ಭಾರತ ಏಕದಿನ ತಂಡದ ಪೂರ್ಣಾವಧಿ ನಾಯಕನಾಗಿ ಅಬ್ಬರಿಸಲು ಕಾತರತೆ ವ್ಯಕ್ತಪಡಿಸಿದ ರೋಹಿತ್ ಶರ್ಮಾ

ಇತ್ತೀಚೆಗಷ್ಟೇ ದಕ್ಷಿಣ ಆಫ್ರಿಕಾ ಪ್ರವಾಸವನ್ನು ಕೈಗೊಂಡು ಹರಿಣಗಳ ವಿರುದ್ಧದ 3 ಪಂದ್ಯಗಳ ಟೆಸ್ಟ್ ಸರಣಿ ಹಾಗೂ 3 ಪಂದ್ಯಗಳ ಏಕದಿನ ಸರಣಿಗಳಲ್ಲಿ ಭಾಗವಹಿಸಿ ಎರಡೂ ಸರಣಿಗಳಲ್ಲಿಯೂ ಕೂಡ ಹೀನಾಯವಾಗಿ ಸೋತು ಮುಖಭಂಗಕ್ಕೆ ಒಳಗಾಗಿರುವ ಟೀಮ್ ಇಂಡಿಯಾ ಇದೀಗ ತನ್ನ ಮುಂದಿನ ಸೆಣಸಾಟವನ್ನು ವೆಸ್ಟ್ ಇಂಡೀಸ್ ವಿರುದ್ಧ ನಡೆಸಲಿದೆ. ಹೌದು, ಕೆರಿಬಿಯನ್ನರು ಭಾರತ ಪ್ರವಾಸವನ್ನು ಕೈಗೊಳ್ಳಲಿದ್ದು ಟೀಮ್ ಇಂಡಿಯಾ ಮತ್ತು ವೆಸ್ಟ್ ಇಂಡೀಸ್ ತಂಡಗಳ ನಡುವೆ ಏಕದಿನ ಹಾಗೂ ಟಿ ಟ್ವೆಂಟಿ ಸರಣಿಗಳು ನಡೆಯಲಿವೆ. ಮೊದಲಿಗೆ ಫೆಬ್ರವರಿ 6ರಿಂದ ಇತ್ತಂಡಗಳ ನಡುವಿನ 3 ಪಂದ್ಯಗಳ ಏಕದಿನ ಸರಣಿ ಆರಂಭವಾದರೆ, ಫೆಬ್ರವರಿ 16ರಿಂದ ಟಿ ಟ್ವೆಂಟಿ ಸರಣಿ ಆರಂಭವಾಗಲಿದೆ.
ಇನ್ನು ಈಗಾಗಲೇ ಇತ್ತಂಡಗಳು ಕೂಡ ತಂಡಗಳನ್ನು ಪ್ರಕಟಿಸಿದ್ದು, ಗಾಯದ ಸಮಸ್ಯೆಗೊಳಗಾಗಿ ದಕ್ಷಿಣ ಆಫ್ರಿಕಾ ಪ್ರವಾಸವನ್ನು ಕೈ ತಪ್ಪಿಸಿಕೊಂಡಿದ್ದ ರೋಹಿತ್ ಶರ್ಮಾ ತಂಡಕ್ಕೆ ಮರಳಿದ್ದು ವೆಸ್ಟ್ ಇಂಡೀಸ್ ವಿರುದ್ಧದ ಏಕದಿನ ಹಾಗೂ ಟಿ ಟ್ವೆಂಟಿ ಎರಡೂ ಸರಣಿಗಳಲ್ಲಿಯೂ ಕೂಡ ಟೀಮ್ ಇಂಡಿಯಾವನ್ನು ನಾಯಕನಾಗಿ ಮುನ್ನಡೆಸಲಿದ್ದಾರೆ. ಹೌದು, ಎಲ್ಲ ಅಂದುಕೊಂಡಂತೆ ನಡೆದಿದ್ದರೆ ಕಳೆದ ದಕ್ಷಿಣ ಆಫ್ರಿಕಾ ವಿರುದ್ಧದ ಏಕದಿನ ಸರಣಿಯ ಮೂಲಕ ರೋಹಿತ್ ಶರ್ಮಾ ಭಾರತ ಏಕದಿನ ತಂಡದ ಪೂರ್ಣಾವಧಿ ನಾಯಕನಾಗಿ ಕಣಕ್ಕಿಳಿಯಬೇಕಿತ್ತು. ಆದರೆ ಗಾಯದ ಸಮಸ್ಯೆಯಿಂದ ಈ ಅವಕಾಶವನ್ನು ಕೈ ತಪ್ಪಿಸಿಕೊಂಡಿದ್ದ ರೋಹಿತ್ ಶರ್ಮಾ ಇದೀಗ ವೆಸ್ಟ್ಇಂಡೀಸ್ ವಿರುದ್ಧದ ಸರಣಿಗಳಲ್ಲಿ ಕಣಕ್ಕಿಳಿಯಲು ಸಂಪೂರ್ಣವಾಗಿ ಸಜ್ಜಾಗಿದ್ದು, ಅಭ್ಯಾಸಗಳಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡಿದ್ದಾರೆ.
ಹೀಗೆ ಸುಮಾರು 3 ತಿಂಗಳುಗಳ ನಂತರ ನೀಲಿ ಜೆರ್ಸಿ ತೊಟ್ಟು ಕಣಕ್ಕಿಳಿಯಲು ಸಜ್ಜಾಗಿರುವ ರೋಹಿತ್ ಶರ್ಮಾ ತಮ್ಮ ಅಧಿಕೃತ ಇನ್ ಸ್ಟಾಗ್ರಾಂ ಖಾತೆಯಲ್ಲಿ ತಾವು ಟೀಮ್ ಇಂಡಿಯಾದ ಜೆರ್ಸಿ ತೊಟ್ಟು ನಿಂತಿರುವ ಫೋಟೋವೊಂದನ್ನು ಹಂಚಿಕೊಂಡಿದ್ದು 'ಆರಂಭಿಸಲು ನನಗೆ ಕಾಯಲಾಗುತ್ತಿಲ್ಲ' ಎಂದು ವಿಶೇಷ ಸಾಲೊಂದನ್ನು ಬರೆದುಕೊಳ್ಳುವುದರ ಮೂಲಕ ವೆಸ್ಟ್ ಇಂಡೀಸ್ ವಿರುದ್ಧದ ಏಕದಿನ ಸರಣಿಯ ಕುರಿತು ಕಾತುರತೆಯನ್ನು ವ್ಯಕ್ತಪಡಿಸಿದ್ದಾರೆ.
ಹೀಗೆ ರೋಹಿತ್ ಶರ್ಮಾ ಹಂಚಿಕೊಂಡಿರುವ ಪೋಸ್ಟಿಗೆ ಮುಂಬೈ ಇಂಡಿಯನ್ಸ್ ಫ್ರಾಂಚೈಸಿ ಸೇರಿದಂತೆ ವಿವಿಧ ಕ್ರಿಕೆಟಿಗರು ಕಾಮೆಂಟ್ ಮಾಡಿದ್ದು, ಭಾರತ ಏಕದಿನ ತಂಡದ ಪೂರ್ಣಾವಧಿ ನಾಯಕನಾಗಿ ಕಣಕ್ಕಿಳಿಯಲಿರುವ ರೋಹಿತ್ ಶರ್ಮಾ ಅವರಿಗೆ ಶುಭಾಶಯಗಳನ್ನು ಕೋರಿದ್ದಾರೆ.
ವೆಸ್ಟ್ ಇಂಡೀಸ್ ವಿರುದ್ಧದ ಏಕದಿನ ಸರಣಿಗೆ ಪ್ರಕಟವಾಗಿರುವ ಭಾರತ ತಂಡ: ರೋಹಿತ್ ಶರ್ಮಾ (ನಾಯಕ), ಕೆಎಲ್ ರಾಹುಲ್ (ಉಪನಾಯಕ), ರುತುರಾಜ್ ಗಾಯಕ್ವಾಡ್, ಶಿಖರ್ ಧವನ್, ವಿರಾಟ್ ಕೊಹ್ಲಿ, ಸೂರ್ಯ ಕುಮಾರ್ ಯಾದವ್, ಶ್ರೇಯಸ್ ಅಯ್ಯರ್, ದೀಪಕ್ ಹೂಡಾ, ರಿಷಬ್ ಪಂತ್ (ವಿಕೆಟ್-ಕೀಪರ್), ದೀಪಕ್ ಚಹಾರ್, ಶಾರ್ದೂಲ್ ಠಾಕೂರ್, ಯುಜ್ವೇಂದ್ರ ಚಾಹಲ್, ಕುಲದೀಪ್ ಯಾದವ್, ವಾಷಿಂಗ್ಟನ್ ಸುಂದರ್, ರವಿ ಬಿಷ್ಣೋಯ್, ಮೊಹಮ್ಮದ್. ಸಿರಾಜ್, ಪ್ರಸಿದ್ಧ್ ಕೃಷ್ಣ, ಅವೇಶ್ ಖಾನ್
ವೆಸ್ಟ್ ಇಂಡೀಸ್ ತಂಡ: ಕೀರಾನ್ ಪೊಲಾರ್ಡ್ (ನಾಯಕ), ಫ್ಯಾಬಿಯನ್ ಅಲೆನ್, ನ್ಕ್ರುಮಾ ಬೊನ್ನರ್, ಡ್ಯಾರೆನ್ ಬ್ರಾವೋ, ಶಮರ್ ಬ್ರೂಕ್ಸ್, ಜೇಸನ್ ಹೋಲ್ಡರ್, ಶಾಯ್ ಹೋಪ್, ಅಕೇಲ್ ಹೊಸೈನ್, ಅಲ್ಜಾರಿ ಜೋಸೆಫ್, ಬ್ರಾಂಡನ್ ಕಿಂಗ್, ನಿಕೋಲಸ್ ಪೂರನ್, ಕೆಮರ್ ರೋಚ್, ರೊಮಾರಿಯೋ ಶೆಫರ್ಡ್, ಓಡಿಯನ್ ಸ್ಮಿತ್ ಮತ್ತು ಹೇಡನ್ ವಾಲ್ಷ್ ಜೆ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications