ನ್ಯೂಜಿಲೆಂಡ್ ವಿರುದ್ಧ ಇಂಗ್ಲೆಂಡ್ ಹೀನಾಯ ಸೋಲು; ಟೀಮ್ ಇಂಡಿಯಾ ಕೂಡ ಸೋಲಲಿದೆ ಎಂದ ವಾನ್!

ಶುಕ್ರವಾರ ಜೂನ್ 18ರಿಂದ ಆರಂಭವಾಗಲಿರುವ ವಿಶ್ವ ಟೆಸ್ಟ್ ಚಾಂಪಿಯನ್‍ಶಿಪ್ ಫೈನಲ್ ಪಂದ್ಯದಲ್ಲಿ ಭಾರತ ಮತ್ತು ನ್ಯೂಜಿಲೆಂಡ್ ತಂಡಗಳು ಟ್ರೋಫಿಗಾಗಿ ಸೆಣಸಾಡಲಿವೆ. ಇಂಗ್ಲೆಂಡ್‌ನ ಸೌತಾಂಪ್ಟನ್ ಕ್ರೀಡಾಂಗಣದಲ್ಲಿ ಈ ಪಂದ್ಯ ನಡೆಯಲಿದ್ದು ದಿನದಿಂದ ದಿನಕ್ಕೆ ನಿರೀಕ್ಷೆ ಹೆಚ್ಚಾಗುತ್ತಾ ಸಾಗುತ್ತಿದೆ.
WTC Final: ಭಾರತ ತಂಡದ ಈ ಮೂವರಿಂದ ಗೆಲುವು ಖಚಿತ ಎಂದ ವಿರೇಂದ್ರ ಸೆಹ್ವಾಗ್
ಈಗಾಗಲೇ ಈ ಪಂದ್ಯದ ಕುರಿತು ಹಲವಾರು ಮಾಜಿ ಕ್ರಿಕೆಟಿಗರು ಹಾಗೂ ಕ್ರಿಕೆಟ್ ಪಂಡಿತರು ತಮ್ಮ ತಮ್ಮ ಅಭಿಪ್ರಾಯಗಳನ್ನು ವ್ಯಕ್ತಪಡಿಸಿದ್ದು ಯಾವ ತಂಡ ಗೆಲ್ಲಲಿದೆ ಎಂಬ ಭವಿಷ್ಯಗಳನ್ನು ನುಡಿದಿದ್ದಾರೆ. ಇದೀಗ ಈ ಸಾಲಿಗೆ ಇಂಗ್ಲೆಂಡ್‌ನ ಮಾಜಿ ಕ್ರಿಕೆಟಿಗ ಮೈಕಲ್ ವಾನ್ ಸೇರಿಕೊಂಡಿದ್ದು ಫೈನಲ್ ಪಂದ್ಯದಲ್ಲಿ ಭಾರತದ ವಿರುದ್ಧ ನ್ಯೂಜಿಲೆಂಡ್ ತಂಡ ಜಯ ಸಾಧಿಸಲಿದೆ ಎಂದಿದ್ದಾರೆ. ಈ ನಡುವೆ ಇಂಗ್ಲೆಂಡ್ ವಿರುದ್ಧ ನಡೆದ 2 ಪಂದ್ಯಗಳ ಟೆಸ್ಟ್ ಸರಣಿಯನ್ನು 1-0 ಅಂತರದಿಂದ ವಶಪಡಿಸಿಕೊಳ್ಳುವುದರ ಮೂಲಕ 22 ವರ್ಷಗಳ ಬಳಿಕ ಇಂಗ್ಲೆಂಡ್ ನೆಲದಲ್ಲಿ ನ್ಯೂಜಿಲೆಂಡ್ ತಂಡ ಟೆಸ್ಟ್ ಸರಣಿಯನ್ನು ಗೆದ್ದು ಬೀಗಿದೆ.
WTC Final: ನ್ಯೂಜಿಲೆಂಡ್‌ನ ಈ ಆಟಗಾರ ಭಾರತಕ್ಕೆ ತಲೆನೋವಾಗಿ ಪರಿಣಮಿಸಲಿದ್ದಾನೆ ಎಂದ ಪನೇಸರ್
ಈ ಗೆಲುವಿನ ಬಳಿಕ ಪ್ರತಿಕ್ರಿಯಿಸಿರುವ ಇಂಗ್ಲೆಂಡ್ ಮಾಜಿ ಆಟಗಾರ ಮೈಕಲ್ ವಾನ್ 'ನ್ಯೂಜಿಲೆಂಡ್ ಒಂದು ಅತ್ಯದ್ಭುತ ತಂಡ, ಬೌಲಿಂಗ್ ಬ್ಯಾಟಿಂಗ್ ಮತ್ತು ಫೀಲ್ಡಿಂಗ್ ಎಲ್ಲಾ ವಿಭಾಗಗಳಲ್ಲಿಯೂ ಅತ್ಯುನ್ನತ ತಂಡವಾಗಿರುವ ನ್ಯೂಜಿಲೆಂಡ್ ಮುಂಬರುವ ವಿಶ್ವ ಟೆಸ್ಟ್ ಚಾಂಪಿಯನ್‍ಶಿಪ್ ಫೈನಲ್ ಪಂದ್ಯದಲ್ಲಿ ಭಾರತವನ್ನು ಸೋಲಿಸಲಿದೆ' ಎಂದು ಭವಿಷ್ಯ ನುಡಿದಿದ್ದಾರೆ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications