For Quick Alerts
ALLOW NOTIFICATIONS  
For Daily Alerts
 

ಪದಾರ್ಪಣಾ ಪಂದ್ಯದಲ್ಲಿ ದಾಖಲೆ ಬರೆದ ಇಂಗ್ಲೆಂಡ್ ಸ್ಪಿನ್ನರ್ ರೆಹಾನ್ ಅಹ್ಮದ್

England youg spinner Rehan Ahmed sets a new record in his first test with the ball against Pakistan

ಪಾಕಿಸ್ತಾನ ಹಾಗೂ ಇಂಗ್ಲೆಂಡ್ ತಂಡಗಳ ನಡುವಿನ ಟೆಸ್ಟ್ ಸರಣಿಯ ಅಂತಿಮ ಪಂದ್ಯ ಕರಾಚಿಯಲ್ಲಿ ನಡೆಯುತ್ತಿದೆ. ಮೂರು ದಿನಗಳ ಆಟ ಅಂತ್ಯವಾಗಿದ್ದು ಇಂಗ್ಲೆಂಡ್ ತಂಡ ಈ ಸರಣಿಯಲ್ಲಿ ಮತ್ತೊಂದು ಗೆಲುವು ಸಾಧಿಸುವ ವಿಶ್ವಾಸದಲ್ಲಿದೆ. ಈ ಪಂದ್ಯದಲ್ಲಿ ಆತಿಥೇಯ ಪಾಕಿಸ್ತಾನ ತಂಡಕ್ಕೆ ಆಘಾತವುಂಟು ಮಾಡಿದ್ದು 18 ವರ್ಷದ ಯುವ ಸ್ಪಿನ್ನರ್ ರೆಹಾನ್ ಅಹ್ಮದ್.

ಕರಾಚಿಯಲ್ಲಿ ನಡೆದ ಈ ಪಂದ್ಯದಲ್ಲಿ ರೆಹಾನ್ ಅಹ್ಮದ್ ಎರಡನೇ ಇನ್ನಿಂಗ್ಸ್‌ನಲ್ಲಿ ಭರ್ಜರಿ ಪ್ರದರ್ಶನ ನೀಡಿ ಗಮನ ಸೆಳೆದಿದ್ದಾರೆ. ಮೊದಲ ಇನ್ನಿಂಗ್ಸ್‌ನಲ್ಲಿ ಎರಡು ಇಕೆಟ್ ಪಡೆದಿದ್ದ ರೆಹಾನ್ ಎರಡನೇ ಇನ್ನಿಂಗ್ಸ್‌ನಲ್ಲಿ ಐದು ವಿಕೆಟ್‌ಗಳ ಗೊಂಚಲು ಪಡೆದಿದ್ದಾರೆ. ಈ ಮೂಲಕ ಟೆಸ್ಟ್ ಕ್ರಿಕೆಟ್‌ನಲ್ಲಿ ಪದಾರ್ಪಣಾ ಪಂದ್ಯದಲ್ಲಿ ಈ ಸಾಧನೆ ಮಾಡಿದ ಕ್ರಿಕೆಟ್ ಆಟಗಾರರಲ್ಲಿ ಕಿರಿಯ ಆಟಗಾರ ಎಂಬ ದಾಖಲೆಯಲ್ಲಿ ತಮ್ಮ ಹೆಸರು ಸೇರ್ಪಡೆಗೊಳಿಸಿದ್ದಾರೆ. 18 ವರ್ಷ 218 ದಿನಗಳಿದ್ದಾಗ ಈ ಸಾಧನೆ ಮಾಡಿದ್ದಾರೆ ಇಂಗ್ಲೆಂಡ್ ತಂಡದ ಯುವ ಸ್ಪಿನ್ನರ್.

ರೆಹಾನ್ ಅಹ್ಮದ್ ಅವರ ಈ ಐತಿಹಾಸಿಕ ಸಾಧನೆಯ ಕಾರಣದಿಂದಾಗಿ ಇಂಗ್ಲೆಂಡ್ ತಂಡ ಪಾಕಿಸ್ತಾನವನ್ನು ಎರಡನೇ ಇನ್ನಿಂಗ್ಸ್‌ನಲ್ಲಿ 216 ರನ್‌ಗಳಿಗೆ ಆಲೌಟ್ ಮಾಡುವಲ್ಲಿ ಯಶಸ್ವಿಯಾಗಿದೆ. ಹೀಗಾಗಿ ಇಂಗ್ಲೆಂಡ್ ತಂಡ ಎರಡನೇ ಇನ್ನೀಂಗ್ಸ್‌ನಲ್ಲಿ ಗೆಲುವು ಸಾಧಿಸಲು 167 ರನ್‌ಗಳ ಸುಲಭ ಸವಾಲು ಸ್ವೀಕರಿಸಿದೆ.

ಇದನ್ನು ಬೆನ್ನಟ್ಟಿರುವ ಬೆನ್ ಸ್ಟೋಕ್ಸ್ ಪಡೆ 17 ಓವರ್‌ಗಳಲ್ಲಿ 112 ರನ್‌ಗಳಿಗೆ 2 ವಿಕೆಟ್ ಕಳೆದುಕೊಂಡಿದ್ದು ಗೆಲುವಿನ ಸನಿಹದಲ್ಲಿದೆ. ಇದೀಗ ನಾಲ್ಕನೇ ದಿನದಾಟದಲ್ಲಿ ಇಂಗ್ಲೆಂಡ್ ತಂಡಕ್ಕೆ ಕೇವಲ 55 ರನ್‌ಗಳ ಅಗತ್ಯವಿದ್ದು ಆತಿಥೇಯ ಪಾಕಿಸ್ತಾನ ತಂಡಕ್ಕೆ 3-0 ಅಂತರದ ವೈಟ್‌ವಾಶ್ ಬಳಿಯಲು ಉತ್ಸುಕವಾಗಿದೆ.

ಎರಡನೇ ಇನ್ನಿಂಗ್ಸ್‌ನಲ್ಲಿ ನಾಯಕ ಬಾಬರ್ ಅಜಂ ಹಾಗೂ ಸೌದ್ ಶಕೀಲ್ ಭರ್ಜರಿ ಶತಕದ ಜೊತೆಯಾಟ ನೀಡುವಲ್ಲಿ ಯಶಸ್ವಿಯಾದರು. ಈ ಇಬ್ಬರು ಆಟಗಾರರು ಕೂಡ ತಲಾ ಅರ್ಧ ಶತಕ ಸಿಡಿಸಿ ಮಿಂಚಿದ್ದಾರೆ. ಈ ಜೋಡಿ ಬೇರ್ಪಟ್ಟ ಬಳಿಕ ಮತ್ತೆ ಪಾಕಿಸ್ತಾನ ಕುಸಿತ ಕಾಣಲು ಆರಂಭಿಸಿತು. ಇನ್ನು ಈ ಪಂದ್ಯದಲ್ಲಿ ಪಾಕಿಸ್ತಾನ ಮೊದಲ ಇನ್ನಿಂಗ್ಸ್‌ನಲ್ಲಿ 304 ರನ್‌ಗಳನ್ನು ಗಳಿಸಿತು. ಇದಕ್ಕೆ ಪ್ರತಿಯಾಗಿ ಬ್ಯಾಟಿಂಗ್ ನಡೆಸಿದ ಇಂಗ್ಲೆಂಡ್ ಹ್ಯಾರಿ ಬ್ರೂಕ್ ಅವರ ಭರ್ಜರಿ ಶತಕದ ನೆರವಿನಿಂದಾಗಿ 354 ರನ್‌ಗಳನ್ನು ಗಳಿಸಿತ್ತು.

ಪಾಕಿಸ್ತಾನ ಆಡುವ ಬಳಗ: ಅಬ್ದುಲ್ಲಾ ಶಫೀಕ್, ಶಾನ್ ಮಸೂದ್, ಅಜರ್ ಅಲಿ, ಬಾಬರ್ ಅಜಮ್ (ನಾಯಕ), ಮೊಹಮ್ಮದ್ ರಿಜ್ವಾನ್ (ವಿಕೆಟ್ ಕೀಪರ್), ಅಘಾ ಸಲ್ಮಾನ್, ಸೌದ್ ಶಕೀಲ್, ಫಹೀಮ್ ಅಶ್ರಫ್, ನೌಮನ್ ಅಲಿ, ಮೊಹಮ್ಮದ್ ವಾಸಿಮ್ ಜೂನಿಯರ್, ಅಬ್ರಾರ್ ಅಹ್ಮದ್
ಬೆಂಚ್: ಇಮಾಮ್-ಉಲ್-ಹಕ್, ಮೊಹಮ್ಮದ್ ನವಾಜ್, ಮೊಹಮ್ಮದ್ ಅಲಿ, ಜಾಹಿದ್ ಮಹಮೂದ್, ಸರ್ಫರಾಜ್ ಅಹ್ಮದ್
ಇಂಗ್ಲೆಂಡ್ ಆಡುವ ಬಳಗ: ಝಾಕ್ ಕ್ರಾಲಿ, ಬೆನ್ ಡಕೆಟ್, ಆಲಿ ಪೋಪ್, ಜೋ ರೂಟ್, ಹ್ಯಾರಿ ಬ್ರೂಕ್, ಬೆನ್ ಸ್ಟೋಕ್ಸ್ (ನಾಯಕ), ಬೆನ್ ಫೋಕ್ಸ್ (ವಿಕೆಟ್ ಕೀಪರ್), ರೆಹಾನ್ ಅಹ್ಮದ್, ಆಲಿ ರಾಬಿನ್ಸನ್, ಮಾರ್ಕ್ ವುಡ್, ಜ್ಯಾಕ್ ಲೀಚ್
ಬೆಂಚ್: ವಿಲ್ ಜ್ಯಾಕ್ಸ್, ಜೇಮ್ಸ್ ಆಂಡರ್ಸನ್, ಜೇಮೀ ಓವರ್ಟನ್, ಕೀಟನ್ ಜೆನ್ನಿಂಗ್ಸ್

Story first published: Tuesday, December 20, 2022, 8:44 [IST]
Other articles published on Dec 20, 2022
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+