ಅಜೇಯ 303 ಬಾರಿಸಿದರೂ ಕರುಣ್ ಗೆ ಲಕ್ ಇಲ್ಲ, ತಂಡದಿಂದ ಔಟ್!
ಹೈದರಾಬಾದ್, ಫೆಬ್ರವರಿ 08: ಟೆಸ್ಟ್ ಇತಿಹಾಸದಲ್ಲೇ ಉತ್ತಮ ಸಾಧನೆ ಬರೆದ ಕರ್ನಾಟಕದ ಆಟಗಾರ ಕರುಣ್ ನಾಯರ್ ಅವರ ಅಜೇಯ 303ರನ್ ಅವರನ್ನು ತಂಡದಲ್ಲಿ ಉಳಿಸಿಕೊಳ್ಳಲು ಸಾಧ್ಯವಾಗುತ್ತಿಲ್ಲ. ಬಾಂಗ್ಲಾದೇಶ ವಿರುದ್ಧದ ಐತಿಹಾಸಿಕ ಟೆಸ್ಟ್ ಪಂದ್ಯಕ್ಕೆ ಕರುಣ್ ನಾಯರ್ ಅವರನ್ನು ಆಯ್ಕೆ ಮಾಡಲು ಸಾಧ್ಯವಿಲ್ಲ ಎಂಬ ಸುಳಿವನ್ನು ನಾಯಕ ವಿರಾಟ್ ಕೊಹ್ಲಿ ನೀಡಿದ್ದಾರೆ.
ಫೆಬ್ರವರಿ 9 ರಿಂದ ಏಕೈಕ ಟೆಸ್ಟ್ ಪಂದ್ಯ ನಡೆಯಲಿದ್ದು, 25 ವರ್ಷ ವಯಸ್ಸಿನ ಕರುಣ್ ಸಾಧನೆಗೆ ಬೆಲೆ ಇಲ್ಲದ್ದಂತಾಗಿದೆ. ಡಿಸೆಂಬರ್ 19, 2016ರಂದು ಇಂಗ್ಲೆಂಡ್ ವಿರುದ್ಧದ ಐದನೇ ಹಾಗೂ ಅಂತಿಮ ಟೆಸ್ಟ್ ಪಂದ್ಯದಲ್ಲಿ ಕರುಣ್ 303 ರನ್ ಬಾರಿಸಿ ಅಜೇಯರಾಗಿ ಉಳಿದಿದ್ದರು. ಸೆಹ್ವಾಗ್ ನಂತರ ತ್ರಿಶತಕ ಬಾರಿಸಿದ ಸಾಧನೆ ಮಾಡಿದರು.

ಹೈದರಾಬಾದಿನ ರಾಜೀವ್ ಗಾಂಧಿ ಸ್ಟೇಡಿಯಂನಲ್ಲಿ ನಾಳಿನ ಪಂದ್ಯದ ಬಗ್ಗೆ ಮಾತನಾಡುತ್ತಾ, ಕರುಣ್ ಬದಲಿಗೆ ಅಜಿಂಕ್ಯ ರಹಾನೆಗೆ ಅವಕಾಶ ನೀಡಲು ನಿರ್ಧರಿಸಿರುವುದಾಗಿ ನಾಯಕ ಕೊಹ್ಲಿ ಹೇಳಿದರು.
Story first published: Wednesday, January 3, 2018, 10:04 [IST]
Other articles published on Jan 3, 2018
Read in English: Triple centurion Karun set to be dropped
Log in for Better Reading Experience!
By signing in, you agree to our Terms and Privacy Policy
Gender
Select your Gender
- Male
- Female
- Others
Age
Select your Age Range
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications