Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

Jos Buttler: ಟಿ20 ಸರಣಿಗೂ ಮುನ್ನ ಈ ಜವಾಬ್ದಾರಿಯಿಂದ ಹಿಂದೆ ಸರಿದ ಇಂಗ್ಲೆಂಡ್ ನಾಯಕ

ಭಾರತ ಹಾಗೂ ಇಂಗ್ಲೆಂಡ್ ನಡುವಣ ಟಿ20 ಸರಣಿ ನಾಳೆಯಿಂದ ಆರಂಭವಾಗಲಿದೆ. ಈ ಸರಣಿಯ ಮೇಲೆ ಎಲ್ಲರ ಚಿತ್ತ ನೆಟ್ಟಿದೆ. ಟೀಮ್ ಇಂಡಿಯಾ ಗೆಲುವಿನೊಂದಿಗೆ ಈ ವರ್ಷವನ್ನು ಆರಂಭಿಸುವ ಪ್ಲ್ಯಾನ್ ಮಾಡಿಕೊಂಡಿದೆ. ಸೂರ್ಯಕುಮಾರ್‌ ಯಾದವ್ ಮುಂದಾಳತ್ವದ ಟೀಮ್ ಇಂಡಿಯಾ, ಭರ್ಜರಿ ಸಿದ್ಧತೆ ಮಾಡಿಕೊಂಡಿದೆ. ಈ ಪಂದ್ಯದಲ್ಲಿ ಬಲಿಷ್ಠ ಇಂಗ್ಲೆಂಡ್ ತಂಡ ಕೆಲವು ಬದಲಾವಣೆಗಳೊಂದಿಗೆ ಅಂಗಳಕ್ಕೆ ಇಳಿಯಲಿದೆ. ಈ ಬಗ್ಗೆ ಇಂಗ್ಲೆಂಡ್ ಕೋಚ್ ಸ್ಪಷ್ಟನೆ ನೀಡಿದ್ದಾರೆ. ಹಾಗಿದ್ದರೆ ಏನೆಲ್ಲಾ ಚೇಂಜ್ ಮಾಡಿಕೊಂಡು ಇಂಗ್ಲೆಂಡ್‌ ಅಂಗಳಕ್ಕೆ ಇಳಿಯಲಿದೆ ಇಲ್ಲಿದೆ ಮಾಹಿತಿ.

ಐದು ಪಂದ್ಯಗಳ ಟಿ20 ಸರಣಿಯ ಮೊದಲ ಪಂದ್ಯ ಕೋಲ್ಕತ್ತಾದ ಈಡನ್ ಗಾರ್ಡನ್‌ ಅಂಗಳದಲ್ಲಿ ನಡೆಯಲಿದೆ. ಈ ಪಂದ್ಯದಲ್ಲಿ ಪಿಚ್‌ ಬ್ಯಾಟರ್‌ಗಳಿಗೆ ಅನುಕೂಲವಾಗಿರಲಿದೆ. ಎರಡನೇ ವೇಳೆ ಬೌಲಿಂಗ್ ಮಾಡುವ ತಂಡ ಇಬ್ಬನಿಯ ತೊಂದರೆಯನ್ನು ಅನುಭವಿಸಬಹುದು. ಹೀಗಾಗಿ ಟಾಸ್‌ ಮಹತ್ವ ಪಡೆದುಕೊಂಡಿದೆ. ಈ ಸರಣಿ ಮುಗಿದ ಬಳಿಕ ಇಂಗ್ಲೆಂಡ್ ಟೀಮ್ ಇಂಡಿಯಾ ವಿರುದ್ಧ ಮೂರು ಏಕದಿನ ಪಂದ್ಯಗಳನ್ನು ಆಡಲಿದೆ.

England s T20I Series McCullum on Buttler Brook as Vice-Captain

ಯಾವ ನಿರ್ಧಾರ ತೆಗೆದುಕೊಂಡ ಬಟ್ಲರ್

ಇಂಗ್ಲೆಂಡ್ ಕೋಚ್ ಬ್ರೆಂಡನ್ ಮೆಕಲಮ್, ಈ ಸರಣಿ ಚಾಂಪಿಯನ್ಸ್‌ ಟ್ರೋಫಿಯ ಅಭ್ಯಾಸಕ್ಕಾಗಿ ವೇದಿಕೆ ಆಗಿದೆ. ಈ ಸರಣಿ ರೋಚಕತೆಯಿಂದ ಕೂಡಿರಲಿದೆ. ಈ ಸರಣಿಯಲ್ಲಿ ಇಂಗ್ಲೆಂಡ್‌ ತಂಡದ ನಾಯಕ ಜೋಸ್‌ ಬಟ್ಲರ್‌ ವಿಕೆಟ್‌ ಕೀಪರ್‌ ಜವಾಬ್ದಾರಿಯನ್ನು ಬೇರೆಯವರಿಗೆ ವರ್ಗವಾಯಿಸಲಿದ್ದಾರೆ. ಇವರು ಒಬ್ಬ ನುರಿತ ಬ್ಯಾಟರ್‌ ಆಗಿ ತಂಡದಲ್ಲಿ ಆಡಲಿದ್ದಾರೆ ಎಂದು ಕೋಚ್‌ ಮೆಕಲಮ್ ಸ್ಪಷ್ಟ ಪಡಿಸಿದ್ದಾರೆ.

ಈ ಬಗ್ಗೆ ಜೋಸ್‌ ನನ್ನ ಬಳಿ ಬಂದು ಮಾತನಾಡಿದ್ದಾರೆ. ನಾನು ವಿಕೆಟ್ ಕೀಪಿಂಗ್‌ ಮಾಡುವುದಿಲ್ಲ ಎಂದು ತಿಳಿಸಿದರು. ಅವರ ಈ ನಿರ್ಧಾರ ಒಪ್ಪಿಕೊಳ್ಳುವಂತಹದ್ದಾಗಿದೆ. ಅವರು ಬೌಲರ್‌ಗಳೊಂದಿಗೆ ಉತ್ತಮ ಸಮನ್ವಯ ಸಾಧಿಸಲು ಹಾಗೂ ಮೈದಾನದಲ್ಲಿ ಕೆಲವು ನಿರ್ಧಾರಗಳನ್ನು ತೆಗೆದುಕೊಳ್ಳಲು ಅನುಕೂಲವಾಗುತ್ತದೆ ಎಂದು ಕೋಚ್ ಅಭಿಪ್ರಾಯ ಪಟ್ಟಿದ್ದಾರೆ.

England s T20I Series McCullum on Buttler Brook as Vice-Captain

ಹ್ಯಾರಿ ಬ್ರೂಕ್‌ಗೆ ವಿಶೇಷ ಜವಾಬ್ದಾರಿ

ಕಳೆದ ವರ್ಷ ಅಮೋಘ ಪಾರ್ಮ್‌ನಲ್ಲಿದ್ದ ಹ್ಯಾರಿ ಬ್ರೂಕ್‌ಗೆ ವಿಶೇಷ ಜವಾಬ್ದಾರಿಯನ್ನು ನೀಡಲಾಗಿದೆ. ಇವರಿಗೆ ಸೀಮಿತ ಓವರ್‌ಗಳ ಉಪನಾಯಕ ಪಟ್ಟ ನೀಡಲಾಗಿದೆ. ಇವರು ತಮ್ಮ ಆಕ್ರಮಣಕಾರಿ ಆಟದಿಂದಲೇ ಕಳೆದ ವರ್ಷ ರನ್‌ ಕಲೆ ಹಾಕಿ ಅಬ್ಬರಿಸಿದ್ದರು. ಹ್ಯಾರಿ ಬ್ರೂಕ್‌ ಕಳೆದ ವರ್ಷ ಆಡಿದ 27 ಪಂದ್ಯಗಳ 31 ಇನಿಂಗ್ಸ್‌ನಲ್ಲಿ 1575 ರನ್‌ ಸಿಡಿಸಿದ್ದಾರೆ. ಈ ವೇಳೆ ಇವರ ಸರಾಸರಿ 58 ಆಗಿದೆ.

ಭಾರತ ವಿರುದ್ಧದ ಟಿ20ಐ ಸರಣಿಗೆ ಇಂಗ್ಲೆಂಡ್ ತಂಡ: ಜೋಸ್ ಬಟ್ಲರ್ (ನಾಯಕ), ರೆಹಾನ್ ಅಹ್ಮದ್, ಜೋಫ್ರಾ ಆರ್ಚರ್, ಗಸ್ ಅಟ್ಕಿನ್ಸನ್, ಜಾಕೋಬ್ ಬೆಥೆಲ್, ಹ್ಯಾರಿ ಬ್ರೂಕ್ (ಉಪನಾಯಕ), ಬ್ರೈಡನ್ ಕಾರ್ಸೆ, ಬೆನ್ ಡಕೆಟ್, ಜೇಮೀ ಓವರ್ಟನ್, ಜೇಮೀ ಸ್ಮಿತ್, ಲಿಯಾಮ್ ಲಿವಿಂಗ್‌ಸ್ಟೋನ್, ಆದಿಲ್. ರಶೀದ್, ಸಾಕಿಬ್ ಮಹಮೂದ್, ಫಿಲ್ ಸಾಲ್ಟ್, ಮಾರ್ಕ್ ವುಡ್.

Story first published: Tuesday, January 21, 2025, 13:48 [IST]
Other articles published on Jan 21, 2025
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+