ಭಾರತ ಮತ್ತು ಇಂಗ್ಲೆಂಡ್ ನಡುವಿನ ಟೆಸ್ಟ್ ಸರಣಿಯ ಮೊದಲ ಪಂದ್ಯ ಹೈದರಾಬಾದ್‌ನ ರಾಜೀವ್ ಗಾಂಧಿ ಕ್ರೀಡಾಂಗಣದಲ್ಲಿ ನಡೆಯುತ್ತಿದೆ. ಈ ಪಂದ್ಯದಲ್ಲಿ ಇಂಗ್ಲೆಂಡ್ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಲು ನಿರ್ಧರಿಸಿತು. ಇಂಗ್ಲೆಂಡ್ ಆಡುವ ಹನ್ನೊಂದರಲ್ಲಿ ಟಾಮ್ ಹಾರ್ಟ್ಲಿಗೆ ಸ್ಥಾನ ಪಡೆದಿದ್ದಾರೆ. ಹಾರ್ಟ್ಲಿ ಚೊಚ್ಚಲ ಟೆಸ್ಟ್ ಪಂದ್ಯವನ್ನು ಆಡುತ್ತಿದ್ದಾರೆ. ಅವರು ಸ್ಪಿನ್ ಬೌಲರ್ ಆಗಿದ್ದು, ದೇಶಿಯಲ್ಲಿ ಉತ್ತಮ ದಾಖಲೆ ಹೊಂದಿದ್ದಾರೆ. ಟೀಂ ಇಂಡಿಯಾದ ಬ್ಯಾಟ್ಸ್‌ಮನ್‌ಗಳಿಗೆ ಹಾರ್ಟ್ಲಿ ಕಾಟ ನೀಡಬಲ್ಲರು.
ಹಾರ್ಟ್ಲಿ ಎಡಗೈ ಸ್ಪಿನ್ ಬೌಲರ್. ಅವರ ಈವರೆಗಿನ ದಾಖಲೆ ಚೆನ್ನಾಗಿದೆ. ಹಾರ್ಟ್ಲಿ ಇದುವರೆಗೆ 20 ಪ್ರಥಮ ದರ್ಜೆ ಪಂದ್ಯಗಳನ್ನು ಆಡಿದ್ದಾರೆ. ಈ ಅವಧಿಯಲ್ಲಿ 40 ವಿಕೆಟ್ ಪಡೆದಿದ್ದಾರೆ. ಪಂದ್ಯವೊಂದರಲ್ಲಿ 80 ರನ್‌ಗಳಿಗೆ 8 ವಿಕೆಟ್‌ಗಳನ್ನು ಕಬಳಿಸಿದ್ದು ಅವರ ಅತ್ಯುತ್ತಮ ಪ್ರದರ್ಶನ. ಹಾರ್ಟ್ಲಿ 5 ಲಿಸ್ಟ್ ಎ ಪಂದ್ಯಗಳಲ್ಲಿ ಒಂದು ವಿಕೆಟ್ ಪಡೆದಿದ್ದಾರೆ.

82 ಟಿ20 ಪಂದ್ಯಗಳಲ್ಲಿ 68 ವಿಕೆಟ್‌ಗಳನ್ನು ಪಡೆದಿದ್ದಾರೆ. ಪ್ರಮುಖ ವಿಷಯವೆಂದರೆ ಅವರು ಇಂಗ್ಲೆಂಡ್ ಪರ ಏಕದಿನ ಪಂದ್ಯಕ್ಕೆ ಪದಾರ್ಪಣೆ ಮಾಡಿದ್ದಾರೆ. ಅವರು ಎರಡು ಪಂದ್ಯಗಳನ್ನು ಆಡಿದ್ದಾರೆ. ಬೌಲಿಂಗ್ ಜೊತೆಗೆ ಬ್ಯಾಟಿಂಗ್ ನಲ್ಲೂ ಮಿಂಚು ತೋರಿದ್ದಾರೆ. ಹಾರ್ಟ್ಲಿ ಪ್ರಥಮ ದರ್ಜೆ ಪಂದ್ಯಗಳಲ್ಲಿ 522 ರನ್ ಗಳಿಸಿದ್ದಾರೆ.
ಹಾರ್ಟ್ಲಿ ಸೆಪ್ಟೆಂಬರ್ 2023 ರಲ್ಲಿ ಇಂಗ್ಲೆಂಡ್‌ಗಾಗಿ ತನ್ನ ಚೊಚ್ಚಲ ODI ಆಡಿದರು. ಅವರು ಐರ್ಲೆಂಡ್ ವಿರುದ್ಧ ಮೈದಾನಕ್ಕೆ ಎಂಟ್ರಿ ನೀಡಿದರು. ಅವರು 2020 ರಲ್ಲಿ ತಮ್ಮ ವೃತ್ತಿಜೀವನದ ಮೊದಲ ಪ್ರಥಮ ದರ್ಜೆ ಪಂದ್ಯವನ್ನು ಆಡಿದರು. ಇದೀಗ ಟೆಸ್ಟ್‌ಗೆ ಪದಾರ್ಪಣೆ ಮಾಡುವ ಅವಕಾಶ ಸಿಕ್ಕಿದೆ.

ಅವರು ಟೀಮ್ ಇಂಡಿಯಾದ ಬ್ಯಾಟ್ಸ್‌ಮನ್‌ಗಳಿಗೆ ಅಪಾಯ ತಂಡು ಒಡ್ಡ ಬಹುದು. ಭಾರತ ಮತ್ತು ಇಂಗ್ಲೆಂಡ್ ನಡುವಿನ ಟೆಸ್ಟ್ ಪಂದ್ಯ ಸ್ಪಿನ್ ಸ್ನೇಹಿ ಪಿಚ್‌ನಲ್ಲಿ ಆಗಿರಲಿದೆ. ಅಂತಹ ಪರಿಸ್ಥಿತಿಯಲ್ಲಿ, ಹಾರ್ಟ್ಲಿ ಇಂಗ್ಲೆಂಡ್ಗೆ ಪ್ರಮುಖವೆಂದು ಸಾಬೀತುಪಡಿಸಬಹುದು. ರೋಹಿತ್ ಶರ್ಮಾ, ಶುಭಮನ್ ಗಿಲ್ ಮತ್ತು ಯಶಸ್ವಿ ಜೈಸ್ವಾಲ್ ಅವರಂತಹ ಆಟಗಾರರು ಹಾರ್ಟ್ಲಿ ಬಗ್ಗೆ ಜಾಗರೂಕರಾಗಿರಬೇಕು.
ಇಂಗ್ಲೆಂಡ್ ಆಡುವ ಹನ್ನೊಂದು: ಜ್ಯಾಕ್ ಕ್ರೌಲಿ, ಬೆನ್ ಡಕೆಟ್, ಆಲಿ ಪೋಪ್, ಜೋ ರೂಟ್, ಜಾನಿ ಬೈರ್‌ಸ್ಟೋ, ಬೆನ್ ಸ್ಟೋಕ್ಸ್ (ನಾಯಕ), ಬೆನ್ ಫೋಕ್ಸ್ (ವಿಕೆಟ್ ಕೀಪರ್), ರೆಹಾನ್ ಅಹ್ಮದ್, ಟಾಮ್ ಹಾರ್ಟ್ಲಿ, ಮಾರ್ಕ್ ವುಡ್, ಜ್ಯಾಕ್ ಲೀಚ್.