IND vs ENG Test: ಮೂರನೇ ಟೆಸ್ಟ್‌ನಲ್ಲಿ ಟಾಸ್ ಗೆದ್ದ ಇಂಗ್ಲೆಂಡ್, ಬ್ಯಾಟಿಂಗ್ ಆಯ್ಕೆ
ಲಾರ್ಡ್ಸ್‌ನಲ್ಲಿ ಆಂಡರ್ಸನ್ ತೆಂಡೂಲ್ಕರ್ ಸರಣಿಯ ಮೂರನೇ ಟೆಸ್ಟ್ ಪಂದ್ಯ ನಡೆಯುತ್ತಿದೆ. ಈ ಪಂದ್ಯದಲ್ಲಿ ಟಾಸ್ ಗೆದ್ದ ಇಂಗ್ಲೆಂಡ್ ಮೊದಲು ಬ್ಯಾಟ್ ಮಾಡಲು ಮುಂದಾಯಿತು. ಟೀಮ್ ಇಂಡಿಯಾ ಪರ ಒಂದು ಬದಲಾವಣೆ ಮಾಡಲಾಗಿದ್ದು, ಇಂಗ್ಲೆಂಡ್ ತಂಡದಲ್ಲಿ ಜೋಫ್ರಾ ಆರ್ಚರ್ ಅವರಿಗೆ ಸ್ಥಾನ ನೀಡಲಾಗಿದೆ. ಕಳೆದ ಎರಡು ಟೆಸ್ಟ್ ಪಂದ್ಯಗಳಲ್ಲಿ ಟಾಸ್ ಗೆದ್ದಿದ್ದ ಇಂಗ್ಲೆಂಡ್ ಮೊದಲು ಬೌಲ್ ಮಾಡಲು ನಿರ್ಧರಿಸಿತ್ತು. ಆದರೆ ಈ ಸರಣಿಯಲ್ಲಿ ಮೊದಲ ಬಾರಿಗೆ ಟಾಸ್ ಗೆದ್ದ ಇಂಗ್ಲೆಂಡ್ ಮೊದಲು ಬ್ಯಾಟ್ ಮಾಡಲು ಮುಂದಾಗಿದೆ.
ಟೀಮ್ ಇಂಡಿಯಾದ ಪರ ಹಲವು ಬದಲಾವಣೆಗಳನ್ನು ನಿರೀಕ್ಷಿಸಲಾಗಿತ್ತು. ಆದರೆ ಈ ಟೆಸ್ಟ್ ಪಂದ್ಯಕ್ಕೆ ಕೇವಲ ಒಂದೇ ಒಂದು ಬದಲಾವಣೆಯನ್ನು ಭಾರತ ತಂಡ ಮಾಡಿದೆ. ಕನ್ನಡಿಗ ಪ್ರಸಿದ್ಧ ಕೃಷ್ಣಾ ಅವರ ಬದಲಿಗೆ, ಯಾರ್ಕರ್ ಸ್ಪೇಷಲಿಸ್ಟ್ ಜಸ್ಪ್ರೀತ್ ಬುಮ್ರಾ ಅವರಿಗೆ ಸ್ಥಾನ ಲಭಿಸಿದೆ. ಬುಮ್ರಾ ಎರಡನೇ ಟೆಸ್ಟ್ ಪಂದ್ಯದಲ್ಲಿ ಆಡಿರಲಿಲ್ಲ. ಇನ್ನು ಪ್ರಸಿದ್ಧ್ ಕೃಷ್ಣ ಸ್ಥಿರ ಪ್ರದರ್ಶನ ನೀಡುವಲ್ಲಿ ವಿಫಲರಾಗಿದ್ದರಿಂದ ಇವರು ಸ್ಥಾನವನ್ನು ಕಳೆದುಕೊಂಡಿದ್ದಾರೆ.

ಕರುಣ್‌ಗೆ ಚಾನ್ಸ್
ಕಳೆದ ಎರಡು ಟೆಸ್ಟ್ ಪಂದ್ಯಗಳಲ್ಲಿ ರನ್ ಕಲೆ ಹಾಕುವಲ್ಲಿ ವಿಫಲರಾಗಿದ್ದ ಕರುಣ್ ನಾಯರ್ ಅವರನ್ನು ತಂಡದಿಂದ ಕೈ ಬಿಡಬಹುದು ಎಂಬ ಸಂಶಯ ಇತ್ತು. ಆದರೆ ಶುಭಮನ್ ಗಿಲ್ ಇವರ ಮೇಲೆ ನಂಬಿಕೆ ಇಟ್ಟು ಇವರಿಗೆ ಅವಕಾಶ ನೀಡಿದೆ. ಹೀಗಾಗಿ ಇವರು ಈ ಪಂದ್ಯದಲ್ಲಿ ಅಬ್ಬರಿಸುವ ಅವಶ್ಯಕತೆ ಇದೆ. ಇನ್ನು ಎರಡನೇ ಟೆಸ್ಟ್ ಪಂದ್ಯದಲ್ಲಿ ಸ್ಥಾನ ಪಡೆದಿದ್ದ ಆಲ್‌ರೌಂಡರ್ ರವೀಂದ್ರ ಜಡೇಜಾ, ವಾಷಿಂಗ್ಟನ್ ಸುಂದರ್, ನಿತೀಶ್ ಕುಮಾರ್ ರೆಡ್ಡಿ ತಮ್ಮ ಸ್ಥಾನವನ್ನು ಉಳಿಸಿಕೊಳ್ಳುವಲ್ಲಿ ಸಫಲರಾಗಿದ್ದಾರೆ.
ಗಂಟೆ ಬಾರಿಸಿದ ಸಚಿನ್
ಲಾರ್ಡ್ಸ್ ಅಂಗಳದಲ್ಲಿ ಮೊದಲಿನಿಂದಲೂ ಟೆಸ್ಟ್ ಕ್ರಿಕೆಟ್ ಆರಂಭವಾಗುವ ಮುನ್ನ ಕ್ರಿಕೆಟ್‌ಗೆ ಅಪಾಯ ಕೊಡುಗೆ ನೀಡಿದ ಆಟಗಾರರನ್ನು ಕರೆಸಿ ಗಂಟೆ ಬಾರಿಸುವುದು ವಾಡಿಕೆ. ಅಂತೆಯೇ ಲಾರ್ಡ್ಸ್ ಮೈದಾನದಲ್ಲಿ ಸಚಿನ್ ಗಂಟೆ ಬಾರಿಸುವ ಮೂಲಕ ಟೆಸ್ಟ್ ಪಂದ್ಯಕ್ಕೆ ಚಾಲನೆ ನೀಡಿದರು.
ಇಂಗ್ಲೆಂಡ್ ತಂಡದಲ್ಲೂ ಒಂದು ಬದಲಾವಣೆ ಮಾಡಲಾಗಿದೆ. ಜೋಶ್ ಟಂಗ್ ಬದಲಿಗೆ ಅನುಭವಿ ಜೋಫ್ರಾ ಆರ್ಚರ್ ಅವಿಗೆ ಅವಕಾಶ ನೀಡಲಾಗಿದೆ.
ಇಂಗ್ಲೆಂಡ್ ತಂಡ: ಝಾಕ್ ಕ್ರಾಲಿ, ಬೆನ್ ಡಕೆಟ್, ಆಲಿ ಪೋಪ್, ಜೋ ರೂಟ್, ಹ್ಯಾರಿ ಬ್ರೂಕ್, ಬೆನ್ ಸ್ಟೋಕ್ಸ್ (ನಾಯಕ), ಜೇಮೀ ಸ್ಮಿತ್ (ವಿಕೆಟ್ ಕೀಪರ್), ಕ್ರಿಸ್ ವೋಕ್ಸ್, ಬ್ರೈಡನ್ ಕಾರ್ಸೆ, ಜೋಫ್ರಾ ಆರ್ಚರ್, ಶೋಯೆಬ್ ಬಶೀರ್
ಭಾರತ ತಂಡ: ಯಶಸ್ವಿ ಜೈಸ್ವಾಲ್, ಕೆಎಲ್ ರಾಹುಲ್, ಕರುಣ್ ನಾಯರ್, ಶುಭಮನ್ ಗಿಲ್ (ನಾಯಕ), 5 ರಿಷಭ್ ಪಂತ್ (ವಿಕೆ), ನಿತೀಶ್ ಕುಮಾರ್ ರೆಡ್ಡಿ, ರವೀಂದ್ರ ಜಡೇಜಾ, ವಾಷಿಂಗ್ಟನ್ ಸುಂದರ್, ಜಸ್ಪ್ರೀತ್ ಬುಮ್ರಾ, ಆಕಾಶ್ ದೀಪ್, ಮೊಹಮ್ಮದ್ ಸಿರಾಜ್
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications