ಇಂಗ್ಲೆಂಡ್ ಟೆಸ್ಟ್ ತಂಡದ ಕೋಚ್ ರೇಸ್‌ನಲ್ಲಿ ಕನ್ನಡಿಗ ರಾಹುಲ್ ದ್ರಾವಿಡ್
ನವದೆಹಲಿ: ಇಂಗ್ಲೆಂಡ್ ತಂಡದ ಮುಖ್ಯ ಕೋಚ್ ನ್ಯೂಜಿಲೆಂಡ್‌ನ ಬ್ರೆಂಡನ್ ಮೆಕಲಮ್ ಅವರ ಅಧಿಕಾರದ ಅವಧಿ ಇನ್ನೇನು ಕೆಲವೇ ದಿನಗಳಲ್ಲಿ ಪೂರ್ಣಗೊಳ್ಳಲಿದೆ. ಇಂಗ್ಲೆಂಡ್ ತಂಡದ ನಾಯಕ ಬೆನ್ ಸ್ಟೋಕ್ಸ್ ನ್ಯೂಜಿಲೆಂಡ್ ವಿರುದ್ಧದ ಮೂರನೇ ಟೆಸ್ಟ್ ಪಂದ್ಯದ ಬಳಿಕ ನಿವೃತ್ತರಾದ ನಂತರ ಇಂಗ್ಲೆಂಡ್ ಕ್ರಿಕೆಟ್ ಮಂಡಳಿ ಬದಲಾವಣೆಗೆ ಮುಂದಾಗಿದೆ ಎಂದು ತಿಳಿದು ಬಂದಿದೆ. ಈ ವೇಳೆ ಟೆಸ್ಟ್ ತಂಡದ ಕೋಚ್ ಅವರನ್ನು ಬದಲಾಯಿಸಲು ಮುಂದಾಗಿದೆ. ಈ ಪಟ್ಟಿಯಲ್ಲಿ ಈಗ ಟೀಮ್ ಇಂಡಿಯಾದ ದಿಗ್ಗಜ ಬ್ಯಾಟರ್ ಹಾಗೂ ಮಾಜಿ ಕೋಚ್ ಕನ್ನಡಿಗ ರಾಹುಲ್ ದ್ರಾವಿಡ್ ಅವರು ಮುಂಚೂಣಿಯಲ್ಲಿದೆ ಎಂದು ವರದಿಗಳು ಬಂದಿವೆ.
ಇಂಗ್ಲೆಂಡ್ ತಂಡ ನಾಲ್ಕು ವರ್ಷದ ಬಳಿಕ ರೆಡ್ ಬಾಲ್ ಫಾರ್ಮೆಟ್‌ಗೆ ಹೊಸ ಕೋಚ್ ಹುಡುಕುತ್ತಿದೆ. ಕೋಚ್ ಮೆಕಲಮ್ ಅವರ ಸ್ಥಾನಕ್ಕೆ ಸೂಕ್ತ ಕೋಚ್ ಹುಡುಕಾಟವನ್ನು ಇಸಿಬಿ ನಡೆಸಿದೆ. ಈ ರೇಸ್‌ನಲ್ಲಿ ಟೀಮ್ ಇಂಡಿಯಾದ ಮಾಜಿ ಕೋಚ್ ರಾಹುಲ್ ದ್ರಾವಿಡ್ ಹೆಸರು ಮುಂಚೂಣಿಯಲ್ಲಿ ಕಾಣಿಸಿಕೊಂಡಿದೆ. ಇನ್ನು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಕೋಚ್ ಆಂಡಿ ಫ್ಲಾವರ್ ಸಹ ಈ ಲೀಸ್ಟ್‌ನಲ್ಲಿ ಎಂಟ್ರಿ ಪಡೆದಿದ್ದಾರೆ.

ಐಪಿಎಲ್‌ನಲ್ಲಿ ರಾಜಸ್ಥಾನ್ ರಾಯಲ್ಸ್ ತಂಡದ ಪರ ಮುಖ್ಯ ಕೋಚ್ ಆಗಿ ಕಾರ್ಯನಿರ್ವಹಿಸುತ್ತಿರುವ ಅನುಭವಿ ಕುಮಾರ್ ಸಂಗಾಕ್ಕರ ಸಹ ಈ ರೇಸ್‌ನಲ್ಲಿದ್ದಾರೆ. ಆಸ್ಟ್ರೇಲಿಯಾದ ಮಾಜಿ ಬ್ಯಾಟ್ಸ್‌ಮನ್ ಜಸ್ಟಿನ್ ಲ್ಯಾಂಗರ್ ಮತ್ತು ಪಾಕಿಸ್ತಾನದ ಹಾಲಿ ಕೋಚ್ ಮೈಕ್ ಹೆಸ್ಸನ್ ಕೂಡ ಈ ಪಟ್ಟಿಯಲ್ಲಿ ಕಾಣಿಸಿಕೊಂಡಿದ್ದಾರೆ.
ದ್ರಾವಿಡ್ ಸಾಧನೆ
ರಾಹುಲ್ ದ್ರಾವಿಡ್ ಅವರನ್ನು ಪ್ರಸ್ತುತ ಅತ್ಯುತಮ ಕೋಚ್‌ಗಳಲ್ಲಿ ಒಬ್ಬರು ಎಂದು ಪರಿಗಣಿಸಲಾಗುತ್ತದೆ. ಇವರ ಗರಡಿಯಲ್ಲಿ ಟೀಮ್ ಇಂಡಿಯಾಕ್ಕೆ ಯುವ ಆಟಗಾರರು ಎಂಟ್ರಿ ನೀಡಿದ್ದಾರೆ. 2018ರಲ್ಲಿ ಇವರ ಮುಂದಾಳತ್ವದಲ್ಲಿ ಪೃಥ್ವಿ ಶಾ ಅವರ ನಾಯಕತ್ವದಲ್ಲಿ ಟೀಮ್ ಇಂಡಿಯಾ ಅಂಡರ್ 19 ವಿಶ್ವ ಚಾಂಪಿಯನ್ ಆಗಿತ್ತು. ಕಿರಿಯ ಕ್ರಿಕೆಟ್‌ನಲ್ಲಿ ಇವರ ಸಾಧನೆಯನ್ನು ಪರಿಗಣಿಸಿ ರಾಷ್ಟ್ರೀಯ ತಂಡದ ಕೋಚ್ ಆಗಿ ನೇಮಿಸಲಾಯಿತು.
ರಾಹುಲ್ ದ್ರಾವಿಡ್ ಅವರ ಮುಂದಾಳತ್ವದಲ್ಲಿ ಟೀಮ್ ಇಂಡಿಯಾ ವೆಸ್ಟ್ ಇಂಡೀಸ್ ಹಾಗೂ ಅಮೆರಿಕದಲ್ಲಿ ನಡೆದಿದ್ದ ಟಿ20 ವಿಶ್ವಕಪ್‌ನಲ್ಲಿ ಚಾಂಪಿಯನ್ ಪಟ್ಟವನ್ನು ಅಲಂಕರಿಸಿತ್ತು. ಇವರ ಮುಂದಾಳತ್ವದಲ್ಲಿ ಟೀಮ್ ಇಂಡಿಯಾ ಏಕದಿನ ವಿಶ್ವಕಪ್ ಫೈನಲ್ ತಲುಪಿತ್ತು. ಅಲ್ಲದೆ ವಿಶ್ವ ಟೆಸ್ಟ್ ಚಾಂಪಿಯನ್ ಶಿಪ್ ಫೈನಲ್ ಸಹ ಆಡಿತ್ತು. ರಾಹುಲ್ ದ್ರಾವಿಡ್ ತಮ್ಮ ಬ್ಯಾಟಿಂಗ್‌ನಿಂದಲೇ ಹೆಸರು ಮಾಡಿದ ಆಟಗಾರ. ಇವರು ಟೆಸ್ಟ್ ಕ್ರಿಕೆಟ್‌ನಲ್ಲಿ 13,288 ರನ್ ಸಿಡಿಸಿದ್ದಾರೆ. ಇದರಲ್ಲಿ 36 ಶತಕ ಹಾಗೂ 63 ಅರ್ಧಶತಕಗಳು ಸೇರಿವೆ.
ರಾಹುಲ್ ದ್ರಾವಿಡ್ ಅವರಿಗೆ ಸದ್ಯ ಫುಲ್ ಟೈಮ್ ಕೋಚಿಂಗ್ ಮಾಡುವ ಆಸೆ ಇಲ್ಲ. ಕುಟುಂಬದ ಜೊತೆಗೆ ಹೆಚ್ಚಿನ ಸಮಯವನ್ನು ಕಳೆಯುವಂತಹ ಜವಾಬ್ದಾರಿ ಸಿಕ್ಕಲ್ಲಿ ಆ ಬಗ್ಗೆ ರಾಹುಲ್ ದ್ರಾವಿಡ್ ನಿರ್ಧಾರ ತೆಗೆದುಕೊಳ್ಳಬಹುದು. ಈ ಕಾರಣಕ್ಕಾಗಿಯೇ ಇಂಗ್ಲೆಂಡ್ ಕ್ರಿಕೆಟ್ ಅವರ ಆಯ್ಕೆಯನ್ನು ಗಮನದಲ್ಲಿಟ್ಟುಕೊಂಡು ದೊಡ್ಡ ನಿರ್ಧಾರ ತೆಗೆದುಕೊಳ್ಳಲಿದೆ.
ಆರ್ ಅಶ್ವಿನ್
ಟೀಮ್ ಇಂಡಿಯಾದ ಖ್ಯಾತ ಸ್ಪಿನ್ ಬೌಲರ್ ರವಿಚಂದ್ರನ್ ಅಶ್ವಿನ್ ಅವರ ಹೆಸರು ಸಹ ಈಗ ಕೇಳಿ ಬರುತ್ತಿದೆ. ಇಸಿಬಿ ಈಗಾಗಲೇ ಅವರೊಂದಿಗೆ ಮಾತುಕತೆ ನಡೆಸಿದೆ ಎಂದು ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ವೈರಲ್ ಆಗಿತ್ತು. ಆದರೆ ಇದಕ್ಕೆ ಸಂಬಂಧಿಸಿದಂತೆ ಯಾವುದೇ ಅಧಿಕೃತ ಪ್ರಕಟಣೆ ಬಂದಿಲ್ಲ. 2024ರಲ್ಲಿ ಅಶ್ವಿನ್ ನಿವೃತ್ತರಾದ ಬಳಿಕ ಫ್ರಾಂಚೈಸಿ ಕ್ರಿಕೆಟ್ ಹಾಗೂ ವೃತ್ತಿ ಪರ ಕೋಚ್ ಆಗಿ ಕಾಣಿಸಿಕೊಂಡಿಲ್ಲ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications

