IND vs AUS ODI Series: ಸಂಜು ಸ್ಯಾಮ್ಸನ್‌ಗೆ ವಿದೇಶಿ ಲೀಗ್‌ಗಳಲ್ಲಿ ಆಡಲು ಅವಕಾಶ ಕೊಡಿ ಎಂದ ಅಭಿಮಾನಿಗಳು

ಆಸ್ಟ್ರೇಲಿಯಾ ವಿರುದ್ದದ 3 ಪಂದ್ಯಗಳ ಏಕದಿನ ಸರಣಿಗೆ ಭಾರತ ತಂಡವನ್ನು ಘೋಷಣೆ ಮಾಡಲಾಗಿದೆ. ಆಯ್ಕೆದಾರರ ಸಮಿತಿ ಈ ಬಾರಿ ಕೂಡ ಪ್ರತಿಭಾವಂತ ಕ್ರಿಕೆಟರ್ ಸಂಜು ಸ್ಯಾಮ್ಸನ್‌ರನ್ನು ಕಡೆಗಣಿಸಿದೆ.
ಸಂಜು ಸ್ಯಾಮ್ಸನ್ ತಂಡಕ್ಕೆ ಆಯ್ಕೆಯಾಗದಿರುವ ಬಗ್ಗೆ ಕ್ರಿಕೆಟ್ ಅಭಿಮಾನಿಗಳು ಬೇಸರಗೊಂಡಿದ್ದಾರೆ. ಪ್ರತಿಭೆ ಇದ್ದರೂ ಆತನಿಗೆ ಸರಿಯಾಗಿ ಅವಕಾಶ ನೀಡುತ್ತಿಲ್ಲ ಎಂದು ಬಿಸಿಸಿಐ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಭಾರತ ತಂಡದಲ್ಲಿ ಆಡಲು ಅವಕಾಶ ನೀಡದಿದ್ದ ಮೇಲೆ ಸಂಜು ಸ್ಯಾಮ್ಸನ್‌ಗೆ ವಿದೇಶಿ ಲೀಗ್‌ಗಳಲ್ಲಿ ಆಡಲು ಬಿಸಿಸಿಐ ಅವಕಾಶ ನೀಡಲಿ ಎಂದು ಅಭಿಮಾನಿಗಳು ಒತ್ತಾಯಿಸಿದ್ದಾರೆ. ಸಾಮಾಜಿಕ ಮಾಧ್ಯಮಗಳಲ್ಲಿ ಸಾಕಷ್ಟು ಜನ ಸಂಜು ಸ್ಯಾಮ್ಸನ್‌ಗೆ ಬೆಂಬಲ ನೀಡಿ ಅನಿಸಿಕೆಗಳನ್ನು ಹಂಚಿಕೊಂಡಿದ್ದಾರೆ.
2013ರಲ್ಲಿ ಭಾರತ ತಂಡಕ್ಕಾಗಿ ಆಡಿದ್ದ ಎಡಗೈ ವೇಗಿ ಜಯದೇವ್ ಉನದ್ಕತ್ ಮತ್ತೆ ತಂಡಕ್ಕೆ ವಾಪಸಾಗಿದ್ದಾರೆ. ರಣಜಿ ಟ್ರೋಫಿಯಲ್ಲಿ ಅವರ ಉತ್ತಮ ಪ್ರದರ್ಶನವನ್ನು ಪರಿಗಣಿಸಿ ತಂಡಕ್ಕೆ ಆಯ್ಕೆ ಮಾಡಲಾಗಿದೆ. ಸಂಜು ಸ್ಯಾಮ್ಸನ್ ಕೂಡ ರಣಜಿಯಲ್ಲಿ ಉತ್ತಮ ಪ್ರದರ್ಶನ ನೀಡಿದ್ದರೂ ಅವರನ್ನು ಕಡೆಗಣಿಸಲಾಗಿದೆ. ಇದೇ ಈಗ ಅಭಿಮಾನಿಗಳ ಕೋಪಕ್ಕೆ ಕಾರಣವಾಗಿದೆ.

ಉತ್ತಮ ಪ್ರದರ್ಶನ ನೀಡಿದರು ಕಡೆಗಣನೆ
2022ರ ಟಿ20 ವಿಶ್ವಕಪ್‌ಗೆ ಮುನ್ನ ಕೂಡ ಆಯ್ಕೆದಾರರು ಸಂಜು ಸ್ಯಾಮ್ಸನ್ ವಿಚಾರದಲ್ಲಿ ನಿರ್ಲಕ್ಷ್ಯ ತೋರಿದ್ದರು. ಸಂಜು ಸ್ಯಾಮ್ಸನ್ ಆಯ್ಕೆಯಾಗದ್ದಕ್ಕೆ ಸಾಕಷ್ಟು ವಿರೋಧ ವ್ಯಕ್ತವಾದ ಕಾರಣ ಅವರನ್ನು ದಕ್ಷಿಣ ಆಫ್ರಿಕಾ ವಿರುದ್ಧದ ಏಕದಿನ ಸರಣಿಗೆ ಆಯ್ಕೆ ಮಾಡಿ ಕೈತೊಳೆದುಕೊಂಡಿದ್ದರು. ಆದರೆ, ಟಿ20 ವಿಶ್ವಕಪ್‌ಗಾಗಿ ಭಾರತ ತಂಡಕ್ಕೆ ಮಾತ್ರ ಆಯ್ಕೆ ಮಾಡಲಿಲ್ಲ.
ಟಿ20 ವಿಶ್ವಕಪ್ ಮುಗಿದ ನಂತರ ನಡೆದ ನ್ಯೂಜಿಲೆಂಡ್ ವಿರುದ್ಧದ ಟಿ20 ಮತ್ತು ಏಕದಿನ ಸರಣಿಗೆ ಸ್ಯಾಮ್ಸನ್‌ರನ್ನು ಆಯ್ಕೆ ಮಾಡಿದರೂ, ಅವರಿಗೆ ಒಂದೇ ಒಂದು ಟಿ20 ಪಂದ್ಯದಲ್ಲೂ ಅವಕಾಶ ನೀಡಲಿಲ್ಲ. ಏಕದಿನ ಸರಣಿಯಲ್ಲಿ ಕೇವಲ ಒಂದು ಪಂದ್ಯದಲ್ಲಿ ಕೂಡ ಆಡಿಸಲಾಯಿತು.

ಫಿಟ್ ಆಗಿರುವ ಸಂಜು ಸ್ಯಾಮ್ಸನ್
ನಂತರ ನಡೆದ ಬಾಂಗ್ಲಾದೇಶದ ವಿರುದ್ಧದ ಏಕದಿನ ಸರಣಿಗೂ ಅವರನ್ನು ಕೈಬಿಡಲಾಯಿತು. ನಂತರ ಜನವರಿಯಲ್ಲಿ ನಡೆದ ಶ್ರೀಲಂಕಾ ವಿರುದ್ಧದ ಟಿ20 ಸರಣಿಗೆ ಆಯ್ಕೆ ಮಾಡಿದರು ಆದರೆ, ಮೊದಲನೇ ಪಂದ್ಯದಲ್ಲೇ ಮೊಣಕಾಲು ಗಾಯಕ್ಕೆ ತುತ್ತಾದ ಸ್ಯಾಮ್ಸನ್ ಸರಣಿಯಿಂದ ಹೊರಬಿದ್ದರು.
ಸದ್ಯ ಸಂಜು ಸ್ಯಾಮ್ಸನ್ ಸಂಪೂರ್ಣ ಫಿಟ್ ಆಗಿದ್ದಾರೆ. ಎನ್‌ಸಿಎನಲ್ಲಿ ಫಿಟ್‌ನೆಸ್ ಪರೀಕ್ಷೆಯಲ್ಲಿ ತೇರ್ಗಡೆಯಾಗಿದ್ದಾರೆ, ಆಸ್ಟ್ರೇಲಿಯಾ ವಿರುದ್ಧದ ಏಕದಿನ ಸರಣಿಗೆ ಅವರನ್ನು ಆಯ್ಕೆ ಮಾಡುವ ನಿರೀಕ್ಷೆ ಇತ್ತಾದರೂ ಅದು ಸುಳ್ಳಾಗಿದೆ. ಈ ಮೂಲಕ ಸಂಜು ಸ್ಯಾಮ್ಸನ್‌ಗೆ ಏಕದಿನ ವಿಶ್ವಕಪ್ ತಂಡದಲ್ಲಿ ಅವಕಾಶ ಸಿಗಲ್ಲ ಎನ್ನುವ ಸ್ಪಷ್ಟ ಸಂದೇಶವನ್ನು ಆಯ್ಕೆದಾರರು ನೀಡಿದಂತಾಗಿದೆ.
ಸಂಜು ಸ್ಯಾಮ್ಸನ್ ಈಗ ಐಪಿಎಲ್‌ಗಾಗಿ ಸಿದ್ಧತೆ ಮಾಡಿಕೊಳ್ಳಲಿದ್ದಾರೆ. ಅವರು ರಾಜಸ್ಥಾನ ರಾಯಲ್ಸ್ ತಂಡದ ನಾಯಕರಾಗಿದ್ದಾರೆ.

ಬೇರೆ ಲೀಗ್‌ಗಳಲ್ಲಿ ಆಡಲು ಅನುಮತಿ ನೀಡಲಿ
ಸಂಜು ಸ್ಯಾಮ್ಸನ್ ಭಾರತ ತಂಡದ ಪರವಾಗಿ ಮಧ್ಯಮ ಕ್ರಮಾಂಕದಲ್ಲಿ ಆಡುವಾಗ ಉತ್ತಮ ಪ್ರದರ್ಶನ ನೀಡಿದ್ದಾರೆ. 11 ಏಕದಿನ ಪಂದ್ಯಗಳಲ್ಲಿ 66 ಸರಾಸರಿಯಲ್ಲಿ 330 ರನ್ ಗಳಿಸಿದ್ದಾರೆ. 2022ರಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧದ ಏಕದಿನ ಸರಣಿಯಲ್ಲಿ ಸ್ಯಾಮ್ಸನ್ ಉತ್ತಮ ಪ್ರದರ್ಶನ ನೀಡಿದ್ದರು, ಆದರೂ ಅವರಿಗೆ ತಂಡದಲ್ಲಿ ಅವಕಾಶ ಸಿಗಲಿಲ್ಲ.
ಭಾರತ ತಂಡದಲ್ಲಿ ಅವರಿಗೆ ಆಡಲು ಅವಕಾಶ ಕೊಡದಿದ್ದ ಮೇಲೆ ವಿದೇಶಿ ಲೀಗ್‌ಗಳಲ್ಲಿ ಆಡಲು ಸ್ಯಾಮ್ಸನ್‌ಗೆ ಬಿಸಿಸಿಐ ಅವಕಾಶ ನೀಡಬೇಕು ಎಂದಿದ್ದಾರೆ. ಇನ್ನೂ ಕೆಲವು ಅಭಿಮಾನಿಗಳು ಸಂಜು ಸ್ಯಾಮ್ಸನ್ ವಿದೇಶಕ್ಕೆ ಹೋಗಿ ಯಾವುದಾದರೂ ತಂಡ ಸೇರಿಕೊಳ್ಳಲಿ ಎಂದು ಹೇಳಿದ್ದಾರೆ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications