ಪಾಕಿಸ್ತಾನಕ್ಕೆ ಮತ್ತೊಂದು ಆಘಾತ: ಇಂಗ್ಲೆಂಡ್ ತಂಡದ ಪಾಕಿಸ್ತಾನ ಪ್ರವಾಸವನ್ನು ಮುಂದೂಡಿದ ಇಸಿಬಿ

ನಿರೀಕ್ಷೆಯಂತೆಯೇ ಇಂಗ್ಲೆಂಡ್ ಮತ್ತು ವೇಲ್ಸ್ ಕ್ರಿಕೆಟ್ ಮಂಡಳಿ ಪಾಕಿಸ್ತಾನ ಸರಣಿಯಿಂದ ಹಿಂದಕ್ಕೆ ಸರಿದಿದೆ. ಈ ಬಗ್ಗೆ ಸೋಮವಾರ ಅಧಿಕೃತವಾಗಿ ಇಸಿಬಿ ಘೋಷಣೆ ಮಾಡಿದೆ. ಭದ್ರತಾ ಕಾರಣಗಳನ್ನು ನೀಡಿ ನ್ಯೂಜಿಲೆಂಡ್ ಕ್ರಿಕೆಟ್ ಮಂಡಳಿ ತಮ್ಮ ತಂಡವನ್ನು ಸರಣಿಯ ಆರಂಭಕ್ಕೆ ಕೆಲವೇ ಕ್ಷಣಗಳಿರುವಾದ ಸರಣಿಯಿಂದ ಹಿಂದಕ್ಕೆ ಸರಿಯುವ ನಿರ್ಧಾರವನ್ನು ಮಾಡಿತ್ತು. ಈ ಬೆನ್ನಿಗೇ ಇಂಗ್ಲೆಂಡ್ ಪ್ರವಾಸದ ಬಗ್ಗೆಯೂ ಅನುಮಾನಗಳು ಎದ್ದಿತ್ತು. ಇದೀಗ ಈ ಎರಡು ಸರಣಿಗಳು ಕೂಡ ರದ್ದಾಗುವ ಮೂಲಕ ಪಾಕಿಸ್ತಾನ ಕ್ರಿಕೆಟ್ ಮಂಡಳಿಗೆ ಒಂದರ ಮೇಲೊಂದು ಆಘಾತ ಉಂಟಾಗಿದೆ.

ಐಪಿಎಲ್: ಕೊಹ್ಲಿ ರಾಜೀನಾಮೆ ನಂತರ ಆರ್‌ಸಿಬಿ ನಾಯಕ ಯಾರು? ರೇಸ್‌ನಲ್ಲಿದ್ದಾರೆ ಈ 3 ಆಟಗಾರರುಐಪಿಎಲ್: ಕೊಹ್ಲಿ ರಾಜೀನಾಮೆ ನಂತರ ಆರ್‌ಸಿಬಿ ನಾಯಕ ಯಾರು? ರೇಸ್‌ನಲ್ಲಿದ್ದಾರೆ ಈ 3 ಆಟಗಾರರು

ಸೋಮವಾರ ಈ ಬಗ್ಗೆ ಪ್ರಕಟನೆಯನ್ನು ಹೊರಡಿಸಿರುವ ಇಂಗ್ಲೆಂಡ್ ಮತ್ತು ವೇಲ್ಸ್ ಕ್ರಿಕೆಟ್ ಮಂಡಳಿ ಆಟಗಾರರ ಹಾಗೂ ಸಿಬ್ಬಂದಿಗಳ ಯೋಗಕ್ಷೇಮವನ್ನು ದೃಷ್ಟಿಯಲ್ಲಿಟ್ಟುಕೊಂಡು ಸರಣಿಯಿಂದ ಹಿಂದಕ್ಕೆ ಸರಿಯುತ್ತಿರುವುದಾಗಿ ತಿಳಿಸಿದೆ. ಇಂಗ್ಲೆಂಡ್ ಪುರುಷರ ಹಾಗೂ ಮಹಿಳೆಯರ ತಂಡಗಳು ಪಾಕಿಸ್ತಾನಕ್ಕೆ ತೆರಳಿ ಈ ಸರಣಿಯಲ್ಲಿ ಭಾಗಿಯಾಗಬೇಕಾಗಿತ್ತು. "ಈ ಭಾಗಕ್ಕೆ ಪ್ರವಾಸ ಮಾಡುವ ವಿಚಾರವಾಗಿ ಕಳವಳ ಹೆಚ್ಚಾಗುತ್ತಿರುವ ದೃಷ್ಟಿಯಿಂದಾಗಿ ಈ ಸರಣಿಗಳಿಂದ ಹಿಂದಕ್ಕೆ ಸರಿಯಲು ಇಸಿಬಿ ನಿರ್ಧರಿಸಿದೆ ಎಂದು ತನ್ನ ನಿರ್ಧಾರವನ್ನು ಇಸಿಬಿ ತಿಳಿಸಿದೆ.

ಆದರೆ ಈ ಪ್ರಕಟಣೆಯಲ್ಲಿ ಇಂಗ್ಲೆಂಡ್ ಹಾಗೂ ವೇಲ್ಸ್ ಕ್ರಿಕೆಟ್ ಮಂಡಳಿ ಪಾಕಿಸ್ತಾನ ಕ್ರಿಕೆಟ್ ಮಂಡಳಿಗೆ ಭರವಸೆಯೊಂದನ್ನು ನೀಡಿದ್ದು ಮುಂದಿನ ವರ್ಷದ ಅಂದರೆ 2022ರ ಭವಿಷ್ಯದ ಪ್ರವಾಸದ ವೇಳಾಪಟ್ಟಿಯಲ್ಲಿ ಪಾಕಿಸ್ತಾನ ಪ್ರವಾಸಕ್ಕೆ ಆದ್ಯತೆ ನೀಡಲು ಬದ್ಧವಾಗಿದೆ ಎಂದು ಇಂಗ್ಲೆಂಡ್ ಮಂಡಳಿ ತಿಳಿಸಿದೆ.

ಕೊಹ್ಲಿ ನಾಯಕತ್ವ ಬಿಟ್ಟುಕೊಡಬೇಕಾದ ಅಗತ್ಯವೇ ಇರಲಿಲ್ಲ, ಯಾಕೆ ಈ ನಿರ್ಧಾರ?; ದಿಗ್ಗಜ ಕ್ರಿಕೆಟಿಗನ ಬೇಸರಕೊಹ್ಲಿ ನಾಯಕತ್ವ ಬಿಟ್ಟುಕೊಡಬೇಕಾದ ಅಗತ್ಯವೇ ಇರಲಿಲ್ಲ, ಯಾಕೆ ಈ ನಿರ್ಧಾರ?; ದಿಗ್ಗಜ ಕ್ರಿಕೆಟಿಗನ ಬೇಸರ

"ಈ ವರ್ಷದ ಆರಂಭದಲ್ಲಿ ಟಿ20 ವಿಶ್ವಕಪ್‌ಗೆ ಮುನ್ನ ನಾವು ಪಾಕಿಸ್ತಾನಕ್ಕೆ ತೆರಳಿ ಎರಡು ಟಿ20 ಪಂದ್ಯಗಳ ಸರಣಿಯಲ್ಲಿ ಭಾಗಿಯಾವುವ ಮೂಲಕ ಟೂರ್ನಿಗೆ ಪೂರ್ವಭಾವಿ ಸಿದ್ಧತೆ ಮಾಡಲು ಯೋಜನೆ ಮಾಡಿದ್ದೆವು. ಈ ಸರಣಿಯ ಸಂದರ್ಭದಲ್ಲಿ ಮಹಿಳೆಯ ಸರಣಿಯನ್ನು ಕುಡ ಆಯೋಜಿಸಲು ತೀರ್ಮಾನವನ್ನು ಕೈಗೊಳ್ಳಲಾಗಿತ್ತು" ಎಂದು ಇಸಿಬಿ ಹೇಳಿದೆ.

ಐಪಿಎಲ್: ಚೆನ್ನೈ ಮತ್ತು ಮುಂಬೈ ನಡುವಿನ ಪಂದ್ಯ ವೀಕ್ಷಿಸಿದ ನಟ ಕಿಚ್ಚ ಸುದೀಪ್ ದಂಪತಿಐಪಿಎಲ್: ಚೆನ್ನೈ ಮತ್ತು ಮುಂಬೈ ನಡುವಿನ ಪಂದ್ಯ ವೀಕ್ಷಿಸಿದ ನಟ ಕಿಚ್ಚ ಸುದೀಪ್ ದಂಪತಿ

ಪಂದ್ಯದ ಬಳಿಕ Varun ಅವರನ್ನು ಹಾಡಿ ಹೊಗಳಿದ ವಿರಾಟ್ ಕೊಹ್ಲಿ | Oneindia Kannada

ಪಾಕಿಸ್ತಾನ ಪ್ರವಾಸ ಕೈಗೊಂಡ ನ್ಯೂಜಿಲೆಂಡ್ ಕ್ರಿಕೆಟ್ ತಂಡ ಸರಣಿಯ ಆರಂಭಕ್ಕೆ ಕೆಲವೇ ಕ್ಷಣಗಳಿರುವಾಗ ಭದ್ರತಾ ಕಾರಣಗಳಿಂದಾಗಿ ಸರಣಿಯಿಂದ ಹಿಂದಕ್ಕೆ ಸರಿದಿತ್ತು. ಹೀಗಾಗಿ ಪಾಕಿಸ್ತಾನ ಹಾಗೂ ನ್ಯೂಜಿಲೆಂಡ್ ವಿರುದ್ಧದ ಸರಣಿ ಸೀಮಿತ ಓವರ್‌ಗಳ ಸರಣಿ ಮುಂದೂಡಲಾಗಿದೆ. ಈ ಸಂದರ್ಭದಲ್ಲಿ ಪಾಕಿಸ್ತಾನ ಕ್ರಿಕೆಟ್ ತಂಡಕ್ಕೆ ಮತ್ತೊಂದು ಕಹಿ ಸುದ್ದಿ ಬರುವ ನಿರೀಕ್ಷೆಯಿತ್ತು. ಮುಂದಿನ ತಿಂಗಳು ಇಂಗ್ಲೆಂಡ್ ಕ್ರಿಕೆಟ್ ತಂಡ ಪಾಕಿಸ್ತಾನಕ್ಕೆ ಪ್ರವಾಸ ಕೈಗೊಳ್ಳಬೇಕಿದ್ದು ಸೀಮಿತ ಓವರ್‌ಗಳ ಸರಣಿಯಲ್ಲಿ ಭಾಗಿಯಾಗಬೇಕಿತ್ತು. ಆದರೆ ಇಂಗ್ಲೆಂಡ್ ಕ್ರಿಕೆಟ್ ತಂಡ ಕೂಡ ಪಾಕಿಸ್ತಾನ ಪ್ರವಾಸವನ್ನು ಕೈಬಿಡುವ ಸಾಧ್ಯತೆಯಿದೆ ಎಂಬ ಮಾತುಗಳು ಕೇಳಿ ಬಂದಿತ್ತು. ಈ ಬಗ್ಗೆ ಇಸಿಬಿ ಈಗ ತನ್ನ ನಿಲುವನ್ನು ಪ್ರಕಟಿಸಿದೆ. ಆದರೆ ಭದ್ರತಾ ಕಾರಣಗಳ ಬದಲಾಗಿ ಆಟಗಾರರ ಸುರಕ್ಷತೆಯ ಕಾರಣವನ್ನು ಇಸಿಬಿ ನೀಡಿದೆ.

ಐಸಿಸಿ ಟಿ20 ವಿಶ್ವಕಪ್ 2021 ಊಹಿಸು
Match 4 - October 18 2021, 07:30 PM
ಶ್ರೀಲಂಕಾ
Namibia
Predict Now

For Quick Alerts
Subscribe Now
For Quick Alerts
ALLOW NOTIFICATIONS
For Daily Alerts
Story first published: Monday, September 20, 2021, 22:21 [IST]
Other articles published on Sep 20, 2021
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X