IND vs ENG Test: ಟಾಸ್ ಗೆದ್ದ ಇಂಗ್ಲೆಂಡ್ ಬೌಲಿಂಗ್: ಭಾರತದಲ್ಲಿ ಮೂರು ಬದಲಾವಣೆ
ಎಡ್ಜ್‌ಬಸ್ಟನ್‌ನಲ್ಲಿ ಬುಧವಾರದಿಂದ ಎರಡನೇ ಟೆಸ್ಟ್ ಆರಂಭವಾಗಿದೆ. ಆಂಡರ್ಸನ್ ಹಾಗೂ ತೆಂಡುಲ್ಕರ್ ಐದು ಪಂದ್ಯಗಳ ಸರಣಿಯ ಎರಡನೇ ಪಂದ್ಯದ ಮೇಲೆ ಎಲ್ಲರ ಚಿತ್ತ ನೆಟ್ಟಿದ್ದವು. ಈ ಪಂದ್ಯದಲ್ಲಿ ಮೊದಲ ಪಂದ್ಯದಲ್ಲಿ ಜಯ ಸಾಧಿಸಿರುವ ಇಂಗ್ಲೆಂಡ್, ಭಾರತದ ವಿರುದ್ಧ ಆತ್ಮವಿಶ್ವಾಸದಿಂದ ಕಣಕ್ಕೆ ಇಳಿಯಲಿದೆ. ಈ ಪಂದ್ಯದಲ್ಲಿ ಜಯ ಸಾಧಿಸಿ ಸರಣಿಯಲ್ಲಿ ಪುಟಿದೇಳುವ ವಿಶ್ವಾಸವನ್ನು ಭಾರತ ಹೊಂದಿದೆ. ಮಹತ್ವದ ಪಂದ್ಯದಲ್ಲಿ ಟಾಸ್ ಗೆದ್ದ ಇಂಗ್ಲೆಂಡ್ ಬೌಲಿಂಗ್ ಆಯ್ಕೆ ಮಾಡಿಕೊಂಡಿದೆ. ಟೀಮ್ ಇಂಡಿಯಾದ ಪರ ಹಲವು ಬದಲಾವಣೆಗಳನ್ನು ಮಾಡಲಾಗಿದೆ.
ಟೀಮ್ ಇಂಡಿಯಾದ ಸ್ಟಾರ್ ವೇಗದ ಬೌಲರ್ ಜಸ್ಪ್ರೀತ್ ಬುಮ್ರಾ ಅವರಿಗೆ ಕೆಲಸದ ಒತ್ತಡವನ್ನು ಕಡಿಮೆ ಮಾಡುವ ದೃಷ್ಟಿಯಿಂದ ಇವರಿಗೆ ವಿಶ್ರಾಂತಿ ನೀಡಲಾಗಿದೆ. ಇನ್ನು ಇವರ ಸ್ಥಾನದಲ್ಲಿ ಆಕಶ್ ದೀಪ್ ಅವರಿಗೆ ಸ್ಥಾನ ಲಭಿಸಿದೆ. ಇನ್ನು ಆಲ್‌ರೌಂಡರ್ ನಿತೀಶ್ ಕುಮಾರ್ ರೆಡ್ಡಿ ತಂಡದಲ್ಲಿ ಸ್ಥಾನ ಪಡೆಯುವಲ್ಲಿ ಸಫಲರಾಗಿದ್ದಾರೆ.

ಭಾರತದ ಪರ ಮೂರು ಬದಲಾವಣೆ
ಭಾರತ ಎರಡನೇ ಟೆಸ್ಟ್ ಪಂದ್ಯಕ್ಕಾಗಿ ಹಲವು ಬದಲಾವಣೆಗಳನ್ನು ಮಾಡಿಕೊಂಡಿದೆ. ಟೀಮ್ ಇಂಡಿಯಾದ ಸ್ಟಾರ್ ಆಟಗಾರ ಜಸ್ಪ್ರೀತ್ ಬುಮ್ರಾ ಅವರಿಗೆ ವಿಶ್ರಾಂತಿ ನೀಡಲಾಗಿದೆ. ಇವರ ಅನುಪಸ್ಥಿತಿಯಲ್ಲಿ ಆಕಶ್ ದೀಪ್ ತಂಡದಲ್ಲಿ ಸ್ಥಾನ ಪಡೆದಿದ್ದಾರೆ. ಇನ್ನು ಮೊದಲ ಟೆಸ್ಟ್‌ನಲ್ಲಿ ಅವಕಾಶ ಪಡೆದಿದ್ದ ಸಾಯಿ ಸುದರ್ಶನ್ ಅವರಿಗೆ ಗೇಟ್ ಪಾಸ್ ನೀಡಲಾಗಿದೆ. ಸ್ಟಾರ್ ಆಲ್‌ರೌಂಡರ್ ಶಾರ್ದೂಲ್ ಠಾಕೂರ್ ಮೊದಲ ಟೆಸ್ಟ್‌ನಲ್ಲಿ ಸ್ಥಿರ ಪ್ರದರ್ಶನ ನೀಡುವಲ್ಲಿ ವಿಫಲರಾಗಿದ್ದರು. ಹೀಗಾಗಿ ಇವರಿಗೂ ತಂಡದಿಂದ ಕೈ ಬಿಡಲಾಗಿದೆ. ಇನ್ನು ಆಸ್ಟ್ರೇಲಿಯಾದಲ್ಲಿ ಶತಕ ಬಾರಿಸಿದ್ದ ಯುವ ಆಟಗಾರ ನಿತೀಶ್ ಕುಮಾರ್ ರೆಡ್ಡಿ ಅವರಿಗೆ ತಂಡದಲ್ಲಿ ಅವಕಾಶ ನೀಡಲಾಗಿದೆ. ಇನ್ನೋರ್ವ ಆಲ್‌ರೌಂಡರ್ ಸ್ಥಾನದಲ್ಲಿ ವಾಷಿಂಗ್ಟನ್ ಸುಂದರ್ ಕಾಣಿಸಿಕೊಳ್ಳಲಿದ್ದಾರೆ.
ಭಾರತ ತಂಡ: ಯಶಸ್ವಿ ಜೈಸ್ವಾಲ್, ಕೆಎಲ್ ರಾಹುಲ್, ಕರುಣ್ ನಾಯರ್, ಶುಭಮನ್ ಗಿಲ್ (ನಾಯಕ), ರಿಷಭ್ ಪಂತ್, ರವೀಂದ್ರ ಜಡೇಜಾ, ಮೊಹಮ್ಮದ್ ಸಿರಾಜ್, ಪ್ರಸಿದ್ಧ್ ಕೃಷ್ಣ, ಆಕಾಶ್ ದೀಪ್, ವಾಶಿಂಗ್ಟನ್ ಸುಂದರ್, ನಿತೀಶ್ ಕುಮಾರ್ ರೆಡ್ಡಿ.
ಇಂಗ್ಲೆಂಡ್ ತಂಡ: ಜ್ಯಾಕ್ ಕ್ರಾಲಿ, ಬೆನ್ ಡಕೆಟ್, ಓಲಿ ಪೋಪ್, ಜೋ ರೂಟ್, ಹ್ಯಾರಿ ಬ್ರೂಕ್, ಬೆನ್ ಸ್ಟೋಕ್ಸ್ (ನಾಯಕ), ಜೇಮೀ ಸ್ಮಿತ್ (ವಿಕೆಟ್ ಕೀಪರ್), ಕ್ರಿಸ್ ವೋಕ್ಸ್, ಬ್ರೈಡನ್ ಕಾರ್ಸೆ, ಜೋಶ್ ಟಂಗ್, ಶೋಯೆಬ್ ಬಶೀರ್.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications