Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

ಮಹಿಳಾ ಟಿ20: ಇಂಗ್ಲೆಂಡ್ ವಿರುದ್ಧದ ನಿರ್ಣಾಯಕ ಟಿ20 ಪಂದ್ಯ ಗೆಲ್ಲುತ್ತಾ ಭಾರತ: Live score

England Women vs India Women, 3rd t20I, Live score and playing XI, Bristol

ಭಾರತ ಹಾಗೂ ಇಂಗ್ಲೆಂಡ್ ಮಹಿಳೆಯರ ತಂಡಗಳ ನಡುವಿನ ಟಿ20 ಸರಣಿಯ ಅಂತಿಮ ಪಂದ್ಯ ಆರಂಭವಾಗಿದೆ. ಬ್ರಿಸ್ಟೋಲ್‌ನ ಕೌಂಟಿ ಕ್ರೀಡಾಂಗಣದಲ್ಲಿ ಈ ಪಂದ್ಯ ನಡೆಯುತ್ತಿದ್ದು ಮಹತ್ವದ ಪಂದ್ಯದಲ್ಲಿ ಆತಿಥೇಯ ಇಂಗ್ಲೆಂಡ್ ಟಾಸ್ ಗೆದ್ದು ಮೊದಲಿಗೆ ಬೌಲಿಂಗ್ ಆಯ್ಕೆ ಮಾಡಿಕೊಂಡಿದೆ. ಹೀಗಾಗಿ ಭಾರತ ಮಹಿಳಾ ತಂಡ ಮೊದಲಿಗೆ ಬ್ಯಾಟಿಂಗ್ ನಡೆಸುವ ಸವಾಲು ಸ್ವೀಕರಿಸಿದೆ.

ಮೂರು ಪಂದ್ಯಗಳ ಈ ಟಿ20 ಸರಣಿಯಲ್ಲಿ ಮೊದಲ ಎರಡು ಪಂದ್ಯಗಳಲ್ಲಿ ಎರಡು ತಂಡಗಳು ಕೂಡ ತಲಾ ಒಂದು ಗೆಲುವು ಸಾಧಿಸಿದೆ. ಹೀಗಾಗಿ ಸರಣಿಯ 1-1 ಅಂತರದಿಂದ ಸಮಬಲದಲ್ಲಿದೆ. ಈ ಪಂದ್ಯವನ್ನು ಗೆದ್ದ ತಂಡ ಸರಣಿಯನ್ನು ವಶಕ್ಕೆ ಪಡೆದುಕೊಳ್ಳಲಿದೆ. ಸರಣಿಯ ಮೊದಲ ಪಂದ್ಯದಲ್ಲಿ ಆತಿಥೆಯ ಇಂಗ್ಲೆಂಡ್ ತಂಡ ಭರ್ಜರಿ 9 ವಿಕೆಟ್‌ಗಳ ಅಂತರದಿಂದ ಗೆಲುವು ಸಾಧಿಸಿತ್ತು. ಭಾರತ ತಂಡ ನೀಡಿದ್ದ 133 ರನ್‌ಗಳ ಗುರಿಯನ್ನು ಇಂಗ್ಲೆಂಡ್ ಮಹಿಳೆಯರ ತಂಡ ಕೇವಲ ಒಂದು ವಿಕೆಟ್ ಕಳೆದುಕೊಂಡು ಗೆದ್ದು ಬೀಗಿತ್ತು.

ಇನ್ನು ಎರಡನೇ ಪಂದ್ಯದಲ್ಲಿ ಭಾರತೀಯ ವನಿತಾ ಪಡೆ ಇಂಗ್ಲೆಂಡ್ ವಿರುದ್ಧ ತಿರುಗಿ ಬೀಳುವಲ್ಲಿ ಯಶಸ್ವಿಯಾಗಿತ್ತು. ಮೊದಲಿಗೆ ಬ್ಯಾಟಿಂಗ್ ನಡೆಸಿದ ಇಂಗ್ಲೆಂಡ್ ಮಹಿಳೆಯರ ತಂಡವನ್ನು 142 ರನ್‌ಗಳಿಗೆ ಕಟ್ಟಿಹಾಕುವಲ್ಲಿ ಭಾರತ ಯಶಸ್ವಿಯಾಯಿತು. ಇದನ್ನು ಬೆನ್ನಟ್ಟಿದ ಭಾರತದ ಪರವಾಗಿ ಆರಂಭಿಕ ಆಟಗಾರ್ತಿ ಸ್ಮೃತಿ ಮಂಧಾನ ಅದ್ಭುತ ಪ್ರದರ್ಶನ ನೀಡಿ ಮಿಂಚಿದರು. 79 ರನ್‌ಗಳ ಪ್ರದರ್ಶನ ನೀಡಿದ ಪರಿಣಾಮವಾಗಿ ಭಾರತ ಕೇವಲ ಎರಡು ವಿಕೆಟ್ ಕಳೆದುಕೊಂಡು 8 ವಿಕೆಟ್‌ಗಳ ಅಂತರದಿಂದ ಭರ್ಜರಿ ಗೆಲುವು ಸಾಧಿಸಿದೆ. ಹೀಗಾಗಿ ಸರಣಿ ಸಮಬಲಗೊಂಡಿದ್ದು ಈ ಪಂದ್ಯ ನಿರ್ಣಾಯಕವೆನಿಸಿದೆ.

ಇಂಗ್ಲೆಂಡ್ ಆಡುವ ಬಳಗ: ಡೇನಿಯಲ್ ವ್ಯಾಟ್, ಸೋಫಿಯಾ ಡಂಕ್ಲೆ, ಆಲಿಸ್ ಕ್ಯಾಪ್ಸೆ, ಆಮಿ ಜೋನ್ಸ್ (ನಾಯಕಿ & ವಿಕೆಟ್ ಕೀಪರ್), ಮಾಯಾ ಬೌಚಿಯರ್, ಬ್ರಯೋನಿ ಸ್ಮಿತ್, ಸೋಫಿ ಎಕ್ಲೆಸ್ಟೋನ್, ಫ್ರೇಯಾ ಕೆಂಪ್, ಸಾರಾ ಗ್ಲೆನ್, ಫ್ರೇಯಾ ಡೇವಿಸ್, ಲಾರೆನ್ ಬೆಲ್‌ಬೆಂಚ್‌ಕೇಟ್ ಕ್ರಾಸ್, ಇಸ್ಸಿ ವಾಂಗ್

ಭಾರತ ಆಡುವ ಬಳಗ: ಶಫಾಲಿ ವರ್ಮಾ, ಸ್ಮೃತಿ ಮಂಧಾನ, ಹರ್ಮನ್‌ಪ್ರೀತ್ ಕೌರ್ (ನಾಯಕಿ), ದಯಾಲನ್ ಹೇಮಲತಾ, ಪೂಜಾ ವಸ್ತ್ರಾಕರ್, ರಿಚಾ ಘೋಷ್ (ವಿಕೆಟ್ ಕೀಪರ್), ಕಿರಣ್ ನವಗಿರೆ, ದೀಪ್ತಿ ಶರ್ಮಾ, ಸ್ನೇಹ ರಾಣಾ, ರಾಧಾ ಯಾದವ್, ರೇಣುಕಾ ಸಿಂಗ್
ಬೆಂಚ್: ಜೆಮಿಮಾ ರಾಡ್ರಿಗಸ್, ತಾನಿಯಾ ಭಾಟಿಯಾ, ಮೇಘನಾ ಸಿಂಗ್, ರಾಜೇಶ್ವರಿ ಗಾಯಕ್ವಾಡ್, ಸಬ್ಬಿನೇನಿ ಮೇಘನಾ, ಸಿಮ್ರಾನ್ ಬಹದ್ದೂರ್

Story first published: Friday, September 16, 2022, 0:08 [IST]
Other articles published on Sep 16, 2022
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+