ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
For Quick Alerts
ALLOW NOTIFICATIONS  
For Daily Alerts
 

ಇಂಗ್ಲೆಂಡ್ vs ಆಸಿಸ್ 2ನೇ ಏಕದಿನ: ಆಸ್ಟ್ರೇಲಿಯಾಗೆ ಸೋಲಿನ ರುಚಿ ತೋರಿಸಿದ ಇಂಗ್ಲೆಂಡ್

England Win Second Odi After Dramatic Australia Collapse

ಇಂಗ್ಲೆಂಡ್ ಹಾಗೂ ಆಸ್ಟ್ರೇಲಿಯಾ ನಡುವಿನ ಏಕದಿನ ಸರಣಿಯ ಎರಡನೇ ಪಂದ್ಯದಲ್ಲಿ ಇಂಗ್ಲೆಂಡ್ ಆಸ್ಟ್ರೇಲಿಯಾವನ್ನು ಮಣಿಸುವಲ್ಲಿ ಯಶಸ್ವಿಯಾಗಿದೆ. ಈ ಮೂಲಕ ಇಂಗ್ಲೆಂಡ್ ಏಕದಿನ ಸರಣಿಯನ್ನು 1-1 ಅಂತರದಿಂದ ಸಮಬಲಗೊಳಿಸುವಲ್ಲಿ ಯಶಸ್ವಿಯಾಗಿದೆ.

ಟಾಸ್ ಗೆದ್ದು ಬ್ಯಾಟಿಂಗ್‌ಗೆ ಇಳಿದ ಇಂಗ್ಲೆಂಡ್ ಮೊದಲು ಬ್ಯಾಟಿಂಗ್ ಆಯ್ದುಕೊಂಡಿತು. ಆದರೆ ಇಂಗ್ಲೆಂಡ್ ತಂಡದ ಬ್ಯಾಟಿಂಗ್ ವಿಭಾಗದಲ್ಲಿ ನಿರಾಸೆಯನ್ನು ಅನುಭವಿಸಿತು. ನಿಗದಿತ 50 ಓವರ್‌ಗಳಲ್ಲಿ ಇಂಗ್ಲೆಂಡ್ 9 ವಿಕೆಟ್ ಕಳೆದುಕೊಂಡು 231 ರನ್ ಗಳಿಸಲಷ್ಟೇ ಶಕ್ತವಾಯಿತು. ಈ ಮೂಲಕ ಆಸ್ಟ್ರೇಲಿಯಾಗೆ ಸುಲಭ ಸವಾಲನ್ನು ನೀಡಿತ್ತು.

ಇಂಗ್ಲೆಂಡ್ ನೀಡಿದ ಈ ಮೊತ್ತವನ್ನು ಬೆನ್ನಟ್ಟಿದ ಆಸ್ಟ್ರೇಲಿಯಾ ನಿರೀಕ್ಷಿತ ಆರಂಭವನ್ನು ಪಡೆಯಲಿಲ್ಲ. ಆದರೆ ಡೇವಿಡ್ ವಾರ್ನರ್ ನಿಧಾನಗತಯಲ್ಲಿ ಬ್ಯಾಟಿಂಗ್ ನಡೆಸಿ ತಂಡಕ್ಕೆ ಆಧಾರವಾಗುವ ಭರವಸೆಯನ್ನು ನೀಡಿದರು. ಮ್ಯಾಬುಶೈನ್ ಜೊತೆಗೆ 3ನೇ ವಿಕೆಟ್‌ಗೆ 107 ರನ್‌ಗಳ ಬೃಹತ್ ಜೊತೆಯಾಟವನ್ನೂ ನೀಡಿದರು.ಆದರೆ ಈ ಜೋಡಿಯನ್ನು ಬೇರ್ಪಟ್ಟ ಬಳಿಕ ಆಸ್ಟ್ರೇಲಿಯಾ ಹಠಾತ್ ಕುಸಿತಕ್ಕೆ ಒಳಗಾಯಿತು.

ಸಂಪೂರ್ಣ ಸ್ಕೋರ್ ಪಟ್ಟಿ ಈ ಕೆಳಗಿನಂತಿದೆ:

1
49135

ಅಂತಿಮವಾಗಿ ಆಸ್ಟ್ರೇಲಿಯಾ 48.4 ಓವರ್‌ಗಳಲ್ಲಿ ತನ್ನ ಎಲ್ಲಾ ವಿಕೆಟ್‌ಗಳನ್ನು ಕಳೆದುಕೊಂಡು 207 ರನ್ ಗಳಿಸಲಷ್ಟೇ ಶಕ್ತವಾಯಿತು, ಈ ಮೂಲಕ ಆಸ್ಟ್ರೇಲಿಯಾ ಇಂಗ್ಲೆಂಡ್‌ಗೆ 24 ರನ್‌ಗಳಿಂದ ಶರಣಾಗಿದೆ. ಮುಂದಿ ಪಂದ್ಯ ಸರಣಿಯ ನಿರ್ಣಾಯಕವೆನಿಸಿದೆ.

ಇಂಗ್ಲೆಂಡ್ ಪರವಾಗಿ ವೇಗಿಗಳು ಬಿಗು ದಾಳಿಯನ್ನು ನಡೆಸಿ ಆಸ್ಟ್ರೇಲಿಯಾಗೆ ಟಕ್ಕರ್ ಕೊಡುವಲ್ಲಿ ಯಶಸ್ವಿಯಾದರು. ಕ್ರಿಸ್ ವೋಕ್ಸ್, ಜೋಫ್ರಾ ಆರ್ಚರ್, ಹಾಗೂ ಸ್ಯಾಮ್ ಕರ್ರನ್ ತಲಾ ಮೂರು ವಿಕೆಟ್ ಕಿತ್ತು ಆಸ್ಟ್ರೇಲಿಯಾ ಬ್ಯಾಟಿಂಗ್ ಪಡೆಗೆ ಆಘಾತವನ್ನು ನೀಡಿದರು.

Story first published: Monday, September 14, 2020, 15:18 [IST]
Other articles published on Sep 14, 2020
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X