಂತವಾಗಿದೆ. ಮಾಡು ಇಲ್ಲವೇ ಮಡಿ ಪಂದ್ಯದಲ್ಲಿ ಭಾರತ ವಿರುದ್ಧ ಇಂಗ್ಲೆಂಡ್ ತಂಡ 26 ರನ್‌ಗಳಿಂದ ಗೆದ್ದಿದೆ. ಈ ಮೂಲಕ ಇಂಗ್ಲೆಂಡ್ ಸರಣಿಯನ್ನು 1-2 ರಲ್ಲಿ ಇಟ್ಟಿದೆ.

ರಾಜ್‌ಕೋಟ್‌ನಲ್ಲಿ ನಡೆದ ಪಂದ್ಯದಲ್ಲಿ ಟಾಸ್ ಗೆದ್ದ ಭಾರತ ಮೊದಲು ಬೌಲಿಂಗ್ ಮಾಡಲು ನಿರ್ಧರಿಸಿತು. ಭಾರತಕ್ಕೆ ಬೌಲರ್‌ಗಳು ಉತ್ತಮ ಆರಂಭವನ್ನು ನೀಡಿದರು. ಪರಿಣಾಮ ಇಂಗ್ಲೆಂಡ್ 9 ವಿಕೆಟ್‌ ನಷ್ಟಕ್ಕೆ 171 ರನ್ ಕಲೆ ಹಾಕಿತು. ಇಂಗ್ಲೆಂಡ್ ನೀಡಿದ 172 ರನ್‌ಗಳ ಗುರಿ ಬೆನ್ನಟ್ಟಿದ ಭಾರತ 9 ವಿಕೆಟ್ ಕಳೆದುಕೊಂಡು 145 ರನ್ ಗಳಿಸಿತು. ಇದರೊಂದಿಗೆ ಇಂಗ್ಲೆಂಡ್ ವಿರುದ್ಧ ಭಾರತ 26 ರನ್‌ಗಳಿಂದ ಸೋಲು ಕಂಡಿತ್ತು.

England win against India in third T20I

ಇಂಗ್ಲೆಂಡ್ ಪರ ಬೆನ್ ಡಕೆಟ್ (51) ಮತ್ತು ಲಿಯಾಮ್ ಲಿವಿಂಗ್‌ಸ್ಟೋನ್ (43) ನೆರವಾದರು. ಭಾರತದ ಪರ ವರುಣ್ ಚಕ್ರವರ್ತಿ 5 ವಿಕೆಟ್ ಪಡೆದರೆ, ಹಾರ್ದಿಕ್ ಪಾಂಡ್ಯ 2, ರವಿ ಬಿಷ್ಣೋಯಿ ಹಾಗೂ ಅಕ್ಸರ್‌ ಪಟೇಲ್‌ ತಲಾ 1 ವಿಕೆಟ್‌ ಉರುಳಿಸಿದರು. ಒಂದು ವರ್ಷದ ನಂತರ ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ಮರಳಿದ ಮೊಹಮ್ಮದ್ ಶಮಿ ಹೇಳಿಕೊಳ್ಳುವಂತಹ ಪ್ರದರ್ಶನ ನೀಡುವಲ್ಲಿ ವಿಫಲವಾದರು. ಅವರು 3 ಓವರ್‌ಗಳಲ್ಲಿ 25 ರನ್‌ ನೀಡಿ ಒಂದು ವಿಕೆಟ್ ಪಡೆಯಲಿಲ್ಲ.‌

ಕೈ ಕೊಟ್ಟ ಸ್ಟಾರ್ಸ್‌

ಇಂಗ್ಲೆಂಡ್ ನೀಎಡಿದ 171 ರನ್‌ಗಳ ಗೆಲುವಿನ ಗುರಿ ಬೆನ್ನಟ್ಟಿದ ಭಾರತ ಉತ್ತಮ ಆರಂಭ ಪಡೆಯಲಿಲ್ಲ. ಸಂಜು ಸ್ಯಾಮ್ಸನ್ 3 ರನ್‌ಗಳಿಗೆ ಔಟಾದರು. ಯುವ ಬ್ಯಾಟರ್‌ಗಳಾದ ಅಭಿಷೇಕ್‌ ಶರ್ಮಾ (24) ಮತ್ತು ತಿಲಕ್‌ ವರ್ಮಾ (18) ತಂಡಕ್ಕೆ ಆಸರೆಯಾಗಲಿಲ್ಲ. ಮೊದಲೆರಡು ಟಿ20 ಪಂದ್ಯಗಳಲ್ಲಿ ಅಭಿಷೇಕ್‌ ಶರ್ಮಾ ಮತ್ತು ತಿಲಕ್‌ ವರ್ಮಾ ಸ್ಪೋಟಕ ಬ್ಯಾಟಿಂಗ್ ಮೂಲಕ ಅಬ್ಬರಿಸಿದ್ದರು.

ನಾಯಕ ಸೂರ್ಯಕುಮಾರ್ ಯಾದವ್ (14) ನಿರೀಕ್ಷೆಯಂತೆ ಪ್ರದರ್ಶನ ನೀಡಲಿಲ್ಲ. ಮಧ್ಯಮ ಕ್ರಮಾಂಕದಲ್ಲಿ ಜವಾಬ್ದಾರಿಯುತ ಬ್ಯಾಟಿಂಗ್ ಮಾಡಿದ ಹಾರ್ದಿಕ್‌ ಪಾಂಡ್ಯ 40 ರನ್‌ ಬಾರಿಸುವ ಮೂಲಕ ತಂಡದ ಗೆಲುವಿಗೆ ಹೋರಾಡಿದರು. ಉಳಿದಂತೆ ಯಾವ ಸ್ಟಾರ್‌ ಆಟಗಾರರು ಉತ್ತಮ ಪ್ರದರ್ಶನ ನೀಡುವಲ್ಲಿ ಯಶಸ್ವಿಯಾಗಲಿಲ್ಲ. ಅಂತಿಮವಾಗಿ ಭಾರತ ಕೇವಲ 145 ರನ್‌ ಗಳಿಸಿ ಸೋಲೊಪ್ಪಿಕೊಂಡಿತು.

ಇಂಗ್ಲೆಂಡ್‌ ತಂಡದ ಪರ ಜೆಮಿ ಓವರ್‌ಟನ್‌ 3 ವಿಕೆಟ್ ಪಡೆದ ಮಿಂಚಿದರೆ, ಜೋಫ್ರಾ ಆರ್ಚರ್‌ ಮತ್ತು ಬ್ರೈಡನ್‌ ಕ್ರಾಸ್‌ ತಲಾ 2 ವಿಕೆಟ್ ಉರುಳಿಸಿದರು. ಇನ್ನೂ ಮಾರ್ಕ್‌ ವುಡ್‌ ಮತ್ತು ಅಬ್ದುಲ್‌ ರಶೀದ್‌ ತಲಾ 1 ವಿಕೆಟ್‌ ಕಬಳಿಸಿದರು.

Story first published: Tuesday, January 28, 2025, 22:48 [IST]
Other articles published on Jan 28, 2025
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+