ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
For Quick Alerts
ALLOW NOTIFICATIONS  
For Daily Alerts
 

ಭಾರತ ತಂಡದ ಬ್ಯಾಟಿಂಗ್ ವಿಭಾಗ ಬಲಿಷ್ಠಗೊಳ್ಳಲು ಆ ಒಬ್ಬ ಆಟಗಾರ ಕಾರಣ ಎಂದ ಪಾಕ್ ಮಾಜಿ ಕ್ರಿಕೆಟಿಗ

 Ex-Pakistan spinner Saqlain Mushtaq credits Virender Sehwag for changing batsmens mindset

ಪಾಕಿಸ್ತಾನದ ಕೆಲ ಮಾಜಿ ಕ್ರಿಕೆಟಿಗರು ಇತ್ತೀಚಿನ ಕೆಲ ದಿನಗಳಿಂದ ಭಾರತ ತಂಡದ ಆಟಗಾರರ ಕುರಿತು ಮೆಚ್ಚುಗೆಯ ಅಭಿಪ್ರಾಯಗಳನ್ನು ವ್ಯಕ್ತಪಡಿಸುತ್ತಿದ್ದಾರೆ. ಇತ್ತೀಚೆಗಷ್ಟೇ ಪಾಕಿಸ್ತಾನದ ಮಾಜಿ ಆಟಗಾರ ಸಲ್ಮಾನ್ ಬಟ್ ವಿರಾಟ್ ಕೊಹ್ಲಿಯನ್ನು ಹಾಡಿ ಹೊಗಳಿದ್ದರು. ಇದೀಗ ಈ ಪಟ್ಟಿಗೆ ಪಾಕಿಸ್ತಾನದ ಮಾಜಿ ಆಟಗಾರ ಸಕ್ಲೈನ್ ಮುಷ್ತಾಕ್ ಸೇರಿಕೊಂಡಿದ್ದಾರೆ.

ಐಪಿಎಲ್ 2022ರ ಹರಾಜಿನಲ್ಲಿ ಚೆನ್ನೈ ಉಳಿಸಿಕೊಳ್ಳಬಹುದಾದ ಆಟಗಾರರು

ಹೌದು ಪಾಕಿಸ್ತಾನದ ಮಾಜಿ ಬೌಲರ್ ಸಕ್ಲೈನ್ ಮುಷ್ತಾಕ್ ಟೀಂ ಇಂಡಿಯಾ ಕುರಿತು ಮಾತನಾಡಿದ್ದು ಭಾರತ ತಂಡದ ಬ್ಯಾಟಿಂಗ್ ವಿಭಾಗ ಇಷ್ಟು ಮಟ್ಟದಲ್ಲಿ ಬಲಿಷ್ಠಗೊಳ್ಳಲು ಕಾರಣ ಯಾರು ಎಂಬುದನ್ನು ಬಿಚ್ಚಿಟ್ಟಿದ್ದಾರೆ. ವಿರೇಂದ್ರ ಸೆಹ್ವಾಗ್ ಆಡುತ್ತಿದ್ದ ಆಕ್ರಮಣಕಾರಿ ಆಟದ ಶೈಲಿಯಿಂದಲೇ ಟೀಮ್ ಇಂಡಿಯಾದ ಬ್ಯಾಟಿಂಗ್ ವಿಭಾಗ ಬಲಿಷ್ಠಗೊಂಡಿತು ಎಂದು ಸಕ್ಲೈನ್ ಮುಷ್ತಾಕ್ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಚೆನ್ನಾಗಿ ಆಡದೇ ಇದ್ರೂ ಈ ಆಟಗಾರನಿಗೆ ಪದೇಪದೆ ಅವಕಾಶ ಕೊಟ್ಟಿತ್ತು ಆರ್‌ಸಿಬಿ!

'ವಿರೇಂದ್ರ ಸೆಹ್ವಾಗ್ ತಮ್ಮ ಬ್ಯಾಟಿಂಗ್ ಶೈಲಿಯಿಂದ ಟೀಮ್ ಇಂಡಿಯಾದ ಬ್ಯಾಟಿಂಗ್ ವಿಭಾಗವನ್ನು ಬದಲಾಯಿಸಿದ್ದಾರೆ. ಟೆಸ್ಟ್ ಕ್ರಿಕೆಟ್‍ನಲ್ಲಿ ವಿರೇಂದ್ರ ಸೆಹ್ವಾಗ್ ಆಕ್ರಮಣಕಾರಿ ಬ್ಯಾಟಿಂಗ್ ನಡೆಸಿ 2 ತ್ರಿಶತಕಗಳನ್ನು ಸಿಡಿಸಿದ್ದರು. ಆರಂಭಿಕ ಆಟಗಾರನಾಗಿ ಬರುತ್ತಿದ್ದ ವಿರೇಂದ್ರ ಸೆಹ್ವಾಗ್ ವೇಗದ ಬ್ಯಾಟಿಂಗ್ ಶೈಲಿ ಹಲವಾರು ಭಾರತೀಯ ಬ್ಯಾಟ್ಸ್‌ಮನ್‌ಗಳನ್ನು ಬದಲಾಯಿಸಿತು. ಇಂದು ಟೀಮ್ ಇಂಡಿಯಾದ ಬ್ಯಾಟಿಂಗ್ ವಿಭಾಗ ಇಷ್ಟು ಬಲಿಷ್ಠವಾಗಿದೆಯೆಂದರೆ ಅದಕ್ಕೆ ಕಾರಣ ವಿರೇಂದ್ರ ಸೆಹ್ವಾಗ್ ಆಕ್ರಮಣಕಾರಿ ಬ್ಯಾಟಿಂಗ್ ಶೈಲಿ' ಎಂದು ಸಕ್ಲೈನ್ ಮುಷ್ತಾಕ್ ತಿಳಿಸಿದ್ದಾರೆ.

Story first published: Friday, June 4, 2021, 22:07 [IST]
Other articles published on Jun 4, 2021
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X